Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:11 - ಕನ್ನಡ ಸತ್ಯವೇದವು J.V. (BSI)

11 ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ದೇವರಾತ್ಮನು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 ಸಭೆಗಳಿಗೆ ದೇವರಾತ್ಮ ಹೇಳುವುದನ್ನು ಕಿವಿಯುಳ್ಳವನು ಕೇಳಲಿ. ಜಯಹೊಂದುವವನಿಗೆ ಎರಡನೆಯ ಮರಣದಿಂದ ಯಾವ ಕೇಡೂ ಸಂಭವಿಸದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ಪವಿತ್ರಾತ್ಮನು ಸಭೆಗಳಿಗೆ ಹೇಳುತ್ತಿರುವ ಈ ಸಂಗತಿಗಳನ್ನು ಕೇಳುತ್ತಿರುವವನೇ, ಗಮನವಿಟ್ಟು ಆಲಿಸು. ಜಯಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಪವಿತ್ರಾತ್ಮ ದೇವರು ಸಭೆಗಳಿಗೆ ಹೇಳುವುದನ್ನು ಕಿವಿಯುಳ್ಳವರು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

11 “ತುಕಾ ಕಾನಾ ಹಾತ್ ಜಾಲ್ಯಾರ್ ಪವಿತ್ರ್ ಆತ್ಮೊ ಪವಿತ್ರ್ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಕ್ನಿ ಕಾಯ್ ಸಾಂಗುಕ್ ಲಾಗ್ಲಾ ಮನ್ತಲೆ ಆಯ್ಕ್! ಜೊ ಕೊನ್ ಮರಲ್ಯಾಕ್ನಾ ಜಿಕಲ್ಯಾಕ್ ದುಸ್ರ್ಯಾ ಮರ್ನಾನ್ ಕಾಯ್ಬಿ ವಾಯ್ಟ್ ಹೊಯ್ನಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:11
16 ತಿಳಿವುಗಳ ಹೋಲಿಕೆ  

ಪ್ರಥಮ ಪುನರುತ್ಥಾನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರುಷ ಆಳುವರು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ಕಿವಿಯುಳ್ಳವನು ಕೇಳಲಿ, ಸೆರೆಹಿಡಿಯುವವನು ತಾನೇ ಸೆರೆಗೆ ಹೋಗುವನು; ಕತ್ತಿಯಿಂದ ಕೊಲ್ಲುವವನು ಕತ್ತಿಯಿಂದಲೇ ಸಾಯಬೇಕು. ಇದರಲ್ಲಿ ದೇವಜನರ ತಾಳ್ಮೆಯೂ ನಂಬಿಕೆಯೂ ತೋರಿಬರುತ್ತವೆ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.


ಕಿವಿಯುಳ್ಳವನು ಕೇಳಲಿ.


ಕಿವಿಯುಳ್ಳವನು ಕೇಳಲಿ ಅಂದನು.


ಒಂದು ನೂರರಷ್ಟು ಫಲವನ್ನು ಕೊಟ್ಟವು ಎಂದು ಹೇಳಿ - ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಅಂದನು.


ಇನ್ನು ಕೆಲವು ಬೀಜ ಒಳ್ಳೆಯ ನೆಲದಲ್ಲಿ ಬಿದ್ದು ಮೊಳೆತು ನೂರರಷ್ಟು ಫಲವನ್ನು ಕೊಟ್ಟವು. ಈ ಮಾತುಗಳನ್ನು ಹೇಳಿ ಆತನು - ಕೇಳುವದಕ್ಕೆ ಕಿವಿಯುಳ್ಳವನು ಕೇಳಲಿ ಎಂದು ಕೂಗಿದನು.


ಜಯಶಾಲಿಗೆ ಹೀಗೆ ಶುಭ್ರವಸ್ತ್ರಗಳನ್ನು ಹೊದಿಸುವರು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಬಿಡದೆ ಅವನು ನನ್ನವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಒಪ್ಪುವೆನು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ.


ಜಯಹೊಂದುವವನು ಇವುಗಳಿಗೆ ಬಾಧ್ಯನಾಗುವನು; ನಾನು ಅವನಿಗೆ ದೇವರಾಗಿರುವೆನು, ಅವನು ನನಗೆ ಮಗನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು