Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 2:25 - ಕನ್ನಡ ಸತ್ಯವೇದವು J.V. (BSI)

25 ನಿಮಗಿರುವದನ್ನು ನಾನು ಬರುವ ತನಕ ಬಿಗಿಯಾಗಿ ಹಿಡಿದುಕೊಂಡಿರಬೇಕೆಂಬ ಅಪ್ಪಣೆಯನ್ನೇ ಹೊರತು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವದಿಲ್ಲವೆಂಬದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಆದರೆ ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ನಾನು ಬರುವವರೆಗೆ ನೀವು ಅವಲಂಬಿಸಿರುವುದನ್ನೇ ಆಶ್ರಯಿಸಿಕೊಂಡಿದ್ದರೆ ಅಷ್ಟೇ ಸಾಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ನಾನು ಬರುವ ತನಕ ಈಗ ನೀವಿರುವಂತೆಯೇ ಇರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ನೀವು ಹೊಂದಿರುವುದನ್ನು ನಾನು ಬರುವ ತನಕ ಭದ್ರವಾಗಿ ಹಿಡಿದುಕೊಂಡಿರಬೇಕೆಂಬ ಅಪ್ಪಣೆಯನ್ನೇ ಹೊರತು ಮತ್ತೊಂದು ಭಾರವನ್ನು ನಿಮ್ಮ ಮೇಲೆ ಹಾಕುವುದಿಲ್ಲವೆಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

25 ಖರೆ ಮಿಯಾ ಯೆಯ್ ಪತರ್ ತುಮಿ ಅತ್ತಾ ಕಸೆ ಹಾಸಿ ತಸೆಚ್ ಘಟ್ ಮನಾನಿ ಚಲುನ್ಗೆತ್ ರ್‍ಹಾವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 2:25
16 ತಿಳಿವುಗಳ ಹೋಲಿಕೆ  

ಬೇಗನೆ ಬರುತ್ತೇನೆ; ನಿನಗಿರುವದನ್ನು ಹಿಡಿದುಕೊಂಡಿರು; ನಿನ್ನ ಜಯಮಾಲೆಯನ್ನು ಯಾರೂ ಅಪಹರಿಸಬಾರದು.


ಇಗೋ, ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಯ ಮಾತುಗಳನ್ನು ಕೈಕೊಂಡು ನಡೆಯುವವನು ಧನ್ಯನು ಎಂದು ಹೇಳಿದನು.


ಆದದರಿಂದ ನೀನು ಹೊಂದಿದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೊಂಡು ಅದನ್ನು ಕಾಪಾಡಿಕೋ ಮತ್ತು ದೇವರ ಕಡೆಗೆ ತಿರುಗಿಕೋ. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯುವದೇ ಇಲ್ಲ.


ನಮ್ಮ ನಿರೀಕ್ಷೆಯನ್ನು ಕುರಿತು ನಾವು ಮಾಡಿದ ಪ್ರತಿಜ್ಞೆಯನ್ನು ನಿಶ್ಚಂಚಲವಾಗಿ ಪರಿಗ್ರಹಿಸೋಣ; ವಾಗ್ದಾನ ಮಾಡಿದಾತನು ನಂಬಿಗಸ್ತನು.


ಈ ವಿಷಯಗಳಲ್ಲಿ ಸಾಕ್ಷಿಹೇಳುವವನು - ನಿಜವಾಗಿ ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.


ಆದರೆ ಎಲ್ಲವನ್ನೂ ಪರಿಶೋಧಿಸಿ ಒಳ್ಳೇದನ್ನೇ ಭದ್ರವಾಗಿ ಹಿಡಿದುಕೊಳ್ಳಿರಿ;


ನಿಮ್ಮ ಪ್ರೀತಿಯು ನಿಷ್ಕಪಟವಾಗಿರಲಿ. ಕೆಟ್ಟತನಕ್ಕೆ ಹೇಸಿಕೊಂಡು ಒಳ್ಳೇದನ್ನು ಬಿಗಿಯಾಗಿ ಹಿಡಿದುಕೊಳ್ಳಿರಿ.


ಇಗೋ ಮೇಘಗಳೊಂದಿಗೆ ಬರುತ್ತಾನೆ; ಎಲ್ಲರ ಕಣ್ಣುಗಳು ಆತನನ್ನು ಕಾಣುವವು; ಆತನನ್ನು ಇರಿದವರು ಸಹ ಕಾಣುವರು; ಭೂವಿುಯಲ್ಲಿರುವ ಎಲ್ಲಾ ಕುಲದವರು ಆತನನ್ನು ನೋಡಿ ಎದೆಬಡುಕೊಳ್ಳುವರು. ಹೌದು, ಹಾಗೆಯೇ ಆಗುವದು. ಆಮೆನ್.


ಆಕಾಶಮಂಡಲಗಳನ್ನು ದಾಟಿಹೋದ ದೇವಕುಮಾರನಾದ ಯೇಸುವೆಂಬ ಶ್ರೇಷ್ಠ ಮಹಾಯಾಜಕನು ನಮಗಿರುವದರಿಂದ ನಾವು ಮಾಡಿರುವ ಪ್ರತಿಜ್ಞೆಯನ್ನು ಬಿಡದೆ ಹಿಡಿಯೋಣ.


ಕ್ರಿಸ್ತನಾದರೋ ಮಗನಾಗಿ ದೇವರ ಮನೆಯ ಮೇಲೆ ಅಧಿಕಾರಿಯಾಗಿದ್ದಾನೆ; ನಾವು ನಮ್ಮ ಧೈರ್ಯವನ್ನೂ ನಮ್ಮ ನಿರೀಕ್ಷೆಯಿಂದುಂಟಾಗುವ ಉತ್ಸಾಹವನ್ನೂ ಕಡೇ ತನಕ ದೃಢವಾಗಿ ಹಿಡಿದುಕೊಂಡವರಾದರೆ ನಾವೇ ದೇವರ ಮನೆಯವರು.


ನಾನು ಹೋಗಿ ನಿಮಗೆ ಸ್ಥಳವನ್ನು ಸಿದ್ಧಮಾಡಿದ ಮೇಲೆ ತಿರಿಗಿ ಬಂದು ನಿಮ್ಮನ್ನು ಕರಕೊಂಡು ಹೋಗಿ ನನ್ನ ಬಳಿಗೆ ಸೇರಿಸಿಕೊಳ್ಳುವೆನು; ಯಾಕಂದರೆ ನಾನಿರುವ ಸ್ಥಳದಲ್ಲಿ ನೀವು ಸಹ ಇರಬೇಕು.


ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವದು, ಸೂರ್ಯಚಂದ್ರ ನಕ್ಷತ್ರಗಳು ಉರಿದು ಲಯವಾಗಿ ಹೋಗುವವು, ಭೂವಿುಯೂ ಅದರಲ್ಲಿರುವ ಕೆಲಸಗಳೂ ಸುಟ್ಟುಹೋಗುವವು.


ನೀವು ಈ ರೊಟ್ಟಿಯನ್ನು ತಿಂದು ಈ ಪಾತ್ರೆಯಲ್ಲಿ ಪಾನಮಾಡುವಷ್ಟು ಸಾರಿ ಕರ್ತನ ಮರಣವನ್ನು ಆತನು ಬರುವ ತನಕ ಪ್ರಸಿದ್ಧಿಪಡಿಸುತ್ತೀರಿ.


ಆದದರಿಂದ ಕಾಲಕ್ಕೆ ಮೊದಲು ಯಾವದನ್ನು ಕುರಿತೂ ತೀರ್ಪುಮಾಡಬೇಡಿರಿ; ಕರ್ತನು ಬರುವ ತನಕ ತಡೆಯಿರಿ. ಆತನು ಕತ್ತಲೆಯಲ್ಲಿರುವ ಗುಪ್ತಕಾರ್ಯಗಳನ್ನು ಬೆಳಕಿಗೆ ತರುವನು, ಹೃದಯದ ಯೋಚನೆಗಳನ್ನು ಪ್ರತ್ಯಕ್ಷಪಡಿಸುವನು; ಆ ಕಾಲದಲ್ಲಿ ಪ್ರತಿಯೊಬ್ಬನಿಗೆ ಬರತಕ್ಕ ಹೊಗಳಿಕೆಯು ದೇವರಿಂದ ಬರುವದು.


ಅವರಲ್ಲಿ ಅಗಬನೆಂಬವನೊಬ್ಬನು ಎದ್ದು ಲೋಕಕ್ಕೆಲ್ಲಾ ದೊಡ್ಡ ಕ್ಷಾಮ ಬರುವದು ಎಂದು ಪವಿತ್ರಾತ್ಮ ಪ್ರೇರಣೆಯಿಂದ ಸೂಚಿಸಿದನು. ಅದು ಕ್ಲೌದ್ಯಚಕ್ರವರ್ತಿಯ ಕಾಲದಲ್ಲಿ ಉಂಟಾಯಿತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು