Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:3 - ಕನ್ನಡ ಸತ್ಯವೇದವು J.V. (BSI)

3 ಹಲ್ಲೆಲೂಯಾ ಎಂದು ಆರ್ಭಟಿಸಿ - ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಎರಡನೆಯ ಸಾರಿ, “ಹಲ್ಲೆಲೂಯಾ ಎಂದು ಆರ್ಭಟಿಸಿ, ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತಿರುತ್ತದೆ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರು ಮತ್ತೊಮ್ಮೆ, “ಅಲ್ಲೆಲೂಯ ! ಅವಳ ದಹನದಿಂದ ಹೊಗೆ ಸತತ ಮೇಲೇರುತಿಹುದು ಒಂದೇಸಮನೆ,” ಎಂದು ಕೂಗಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇದಲ್ಲದೆ ಪರಲೋಕದಲ್ಲಿದ್ದ ಆ ಜನರು ಹೇಳಿದ್ದೇನೆಂದರೆ: “ಹಲ್ಲೆಲೂಯಾ! ಅವಳು ಸುಟ್ಟುಹೋಗುತ್ತಿದ್ದಾಳೆ. ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಮೇಲೇಳುತ್ತಿರುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಎಂದೂ ದ್ವಿತೀಯ ಬಾರಿ: “ಹಲ್ಲೆಲೂಯಾ! ಅವಳ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿಹೋಗುತ್ತದೆ!” ಎಂದು ಘೋಷಿಸಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಅನಿ ಪರ್ತುನ್ ತೆನಿ, ಹಲ್ಲೆಲುಯಾ! “ತ್ಯಾ ಮೊಟ್ಯಾ ಶಾರಾಕ್ ಜಾಳ್ವುತಲ್ಯಾ ಆಗಿಚೊ ಡುಕೊಟ್ ಸದಾ ಸರ್ವತಾಕ್ ವೈರ್ ಜಾತಾ!” ಮನುನ್ ಬೊಬ್ ಮಾರ್‍ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:3
9 ತಿಳಿವುಗಳ ಹೋಲಿಕೆ  

ಅದು ಹಗಲಿರುಳೂ ಆರದು, ಅದರ ಹೊಗೆ ನಿರಂತರ ಏರುತ್ತಿರುವದು. ದೇಶವು ತಲತಲಾಂತರಕ್ಕೂ ಹಾಳುಬಿದ್ದಿರುವದು, ಯುಗಯುಗಾಂತರಕ್ಕೂ ಅಲ್ಲಿ ಯಾರೂ ಹಾದು ಹೋಗರು.


ಅವಳ ದಹನದಿಂದೇರುವ ಹೊಗೆಯನ್ನು ನೋಡುತ್ತಾ - ಈ ಮಹಾ ಪಟ್ಟಣಕ್ಕೆ ಸಮಾನವಾದದ್ದು ಯಾವದು ಎಂದು ಕೂಗಿ ಹೇಳಿದರು.


ಅವಳೊಂದಿಗೆ ಜಾರತ್ವಮಾಡಿ ಭೋಗಿಗಳಾಗಿ ಬದುಕಿದ ಭೂರಾಜರು ಅವಳ ದಹನದಿಂದೇರುವ ಹೊಗೆಯನ್ನು ನೋಡುವಾಗ ಅವಳ ಯಾತನೆಯ ದೆಸೆಯಿಂದ ಭಯಪಟ್ಟು ದೂರದಲ್ಲಿ ನಿಂತು ಗೋಳಾಡುತ್ತಾ ಎದೆ ಬಡುಕೊಳ್ಳುತ್ತಾ -


ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ; ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ನಮಸ್ಕಾರಮಾಡುವವರೂ ಅದರ ಹೆಸರನ್ನು ಸೂಚಿಸುವ ಗುರುತನ್ನು ಹಾಕಿಸಿಕೊಂಡಿರುವವರೆಲ್ಲರೂ ಹಗಲಿರುಳು ಉಪಶಮನವಿಲ್ಲದೆ ಯಾತನೆಪಡುವರು ಎಂದು ಮಹಾ ಶಬ್ದದಿಂದ ಹೇಳಿದನು.


ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಶಬ್ದವನ್ನು ಕೇಳಿದೆನು. ಅವರು - ಹಲ್ಲೆಲೂಯಾ. ಜಯವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲಿ ಉಂಟು;


ಸೊದೋಮ್ ಗೊಮೋರಗಳ ಕಡೆಗೂ ಆ ಎಲ್ಲಾ ಸೀಮೆಯ ಕಡೆಗೂ ನೋಡಿದಾಗ, ಅಯ್ಯೋ, ಆ ಪ್ರದೇಶದಿಂದ ಹೊಗೆಯು ಆವಿಗೆಯ ಹೊಗೆಯಂತೆ ಏರಿತು.


ಸೊದೋಮ ಗೊಮೋರ ಪಟ್ಟಣಗಳವರೂ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಸ್ವಭಾವವಿರುದ್ಧವಾದ ಭೋಗವನ್ನನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ [ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ] ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಪಾಪಾತ್ಮರು ಭೂಲೋಕದಲ್ಲಿ ಮುಗಿದು ಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯಾಹುವಿಗೆ ಸ್ತೋತ್ರ.


ಆಗ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕೂತಿರುವ ದೇವರಿಗೆ ನಮಸ್ಕಾರ ಮಾಡಿ - ಆಮೆನ್; ಹಲ್ಲೆಲೂಯಾ, ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು