Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:1 - ಕನ್ನಡ ಸತ್ಯವೇದವು J.V. (BSI)

1 ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ - ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಹೇಳುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ, ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ಸಂಚರಿಸುವಾತನು ಹೇಳುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 “ಎಫೆಸದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಏಳು ನಕ್ಷತ್ರಗಳನ್ನು ತನ್ನ ಬಲಗೈಯಲ್ಲಿ ಹಿಡಿದಿರುವಾತನೂ ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವಾತನೂ ನೀಡುವ ಸಂದೇಶವಿದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಎಫೆಸದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ತನ್ನ ಬಲಗೈಯಲ್ಲಿ ಏಳು ನಕ್ಷತ್ರಗಳನ್ನು ಹಿಡಿದಿರುವಾತನು ಮತ್ತು ಏಳು ದೀಪಸ್ತಂಭಗಳ ನಡುವೆ ತಿರುಗಾಡುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ನೀನು ಎಫೆಸದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು, ಏಳು ಚಿನ್ನದ ದೀಪಸ್ತಂಭಗಳ ನಡುವೆ ನಡೆದಾಡುವವರು ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 “ಎಫೆಜಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್.” ಸಾತ್ ಚಿಕ್ಕಿಯಾ ಅಪ್ನಾಚ್ಯಾ ಉಜ್ವ್ಯಾ ಹಾತಾತ್ ಧರುನ್ ಸಾತ್ ದಿವ್ಯಾಂಚ್ಯಾ ಮದ್ದಿ ಚಲ್ತಲ್ಯಾಕ್ನಾ ಯೆಲ್ಲಿ ಬಾತ್ಮಿ ಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:1
20 ತಿಳಿವುಗಳ ಹೋಲಿಕೆ  

ನನ್ನ ಬಲಗೈಯಲ್ಲಿ ನೀನು ಕಂಡ ಏಳು ನಕ್ಷತ್ರಗಳ ಮತ್ತು ಏಳು ಚಿನ್ನದ ದೀಪಸ್ತಂಭಗಳ ಗೂಢಾರ್ಥವನ್ನು ವಿವರಿಸುತ್ತೇನೆ - ಆ ಏಳು ನಕ್ಷತ್ರಗಳು ಅಂದರೆ ಆ ಏಳು ಸಭೆಗಳ ದೂತರು; ಆ ಏಳು ದೀಪಸ್ತಂಭಗಳು ಅಂದರೆ ಆ ಏಳು ಸಭೆಗಳು.


ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ - ಆಮೆನ್ ಎಂಬಾತನು ಅಂದರೆ ನಂಬತಕ್ಕ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವಾತನು ಹೇಳುವದೇನಂದರೆ -


ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -


ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ - ದೇವರ ಏಳು ಆತ್ಮಗಳೂ ಏಳು ನಕ್ಷತ್ರಗಳೂ ಉಳ್ಳಾತನು ಹೇಳುವದೇನಂದರೆ - ನಿನ್ನ ಕೃತ್ಯಗಳನ್ನು ಬಲ್ಲೆನು; ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂಬದನ್ನು ಬಲ್ಲೆನು.


ಥುವತೈರದಲ್ಲಿರುವ ಸಭೆಯ ದೂತನಿಗೆ ಬರೆ -


ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ -


ಸ್ಮುರ್ನದಲ್ಲಿರುವ ಸಭೆಯ ದೂತನಿಗೆ ಬರೆ -


ಯಾಕಂದರೆ ಇಬ್ಬರು ಮೂವರು ನನ್ನ ಹೆಸರಿನಲ್ಲಿ ಎಲ್ಲಿ ಕೂಡಿ ಬಂದಿರುತ್ತಾರೋ ಅಲ್ಲಿ ಅವರ ನಡುವೆ ನಾನು ಇದ್ದೇನೆ ಅಂದನು.


ಯೋಹಾನನು ಉರಿಯುವ ದೀಪದೋಪಾದಿಯಲ್ಲಿ ಪ್ರಕಾಶಿಸಿದನು. ಅವನು ಕೊಡುವ ಬೆಳಕಿನಲ್ಲಿ ಸ್ವಲ್ಪಕಾಲ ವಿನೋದಗೊಳ್ಳುವದಕ್ಕೆ ಮನಸ್ಸುಮಾಡಿದಿರಿ.


ಪರಲೋಕದಲ್ಲಿ ಒಂದು ಮಹಾಲಕ್ಷಣವು ಕಾಣಿಸಿತು. ಅದೇನಂದರೆ, ಸೂರ್ಯನನ್ನು ಧರಿಸಿಕೊಂಡಿದ್ದ ಒಬ್ಬ ಸ್ತ್ರೀಯಿದ್ದಳು; ಆಕೆಯ ಕಾಲುಗಳ ಕೆಳಗೆ ಚಂದ್ರನಿದ್ದನು. ಆಕೆಯ ತಲೆಯ ಮೇಲೆ ಹನ್ನೆರಡು ನಕ್ಷತ್ರಗಳುಳ್ಳ ಒಂದು ಕಿರೀಟವಿತ್ತು;


ನಾನು ನಿಮಗೆ ಆಜ್ಞಾಪಿಸಿದ್ದನ್ನೆಲ್ಲಾ ಕಾಪಾಡಿಕೊಳ್ಳುವದಕ್ಕೆ ಅವರಿಗೆ ಉಪದೇಶ ಮಾಡಿರಿ. ನೋಡಿರಿ, ನಾನು ಯುಗದ ಸಮಾಪ್ತಿಯವರೆಗೂ ಎಲ್ಲಾ ದಿವಸ ನಿಮ್ಮ ಸಂಗಡ ಇರುತ್ತೇನೆ ಎಂದು ಹೇಳಿದನು.


ಎಫೆಸಕ್ಕೆ ಬಂದಾಗ ಅವರನ್ನು ಅಲ್ಲೇ ಬಿಟ್ಟನು. ತಾನು ಸಭಾಮಂದಿರದೊಳಕ್ಕೆ ಹೋಗಿ ಯೆಹೂದ್ಯರ ಸಂಗಡ ವಾದಿಸಿದನು.


ದೇವರ ಚಿತ್ತವಾದರೆ ತಿರಿಗಿ ನಿಮ್ಮ ಬಳಿಗೆ ಬರುತ್ತೇನೆಂದು ಹೇಳಿ ಅವರ ಅಪ್ಪಣೆ ತೆಗೆದುಕೊಂಡು ಹೋದನು. ಆಮೇಲೆ ಎಫೆಸದಿಂದ ಸಮುದ್ರಪ್ರಯಾಣ ಮಾಡಿ


ಅಪೊಲ್ಲೋಸನು ಕೊರಿಂಥದಲ್ಲಿದ್ದಾಗ ಪೌಲನು ಮಲೆನಾಡಿನಲ್ಲಿ ಸಂಚಾರಮಾಡಿ ಎಫೆಸಕ್ಕೆ ಬಂದು ಕೆಲವು ಮಂದಿ ಶಿಷ್ಯರನ್ನು ಕಂಡು -


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ಜನರು ಪ್ರವೇಶಿಸುವಾಗ ಪ್ರಭುವು ಅವರ ಮಧ್ಯದಲ್ಲಿ ಪ್ರವೇಶಿಸಲಿ; ಅವರು ಹೊರಡುವಾಗ ಅವನೂ ಹೊರಡಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು