ಪ್ರಕಟನೆ 2:9 - ಕನ್ನಡ ಸತ್ಯವೇದವು J.V. (BSI)9 ಸತ್ತವನಾಗಿದ್ದು ಜೀವಿತನಾಗಿ ಬಂದ ಆದ್ಯಂತನು ಹೇಳುವದೇನಂದರೆ - ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು; ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವದನ್ನು ಬಲ್ಲೆನು; ಅವರು ಯೆಹೂದ್ಯರಲ್ಲ, ಸೈತಾನನ ಸಮಾಜದವರಾಗಿದ್ದಾರೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ನಾನು ನಿನ್ನ ಸಂಕಟವನ್ನೂ ನಿನ್ನ ಬಡತನವನ್ನೂ ಬಲ್ಲೆನು, ಆದರೂ ನೀನು ಐಶ್ವರ್ಯವಂತನೇ. ಇದಲ್ಲದೆ ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನು ಬಲ್ಲೆನು. ಅವರು ಯೆಹೂದ್ಯರಲ್ಲ, ಸೈತಾನನ ಸಭಾಮಂದಿರದವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ನಾನು ನಿನ್ನ ಕಷ್ಟಸಂಕಟಗಳನ್ನು ತಿಳಿದಿರುವಾತನು. ನಿನ್ನ ಬಡತನವನ್ನು ನಾನು ಬಲ್ಲೆ. ಆದರೆ ವಾಸ್ತವವಾಗಿ ನೀನು ಶ್ರೀಮಂತನೇ ಆಗಿರುವೆ. ಯೆಹೂದ್ಯರೆಂದು ಕೊಚ್ಚಿಕೊಳ್ಳುವವರು ನಿನ್ನನ್ನು ತೆಗಳುವುದು ನನಗೆ ತಿಳಿದಿದೆ. ಆದರೆ ಅವರು ಯೆಹೂದ್ಯರಲ್ಲ. ಸೈತಾನನ ಕೂಟದವರಾಗಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 “ನಿನ್ನ ಸಂಕಟಗಳನ್ನು ನಾನು ಬಲ್ಲೆನು. ನೀನು ಬಡವನೆಂಬುದೂ ನನಗೆ ತಿಳಿದಿದೆ. ಆದರೆ ನೀನು ನಿಜವಾಗಿಯೂ ಶ್ರೀಮಂತ. ನಿನ್ನ ಬಗ್ಗೆ ಕೆಲವು ಜನರು ಹೇಳುವ ಕೆಟ್ಟ ಸಂಗತಿಗಳು ನನಗೆ ತಿಳಿದಿವೆ. ಆ ಜನರು ತಮ್ಮನ್ನು ಯೆಹೂದ್ಯರೆಂದು ಹೇಳಿಕೊಳ್ಳುತ್ತಾರೆ. ಆದರೆ ಅವರು ನಿಜವಾದ ಯೆಹೂದ್ಯರಲ್ಲ. ಅವರು ಸೈತಾನನ ಸಮಾಜದವರಾಗಿದ್ದಾರೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ನಾನು ನಿನ್ನ ಸಂಕಟವನ್ನೂ ನಿನ್ನ ದಾರಿದ್ರ್ಯವನ್ನೂ ಬಲ್ಲೆನು. ಆದರೂ ನೀನು ಸಿರಿವಂತನೇ! ಮಾತ್ರವಲ್ಲದೇ ಅವರು ಯೆಹೂದ್ಯರಲ್ಲದಿದ್ದರೂ ಯೆಹೂದ್ಯರೆಂದು ಹೇಳಿಕೊಳ್ಳುವವರು ನಿನ್ನ ವಿಷಯವಾಗಿ ದೂಷಿಸುವುದನ್ನೂ ಬಲ್ಲೆನು. ಅವರು ಸೈತಾನನ ಸಭಾಮಂದಿರದವರಾಗಿದ್ದಾರೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತುಜೊ ತರಾಸ್ ಮಾಕಾ ಗೊತ್ತ್ ಹಾಯ್.ತಿಯಾ ಗರಿಬ್ ಮನುನ್ ಮಾಕಾ ಗೊತ್ತ್ ಹಾಯ್. ಖರೆ ಮಟ್ಲ್ಯಾರ್ ತಿಯಾ ಸಾವ್ಕಾರ್! ಜುದೆವ್ ನ್ಹಯ್ ಹೊಲ್ಯಾರ್ಬಿ ಅಪ್ನಿ ಜುದೆವ್ ಮನುನ್ ಸಾಂಗ್ತಲ್ಯಾ ಲೊಕಾನಿ ತುಜ್ಯಾ ವಿರೊದ್ ಬೊಲಲ್ಲ್ಯಾ ಬುರ್ಶ್ಯಾ ವಿಶಯಾಂಚ್ಯಾ ವಿಶಯಾತ್ ಮಾಕಾ ಗೊತ್ತ್ ಹಾಯ್. ತೆನಿ ಸೈತಾನಾಕ್ ಸಮಂದ್ ಪಡಲ್ಲೊ ಎಕ್ ತಾಂಡೊ! ಅಧ್ಯಾಯವನ್ನು ನೋಡಿ |
ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.