Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:4 - ಕನ್ನಡ ಸತ್ಯವೇದವು J.V. (BSI)

4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯ ತೀರಿಸುವ ಅಧಿಕಾರವು ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ, ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನಗೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ಆರಾಧನೆ ಮಾಡದೇ ತಮ್ಮ ಹಣೆಯ ಮೇಲೆ ಮತ್ತು ಕೈಗಳ ಮೇಲೆ ಅದರ ಗುರುತು ಹಾಕಿಸಿಕೊಳ್ಳದವರನ್ನೂ ಕಂಡೆನು. ಅವರು ಪುನಃ ಜೀವಿತರಾಗಿ ಎದ್ದು ಸಾವಿರ ವರ್ಷ ಕ್ರಿಸ್ತನೊಂದಿಗೆ ಆಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಬಳಿಕ ಸಿಂಹಾಸನಗಳನ್ನು ಕಂಡೆ. ಅವುಗಳ ಮೇಲೆ ಕುಳಿತಿದ್ದವರಿಗೆ ತೀರ್ಪುಕೊಡುವ ಅಧಿಕಾರವನ್ನು ಕೊಡಲಾಗಿತ್ತು. ಇದಲ್ಲದೆ, ಕ್ರಿಸ್ತೇಸುವಿನ ಪರವಾಗಿ ಸಾಕ್ಷಿಕೊಟ್ಟು ದೇವರ ವಾಕ್ಯದ ಪ್ರಚಾರಕ್ಕಾಗಿ ತಲೆತೆತ್ತ ಜೀವಾತ್ಮಗಳನ್ನು ಕಂಡೆ. ಇವರು ಆ ಮೃಗವನ್ನಾಗಲಿ, ಅದರ ವಿಗ್ರಹವನ್ನಾಗಲಿ ಪೂಜಿಸಿದವರಲ್ಲ; ತಮ್ಮ ಹಣೆಗಳ ಮೇಲಾಗಲಿ, ಕೈಗಳ ಮೇಲಾಗಲಿ ಅದರ ಗುರುತಿನ ಹಚ್ಚೆಯನ್ನೂ ಚುಚ್ಚಿಸಿಕೊಂಡವರಲ್ಲ. ಇವರು ಜೀವಂತರಾಗಿ ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳು ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ನಂತರ ನಾನು ಕೆಲವು ಸಿಂಹಾಸನಗಳನ್ನು ಮತ್ತು ಅವುಗಳ ಮೇಲೆ ಜನರು ಕುಳಿತಿರುವುದನ್ನು ನೋಡಿದೆನು. ಈ ಜನರು ತೀರ್ಪು ನೀಡುವ ಅಧಿಕಾರವನ್ನು ಹೊಂದಿದ್ದರು. ಯೇಸುವಿನ ಸತ್ಯಕ್ಕೆ ಮತ್ತು ದೇವರ ಸಂದೇಶಕ್ಕೆ ನಂಬಿಗಸ್ತರಾಗಿದ್ದರ ನಿಮಿತ್ತವಾಗಿ ಕೊಲ್ಲಲ್ಪಟ್ಟವರ ಜೀವಾತ್ಮಗಳನ್ನು ನಾನು ನೋಡಿದೆನು. ಆ ಜನರು ಮೃಗವನ್ನಾಗಲಿ ಅದರ ವಿಗ್ರಹವನ್ನಾಗಲಿ ಆರಾಧಿಸಿರಲಿಲ್ಲ. ಅವರು ತಮ್ಮ ಹಣೆಯ ಮೇಲಾಗಲಿ ಕೈಗಳ ಮೇಲಾಗಲಿ ಮೃಗದ ಗುರುತನ್ನು ಹಾಕಿಸಿಕೊಂಡಿರಲಿಲ್ಲ. ಆ ಜನರು ಮತ್ತೆ ಜೀವವನ್ನು ಪಡೆದು ಕ್ರಿಸ್ತನೊಂದಿಗೆ ಒಂದುಸಾವಿರ ವರ್ಷ ಆಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಕುಳಿತಿದ್ದವರಿಗೆ ನ್ಯಾಯತೀರಿಸುವ ಅಧಿಕಾರವು ಕೊಡಲಾಯಿತು. ಇದಲ್ಲದೆ ಯೇಸುವಿನ ಸಾಕ್ಷಿಯ ನಿಮಿತ್ತವಾಗಿಯೂ ದೇವರ ವಾಕ್ಯದ ನಿಮಿತ್ತವಾಗಿಯೂ ಶಿರಚ್ಛೇದನ ಗೊಂಡವರ ಆತ್ಮಗಳನ್ನೂ ಮೃಗವನ್ನೂ ಅದರ ವಿಗ್ರಹವನ್ನೂ ಆರಾಧಿಸದೆ ತಮ್ಮ ಹಣೆಯ ಮೇಲೆ ಇಲ್ಲವೆ ಕೈಯ ಮೇಲೆ ಅದರ ಗುರುತುಹಾಕಿಸಿಕೊಳ್ಳದವರನ್ನೂ ನೋಡಿದೆನು. ಅವರು ಪುನಃ ಜೀವಿತರಾಗಿ ಎದ್ದು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷ ಆಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

4 ತನ್ನಾ ಸಿವಾಸನಾಂಚ್ಯಾ ವರ್ತಿ ಬಸಲ್ಲ್ಯಾಕ್ನಿ ಝಡ್ತಿ ಕರ್ತಲೊ ಅಧಿಕಾರ್ ದಿವ್ನ್ ಹೊಲ್ಲೆ ಮಿಯಾ ಬಗಟ್ಲೊ, ಅನಿ ಜೆಜುನ್ ದಾಕ್ವುನ್ ದಿಲ್ಲೆ ಅನಿ ದೆವಾಚ್ಯಾ ಗೊಸ್ಟಿಯಾನಿ ದಾಕ್ವುನ್ ದಿಲ್ಲೆ ಖರೆ ಲೊಕಾಕ್ನಿ ಸಾಂಗಲ್ಲ್ಯಾಸಾಟ್ನಿ ಚೆಂಡಾ ತೊಡುನ್ ಹೊಲ್ಲ್ಯಾಂಚೆ ಆತ್ಮೆಬಿ ಮಿಯಾ ಬಗಟ್ಲೊ, ತೆನಿ ತ್ಯಾ ಭಯಾನಕ್ ಜನಾವಾರಾಚೆ ಹೊಂವ್ದಿತ್, ತ್ಯೆಚ್ಯಾ ಮುರ್ತಿಚೆ ಹೊಂವ್ದಿತ್ ಆರಾದನ್ ಕರುಕ್ನ್ಯಾತ್, ನಾಹೊಲ್ಯಾರ್ ತೆಂಚ್ಯಾ ಕಪಾಳಾ ವೈನಿ ಹೊಂವ್ದಿತ್, ಹಾತಾ ವೈನಿ ಹೊಂವ್ದಿತ್ ತ್ಯಾ ಭಯಾನಕ್ ಜನಾವಾರಾಚಿ ವಳಕ್ ಕರುನ್ ಘೆವನಸಲ್ಲ್ಯಾನಿ. ತೆನಿ ಝಿತ್ತೆ ಹೊವ್ನ್ ಉಟ್ಲೆ, ಅನಿ ಎಕ್ ಹಜಾರ್ ವರ್ಸಾ ಕ್ರಿಸ್ತಾಚ್ಯಾ ವಾಂಗ್ಡಾ ರಾಜಾಂಚ್ಯಾ ಸರ್ಕೆ ರಾಜ್ ಚಾಲ್ವುಲ್ಯಾನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:4
40 ತಿಳಿವುಗಳ ಹೋಲಿಕೆ  

ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.


ಆದರೆ ರಾಜ್ಯವು ಪರಾತ್ಪರನ ಭಕ್ತರಿಗೆ ಲಭಿಸುವದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ಯೇಸು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವಾಗ ನನ್ನನ್ನು ಹಿಂಬಾಲಿಸಿರುವ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಆತನು ಐದನೆಯ ಮುದ್ರೆಯನ್ನು ಒಡೆದಾಗ ದೇವರ ವಾಕ್ಯದ ನಿವಿುತ್ತವಾಗಿಯೂ ತಾವು ಹೇಳಿದ ಸಾಕ್ಷಿಯ ನಿವಿುತ್ತವಾಗಿಯೂ ಹತವಾದವರ ಆತ್ಮಗಳು ಯಜ್ಞವೇದಿಯ ಕೆಳಗಿರುವದನ್ನು ಕಂಡೆನು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು; ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ಮಹಾವೃದ್ಧನು ಅಯ್ತಂದು ಪರಾತ್ಪರನ ಭಕ್ತರಿಗಾಗಿ ನ್ಯಾಯತೀರಿಸಿ ಅವರಿಗೆ ರಾಜ್ಯವನ್ನು ದೊರಕಿಸುವ ತನಕ ಅವರನ್ನು ಗೆಲ್ಲುತ್ತಾ ಬಂದು ಕಣ್ಣುಳ್ಳದ್ದಾಗಿ ಬಾಯಿಂದ ಬಡಾಯಿಕೊಚ್ಚಿಕೊಳ್ಳುತ್ತಾ ವಿುಕ್ಕ ಕೊಂಬುಗಳಿಗಿಂತ ಬಿರಸಾಗಿ ನೋಡುತ್ತಾ ಇತ್ತೋ ಆ ಕೊಂಬಿನ ವಿಷಯವಾಗಿಯೂ ಸತ್ಯಾರ್ಥವನ್ನು ತಿಳಿದುಕೊಳ್ಳಬೇಕೆಂದು ಅಪೇಕ್ಷಿಸಿ ವಿಚಾರಿಸಿದೆನು.


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರುಷ ಆಳುವರು.


ನಾನು ನೋಡುತ್ತಿದ್ದ ಹಾಗೆ ನ್ಯಾಯಾಸನಗಳು ಹಾಕಲ್ಪಟ್ಟವು, ಮಹಾವೃದ್ಧನೊಬ್ಬನು ಆಸೀನನಾದನು; ಆತನ ಉಡುಪು ಹಿಮದಂತೆ ಶುಭ್ರವಾಗಿತ್ತು, ಆತನ ತಲೆಯ ಕೂದಲು ನಿರ್ಮಲವಾದ ಬಿಳಿಯ ಉಣ್ಣೆಯಂತಿತ್ತು; ಆತನ ನ್ಯಾಯಾಸನವು ಅಗ್ನಿಜ್ವಾಲೆಗಳು, ಅದರ ಚಕ್ರಗಳು ಧಗಧಗಿಸುವ ಬೆಂಕಿಯೇ.


ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ; ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗುವದಿಲ್ಲ; ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು; ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.


ನಿಮ್ಮ ಸಹೋದರನೂ ಯೇಸುವಿನ ನಿವಿುತ್ತ ಹಿಂಸೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ದ್ವೀಪದಲ್ಲಿದ್ದೆನು.


ಮಕ್ಕಳಾಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತನೊಂದಿಗೆ ಬಾಧ್ಯರು. ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾಧೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗದ ವಿಗ್ರಹಕ್ಕೆ ನಮಸ್ಕರಿಸದೆಯೂ ಅದರ ಹೆಸರಿನ ಅಂಕೆಯನ್ನು ಮುದ್ರೆಹಾಕಿಸಿಕೊಳ್ಳದೆಯೂ ಅದರ ಮೇಲೆ ಜಯ ಹೊಂದಿದವರು ದೇವರ ಸೇವಾರ್ಥವಾದ ವೀಣೆಗಳನ್ನು ಕೈಯಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತು


ಅಂಥವರ ಯಾತನೆಯ ಹೊಗೆಯು ಯುಗಯುಗಾಂತರಗಳಲ್ಲಿಯೂ ಏರುತ್ತಾ ಹೋಗುತ್ತದೆ; ಮೃಗಕ್ಕೆ ಮತ್ತು ಅದರ ವಿಗ್ರಹಕ್ಕೆ ನಮಸ್ಕಾರಮಾಡುವವರೂ ಅದರ ಹೆಸರನ್ನು ಸೂಚಿಸುವ ಗುರುತನ್ನು ಹಾಕಿಸಿಕೊಂಡಿರುವವರೆಲ್ಲರೂ ಹಗಲಿರುಳು ಉಪಶಮನವಿಲ್ಲದೆ ಯಾತನೆಪಡುವರು ಎಂದು ಮಹಾ ಶಬ್ದದಿಂದ ಹೇಳಿದನು.


ಇವರು ತಮ್ಮ ಸಾಕ್ಷಿಯನ್ನು ಹೇಳಿ ಮುಗಿಸಿದನಂತರ ಅಧೋಲೋಕದಿಂದ ಬರುವ ಮೃಗವು ಇವರ ಮೇಲೆ ಯುದ್ಧಮಾಡಿ ಇವರನ್ನು ಜಯಿಸಿ ಕೊಲ್ಲುವದು.


ಇನ್ನು ಸ್ವಲ್ಪಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ; ನಾನು ಬದುಕುವದರಿಂದ ನೀವೂ ಬದುಕುವಿರಿ.


ಆ ರಾಜರ ಕಾಲದಲ್ಲಿ ಪರಲೋಕದೇವರು ಒಂದು ರಾಜ್ಯವನ್ನು ಸ್ಥಾಪಿಸುವನು; ಅದು ಎಂದಿಗೂ ಅಳಿಯದು, ಅದರ ಪ್ರಾಬಲ್ಯವು ಬೇರೆ ಜನಾಂಗಕ್ಕೆ ಕದಲಿಹೋಗದು, ಆ ರಾಜ್ಯಗಳನ್ನೆಲ್ಲಾ ಭಂಗಪಡಿಸಿ ನಿರ್ನಾಮ ಮಾಡಿ ಶಾಶ್ವತವಾಗಿ ನಿಲ್ಲುವದು.


ನೀನು ಕಂಡ ಈ ಮೃಗವು ಮೊದಲು ಇತ್ತು, ಈಗ ಇಲ್ಲ, ಮತ್ತು ಅಧೋಲೋಕದಿಂದ ಏರಿಬಂದು ನಾಶಕ್ಕೆ ಹೋಗುವದು. ಭೂನಿವಾಸಿಗಳೊಳಗೆ ಯಾರಾರ ಹೆಸರುಗಳು ಲೋಕಾದಿಯಿಂದ ಜೀವಬಾಧ್ಯರ ಪಟ್ಟಿಯಲ್ಲಿ ಬರೆದಿರುವದಿಲ್ಲವೋ ಅವರು ಈ ಮೃಗವನ್ನು ನೋಡಿ ಇದು ಮೊದಲು ಇತ್ತು, ಈಗ ಇಲ್ಲ, ಇನ್ನು ಮೇಲೆ ಬರುವದು ಎಂದು ತಿಳಿದು ಆಶ್ಚರ್ಯಪಡುವರು.


ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.


ಮೂರುವರೆ ದಿನಗಳಾದ ಮೇಲೆ ದೇವರಿಂದ ಜೀವಾತ್ಮ ಬಂದು ಆ ಶವಗಳಲ್ಲಿ ಹೊಗಲು ಅವು ಕಾಲೂರಿ ನಿಂತವು. ಅವರನ್ನು ನೋಡಿದವರಿಗೆ ಮಹಾ ಭಯವು ಹಿಡಿಯಿತು.


ಇದಲ್ಲದೆ ನನ್ನ ಇಬ್ಬರು ಸಾಕ್ಷಿಗಳು ಗೋಣೀತಟ್ಟುಗಳನ್ನು ಹೊದ್ದುಕೊಂಡು ಸಾವಿರದ ಇನ್ನೂರ ಅರುವತ್ತು ದಿನಗಳ ತನಕ ಪ್ರವಾದಿಸುವ ಹಾಗೆ ಮಾಡುವೆನು.


ಯಾಕಂದರೆ ಇಸ್ರಾಯೇಲ್ಯರನ್ನು ತಳ್ಳುವದರಿಂದ ಲೋಕವು ದೇವರ ಸಂಗಡ ಸಮಾಧಾನವಾಗುವದಕ್ಕೆ ಮಾರ್ಗವಾದ ಮೇಲೆ ಅವರನ್ನು ಸೇರಿಸಿಕೊಳ್ಳುವದರಿಂದ ಏನಾಗುವದು? ಸತ್ತವರು ಜೀವಿತರಾಗಿ ಎದ್ದುಬಂದಂತಾಗುವದಲ್ಲವೇ.


ತಂದೆಗಳ ಹೃದಯವನ್ನು ಮಕ್ಕಳ ಕಡೆಗೂ ಹಟಹಿಡಿದವರನ್ನು ನೀತಿವಂತರ ಜ್ಞಾನದ ಕಡೆಗೂ ತಿರುಗಿಸಿ ಸಿದ್ಧವಾದ ಜನವನ್ನು ಕರ್ತನಿಗೆ ಒದಗಿಸುವನು ಎಂದು ಹೇಳಿದನು.


ನಾನು ಬಂದು ದೇಶವನ್ನು ಶಾಪದಿಂದ ಹತಮಾಡದಂತೆ ಯೆಹೋವನ ಆಗಮನದ ಭಯಂಕರವಾದ ಮಹಾದಿನವು ಬರುವದಕ್ಕೆ ಮುಂಚೆಯೇ ಪ್ರವಾದಿಯಾದ ಎಲೀಯನನ್ನು ನಿಮ್ಮ ಬಳಿಗೆ ಕಳುಹಿಸುವೆನು;


ಇದಲ್ಲದೆ ಅವರು - ಎಲೀಯನು ಮೊದಲು ಬರುವದು ಅಗತ್ಯವೆಂಬದಾಗಿ ಶಾಸ್ತ್ರಿಗಳು ಹೇಳುತ್ತಾರಲ್ಲಾ, ಇದು ಹೇಗೆ? ಎಂದು ಆತನನ್ನು ಕೇಳಿದ್ದಕ್ಕೆ


ಕೂಡಲೆ ತನ್ನ ಮೈಗಾವಲಿನ ಸಿಪಾಯಿಗಳಲ್ಲಿ ಒಬ್ಬನಿಗೆ - ನೀನು ಹೋಗಿ ಯೋಹಾನನ ತಲೆಯನ್ನು ತಂದುಕೊಡು ಎಂದು ಅಪ್ಪಣೆಕೊಟ್ಟು ಕಳುಹಿಸಿದನು;


ಆದರೆ ಹೆರೋದನು ಆತನ ಸುದ್ದಿಯನ್ನು ಕೇಳಿ - ನಾನು ತಲೆಹೊಯಿಸಿದ ಯೋಹಾನನೇ ತಿರಿಗಿ ಬದುಕಿ ಬಂದಿದ್ದಾನೆ ಅಂದನು.


ಆಗ ಅನೇಕರು ಹಿಂಜರಿದು ಒಬ್ಬರನ್ನೊಬ್ಬರು ಹಿಡುಕೊಡುವರು; ಒಬ್ಬರ ಮೇಲೊಬ್ಬರು ದ್ವೇಷ ಮಾಡುವರು.


ಅವರು ನಿನಗೆ ಮುಯ್ಯಿಗೆಮುಯ್ಯಿಮಾಡುವದಕ್ಕೆ ಏನೂ ಇಲ್ಲದವರಾಗಿದ್ದರೂ ನೀತಿವಂತರು ಜೀವಿತರಾಗಿ ಎದ್ದು ಬರುವಲ್ಲಿ ನಿನಗೆ ಮುಯ್ಯಿಗೆಮುಯ್ಯಾಗುವದರಿಂದ ನೀನು ಧನ್ಯನಾಗುವಿ ಅಂದನು.


ಯೋಹಾನನು ತಾನು ಕಂಡದ್ದನ್ನೆಲ್ಲಾ ತಿಳಿಸುವವನಾಗಿ ದೇವರ ವಾಕ್ಯದ ವಿಷಯವಾಗಿಯೂ ಯೇಸು ಕ್ರಿಸ್ತನು ಹೇಳಿದ ಸಾಕ್ಷಿಯ ವಿಷಯವಾಗಿಯೂ ಸಾಕ್ಷಿಕೊಟ್ಟನು.


ಯಾವನು ಜಯಶಾಲಿಯಾಗಿದ್ದು ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು ಕಡೇವರೆಗೂ ನಡಿಸುತ್ತಾನೋ ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.


ಇದಲ್ಲದೆ ಸಿಂಹಾಸನದ ಸುತ್ತಲು ಇಪ್ಪತ್ತುನಾಲ್ಕು ಸಿಂಹಾಸನಗಳಿದ್ದವು; ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತುನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವತನಕ ಭೂವಿುಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು