Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:14 - ಕನ್ನಡ ಸತ್ಯವೇದವು J.V. (BSI)

14 ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಆ ಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಅನಂತರ ಮೃತ್ಯುವನ್ನೂ ಪಾತಾಳವನ್ನೂ ಅಗ್ನಿಸರೋವರಕ್ಕೆ ಎಸೆಯಲಾಯಿತು. ಆ ಅಗ್ನಿಸರೋವರವೇ ಎರಡನೆಯ ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಆಮೇಲೆ ಮೃತ್ಯುವನ್ನೂ ಪಾತಾಳವನ್ನೂ ಬೆಂಕಿಯ ಕೆರೆಗೆ ಎಸೆಯಲಾಯಿತು. ಈ ಬೆಂಕಿಯ ಕೆರೆಯು ಎರಡನೆಯ ಮರಣ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲಾದವು. ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

14 ತನ್ನಾ ಮರ್‍ನಾಕ್ ಅನಿ ಪಾತಾಳಾತ್ಲ್ಯಾ ಲೊಕಾಕ್ನಿ ಆಗಿಚ್ಯಾ ನರ್ಕಾತ್ ಟಾಕುನ್ ಹೊಲೆ. ಹ್ಯೊ ಆಗಿಚೊ ದೊನ್ವೆಚೆ ಮರಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:14
14 ತಿಳಿವುಗಳ ಹೋಲಿಕೆ  

ಮರಣವು ಕಡೇ ಶತ್ರುವಾಗಿ ನಿವೃತ್ತಿಯಾಗುವದು.


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರುಷ ಆಳುವರು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಆಗ ಮೃಗವು ಸೆರೆಸಿಕ್ಕಿತು; ಇದಲ್ಲದೆ ಮೃಗದ ಮುಂದೆ ಮಹತ್ಕಾರ್ಯಗಳನ್ನು ಮಾಡಿ ಮೃಗದ ಗುರುತು ಹಾಕಿಸಿಕೊಂಡವರನ್ನೂ ಅದರ ವಿಗ್ರಹಕ್ಕೆ ನಮಸ್ಕರಿಸಿದವರನ್ನೂ ಮರುಳುಗೊಳಿಸಿದ ಆ ಸುಳ್ಳುಪ್ರವಾದಿಯೂ ಅದರ ಜೊತೆಯಲ್ಲಿ ಸೆರೆಸಿಕ್ಕಿದನು. ಇವರಿಬ್ಬರೂ ಜೀವಸಹಿತವಾಗಿ ಗಂಧಕದಿಂದ ಉರಿಯುವ ಬೆಂಕಿಯ ಕೆರೆಯಲ್ಲಿ ಹಾಕಲ್ಪಟ್ಟರು;


ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು.


ಸಮುದ್ರವು ತನ್ನೊಳಗಿದ್ದ ಸತ್ತವರನ್ನು ಒಪ್ಪಿಸಿತು; ಮೃತ್ಯುವೂ ಪಾತಾಳವೂ ತಮ್ಮ ವಶದಲ್ಲಿದ್ದ ಸತ್ತವರನ್ನು ಒಪ್ಪಿಸಿದವು. ಅವರಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳ ಪ್ರಕಾರ ನ್ಯಾಯತೀರ್ಪಾಯಿತು.


ಇದಲ್ಲದೆ ಅವರನ್ನು ಮರುಳುಗೊಳಿಸಿದ ಸೈತಾನನು ಬೆಂಕಿ ಗಂಧಕಗಳುರಿಯುವ ಕೆರೆಯಲ್ಲಿ ದೊಬ್ಬಲ್ಪಟ್ಟನು. ಅಲ್ಲಿ ಮೃಗವೂ ಸುಳ್ಳು ಪ್ರವಾದಿಯೂ ಕೂಡ ಇದ್ದಾರೆ; ಅವರು ಹಗಲಿರುಳು ಯುಗಯುಗಾಂತರಗಳಲ್ಲಿಯೂ ಯಾತನೆಪಡುತ್ತಿರುವರು.


ಲಯವಾಗುವ ಈ ದೇಹವು ನಿರ್ಲಯತ್ವವನ್ನು ಧರಿಸಿಕೊಳ್ಳುವದೂ ಮರಣಾಧೀನವಾಗಿರುವ ಈ ದೇಹವು ಅಮರತ್ವವನ್ನು ಧರಿಸಿಕೊಳ್ಳುವದೂ ಅವಶ್ಯ.


ನಾನು ಅದನ್ನು ಪಾತಾಳದ ಅಧಿಕಾರದಿಂದ ಬಿಡಿಸಲೋ? ಮರಣದಿಂದ ಉದ್ಧರಿಸಲೋ? ಮರಣವೇ, ನಿನ್ನ ಉಪದ್ರವಗಳೆಲ್ಲಿ? ಪಾತಾಳವೇ, ನೀನು ಮಾಡುವ ನಾಶನವೆಲ್ಲಿ? ಕನಿಕರವು ನನಗೆ ಕಾಣಿಸದು.


ಯಾವನ ಹೆಸರು ಜೀವಬಾಧ್ಯರ ಪಟ್ಟಿಯಲ್ಲಿ ಬರೆದದ್ದಾಗಿ ಕಾಣಲಿಲ್ಲವೋ ಅವನು ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟನು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.


ಅದರ ಮೇಲೆ ಕೂತಿದ್ದವನ ಹೆಸರು ಮೃತ್ಯುವು; ಅವನ ಹಿಂದೆ ಪಾತಾಳವೆಂಬವನು ಬಂದನು. ಅವರಿಗೆ ಭೂವಿುಯ ಕಾಲುಭಾಗದಲ್ಲಿ ಕತ್ತಿಯಿಂದಲೂ ಬರದಿಂದಲೂ ಅಂಟುರೋಗದಿಂದಲೂ ಕಾಡುಮೃಗಗಳಿಂದಲೂ ಕೊಲ್ಲುವದಕ್ಕೆ ಅಧಿಕಾರವು ಕೊಡಲ್ಪಟ್ಟಿತು.


ಅವನು ಸಹ ದೇವರ ಕೋಪವೆಂಬ ಪಾತ್ರೆಯಲ್ಲಿ ಏನೂ ಬೆರಸದೆ ಹಾಕಿದ ದೇವರ ರೌದ್ರವೆಂಬ ದ್ರಾಕ್ಷಾರಸವನ್ನು ಕುಡಿಯುವನು; ಪರಿಶುದ್ಧ ದೇವದೂತರ ಮುಂದೆಯೂ ಯಜ್ಞದ ಕುರಿಯಾದಾತನ ಮುಂದೆಯೂ ಬೆಂಕಿಯಿಂದಲೂ ಗಂಧಕದಿಂದಲೂ ಯಾತನೆಪಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು