Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:18 - ಕನ್ನಡ ಸತ್ಯವೇದವು J.V. (BSI)

18 ರಾಜರ ಮಾಂಸವನ್ನೂ ಸಹಸ್ರಾಧಿಪತಿಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ರಾಹುತರ ಮಾಂಸವನ್ನೂ, ಸ್ವತಂತ್ರರೂ ದಾಸರೂ ದೊಡ್ಡವರೂ ಚಿಕ್ಕವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ರಾಜರ ಮಾಂಸವನ್ನೂ, ಸಹಸ್ರಾಧಿಪತಿಗಳ ಮಾಂಸವನ್ನೂ, ಪರಾಕ್ರಮಶಾಲಿಗಳ ಮಾಂಸವನ್ನೂ, ಕುದುರೆಗಳ ಮಾಂಸವನ್ನೂ, ಕುದುರೆ ಸವಾರರ ಮಾಂಸವನ್ನೂ, ಸ್ವತಂತ್ರರೂ, ದಾಸರೂ, ಶ್ರೇಷ್ಠರು ಮತ್ತು ಕನಿಷ್ಠರು ಇವರೆಲ್ಲರ ಮಾಂಸವನ್ನೂ ತಿನ್ನುವುದಕ್ಕೆ ಬನ್ನಿರಿ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ರಾಜರುಗಳ ಮಾಂಸವನ್ನು, ಸೇನಾಧಿಪತಿಗಳ ಮಾಂಸವನ್ನು ಮತ್ತು ಪರಾಕ್ರಮಶಾಲಿಗಳ ಮಾಂಸವನ್ನು ತಿನ್ನ ಬನ್ನಿ; ಕುದುರೆಗಳ ಮಾಂಸವನ್ನೂ ರಾವುತರ ಮಾಂಸವನ್ನೂ ಉಣ ಬನ್ನಿ; ಯಜಮಾನರ, ಗುಲಾಮರ, ಚಿಕ್ಕವರ, ದೊಡ್ಡವರ ಈ ಎಲ್ಲಾ ನರಮಾನವರ ಮಾಂಸವನ್ನು ರುಚಿಸ ಬನ್ನಿ,” ಎಂದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ನೀವು ರಾಜರುಗಳ ಮತ್ತು ಸಹಸ್ರಾಧಿಪತಿಗಳ ಮತ್ತು ಸುಪ್ರಸಿದ್ಧ ಜನರ ದೇಹಗಳನ್ನು ತಿನ್ನಲು ಒಟ್ಟಾಗಿ ಬನ್ನಿರಿ. ಕುದುರೆಗಳ, ಕುದುರೆ ಸವಾರರ, ಸ್ವತಂತ್ರರಾದವರ, ಗುಲಾಮರ, ಚಿಕ್ಕವರ ಮತ್ತು ದೊಡ್ಡವರ ದೇಹಗಳನ್ನು ತಿನ್ನಲು ಬನ್ನಿರಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ರಾಜರು, ಸಹಸ್ರಾಧಿಪತಿಗಳು, ಪರಾಕ್ರಮಶಾಲಿಗಳು, ಅಶ್ವಗಳು, ಅಶ್ವಾರೂಢರು, ಸ್ವತಂತ್ರರು, ದಾಸರು, ದೊಡ್ಡವರು, ಚಿಕ್ಕವರು, ಇವರೆಲ್ಲರ ಮಾಂಸವನ್ನು ತಿನ್ನುವುದಕ್ಕೆ ಬನ್ನಿರಿ!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

18 ಯೆವಾ ಅನಿ ರಾಜಾಂಚೆ, ಹಜಾರಾನಿ ಸೈನಿಕಾಂಚ್ಯಾ ವೈಲ್ಯಾ ಅದಿಕಾರ್ಯಾಂಚೆ, ಅನಿ ಸೈನಿಕಾಂಚೆ, ಘೊಡ್ಕ್ಯಾಂಚೆ ಅನಿ ಘೊಡ್ಕ್ಯಾ ವರ್ತಿ ಸವಾರಿ ಕರ್‍ತಲ್ಯಾಂಚೆ ಸಗ್ಳ್ಯಾ ಲೊಕಾಂಚೆ ಗುಲಾಮಾಂಚೆ, ಅನಿ ಸ್ವತಂತ್ರ್ ಹೊತ್ತ್ಯಾಂಚೆ, ಮೊಟ್ಯಾಂಚೆ ಅನಿ ಬಾರಿಕ್ಲ್ಯಾಂಚೆ ಮಾಸ್ ಖಾವಾ!” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:18
18 ತಿಳಿವುಗಳ ಹೋಲಿಕೆ  

ಇದಲ್ಲದೆ ಭೂರಾಜರೂ ಪ್ರಭುಗಳೂ ಸಹಸ್ರಾಧಿಪತಿಗಳೂ ಐಶ್ವರ್ಯವಂತರೂ ಪರಾಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡು


ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವವು.


ನಾನು ಈ ಸ್ಥಳದಲ್ಲಿ ಯೆಹೂದ್ಯರ ಮತ್ತು ಯೆರೂಸಲೇವಿುನವರ ಆಲೋಚನೆಯನ್ನು ಚೆಲ್ಲಿ ಮಣ್ಣುಪಾಲುಮಾಡಿ ಅವರ ಪ್ರಾಣವನ್ನು ಹುಡುಕುವ ಶತ್ರುಗಳ ಖಡ್ಗದಿಂದ ಅವರನ್ನು ಬೀಳಿಸಿ ಆ ಹೆಣಗಳನ್ನು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವನ್ನಾಗಿ ಮಾಡುವೆನು.


ಅವರು ಘೋರಮರಣಕ್ಕೆ ಗುರಿಯಾಗುವರು, ಅವರಿಗಾಗಿ ಯಾರೂ ಗೋಳಾಡರು, ಅವರನ್ನು ಯಾರೂ ಹೂಣಿಡರು; ಅವರು ಭೂವಿುಯ ಮೇಲೆ ಗೊಬ್ಬರವಾಗುವರು; ಖಡ್ಗವೂ ಕ್ಷಾಮವೂ ಅವರನ್ನು ನಿರ್ಮೂಲ ಮಾಡುವವು; ಅವರ ಹೆಣಗಳು ಆಕಾಶದ ಪಕ್ಷಿಗಳಿಗೂ ಭೂವಿುಯ ಜಂತುಗಳಿಗೂ ಆಹಾರವಾಗುವವು.


ಈ ಜನರ ಹೆಣಗಳು ಆಕಾಶಪಕ್ಷಿಗಳಿಗೂ ಭೂಜಂತುಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವದಿಲ್ಲ.


ಆತನು ಈ ಹೊತ್ತು ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಡುವನು; ನಾನು ನಿನ್ನನ್ನು ಕೊಂದು ನಿನ್ನ ತಲೆಯನ್ನು ಕಡಿದುಹಾಕಿ ಫಿಲಿಷ್ಟಿಯಸೈನ್ಯದ ಶವಗಳನ್ನು ಮೃಗಪಕ್ಷಿಗಳಿಗೆ ಹಂಚಿಕೊಡುವೆನು. ಇದರಿಂದ ಇಸ್ರಾಯೇಲ್ಯರೊಳಗೆ ದೇವರಿರುತ್ತಾನೆಂಬದು ಭೂಲೋಕದವರಿಗೆಲ್ಲಾ ತಿಳಿದು ಬರುವದು;


ಇಲ್ಲಿ ಬಾ; ನಿನ್ನ ಮಾಂಸವನ್ನು ಮೃಗಪಕ್ಷಿಗಳಿಗೆ ಹಂಚಿಕೊಡುತ್ತೇನೆ ಅಂದನು.


ನಿಮ್ಮ ಹೆಣಗಳು ಪಕ್ಷಿಗಳಿಗೂ ಕಾಡುಮೃಗಗಳಿಗೂ ಆಹಾರವಾಗುವವು; ಅವುಗಳನ್ನು ಬೆದರಿಸುವವರು ಯಾರೂ ಇರುವದಿಲ್ಲ.


ಈ ಎರಡನೆಯ ಮೃಗವು - ದೊಡ್ಡವರು ಚಿಕ್ಕವರು ಐಶ್ಚರ್ಯವಂತರು ಬಡವರು ಸ್ವತಂತ್ರರು ದಾಸರು ಎಲ್ಲರೂ ತಮ್ಮ ತಮ್ಮ ಬಲಗೈಯ ಮೇಲಾಗಲಿ ಹಣೆಯ ಮೇಲಾಗಲಿ ಗುರುತು ಹೊಂದಬೇಕೆಂತಲೂ


ಈ ಮಾತಿಗೆ ಶಿಷ್ಯರು - ಸ್ವಾಮೀ, ಅದು ಎಲ್ಲಿ ಆಗುವದು ಎಂದು ಕೇಳಲು ಆತನು ಅವರಿಗೆ - ಹೆಣ ಎಲ್ಲಿಯೋ ಅಲ್ಲಿಯೇ ಹದ್ದುಗಳು ಕೂಡುವವು ಎಂದು ಉತ್ತರಕೊಟ್ಟನು.


ಹೆಣ ಬಿದ್ದಲ್ಲಿ ಹದ್ದುಗಳು ಕೂಡುವವು.


ನಿನ್ನನ್ನೂ ನಿನ್ನ ನದಿಯ ಎಲ್ಲಾ ಮೀನುಗಳನ್ನೂ ಕಾಡಿನ ಪಾಲುಮಾಡುವೆನು; ನೀನು ಬೈಲಿನಲ್ಲಿ ಬಿದ್ದಿರುವಿ; ನಿನ್ನನ್ನು ಯಾರೂ ಹೊರರು, ಹೂಣಿಡರು; ನಾನು ನಿನ್ನನ್ನು ಭೂಜಂತುಗಳಿಗೂ ಆಕಾಶಪಕ್ಷಿಗಳಿಗೂ ಆಹಾರ ಮಾಡಿದ್ದೇನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನರಪುತ್ರನೇ, ಎಲ್ಲಾ ಬಗೆಯ ಪಕ್ಷಿಗಳಿಗೂ ಸಮಸ್ತ ಭೂಜಂತುಗಳಿಗೂ ಹೀಗೆ ನುಡಿ - ನೀವು ಕೂಡಿಬನ್ನಿರಿ; ನಾನು ಇಸ್ರಾಯೇಲಿನ ಪರ್ವತಗಳ ಮೇಲೆ ನಿಮಗಾಗಿ ಮಾಡುವ ಮಹಾಯಜ್ಞಕ್ಕೆ ಎಲ್ಲಾ ಕಡೆಯಿಂದಲೂ ನೆರೆದು ಬಂದು ಮಾಂಸವನ್ನು ತಿಂದು ರಕ್ತವನ್ನು ಕುಡಿಯಿರಿ.


ಜನಾಂಗಗಳು ಕೋಪಿಸಿಕೊಂಡವು, ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯ ಬಂದದೆ; ನೀನು ನಿನ್ನ ದಾಸರಾದ ಪ್ರವಾದಿಗಳಿಗೂ ದೇವಜನರಿಗೂ ನಿನ್ನ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು ಲೋಕನಾಶಕರನ್ನು ನಾಶಮಾಡುವಿ ಎಂದು ಆತನನ್ನು ಆರಾಧಿಸಿದರು.


ಇದಲ್ಲದೆ ಹತ್ತು ಕೊಂಬುಗಳನ್ನೂ ಮೃಗವನ್ನೂ ಕಂಡಿಯಲ್ಲ? ಇವುಗಳಿಂದ ಸೂಚಿತರಾದವರು ಆ ಜಾರಸ್ತ್ರೀಯನ್ನು ದ್ವೇಷಿಸಿ ಅವಳನ್ನು ಗತಿಗೆಟ್ಟವಳನ್ನಾಗಿಯೂ ಬಟ್ಟೆಯಿಲ್ಲದವಳನ್ನಾಗಿಯೂ ಮಾಡಿ ಅವಳ ಮಾಂಸವನ್ನು ತಿಂದು ಅವಳನ್ನು ಬೆಂಕಿಯಿಂದ ಸುಟ್ಟುಬಿಡುವರು.


ಆಮೇಲೆ ಸಿಂಹಾಸನದ ಕಡೆಯಿಂದ ಬಂದ ಒಂದು ಶಬ್ದವು - ದೇವರ ದಾಸರೆಲ್ಲರೇ, ದೇವರಿಗೆ ಭಯಪಡುವ ಹಿರಿಕಿರಿಯರೇ, ನಮ್ಮ ದೇವರನ್ನು ಕೊಂಡಾಡಿರಿ ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು