ಪ್ರಕಟನೆ 18:2 - ಕನ್ನಡ ಸತ್ಯವೇದವು J.V. (BSI)2 ಅವನು ಗಟ್ಟಿಯಾದ ಶಬ್ದದಿಂದ ಕೂಗುತ್ತಾ - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾನಗರಿಯು ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಆಶ್ರಯವೂ ಆದಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಅವನು ಬಲವಾದ ಧ್ವನಿಯಿಂದ ಕೂಗುತ್ತಾ “ಬಿದ್ದಳು, ಬಿದ್ದಳು, ಬಾಬೆಲ್ ಎಂಬ ಮಹಾನಗರಿಯು ಬಿದ್ದಳು! ಅವಳು ದೆವ್ವಗಳ ವಾಸಸ್ಥಾನವೂ, ಎಲ್ಲಾ ದುರಾತ್ಮಗಳಿಗೂ, ಅಶುದ್ಧವಾದ ಹಾಗೂ ಅಸಹ್ಯವಾದ ಸಕಲ ವಿಧವಾದ ಪಕ್ಷಿಗಳಿಗೂ ಗೂಡೂ ಆದಳು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 ಅವನು ಗಟ್ಟಿಯಾದ ಧ್ವನಿಯಿಂದ ಇಂತೆಂದನು: “ಪತನ ಹೊಂದಿದಳು ಪತನ ಹೊಂದಿದಳು ಬಾಬಿಲೋನ್ ಮಹಾನಗರಿ ಪತನ ಹೊಂದಿದಳು ದೆವ್ವದುರಾತ್ಮಗಳಿಗೆ ಬೀಡಾದಳು ಅಶುದ್ಧ ಪ್ರಾಣಿಪಕ್ಷಿಗಳಿಗೆ ಗೂಡಾದಳು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ದೇವದೂತನು ತನ್ನ ಶಕ್ತಿಯುತವಾದ ಧ್ವನಿಯಿಂದ ಆರ್ಭಟಿಸಿದನು: “ಅವಳು ನಾಶವಾದಳು! ಬಾಬಿಲೋನೆಂಬ ಮಹಾನಗರಿಯು ನಾಶವಾದಳು! ಅವಳು (ಬಾಬಿಲೋನ್) ದೆವ್ವಗಳಿಗೆ ವಾಸಸ್ಥಾನವಾದಳು, ಸಕಲ ಅಶುದ್ಧಾತ್ಮಗಳಿಗೆ ನೆಲೆಯಾದಳು, ಅಶುದ್ಧವಾದ ಮತ್ತು ಅಸಹ್ಯವಾದ ಸಕಲ ಹಕ್ಕಿಗಳಿಗೆ ಆಶ್ರಯವಾದಳು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಅವನು ಮಹಾಧ್ವನಿಯಿಂದ: “ ‘ಬಿದ್ದಳು! ಬಾಬಿಲೋನ್ ಮಹಾನಗರಿಯು ಬಿದ್ದಳು!’ ಆಕೆಯು ದೆವ್ವಗಳಿಗೆ ವಾಸಸ್ಥಾನವೂ ಎಲ್ಲಾ ದುರಾತ್ಮಗಳಿಗೂ ಅಶುದ್ಧವಾದ ಹಾಗೂ ಅಸಹ್ಯವಾದ ಪ್ರತಿಯೊಂದು ಪ್ರಾಣಿಪಕ್ಷಿಗಳಿಗೂ ನಿವಾಸವಾಗಿದ್ದಾಳೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್2 ತೆನಿ ಮೊಟ್ಯಾ ಅವಾಜಾನ್. “ತಿ ಪಡುನ್ ಗೆಲಾ! ಮೊಟೆ ಬಾಬಿಲೊನ್ ಪಡುನ್ ಗೆಲೆ! ತೆ ಗಿರ್‍ಯಾಂಚೊ, ಅನಿ ಬುರ್ಶ್ಯಾ ಅತ್ಮ್ಯಾಂಚೊ ಠಿಕಾನೊ ಹೊವ್ನ್ ಹೊತ್ತೆ, ಹೊಯ್ ಸಗ್ಳ್ಯಾ ಥರಿಚಿ ಪೊಜ್ಡಿ, ಅನಿ ಬುರ್ಶಿ ಫಾಂಕ್ರಾ ತಿಚ್ಯಾ ಭುತ್ತುರ್ ರ್‍ಹಾತ್ಯಾತ್. ಅಧ್ಯಾಯವನ್ನು ನೋಡಿ |