Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:13 - ಕನ್ನಡ ಸತ್ಯವೇದವು J.V. (BSI)

13 ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸಮುದ್ರವು ತನ್ನಲ್ಲಿದ್ದ ಮೃತರನ್ನು ಒಪ್ಪಿಸಿತು; ಮೃತ್ಯುವು ಪಾತಾಳವೂ ತಮ್ಮ ವಶದಲ್ಲಿದ್ದ ಮೃತರನ್ನು ಒಪ್ಪಿಸಿದವು; ಅವರಲ್ಲಿ ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ಆಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಸಮುದ್ರವು ತನ್ನಲ್ಲಿ ಸತ್ತಿದ್ದ ಜನರನ್ನು ಒಪ್ಪಿಸಿತು. ಮೃತ್ಯುವೂ ಪಾತಾಳವೂ ತನ್ನಲ್ಲಿದ್ದ ಸತ್ತ ಜನರನ್ನು ಒಪ್ಪಿಸಿದವು. ಪ್ರತಿಯೊಬ್ಬ ವ್ಯಕ್ತಿಗೂ ಅವನ ಕಾರ್ಯಗಳಿಗನುಸಾರವಾಗಿ ತೀರ್ಪು ನೀಡಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು. ಮೃತ್ಯುವು, ಪಾತಾಳವು ತಮ್ಮಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕ್ರಿಯೆಗಳ ಪ್ರಕಾರ ನ್ಯಾಯತೀರ್ಪಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

13 ತನ್ನಾ ಸಮುಂದರಾನ್ ಅಪ್ನಾಚ್ಯಾ ಭುತ್ತುರ್ ಮರಲ್ಲ್ಯಾ ಲೊಕಾಕ್ನಿ ಒಪ್ಸುನ್ ದಿಲ್ಯಾನ್, ಮರ್‍ನಾನ್ ಅನಿ ಮರ್‍ನಾಚ್ಯಾ ಜಗಾನ್‍ಬಿ ಅಪ್ನಿ ಥವ್ನ್ ಘೆಟಲ್ಲ್ಯಾ ಮರಲ್ಲ್ಯಾ ಲೊಕಾಕ್ನಿ ಒಪ್ಸುನ್ ದಿಲ್ಯಾನಿ, ಅನಿ ತೆಂಚಿ ತೆಂಚ್ಯಾ-ತೆಂಚ್ಯಾ ಕಾಮಾಂಚ್ಯಾ ಪರ್ಕಾರ್ ಝಡ್ತಿ ಕರುನ್ ಹೊಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:13
13 ತಿಳಿವುಗಳ ಹೋಲಿಕೆ  

ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ಅವನ ಹಿಂದೆ ಪಾತಾಳವೆಂಬವನು ಬಂದನು. ಅವರಿಗೆ ಭೂವಿುಯ ಕಾಲುಭಾಗದಲ್ಲಿ ಕತ್ತಿಯಿಂದಲೂ ಬರದಿಂದಲೂ ಅಂಟುರೋಗದಿಂದಲೂ ಕಾಡುಮೃಗಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊಡಲ್ಪಟ್ಟಿತು.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳೆಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ಇದಲ್ಲದೆ ಸತ್ತವರಾದ ದೊಡ್ಡವರೂ ಚಿಕ್ಕವರೂ ಸಿಂಹಾಸನದ ಮುಂದೆ ನಿಂತಿರುವದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಮತ್ತು ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದಿದ್ದ ಸಂಗತಿಗಳ ಆಧಾರದಿಂದ ಅವರವರ ಕೃತ್ಯಗಳ ಪ್ರಕಾರ ಸತ್ತವರಿಗೆ ನ್ಯಾಯತೀರ್ಪಾಯಿತು.


ಮೃತರಾದ ನಿನ್ನ ಜನರು ಬದುಕುವರು, ನನ್ನವರ ಹೆಣಗಳು ಜೀವದಿಂದೇಳುವವು, ಮಣ್ಣಿನಲ್ಲಿ ಪವಳಿಸಿರುವವರೇ, ಎಚ್ಚತ್ತು ಹರ್ಷಧ್ವನಿಗೈಯಿರಿ! [ಯೆಹೋವನೇ,] ನೀನು ಸುರಿಯುವ ಇಬ್ಬನಿಯು ಜ್ಯೋತಿರ್ಮಯವಾದದ್ದು, ಭೂವಿುಯು ಸತ್ತವರನ್ನು ಹೊರಪಡಿಸುವದು.


ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ಎಲಾ ಕಪೆರ್ನೌಮೇ, ನೀನು ಪರಲೋಕಕ್ಕೆ ಏರಿಸಲ್ಪಡುವಿಯಾ? ಪಾತಾಳಕ್ಕೇ ಇಳಿಯುವಿ. ನಿನ್ನಲ್ಲಿ ನಡೆದ ಮಹತ್ಕಾರ್ಯಗಳು ಸೊದೋವಿುನಲ್ಲಿ ನಡೆದಿದ್ದರೆ ಅದು ಇಂದಿನವರೆಗೂ ಉಳಿಯುತ್ತಿತ್ತು.


ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.


ಮರಣವು ಕಡೇ ಶತ್ರುವಾಗಿ ನಿವೃತ್ತಿಯಾಗುವದು.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು