ಪ್ರಕಟನೆ 19:11 - ಕನ್ನಡ ಸತ್ಯವೇದವು J.V. (BSI)11 ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು; ಅದರ ಮೇಲೆ ಕೂತಿದ್ದವನಿಗೆ ನಂಬಿಗಸ್ತನೂ ಸತ್ಯವಂತನೂ ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ; ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು. ಅದರ ಮೇಲೆ ಕುಳಿತಿದ್ದವನಿಗೆ ನಂಬಿಗಸ್ತನು, ಸತ್ಯವಂತನು ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ನಾನು ಈ ದೃಶ್ಯವನ್ನೂ ಕಂಡೆ: ಸ್ವರ್ಗವು ತೆರೆದಿತ್ತು. ಬಿಳಿಯ ಕುದುರೆಯೊಂದು ಕಾಣಿಸಿತು. ಅದರ ಮೇಲೆ ಒಬ್ಬನು ಕುಳಿತಿದ್ದನು. ನಂಬಿಕಸ್ಥನೆಂದೂ ಸತ್ಯವಂತನೆಂದೂ ಆತನ ಹೆಸರು; ಆತನು ನಿಷ್ಪಕ್ಷಪಾತದಿಂದ ನ್ಯಾಯತೀರ್ಪು ಕೊಡುವವನು; ನ್ಯಾಯಬದ್ಧವಾಗಿ ಯುದ್ಧಮಾಡುವವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ನಂತರ ಪರಲೋಕವು ತೆರೆದಿರುವುದನ್ನು ನಾನು ನೋಡಿದೆನು. ನನ್ನ ಎದುರಿನಲ್ಲಿ ಒಂದು ಬಿಳಿ ಕುದುರೆಯಿತ್ತು. ಕುದುರೆಯ ಮೇಲೆ ಕುಳಿತಿದ್ದ ಸವಾರನ ಹೆಸರು ನಂಬಿಗಸ್ತ ಮತ್ತು ಸತ್ಯವಂತ. ಆತನು ತನ್ನ ತೀರ್ಪುಗಳಲ್ಲಿಯೂ ಯುದ್ಧಗಳಲ್ಲಿಯೂ ನ್ಯಾಯವಂತನಾಗಿದ್ದನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಪರಲೋಕವು ತೆರೆದಿರುವುದನ್ನು ನಾನು ಕಂಡೆನು. ಇಗೋ, ಬಿಳಿಯ ಕುದುರೆಯು ಕಾಣಿಸಿತು. ಅದರ ಮೇಲೆ ಕುಳಿತಿದ್ದವರ ಹೆಸರು, ನಂಬಿಗಸ್ತರು ಮತ್ತು ಸತ್ಯವಂತರು ಎಂಬುದು. ಅವರ ನೀತಿಯಿಂದ ನ್ಯಾಯವಿಚಾರಿಸುತ್ತಾ ಯುದ್ಧಮಾಡುತ್ತಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ಮಾನಾ ಸರ್ಗ್ ಉಗಡಲ್ಲೆ ಮಿಯಾ ಬಗಟ್ಲೊ, ಥೈ ಎಕ್ ಫಾಂಡ್ರೆ ಘೊಡ್ಕೆ ಹೊತ್ತೆ. ತೆಚೆ ವರ್ತಿ ಸವಾರಿ ಕರ್ತಲ್ಯಾಕ್ ವಿಶ್ವಾಸಾಚೊ ಅನಿ ಖರೊ ಮನುನ್ ಬಲ್ವುತ್ಯಾತ್; ತೊ ನ್ಯಾಯ್‍ನಿತಿನ್ ನಿರ್ನಯ್ ಕರ್‍ತಾ ಅನಿ ಅಪ್ನಾಚ್ಯಾ ಮಾರಾಮಾರಿಯಾ ಖೆಳ್ತಾ. ಅಧ್ಯಾಯವನ್ನು ನೋಡಿ |