Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 17:8 - ಕನ್ನಡ ಸತ್ಯವೇದವು J.V. (BSI)

8 ನೀನು ಕಂಡ ಈ ಮೃಗವು ಮೊದಲು ಇತ್ತು, ಈಗ ಇಲ್ಲ, ಮತ್ತು ಅಧೋಲೋಕದಿಂದ ಏರಿಬಂದು ನಾಶಕ್ಕೆ ಹೋಗುವದು. ಭೂನಿವಾಸಿಗಳೊಳಗೆ ಯಾರಾರ ಹೆಸರುಗಳು ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿರುವದಿಲ್ಲವೋ ಅವರು ಈ ಮೃಗವನ್ನು ನೋಡಿ ಇದು ಮೊದಲು ಇತ್ತು, ಈಗ ಇಲ್ಲ, ಇನ್ನು ಮೇಲೆ ಬರುವದು ಎಂದು ತಿಳಿದು ಆಶ್ಚರ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ನೀನು ಕಂಡ ಆ ಮೃಗವು ಮೊದಲು ಇದದ್ದೂ, ಈಗ ಇಲ್ಲದ್ದೂ, ಮತ್ತು ಅಧೋಲೋಕದೊಳಗಿನಿಂದ ಏರಿ ಬಂದು ವಿನಾಶಕ್ಕೆ ಹೋಗುವುದಕ್ಕಾಗಿರುವುದೂ ಆಗಿದೆ. ಈ ಲೋಕವು ಸೃಷ್ಟಿಯಾದಂದಿನಿಂದ ಯಾರ ಹೆಸರುಗಳು ಜೀವಬಾಧ್ಯರ ಪುಸ್ತಕದಲ್ಲಿ ಬರೆದಿರುವುದಿಲ್ಲವೋ, ಅವರು ಈ ಮೃಗವನ್ನು ನೋಡಿ ಇದು ಮೊದಲು ಇದ್ದಿತ್ತು, ಈಗ ಇಲ್ಲ, ಆದರೆ ಇನ್ನು ಮುಂದೆ ಬರಲಿದೆ ಎಂದು ಆಶ್ಚರ್ಯಪಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ನೀನು ಕಂಡ ಈ ಮೃಗ ಒಮ್ಮೆ ಇತ್ತು. ಆದರೆ ಈಗ ಇಲ್ಲ. ಅದು ಪಾತಾಳಕೂಪದಿಂದ ಬಂದು ವಿನಾಶದತ್ತ ತೆರಳುತ್ತದೆ. ಭೂನಿವಾಸಿಗಳಲ್ಲಿ ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಯಾರ ಯಾರ ಹೆಸರುಗಳನ್ನು ಬರೆದಿಲ್ಲವೋ ಅಂಥವರು ಅದನ್ನು ಕಂಡು ದಿಗ್ಭ್ರಮೆಗೊಳ್ಳುವರು. ಏಕೆಂದರೆ, ಈ ಮೃಗ ಒಮ್ಮೆ ಇತ್ತು, ಆದರೆ ಈಗ ಇಲ್ಲ. ಆದರೆ ಅದು ಮತ್ತೊಮ್ಮೆ ಬರಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ನೀನು ನೋಡಿದ ಆ ಮೃಗವು ಒಂದು ಕಾಲದಲ್ಲಿ ಜೀವಿಸಿತ್ತು. ಆದರೆ ಈಗ ಆ ಮೃಗವು ಜೀವಂತವಾಗಿಲ್ಲ. ಆದರೆ ಆ ಮೃಗವು ತಳವಿಲ್ಲದ ಕೂಪದಿಂದ ಜೀವಂತವಾಗಿ ಮೇಲೆದ್ದುಬಂದು ನಾಶವಾಗು ವುದು. ಲೋಕದಲ್ಲಿ ಜೀವಿಸುತ್ತಿರುವ ಜನರು ಆ ಮೃಗವನ್ನು ನೋಡಿ, ಅದು ಒಂದು ಕಾಲದಲ್ಲಿ ಜೀವಂತವಾಗಿತ್ತು, ಈಗ ಇಲ್ಲ, ಆದರೆ ಮತ್ತೆ ಬರುವುದು ಎಂಬುದನ್ನು ತಿಳಿದು ಅವರು ಆಶ್ಚರ್ಯಪಡುವರು. ಲೋಕವು ಸೃಷ್ಟಿಯಾದಂದಿನಿಂದ ಜೀವಬಾಧ್ಯರ ಪುಸ್ತಕದಲ್ಲಿ ಈ ಜನರ ಹೆಸರುಗಳನ್ನು ಬರೆದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ನೀನು ಕಂಡ ಮೃಗವು ಒಮ್ಮೆ ಇತ್ತು, ಈಗ ಇಲ್ಲ, ಪಾತಾಳದೊಳಗಿನಿಂದ ಮೇಲೆ ಬಂದು ವಿನಾಶಕ್ಕೆ ಹೊರಡಲಿದೆ. ಲೋಕದ ಸೃಷ್ಟಿಯಾದ ದಿನದಿಂದ ಯಾರ ಯಾರ ಹೆಸರುಗಳು ಜೀವಗ್ರಂಥದಲ್ಲಿ ಬರೆದಿರುವುದಿಲ್ಲವೋ, ಆ ಭೂನಿವಾಸಿಗಳು ಮೃಗವನ್ನು ನೋಡಿ ಆ ಮೃಗವು ಹಿಂದೆ ಇತ್ತು, ಈಗ ಇಲ್ಲ, ಇನ್ನು ಮೇಲೆ ಬರಲಿದೆ ಎಂದು ಆಶ್ಚರ್ಯಗೊಳ್ಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

8 ತೆ ಭಯಾನಕ್ ಜನಾವರಾಚ್ಯಾ ಅದ್ದಿ ಎಗ್ದಾ ಝಿತ್ತೆ ಹೊತ್ತೆ, ಖರೆ ಅತ್ತಾ ತೆ ಜಾಸ್ತಿ ಎಳ್ ಝಿತ್ತೆ ರ್‍ಹಾಯ್ನಾ; ತೆ ಪಾತಾಳಾತ್ನಾ ವರ್ತಿ ಯೆತಲ್ಯಾತ್ ಹಾಯ್, ಅನಿ ತೆ ನಾಸಾಕ್ ಜಾವ್ನ್ ಪಾವ್ತಾ. ಜಗ್ ರಚುಚ್ಯಾ ಅದ್ದಿ ಜಿವನಾಚ್ಯಾ ಪುಸ್ತಕಾತ್ ನಾವ್ ಲಿವಲ್ಲೆ ನಸಲ್ಲಿ ಜಿಮ್ನಿ ವೈಲಿ ಸಗ್ಳಿ ಲೊಕಾ ಹ್ಯಾ ಭಯಾನಕ್ ಜನಾವರ್ ಬಗುನ್ ಅಜಾಪ್ ಹೊತ್ಯಾತ್. ತೆ ಎಗ್ದಾ ಝಿತ್ತೆ ಹೊತ್ತೆ, ಅತ್ತಾ ತೆ ಅನಿ ಲೈ ಎಳ್ ಝಿತ್ತೆ ರ್‍ಹಾಯ್ನಾ. ಖರೆ ತೆ ಅನಿ ಪರ್ತುನ್ ದಿಸ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 17:8
28 ತಿಳಿವುಗಳ ಹೋಲಿಕೆ  

ಮೊದಲಿದ್ದು ಈಗ ಇಲ್ಲದಿರುವ ಆ ಮೃಗವು ತಾನೇ ಎಂಟನೆಯ ಅರಸು; ಅವನು ಆ ಏಳು ಮಂದಿ ಅರಸುಗಳಿಗೆ ಸೇರಿದವನು; ನಾಶಕ್ಕೆ ಹೋಗುವನು.


ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದನಂತರ ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.


ನೀನು ನನ್ನ ಸಹನವಾಕ್ಯವನ್ನು ಕಾಪಾಡಿದ್ದರಿಂದ ಭೂನಿವಾಸಿಗಳನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರುವದಕ್ಕಿರುವ ಶೋಧನೆಯ ಸಮಯದಲ್ಲಿ ನಿನ್ನನ್ನು ತಪ್ಪಿಸಿ ಕಾಪಾಡುವೆನು.


ಜಯಶಾಲಿಗೆ ಹೀಗೆ ಶುಭ್ರವಸ್ತ್ರಗಳನ್ನು ಹೊದಿಸುವರು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಬಿಡದೆ ಅವನು ನನ್ನವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಒಪ್ಪುವೆನು.


ಆಗ ಅರಸನು ತನ್ನ ಬಲಗಡೆಯಲ್ಲಿರುವವರಿಗೆ - ನನ್ನ ತಂದೆಯ ಆಶೀರ್ವಾದ ಹೊಂದಿದವರೇ ಬನ್ನಿರಿ, ಲೋಕಾದಿಯಿಂದ ನಿಮಗೋಸ್ಕರ ಸಿದ್ಧಮಾಡಿದ ರಾಜ್ಯವನ್ನು ಸ್ವಾಸ್ತ್ಯವಾಗಿ ತೆಗೆದುಕೊಳ್ಳಿರಿ.


ಇದಲ್ಲದೆ ಸತ್ತವರಾದ ದೊಡ್ಡವರೂ ಚಿಕ್ಕವರೂ ಸಿಂಹಾಸನದ ಮುಂದೆ ನಿಂತಿರುವದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಮತ್ತು ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದಿದ್ದ ಸಂಗತಿಗಳ ಆಧಾರದಿಂದ ಅವರವರ ಕೃತ್ಯಗಳ ಪ್ರಕಾರ ಸತ್ತವರಿಗೆ ನ್ಯಾಯತೀರ್ಪಾಯಿತು.


ಹೇಗಂದರೆ ನಾವು ಪ್ರೀತಿಯಲ್ಲಿ ನಡೆದು ಆತನ ಸನ್ನಿಧಿಯಲ್ಲಿ ಪರಿಶುದ್ಧರೂ ದೋಷವಿಲ್ಲದವರೂ ಆಗಿರಬೇಕೆಂದು ನಮ್ಮನ್ನು ಜಗದುತ್ಪತ್ತಿಗೆ ಮುಂಚೆ ಕ್ರಿಸ್ತನಲ್ಲಿ ಆರಿಸಿಕೊಂಡನು.


ತಂದೆಯೇ, ನೀನು ಯಾರನ್ನು ನನಗೆ ಕೊಟ್ಟಿಯೋ ಅವರು ನಾನಿರುವ ಸ್ಥಳದಲ್ಲಿ ನನ್ನ ಕೂಡ ಇದ್ದುಕೊಂಡು ಲೋಕವು ಹುಟ್ಟುವದಕ್ಕಿಂತ ಮುಂಚೆಯೇ ನೀನು ನನ್ನನ್ನು ಪ್ರೀತಿಸಿ ನನಗೆ ಕೊಟ್ಟಿರುವ ಮಹಿಮೆಯನ್ನು ನೋಡಬೇಕೆಂದು ಇಚ್ಫೈಸುತ್ತೇನೆ.


ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯಿಕೊಚ್ಚಿಕೊಂಡ ನಿವಿುತ್ತ ಆ ಕೊಂಬಿನ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.


ಯಾವನ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.


ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.


ಆದಿಯಿಂದ ಈ ಕಾರ್ಯಗಳನ್ನು ತಿಳಿಯಪಡಿಸುವ ಕರ್ತನು ನುಡಿಯುತ್ತಾನೆ ಎಂದು ಬರೆದದೆ.


ಸಮುದ್ರಕ್ಕೂ ಅಂದಚಂದದ ಪರಿಶುದ್ಧಪರ್ವತಕ್ಕೂ ನಡುವೆ ಅರಮನೆಯಂಥ ತನ್ನ ಗುಡಾರಗಳನ್ನು ಹಾಕಿಸುವನು; ಆಹಾ, ಅವನು ಕೊನೆಗಾಣುವನು, ಯಾರೂ ಅವನಿಗೆ ಸಹಾಯಮಾಡರು.


ಆಮೇಲೆ ನ್ಯಾಯಸಭೆಯು ಕೂತು ಅವನ ದೊರೆತನವನ್ನು ಕಿತ್ತು ತೀರಾ ಧ್ವಂಸಮಾಡಿ ಕೊನೆಗಾಣಿಸಿಬಿಡುವದು.


ನಾನು ರಾತ್ರಿ ಕಂಡ ಕನಸಿನಲ್ಲಿ ಸ್ವಲ್ಪ ಹೊತ್ತಿನ ಮೇಲೆ ಆಹಾ, ನಾಲ್ಕನೆಯ ಮೃಗವು ಕಾಣಿಸಿತು; ಅದು ಭಯಂಕರ, ಹೆದರಿಸುವಂಥದು, ಅಧಿಕಬಲವುಳ್ಳದ್ದು; ಅದಕ್ಕೆ ಕಬ್ಬಿಣದ ದೊಡ್ಡ ಹಲ್ಲುಗಳಿದ್ದವು; ಅದು ನುಂಗುತ್ತಾ ಚೂರುಚೂರು ಮಾಡುತ್ತಾ ವಿುಕ್ಕದ್ದನ್ನು ಕಾಲುಗಳಿಂದ ತುಳಿಯುತ್ತಾ ಇತ್ತು; ಅದು ಮುಂಚಿನ ಎಲ್ಲಾ ಮೃಗಗಳಿಗಿಂತ ವಿಲಕ್ಷಣವಾಗಿತ್ತು; ಅದಕ್ಕೆ ಹತ್ತು ಕೊಂಬುಗಳಿದ್ದವು.


ಆತನು ಜಗದುತ್ಪತ್ತಿಗೆ ಮೊದಲೇ ಗೊತ್ತು ಮಾಡಲ್ಪಟ್ಟು ಅಂತ್ಯಕಾಲದಲ್ಲಿ ನಿಮಗಾಗಿ ಪ್ರತ್ಯಕ್ಷನಾದನು.


ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆಯಲ್ಪಡಲಿ; ಸದ್ಭಕ್ತರ ಹೆಸರಿನ ಸಂಗಡ ಅವರದು ಬರೆಯಲ್ಪಡದಿರಲಿ.


ಒಂದಕ್ಕೊಂದು ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಸಾಗರದೊಳಗಿಂದ ಬಂದವು.


ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆ ಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು.


ಆದರೂ ದೆವ್ವಗಳು ನಮಗೆ ಅಧೀನವಾಗಿವೆ ಎಂದು ಸಂತೋಷಪಡದೆ ನಮ್ಮ ಹೆಸರುಗಳು ಪರಲೋಕದಲ್ಲಿ ಬರೆದಿರುತ್ತವೆ ಎಂದು ಸಂತೋಷಪಡಿರಿ ಎಂಬದಾಗಿ ಹೇಳಿದನು.


ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು, ಮತ್ತು ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು