Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:3 - ಕನ್ನಡ ಸತ್ಯವೇದವು J.V. (BSI)

3 ಆ ಸಾವಿರ ವರುಷ ತೀರುವ ತನಕ ಸೈತಾನನು ಇನ್ನೂ ಜನಗಳನ್ನು ಮರುಳುಗೊಳಿಸದ ಹಾಗೆ ದೇವದೂತನು ಅವನನ್ನು ಅಧೋಲೋಕದಲ್ಲಿ ದೊಬ್ಬಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರುಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆಯಾಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆ ಸಾವಿರ ವರ್ಷ ಮುಗಿಯುವ ತನಕ ಸೈತಾನನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೇವದೂತನು ಅವನನ್ನು ಅಧೋಲೋಕಕ್ಕೆ ತಳ್ಳಿ ಬಾಗಿಲು ಮುಚ್ಚಿ ಅದಕ್ಕೆ ಮುದ್ರೆಹಾಕಿದನು. ಆ ಸಾವಿರ ವರ್ಷಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ಆಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆ ಒಂದು ಸಾವಿರ ವರ್ಷಗಳ ಕಾಲದವರೆಗೆ, ಅದು ಜನಾಂಗಗಳನ್ನು ಮರುಳುಗೊಳಿಸದಂತೆ ದೇವದೂತನು ಸೈತಾನನನ್ನು ಪಾತಾಳಕ್ಕೆ ದಬ್ಬಿ, ಬಾಗಿಲು ಮುಚ್ಚಿ, ಅದಕ್ಕೆ ಮುದ್ರೆ ಹಾಕಿದನು. ಆ ಸಾವಿರ ವರ್ಷಗಳ ಕಾಲ ಮುಗಿದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆ ದೊರೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಆ ದೇವದೂತನು ಘಟಸರ್ಪವನ್ನು ತಳವಿಲ್ಲದ ಕೂಪಕ್ಕೆ ತಳ್ಳಿ ಬಾಗಿಲನ್ನು ಮುಚ್ಚಿ ಬೀಗಹಾಕಿದನು, ಆ ಘಟಸರ್ಪವು ಒಂದುಸಾವಿರ ವರ್ಷಗಳ ಕಾಲ ಮುಗಿಯುವ ತನಕ ಲೋಕದ ಜನರನ್ನು ಮರುಳು ಮಾಡದಿರಲೆಂದು ಆ ದೇವದೂತನು ಹೀಗೆ ಮಾಡಿದನು. ಒಂದುಸಾವಿರ ವರ್ಷಗಳ ತರುವಾಯ ಆ ಘಟಸರ್ಪಕ್ಕೆ ಸ್ವಲ್ಪಕಾಲ ಬಿಡುಗಡೆ ಮಾಡಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆ ಸಾವಿರ ವರ್ಷ ತೀರುವ ತನಕ ಅವನು ಇನ್ನೂ ಜನಾಂಗಗಳನ್ನು ಮೋಸಗೊಳಿಸದಂತೆ ದೂತನು ಅವನನ್ನು ಅಧೋಲೋಕದಲ್ಲಿ ತಳ್ಳಿ, ಬಾಗಿಲು ಮುಚ್ಚಿ ಅದಕ್ಕೆ ಮುದ್ರೆ ಹಾಕಿದನು. ಇವುಗಳಾದ ಮೇಲೆ ಅವನಿಗೆ ಸ್ವಲ್ಪಕಾಲ ಬಿಡುಗಡೆಯಾಗತಕ್ಕದ್ದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಹಜಾರ್ ವರ್ಸಾ ಸರಿ ಪತರ್ ಅನಿಫಿಡೆ ದೆಶಾಂಚ್ಯಾ ಲೊಕಾಕ್ನಿ ತೆನಿ ಪಸ್ವಿನಸ್ತಾನಾ ರ್‍ಹಾವ್‍ಸಾಟ್ನಿ, ದೆವಾಚ್ಯಾ ದುತಾನ್ ತೆಕಾ ಪಾತಾಳಾತ್ ಟಾಕ್ಲ್ಯಾನ್, ಅನಿ ಚಾವಿ ಲಾವುನ್ ಛಪ್ಪೊ ಮಾರುನ್ ಬಂದೊಬಸ್ತ್ ಕರ್ಲ್ಯಾನ್. ತ್ಯೆಚ್ಯಾ ಮಾನಾ ತೆಕಾ ಉಲ್ಲ್ಯಾ ಎಳಾ ಪತರ್ ಸೈಲ್ ಸೊಡುನ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:3
17 ತಿಳಿವುಗಳ ಹೋಲಿಕೆ  

ಆಗ ಒಬ್ಬ ದೇವದೂತನು ಅಧೋಲೋಕದ ಬೀಗದ ಕೈಯನ್ನೂ ದೊಡ್ಡ ಸರಪಣಿಯನ್ನೂ ಕೈಯಲ್ಲಿ ಹಿಡಿದುಕೊಂಡು ಪರಲೋಕದಿಂದ ಇಳಿದು ಬರುವದನ್ನು ಕಂಡೆನು.


ನೀನು ಕಂಡ ಈ ಮೃಗವು ಮೊದಲು ಇತ್ತು, ಈಗ ಇಲ್ಲ, ಮತ್ತು ಅಧೋಲೋಕದಿಂದ ಏರಿಬಂದು ನಾಶಕ್ಕೆ ಹೋಗುವದು. ಭೂನಿವಾಸಿಗಳೊಳಗೆ ಯಾರಾರ ಹೆಸರುಗಳು ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿರುವದಿಲ್ಲವೋ ಅವರು ಈ ಮೃಗವನ್ನು ನೋಡಿ ಇದು ಮೊದಲು ಇತ್ತು, ಈಗ ಇಲ್ಲ, ಇನ್ನು ಮೇಲೆ ಬರುವದು ಎಂದು ತಿಳಿದು ಆಶ್ಚರ್ಯಪಡುವರು.


ಕೂಡಲೆ ಬಂಡೆಯನ್ನು ತಂದು ಗವಿಯ ಬಾಯನ್ನು ಮುಚ್ಚಿದರು; ದಾನಿಯೇಲನ ಗತಿಯು ಬೇರೆಯಾಗದಂತೆ ರಾಜನು ತನ್ನ ಮುದ್ರೆಯಿಂದಲೂ ತನ್ನ ಮುಖಂಡರ ಮುದ್ರೆಯಿಂದಲೂ ಅದಕ್ಕೆ ಮೊಹರುಮಾಡಿದನು.


ಭೂಲೋಕದವರನ್ನೆಲ್ಲಾ ಮರುಳುಗೊಳಿಸುವ ಆ ಮಹಾ ಘಟಸರ್ಪನು ಅಂದರೆ ಪಿಶಾಚನೆಂತಲೂ ಸೈತಾನನೆಂತಲೂ ಹೆಸರುಳ್ಳ ಪುರಾತನ ಸರ್ಪವು ದೊಬ್ಬಲ್ಪಟ್ಟು ಭೂವಿುಗೆ ಬಿದ್ದನು;


ಅವರು ಹೊರಟು ಕಾವಲುಗಾರರೊಂದಿಗೆ ಆ ಕಲ್ಲಿಗೆ ಮುದ್ರೆಹಾಕಿ ಸಮಾಧಿಯನ್ನು ಭದ್ರಮಾಡಿದರು.


ಆದರೆ ಹೇಗೆ ಹವ್ವಳು ಸರ್ಪದ ಕುಯುಕ್ತಿಗೆ ಒಳಬಿದ್ದು ಮೋಸಹೋದಳೋ ಹಾಗೆಯೇ ನಿಮ್ಮ ಮನಸ್ಸು ಕ್ರಿಸ್ತನ ವಿಷಯದಲ್ಲಿರಬೇಕಾದ ಯಥಾರ್ಥತ್ವವನ್ನೂ ಪಾತಿವ್ರತ್ಯವನ್ನೂ ಬಿಟ್ಟು ಕೆಟ್ಟುಹೋದೀತೆಂದು ನನಗೆ ಭಯವುಂಟು.


ಪ್ರಿಯರೇ, ಕರ್ತನ ಎಣಿಕೆಯಲ್ಲಿ ಒಂದು ದಿನವು ಸಾವಿರ ವರುಷಗಳಂತೆಯೂ ಸಾವಿರ ವರುಷಗಳು ಒಂದು ದಿನದಂತೆಯೂ ಅವೆ ಎಂಬದನ್ನು ಮಾತ್ರ ಮರೆಯಬೇಡಿರಿ.


ಸಾವಿರ ವರುಷಗಳು ನಿನ್ನ ದೃಷ್ಟಿಯಲ್ಲಿ ಗತಿಸಿಹೋದ ನಿನ್ನಿನ ದಿನದಂತೆಯೂ ರಾತ್ರಿಯ ಜಾವದಂತೆಯೂ ಅವೆ.


ಅವಳೊಂದಿಗೆ ಭೂರಾಜರು ಜಾರತ್ವ ಮಾಡಿದರು, ಮತ್ತು ಭೂನಿವಾಸಿಗಳು ಅವಳ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿದು ಮತ್ತರಾದರು ಎಂದು ಹೇಳಿದನು.


ಆ ಮೊದಲನೆಯ ಮೃಗದ ಸನ್ನಿಧಿಯಲ್ಲಿ ಮಹತ್ಕಾರ್ಯಗಳನ್ನು ಮಾಡುವ ಅಧಿಕಾರವಿರುವದರಿಂದ ಭೂನಿವಾಸಿಗಳನ್ನು ಮರುಳುಗೊಳಿಸುತ್ತದೆ; ಅವರಿಗೆ - ಕತ್ತಿಯಿಂದ ಗಾಯಹೊಂದಿ ಸಾಯದೆ ಬದುಕಿದ ಮೃಗದ ಘನಕ್ಕಾಗಿ ವಿಗ್ರಹವನ್ನು ಮಾಡಿಸಿಕೊಳ್ಳಬೇಕೆಂದು ಬೋಧಿಸುತ್ತದೆ.


ಸುಳ್ಳುಕ್ರಿಸ್ತರೂ ಸುಳ್ಳುಪ್ರವಾದಿಗಳೂ ಎದ್ದು ಸಾಧ್ಯವಾದರೆ ದೇವರಾದುಕೊಂಡವರನ್ನು ಸಹ ಮೋಸಗೊಳಿಸುವದಕ್ಕೋಸ್ಕರ ದೊಡ್ಡ ದೊಡ್ಡ ಸೂಚಕಕಾರ್ಯಗಳನ್ನೂ ಅದ್ಭುತಕಾರ್ಯಗಳನ್ನೂ ಮಾಡಿ ತೋರಿಸುವರು.


ಕೆಲವರು ವಾಕ್ಯವನ್ನು ಕೇಳಿದ ಕೂಡಲೇ ಸೈತಾನನು ಬಂದು ಅವರಲ್ಲಿ ಬಿತ್ತಿದ್ದ ವಾಕ್ಯವನ್ನು ತೆಗೆದುಬಿಡುತ್ತಾನೆ. ಇವರೇ ವಾಕ್ಯವು ಬಿತ್ತಲ್ಪಟ್ಟ ದಾರಿಯ ಮಗ್ಗುಲಾಗಿರುವವರು.


ಪಾತಾಳಕ್ಕೆ ಹೋಗಿಬಿಡುವಂತೆ ನಮಗೆ ಆಜ್ಞೆ ಮಾಡಬೇಡವೆಂದು ಅವು ಆತನನ್ನು ಬೇಡಿಕೊಂಡವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು