Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 19:4 - ಕನ್ನಡ ಸತ್ಯವೇದವು J.V. (BSI)

4 ಆಗ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕೂತಿರುವ ದೇವರಿಗೆ ನಮಸ್ಕಾರ ಮಾಡಿ - ಆಮೆನ್; ಹಲ್ಲೆಲೂಯಾ, ಅಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕುಳಿತಿರುವ ದೇವರಿಗೆ ಆರಾಧನೆ ಮಾಡಿ, “ಆಮೆನ್, ಹಲ್ಲೆಲೂಯಾ” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆಗ ಇಪ್ಪತ್ನಾಲ್ಕು ಮಂದಿ ಸಭಾಪ್ರಮುಖರೂ ನಾಲ್ಕು ಜೀವಿಗಳೂ ಸಿಂಹಾಸನಾರೂಢರಾದ ದೇವರಿಗೆ ಸಾಷ್ಟಾಂಗ ನಮಸ್ಕಾರ ಮಾಡಿದರು. “ಆಮೆನ್, ಅಲ್ಲೆಲೂಯ,” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಂತರ ಇಪ್ಪತ್ತನಾಲ್ಕು ಮಂದಿ ಹಿರಿಯರು ಮತ್ತು ನಾಲ್ಕು ಜೀವಿಗಳು ಮೊಣಕಾಲೂರಿ ನಮಸ್ಕರಿಸಿದರು. ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿದರು. ಅವರು, “ಆಮೆನ್! ಹಲ್ಲೆಲೂಯಾ!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆಗ ಇಪ್ಪತ್ನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು, ಸಿಂಹಾಸನದ ಮೇಲೆ ಕುಳಿತಿರುವ ದೇವರನ್ನು ಆರಾಧಿಸಿ: “ಆಮೆನ್, ಹಲ್ಲೆಲೂಯಾ!” ಎಂದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ಇಸಾರ್-ಚಾರ್ ಜಾನ್ತ್ಯಾಲೊಕಾನಿ ಅನಿ ತ್ಯಾ ಚಾರ್ ಝಿತ್ತ್ಯಾ ಸಾವ್ಜಾನಿ ಡಬ್ ಪಡುನ್ ಸಿವಾಸನಾಚ್ಯಾ ವರ್ತಿ ಬಸಲ್ಲ್ಯಾ ದೆವಾಚೆ ಆರಾದನ್ ಕರ್ಲ್ಯಾನಿ. ಅನಿ, “ಆಮೆನ್! ದೆವಾಕ್ ಹೊಗ್ಳಾಪ್!” ಮಟ್ಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 19:4
20 ತಿಳಿವುಗಳ ಹೋಲಿಕೆ  

ಆಗ ನಾಲ್ಕು ಜೀವಿಗಳು ಆಮೆನ್ ಅಂದವು; ಮತ್ತು ಹಿರಿಯರು ಅಡ್ಡಬಿದ್ದು ನಮಸ್ಕಾರ ಮಾಡಿದರು.


ಇಸ್ರಾಯೇಲ್‍ದೇವನಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ; ಸರ್ವಜನರೂ ಆಮೆನ್ ಎನ್ನಲಿ. ಯಾಹುವಿಗೆ ಸ್ತೋತ್ರ!


ಎಜ್ರನು ಪರಾತ್ಪರ ದೇವರಾದ ಯೆಹೋವನನ್ನು ಸ್ತುತಿಸಿದ್ದಕ್ಕೆ ಸರ್ವಜನರೂ ತಮ್ಮ ಕೈಗಳನ್ನೆತ್ತಿ ಆಮೆನ್, ಆಮೆನ್ ಎಂದು ಹೇಳಿ ನೆಲದ ಮಟ್ಟಿಗೂ ತಲೆಬಾಗಿ ಯೆಹೋವನನ್ನು ಆರಾಧಿಸಿದರು.


ಇದಾದ ಮೇಲೆ ಪರಲೋಕದಲ್ಲಿ ದೊಡ್ಡ ಗುಂಪಿನ ಮಹಾ ಶಬ್ದವೋ ಎಂಬಂತೆ ಒಂದು ಶಬ್ದವನ್ನು ಕೇಳಿದೆನು. ಅವರು - ಹಲ್ಲೆಲೂಯಾ. ಜಯವೂ ಪ್ರಭಾವವೂ ಶಕ್ತಿಯೂ ನಮ್ಮ ದೇವರಲ್ಲಿ ಉಂಟು;


ನಾಲ್ಕು ಜೀವಿಗಳಲ್ಲಿ ಒಂದು ಈ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು.


ಹಾಗಾಗಲಿ, ಯೆಹೋವನು ಹಾಗೇ ಮಾಡಲಿ! ಯೆಹೋವನು ತನ್ನ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬೆಲಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಿ ನೀನು ನುಡಿದ ಮಾತುಗಳನ್ನು ನೆರವೇರಿಸಲಿ!


ಯೆಹೋವನಿಗೆ ಸದಾಕಾಲವೂ ಕೊಂಡಾಟವಾಗಲಿ. ಆಮೆನ್, ಆಮೆನ್.


ಆತನ ಪ್ರಭಾವವುಳ್ಳ ನಾಮಕ್ಕೆ ಸದಾಕಾಲವೂ ಪ್ರಣಾಮವಿರಲಿ; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿರಲಿ. ಆಮೆನ್, ಆಮೆನ್.


ಇಸ್ರಾಯೇಲ್ಯರ ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ. ಆಮೆನ್. ಆಮೆನ್.


ಇದಲ್ಲದೆ ನನ್ನ ಉಡಿಲನ್ನು ಝಾಡಿಸಿ ಅವರಿಗೆ - ಈಗ ಕೊಟ್ಟ ಮಾತನ್ನು ಕೈಕೊಳ್ಳದ ಪ್ರತಿಯೊಬ್ಬನನ್ನು ದೇವರು ಅವನ ಮನೆಯಿಂದಲೂ ಸ್ವಾಸ್ತ್ಯದಿಂದಲೂ ಈ ಪ್ರಕಾರವೇ ಝಾಡಿಸಿ ಬಿಡಲಿ; ಅವನು ಉಡಿಲಿನಂತೆಯೇ ಝಾಡಿಸಲ್ಪಟ್ಟು ಬರಿದಾಗಲಿ ಅಂದೆನು. ಕೂಡಲೆ ಸಭೆಯವರೆಲ್ಲಾ ಹಾಗೆಯೇ ಆಗಲಿ ಎಂದು ಹೇಳಿ ಯೆಹೋವನನ್ನು ಕೊಂಡಾಡಿ ಕೊಟ್ಟ ಮಾತನ್ನು ಕೈಕೊಂಡರು.


ಇಸ್ರಾಯೇಲ್‍ದೇವರಾದ ಯೆಹೋವನಿಗೆ ಯುಗಯುಗಾಂತರಗಳವರೆಗೂ ಕೊಂಡಾಟವಾಗಲಿ ಎಂಬದೇ. ಅವರು ಹೀಗೆ ಹಾಡಿದ್ದಕ್ಕೆ ಸರ್ವಜನರೂ ಆಮೆನ್ ಎಂದು ಯೆಹೋವನನ್ನು ಸ್ತುತಿಸಿದರು.


ನೀನು ಆತ್ಮದಿಂದ ಮಾತ್ರ ದೇವರ ಸ್ತೋತ್ರಮಾಡಿದರೆ ಆ ವರವನ್ನು ಹೊಂದದಿರುವ ಸಭೆಯವನಿಗೆ ನೀನು ಹೇಳಿದ್ದು ತಿಳಿಯದೆ ಇರುವದರಿಂದ ನೀನು ಮಾಡುವ ಕೃತಜ್ಞತಾಸ್ತುತಿಗೆ ಅವನು ಆಮೆನ್ ಎಂದು ಹೇಗೆ ಹೇಳಾನು?


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ನಮ್ಮನ್ನು ಶೋಧನೆಯೊಳಗೆ ಸೇರಿಸದೆ ಕೇಡಿನಿಂದ ನಮ್ಮನ್ನು ತಪ್ಪಿಸು.


ಪಾಪಾತ್ಮರು ಭೂಲೋಕದಲ್ಲಿ ಮುಗಿದು ಹೋಗಲಿ; ದುಷ್ಟರು ನಿರ್ಮೂಲವಾಗಲಿ. ನನ್ನ ಮನವೇ, ಯೆಹೋವನನ್ನು ಕೊಂಡಾಡು; ಯಾಹುವಿಗೆ ಸ್ತೋತ್ರ.


ಹಲ್ಲೆಲೂಯಾ ಎಂದು ಆರ್ಭಟಿಸಿ - ಅವಳ ದಹನದಿಂದುಂಟಾದ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರಿ ಹೋಗುತ್ತದೆ ಎಂದು ಹೇಳಿದರು.


ತರುವಾಯ ಜನರ ದೊಡ್ಡ ಗುಂಪಿನ ಶಬ್ದದಂತೆಯೂ ಜಲಪ್ರವಾಹಘೋಷದಂತೆಯೂ ಗಟ್ಟಿಯಾದ ಗುಡುಗಿನ ಶಬ್ದದಂತೆಯೂ ಇದ್ದ ಒಂದು ಶಬ್ದವನ್ನು ಕೇಳಿದೆನು. ಅದು - ಹಲ್ಲೆಲೂಯಾ; ಸರ್ವಶಕ್ತನಾಗಿರುವ ನಮ್ಮ ದೇವರಾದ ಕರ್ತನು ಆಳುತ್ತಾನೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು