Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:12 - ಕನ್ನಡ ಸತ್ಯವೇದವು J.V. (BSI)

12 ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಬರೆ, ಹರಿತವಾದ ಇಬ್ಬಾಯಿ ಕತ್ತಿಯನ್ನು ಹಿಡಿದಾತನು ಹೇಳುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಪೆರ್ಗಮದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ಹರಿತವಾದ ಇಬ್ಬಾಯಿಯ ಖಡ್ಗವುಳ್ಳವನು ನೀಡುವ ಸಂದೇಶವಿದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಪೆರ್ಗಮದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಹರಿತವಾದ ಇಬ್ಬಾಯಿಖಡ್ಗವನ್ನು ಹೊಂದಿರುವಾತನು ನಿನಗೆ ಇವುಗಳನ್ನು ಹೇಳುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 “ಪೆರ್ಗಮದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಹರಿತವಾದ ಇಬ್ಬಾಯಿಕತ್ತಿಯನ್ನು ಹಿಡಿದವರು ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಪೆರ್‍ಗಾಮಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್. ದೊನಿಬಿ ಬಾಜುನ್ ಧಾರ್ ಹೊತ್ತೊ ಕೊಯ್ತೊ ಅಸಲ್ಲ್ಯಾಕ್ನಾ ಯೆಲ್ಲಿ ಬಾತ್ಮಿ ಹಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:12
10 ತಿಳಿವುಗಳ ಹೋಲಿಕೆ  

ಆದದರಿಂದ ದೇವರ ಕಡೆಗೆ ತಿರುಗಿಕೋ, ತಿರುಗಿಕೊಳ್ಳದಿದ್ದರೆ ನಾನು ಬೇಗನೆ ನಿನ್ನ ಬಳಿಗೆ ಬಂದು ನನ್ನ ಬಾಯಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.


ಆತನ ಬಲಗೈಯಲ್ಲಿ ಏಳು ನಕ್ಷತ್ರಗಳಿದ್ದವು; ಆತನ ಬಾಯೊಳಗಿಂದ ಹದವಾದ ಇಬ್ಬಾಯಿ ಕತ್ತಿಯು ಹೊರಡುತ್ತಿತ್ತು. ಆತನ ಮುಖವು ಮಧ್ಯಾಹ್ನದಲ್ಲಿ ಪ್ರಕಾಶಿಸುವ ಸೂರ್ಯನಂತಿತ್ತು.


ಯಾಕಂದರೆ ದೇವರ ವಾಕ್ಯವು ಸಜೀವವಾದದ್ದು, ಕಾರ್ಯಸಾಧಕವಾದದ್ದು, ಯಾವ ಇಬ್ಬಾಯಿಕತ್ತಿಗಿಂತಲೂ ಹದವಾದದ್ದು, ಪ್ರಾಣಆತ್ಮಗಳನ್ನೂ ಕೀಲುಮಜ್ಜೆಗಳನ್ನೂ ವಿಭಾಗಿಸುವಷ್ಟು ಮಟ್ಟಿಗೂ ತೂರಿಹೋಗುವಂಥದು, ಹೃದಯದ ಆಲೋಚನೆಗಳನ್ನೂ ಉದ್ದೇಶಗಳನ್ನೂ ವಿವೇಚಿಸುವಂಥದು ಆಗಿದೆ.


ವಿುಕ್ಕಾದವರು ಆ ಕುದುರೆಯ ಮೇಲೆ ಕೂತಿದ್ದವನ ಬಾಯಿಂದ ಬಂದ ಕತ್ತಿಯಿಂದ ಹತರಾದರು; ಮತ್ತು ಹಕ್ಕಿಗಳೆಲ್ಲಾ ಅವರ ಮಾಂಸವನ್ನು ಹೊಟ್ಟೆ ತುಂಬಾ ತಿಂದವು.


ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಬರುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.


ಅದು - ನೀನು ನೋಡುವದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬೀ ಏಳು ಪಟ್ಟಣಗಳ ಸಭೆಗಳಿಗೆ ಕಳುಹಿಸಬೇಕೆಂದು ನುಡಿಯಿತು.


ಬಡವರಿಗೋಸ್ಕರ ನ್ಯಾಯವಾಗಿ ತೀರ್ಪುಮಾಡುವನು, ಲೋಕದ ದೀನರಿಗೋಸ್ಕರ ಧರ್ಮವಾಗಿ ನಿರ್ಣಯಿಸುವನು; ಲೋಕವನ್ನು ತನ್ನ ಬಾಯ ದಂಡದಿಂದ ದಂಡಿಸುವನು, ದುಷ್ಟರನ್ನು ತನ್ನ ಬಾಯುಸುರಿನಿಂದ ಕೊಲ್ಲುವನು.


ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ - ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಹೇಳುವದೇನಂದರೆ -


ನನ್ನ ಬಾಯನ್ನು ಹದವಾದ ಖಡ್ಗವನ್ನಾಗಿ ಮಾಡಿ ತನ್ನ ಕೈಯ ನೆರಳಿನಲ್ಲಿ ನನ್ನನ್ನು ಹುದುಗಿಸಿದ್ದಾನೆ; ನನ್ನನ್ನು ಚೂಪಾದ ಬಾಣವನ್ನಾಗಿ ರೂಪಿಸಿ ತನ್ನ ಬತ್ತಳಿಕೆಯಲ್ಲಿ ಮುಚ್ಚಿಟ್ಟಿದ್ದಾನೆ.


ಅವನು ತನಗೋಸ್ಕರ ಒಂದು ಗುದ್ದುಮೊಳ ಉದ್ದವಾದ ಇಬ್ಬಾಯಿಕತ್ತಿಯನ್ನು ಮಾಡಿ ಅದನ್ನು ಬಟ್ಟೆಗಳ ಕೆಳಗೆ ಬಲಗಡೆಯ ಸೊಂಟಕ್ಕೆ ಕಟ್ಟಿಕೊಂಡು ಹೋಗಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು