Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 18:5 - ಕನ್ನಡ ಸತ್ಯವೇದವು J.V. (BSI)

5 ಅವಳ ಪಾಪಗಳು ಒಂದರ ಮೇಲೊಂದು ಸೇರಿ ಆಕಾಶದ ಪರ್ಯಂತರಕ್ಕೂ ಬೆಳೆದವೆ. ದೇವರು ಅವಳ ಅನ್ಯಾಯಗಳನ್ನು ಜ್ಞಾಪಿಸಿಕೊಂಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವಳ ಪಾಪಗಳು ಒಂದಕ್ಕೊಂದು ಸೇರಿ ಆಕಾಶದ ಎತ್ತರಕ್ಕೆ ಬೆಳೆದಿವೆ. ದೇವರು ಅವಳ ದುಷ್ಟಕೃತ್ಯಗಳನ್ನು ಜ್ಞಾಪಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಅವಳ ಪಾಪಗಳು ಬೆಳೆಬೆಳೆದು ಆಗಸಕ್ಕೇರುತಿವೆ ಅವಳ ಅಕ್ರಮ ಅನ್ಯಾಯಗಳು ದೇವರ ನೆನಪಿನಲ್ಲಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಆ ನಗರಿಯ ಪಾಪಗಳು ಪರಲೋಕವನ್ನು ಮುಟ್ಟುವಂತೆ ಬೆಳೆದುನಿಂತಿವೆ. ಅವಳು ಮಾಡಿದ ಕೆಟ್ಟಕಾರ್ಯಗಳನ್ನು ದೇವರು ಮರೆತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಆಕೆಯ ಪಾಪಗಳು ಒಂದಕ್ಕೊಂದು ಸೇರಿ ಆಕಾಶದಷ್ಟಾಗಿವೆ. ದೇವರು ಆಕೆಯ ಅಪರಾಧಗಳನ್ನು ಜ್ಞಾಪಿಸಿಕೊಂಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

5 ತಿಚಿ ಪಾಪಾ ಎಕಾ ವೈರ್ ಎಕ್ ಚಡುನ್ ಮಳ್ಬಾ ಪತರ್ ಜಾವ್ನ್ ಪಾವ್ಲ್ಯಾತ್, ಅನಿ ದೆವಾನ್ ತಿಚ್ಯಾ ಬುರ್ಶ್ಯಾ ಕಾಮಾಂಚಿ ಯಾದ್ ಕಾಡ್ಲ್ಯಾನಾಯ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 18:5
6 ತಿಳಿವುಗಳ ಹೋಲಿಕೆ  

ನನ್ನ ದೇವರೇ, ನಾನು ಮನಗುಂದಿದವನಾಗಿದ್ದೇನೆ; ನಿನ್ನ ಕಡೆಗೆ ಮುಖವನ್ನೆತ್ತುವದಕ್ಕೆ ನಾಚಿಕೊಳ್ಳುತ್ತೇನೆ. ನನ್ನ ದೇವರೇ, ನಮ್ಮ ಪಾಪಗಳು ನಮ್ಮ ತಲೆಮೀರಿ ಬೆಳೆದವು. ನಮ್ಮ ಅಪರಾಧವು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಯಿತು.


ಮಹಾ ಪಟ್ಟಣವು ಮೂರು ಭಾಗವಾಯಿತು; ಜನಾಂಗಗಳ ಪಟ್ಟಣಗಳು ಬಿದ್ದವು. ಇದಲ್ಲದೆ ದೇವರು ದೊಡ್ಡ ಬಾಬೆಲನ್ನು ಜ್ಞಾಪಿಸಿಕೊಂಡು ತನ್ನ ಉಗ್ರಕೋಪವೆಂಬ ದ್ರಾಕ್ಷಾರಸದ ಪಾತ್ರೆಯನ್ನು ಅವಳಿಗೆ ಕುಡಿಯಲು ಕೊಟ್ಟನು.


ಬಾಬೆಲನ್ನು ಸ್ವಸ್ಥಮಾಡುವದಕ್ಕೆ ನಾವು ಪ್ರಯತ್ನಪಟ್ಟರೂ ಅದು ಸ್ವಸ್ಥವಾಗಲಿಲ್ಲ; ಬಾಬೆಲನ್ನು ಬಿಟ್ಟು ನಾವೆಲ್ಲರೂ ನಮ್ಮ ನಮ್ಮ ದೇಶಗಳಿಗೆ ಹೋಗೋಣ; ಅದು ಹೊಂದಬೇಕಾದ ದಂಡನೆಯು ಆಕಾಶವನ್ನು ಮುಟ್ಟುವಷ್ಟು ದೊಡ್ಡದಾಗಿದೆ, ಹೌದು, ಗಗನದವರೆಗೂ ಬೆಳೆದಿದೆ.


ನೀನೆದ್ದು ಆ ದೊಡ್ಡ ಪಟ್ಟಣವಾದ ನಿನೆವೆಗೆ ಹೋಗಿ ಗಟ್ಟಿಯಾಗಿ ಕೂಗುತ್ತಾ ಅದನ್ನು ಖಂಡಿಸು; ಅದರ ನಿವಾಸಿಗಳ ದುಷ್ಟತನವು ನನ್ನ ಸನ್ನಿಧಿಗೆ ಮುಟ್ಟಿದೆ ಎಂದು ಅಪ್ಪಣೆಮಾಡಿದನು.


ಅಲ್ಲಿ ಯೆಹೋವನ ಒಬ್ಬ ಪ್ರವಾದಿಯಿದ್ದನು; ಅವನ ಹೆಸರು ಓದೇದ್. ಅವನು ಸಮಾರ್ಯಕ್ಕೆ ಬರುತ್ತಿದ್ದ ಸೈನ್ಯದವರನ್ನು ಎದುರುಗೊಂಡು ಅವರಿಗೆ - ನಿಮ್ಮ ಪಿತೃಗಳ ದೇವರಾದ ಯೆಹೋವನು ಯೆಹೂದ್ಯರ ಮೇಲೆ ಕೋಪಗೊಂಡು ಅವರನ್ನು ನಿಮ್ಮ ಕೈಗೆ ಒಪ್ಪಿಸಿಕೊಟ್ಟನಷ್ಟೆ. ಅವರನ್ನು ಸಂಹರಿಸುವದರಲ್ಲಿ ನಿಮ್ಮ ರೌದ್ರವು ಆಕಾಶವನ್ನು ಮುಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು