Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:14 - ಕನ್ನಡ ಸತ್ಯವೇದವು J.V. (BSI)

14 ಬಾಬೆಲೇ, ನಿನ್ನ ಜೀವವು ಅಪೇಕ್ಷಿಸಿದ ಹಣ್ಣುಹಂಪಲುಗಳು ನಿನ್ನನ್ನು ಬಿಟ್ಟುಹೋದವು; ಸೊಗಸಾಗಿಯೂ ಶೋಭಾಯಮಾನವಾಗಿಯೂ ಇರುವದೆಲ್ಲವೂ ನಾಶವಾಗಿ ನಿನ್ನನ್ನು ಬಿಟ್ಟುಬಿಟ್ಟವು. ಅವು ಇನ್ನು ಮೇಲೆ ಜನರಿಗೆ ಸಿಕ್ಕುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ‘ನೀನು ಬಯಸಿದ ನಿನ್ನ ಫಲಗಳು ನಿನ್ನನ್ನು ಬಿಟ್ಟು ಹೋದವು. ನಿನ್ನ ಎಲ್ಲಾ ವೈಭವವು ಹಾಗೂ ಶೋಭಾಯಮಾನವಾದ ಸೊಗಸುಗಳೆಲ್ಲ ನಿನ್ನಿಂದ ನಾಶವಾದವು. ಅವು ಇನ್ನು ಮೇಲೆ ನಿನಗೆ ಸಿಕ್ಕುವುದೇ ಇಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 “ಬಾಬಿಲೋನೇ, ನೀ ಹಂಬಲಿಸಿದ ಫಲ ನಿನ್ನಿಂದ ದೂರ ಸರಿಯಿತು ನಿನ್ನೆಲ್ಲ ವಿಲಾಸ ವೈಭವಗಳು ನಂದಿಹೋದವು ಮರಳಿ ಕಾಣವವು ಇನ್ನೆಂದಿಗೂ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ‘ಬಾಬಿಲೋನೇ, ನೀನು ಅಪೇಕ್ಷಿಸಿದ ಉತ್ತಮ ವಸ್ತುಗಳೆಲ್ಲವೂ ನಿನ್ನಿಂದ ಹೋಗಿಬಿಟ್ಟವು. ನಿನ್ನಲ್ಲಿದ್ದ ಶ್ರೀಮಂತಿಕೆಯ ಮತ್ತು ಅಲಂಕಾರಿಕ ವಸ್ತುಗಳೆಲ್ಲ ಅದೃಶ್ಯವಾಗಿಬಿಟ್ಟವು. ಅವುಗಳನ್ನು ಮತ್ತೆ ನೀನೆಂದಿಗೂ ಪಡೆಯುವುದಿಲ್ಲ.’

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 “ನೀನು ಬಯಸಿದ ನಿನ್ನ ಪ್ರಾಣ ಫಲವು ನಿನ್ನಿಂದ ತೊಲಗಿಹೋಗಿದೆ. ನಿನ್ನ ಎಲ್ಲಾ ವೈಭವವು ಹಾಗೂ ನಿನ್ನ ಶೋಭೆಯ ಸೊಗಸುಗಳೆಲ್ಲಾ ನಿನ್ನಿಂದ ನಾಶವಾದವು. ಅವರು ಅವುಗಳನ್ನು ಇನ್ನೆಂದೂ ಕಾಣಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ಯಾಪಾರಾಚಿ ಲೊಕಾ ತಿಕಾ,“ತಿಯಾ ಆಶ್ಯಾ ಕರಲ್ಲಿ ತುಜಿ ಸಗ್ಳಿ ಸಾಮಾನಾ ನಾ ಹೊವ್ನ್ ಗೆಲಿ, ಅನಿ ಸಗ್ಳೆ ತುಜೆ ಬದಿಕ್ ಅನಿ ಉಜ್ವೊಡ್ ಸಗ್ಳೆ ನಾಸ್ ಹೊವ್ನ್ ಗೆಲೆ, ಅನಿ ಫಿಡೆ ತಿ ತುಕಾ ಕನ್ನಾಬಿ ಗಾವಿನ್ಯಾತ್!” ಮನ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:14
12 ತಿಳಿವುಗಳ ಹೋಲಿಕೆ  

ಅವರು ಕೆಟ್ಟ ವಿಷಯಗಳನ್ನು ಆಶಿಸಿದಂತೆ ನಾವು ಆಶಿಸುವವರಾಗಬಾರದೆಂಬದಕ್ಕಾಗಿ ಈ ಸಂಗತಿಗಳು ನಮಗೆ ನಿದರ್ಶನಗಳಾಗಿವೆ.


ನೀವು ಆಶಿಸಿದರೂ ಹೊಂದದೆ ಇದ್ದೀರಿ. ನೀವು ಕೊಲೆಗಾರರಾಗುವಷ್ಟು ಹೊಟ್ಟೆಕಿಚ್ಚು ಪಟ್ಟಾದರೂ ಸಂಪಾದಿಸಲಾರದೆ ಇದ್ದೀರಿ; ನೀವು ಕಾದಾಡುತ್ತೀರಿ, ಯುದ್ಧಮಾಡುತ್ತೀರಿ. ನೀವು ದೇವರನ್ನು ಬೇಡಿಕೊಳ್ಳದ ಕಾರಣ ನಿಮಗೇನೂ ದೊರೆಯಲಿಲ್ಲ.


ಆದರೆ ಅಬ್ರಹಾಮನು - ಕಂದಾ, ನೀನು ಆಶಿಸಿದ ಸುಖವನ್ನು ನಿನ್ನ ಜೀವಮಾನದಲ್ಲಿ ಹೊಂದಿದಿ; ಹಾಗೆಯೇ ಲಾಜರನು ಕಷ್ಟವನ್ನು ಹೊಂದಿದನು ಎಂಬದನ್ನು ನೆನಪಿಗೆ ತಂದುಕೋ. ಈಗಲಾದರೋ ಇಲ್ಲಿ ಇವನಿಗೆ ಸಮಾಧಾನ, ಆದರೆ ನಿನಗೆ ಸಂಕಟ.


ಆದರೆ ದೇವರು ಅವನಿಗೆ - ಬುದ್ಧಿಹೀನನು ನೀನು! ಈ ಹೊತ್ತು ರಾತ್ರಿ ನಿನ್ನ ಪ್ರಾಣವನ್ನು ನಿನ್ನ ಕಡೆಯಿಂದ ಕೇಳುವರು; ಆಗ ನೀನು ಸಿದ್ಧಮಾಡಿಟ್ಟಿರುವದು ಯಾರಿಗಾಗುವದು ಎಂದು ಹೇಳಿದನು.


ಅರಣ್ಯದಲ್ಲಿ ಆಶಾತುರರಾಗಿ ಅಡವಿಯಲ್ಲಿ ದೇವರನ್ನು ಪರೀಕ್ಷಿಸಿದರು.


ಅವರ ಮಧ್ಯದಲ್ಲಿದ್ದ ಇತರ ಜನರು ಮಾಂಸವನ್ನು ಆಶಿಸಿದರು. ಇಸ್ರಾಯೇಲ್ಯರು ಕೂಡ ತಿರಿಗಿ ಅತ್ತುಕೊಂಡು - ಮಾಂಸವು ನಮಗೆ ಹೇಗೆ ಲಭಿಸೀತು;


ಅವರು ಇಷ್ಟಭೋಜನವನ್ನು ಕೇಳಿಕೊಳ್ಳುವಲ್ಲಿ ಸಂಶಯಾತ್ಮರಾಗಿ ದೇವರನ್ನು ಪರೀಕ್ಷಿಸಿದರು.


ಆಶೆಪಟ್ಟವರನ್ನು ಅಲ್ಲಿ ಹೂಳಿಟ್ಟದರಿಂದ ಆ ಸ್ಥಳಕ್ಕೆ ಕಿಬ್ರೋತ್ ಹತಾವಾ ಎಂದು ಹೆಸರಾಯಿತು.


ಅಲ್ಲವಾದರೆ ಏನು ನೋಡಬೇಕೆಂದು ಹೋಗಿದ್ದಿರಿ? ನಯವಾದ ಉಡುಪನ್ನು ಹಾಕಿಹೊಂಡ ಮನುಷ್ಯನನ್ನೋ? ನಯವಾದ ಉಡುಪನ್ನು ಉಟ್ಟುಕೊಂಡವರು ಅರಮನೆಗಳಲ್ಲಿ ಇರುತ್ತಾರಷ್ಟೆ.


ಲವಂಗಚೆಕ್ಕೆ, ರಕ್ತಬೋಳ, ಧೂಪ, ಸುಗಂಧತೈಲ, ಸಾಂಬ್ರಾಣಿ, ದ್ರಾಕ್ಷಾರಸ, ಎಣ್ಣೆ, ನಯವಾದ ಹಿಟ್ಟು, ಗೋದಿ, ದನ, ಕುರಿ, ಕುದುರೆ, ರಥ, ಗುಲಾಮ, ಮಾನುಷಪ್ರಾಣ ಇವೇ ಮೊದಲಾದ ನಮ್ಮ ಸರಕುಗಳನ್ನು ಕೊಂಡುಕೊಳ್ಳುವವರು ಯಾರೂ ಇಲ್ಲವಲ್ಲಾ ಎಂದು ಹೇಳಿಕೊಳ್ಳುತ್ತಾ ದುಃಖಿಸುವರು.


ಆ ಸರಕುಗಳನ್ನು ಮಾರಿ ಅವಳಿಂದ ಐಶ್ವರ್ಯವಂತರಾದ ವರ್ತಕರು ಅವಳ ಯಾತನೆಯನ್ನು ನೋಡಿ ಭಯಪಟ್ಟು ದೂರದಲ್ಲಿ ನಿಂತು ಗೋಳಾಡುತ್ತಾ ದುಃಖಿಸುತ್ತಾ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು