Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:10 - ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿ ಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ, ಸುಳ್ಳುಪ್ರವಾದಿಯೂ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಜನರನ್ನು ಮರುಳುಗೊಳಿಸುತ್ತಿದ್ದ ಪಿಶಾಚಿಯನ್ನು ಗಂಧಕದ ಅಗ್ನಿ ಸರೋವರಕ್ಕೆ ಎಸೆಯಲಾಯಿತು. ಆ ಮೃಗವನ್ನೂ ಕಪಟ ಪ್ರವಾದಿಯನ್ನೂ ಮೊದಲೇ ಅದಕ್ಕೆ ಎಸೆಯಲಾಗಿತ್ತು. ಇವರೆಲ್ಲರೂ ಯುಗಯುಗಾಂತರಗಳವರೆಗೆ ಹಗಲಿರುಳೆನ್ನದೆ ಅಲ್ಲಿಯೇ ಬೇನೆಬೇಗುದಿಗಳಿಂದ ನರಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಸೈತಾನನನ್ನು (ಇವನೇ ಜನರನ್ನು ಮೋಸಗೊಳಿಸಿದವನು.) ಬೆಂಕಿಗಂಧಕಗಳು ಉರಿಯುತ್ತಿದ್ದ ಕೆರೆಗೆ ಎಸೆಯಲಾಯಿತು. ಅಲ್ಲಿ ಮೃಗವೂ ಇತ್ತು, ಸುಳ್ಳುಪ್ರವಾದಿಗಳೂ ಇದ್ದರು. ಅಲ್ಲಿ ಅವರು ಹಗಲಿರುಳು ಎಂದೆಂದಿಗೂ ಹಿಂಸೆ ಅನುಭವಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಇದಲ್ಲದೆ ಅವರನ್ನು ಮೋಸಗೊಳಿಸಿದ ಪಿಶಾಚನು ಬೆಂಕಿಗಂಧಕಗಳು ಉರಿಯುವ ಕೆರೆಯಲ್ಲಿ ದೊಬ್ಬಲಾಯಿತು. ಅಲ್ಲಿ ಮೃಗವೂ ಸುಳ್ಳು ಪ್ರವಾದಿ ಸಹ ಇದ್ದಾರೆ. ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆ ಪಡುತ್ತಿರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ಮಾನಾ ತೆಂಕಾ ಪಸ್ವಲ್ಲ್ಯಾ ಗಿರೊ ತ್ಯಾ ಭಯಾನಕ್ ಸಾಪ್ ಅನಿ ಝುಟ್ಯಾ ಪ್ರವಾದ್ಯಾಕ್ ಅದ್ದಿಚ್ ಟಾಕಲ್ಲ್ಯಾ ಗಂದಕಾಚ್ಯಾ ಆಗಿಚ್ಯಾ ಸಮುಂದರಾತ್ ಟಾಕುನ್ ಹೊತಾ; ಅನಿ ಥೈ ತೆನಿ ಸದಾ ಸರ್ವತಾಕ್ ದಿಸ್ ಅನಿ ರಾತ್ ವಳ್ಮಳುನ್ಗೆತ್ ರ್‍ಹಾತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:10
12 ತಿಳಿವುಗಳ ಹೋಲಿಕೆ  

ಆಮೇಲೆ ಆತನು ಎಡಗಡೆಯಲ್ಲಿರುವವರಿಗೆ - ಶಾಪಗ್ರಸ್ತರೇ, ನನ್ನನ್ನು ಬಿಟ್ಟು ಪಿಶಾಚನಿಗೂ ಅವನ ದೂತರಿಗೂ ಸಿದ್ಧಮಾಡಿರುವ ನಿತ್ಯ ಬೆಂಕಿಯೊಳಕ್ಕೆ ಹೋಗಿರಿ.


ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ಮತ್ತು ಇವರು ನಿತ್ಯಶಿಕ್ಷೆಗೂ ನೀತಿವಂತರು ನಿತ್ಯಜೀವಕ್ಕೂ ಹೋಗುವರು.


ಅವನು ಹೊರಗೆ ಬಂದು ಭೂವಿುಯ ನಾಲ್ಕು ದಿಕ್ಕುಗಳಲ್ಲಿರುವ ಗೋಗ್ ಮಾಗೋಗ್ ಎಂಬ ಜನಾಂಗಗಳನ್ನು ಮರುಳುಗೊಳಿಸಿ ಅವರನ್ನು ಯುದ್ಧಕ್ಕೆ ಕೂಡಿಸುವನು; ಅವರ ಸಂಖ್ಯೆಯು ಸಮುದ್ರದ ಮರಳಿನಷ್ಟಿರುವದು.


ಮತ್ತು ಘಟಸರ್ಪ ಮೃಗ ಸುಳ್ಳುಪ್ರವಾದಿ ಇವರ ಬಾಯಿಗಳಿಂದ ಕಪ್ಪೆಗಳಂತಿದ್ದ ಮೂರು ಅಶುದ್ಧಾತ್ಮಗಳು ಬರುವದನ್ನು ಕಂಡೆನು.


ಆಗ ನಾನು ನೋಡುತ್ತಿರಲು ಇಗೋ, ಕೊಂಬು ಬಡಾಯಿಕೊಚ್ಚಿಕೊಂಡ ನಿವಿುತ್ತ ಆ ಕೊಂಬಿನ ಮೃಗವನ್ನು ಕೊಂದು ಅದರ ಹೆಣವನ್ನು ಉರಿಯುವ ಬೆಂಕಿಗೆ ಹಾಕಿ ನಾಶಮಾಡಿದರು.


ಸುಳ್ಳುಪ್ರವಾದಿಗಳ ವಿಷಯದಲ್ಲಿ ಎಚ್ಚರವಾಗಿರ್ರಿ. ಅವರು ಕುರೀವೇಷ ಹಾಕಿಕೊಂಡು ನಿಮ್ಮ ಬಳಿಗೆ ಬರುತ್ತಾರೆ; ಆದರೆ ಒಳಗೆ ನೋಡಿದರೆ ಅವರು ಹಿಡುಕೊಂಡು ಹೋಗುವ ತೋಳಗಳೇ.


ನಾನು ದರ್ಶನದಲ್ಲಿ ಕಂಡ ಕುದುರೆಗಳ ಮತ್ತು ಸವಾರರ ವಿವರಣೆ ಹೇಗಂದರೆ - ಸವಾರರ ಕವಚಗಳ ಬಣ್ಣವು ಬೆಂಕಿ ಹೊಗೆ ಗಂಧಕ ಇವುಗಳ ಬಣ್ಣದ ಹಾಗಿತ್ತು. ಕುದುರೆಗಳ ತಲೆಗಳು ಸಿಂಹಗಳ ತಲೆಗಳಂತಿದ್ದವು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು