ಪ್ರಕಟನೆ 2:21 - ಕನ್ನಡ ಸತ್ಯವೇದವು J.V. (BSI)21 ದೇವರ ಕಡೆಗೆ ತಿರುಗಿಕೊಳ್ಳುವದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು; ಆದರೆ ದೇವರ ಕಡೆಗೆ ತಿರುಗಿಕೊಂಡು ತನ್ನ ಜಾರತ್ವವನ್ನು ಬಿಟ್ಟುಬಿಡುವದಕ್ಕೆ ಅವಳಿಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಜಾರತ್ವವನ್ನು ಬಿಟ್ಟು ಪಶ್ಚಾತ್ತಾಪದಿಂದ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು, ಆದರೆ ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ಅವಳಿಗೆ ಮನಸ್ಸು ಬರಲಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಪಶ್ಚಾತ್ತಾಪಪಟ್ಟು ಪಾಪಕ್ಕೆ ವಿಮುಖಳಾಗುವಂತೆ ನಾನು ಅವಳಿಗೆ ಕಾಲಾವಕಾಶ ಕೊಟ್ಟೆ. ಆದರೆ ಅವಳು ತನ್ನ ಜಾರತ್ವವನ್ನು ತ್ಯಜಿಸಿ ದೇವರಿಗೆ ಅಭಿಮುಖಳಾಗಲು ನಿರಾಕರಿಸುತ್ತಾಳೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ತನ್ನ ಮನಸ್ಸನ್ನು ಪರಿವರ್ತಿಸಿಕೊಂಡು ಪಾಪಗಳಿಂದ ದೂರ ಸರಿಯಲು ನಾನು ಆಕೆಗೆ ಸಮಯ ಕೊಟ್ಟರೂ ಪರಿವರ್ತನೆ ಹೊಂದಲು ಆಕೆಗೆ ಇಷ್ಟವಿಲ್ಲ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 ದೇವರ ಕಡೆಗೆ ತಿರುಗಿಕೊಳ್ಳುವುದಕ್ಕೆ ನಾನು ಅವಳಿಗೆ ಸಮಯವನ್ನು ಕೊಟ್ಟೆನು. ಆದರೆ ದೇವರ ಕಡೆಗೆ ತಿರುಗಿಕೊಂಡು ತನ್ನ ವ್ಯಭಿಚಾರವನ್ನು ಬಿಟ್ಟುಬಿಡಲು ಅವಳಿಗೆ ಮನಸ್ಸಿಲ್ಲ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್21 ಮಿಯಾ ತಿಕಾ ತಿಚ್ಯಾ ಪಾಪಾನಿತ್ನಾ ಭಾಯ್ರ್ ಯೆವ್ಕ್ ಎಳ್ ದಿಲ್ಲೊ ಹಾಯ್, ಖರೆ ತಿಕಾ ತ್ಯಾ ಅನೈತಿಕ್ ಸಮಂದಾತ್ನಾ ಭಾಯ್ರ್ ಯೆವ್ಕ್ ಮನ್ ನಾ. ಅಧ್ಯಾಯವನ್ನು ನೋಡಿ |