Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 20:6 - ಕನ್ನಡ ಸತ್ಯವೇದವು J.V. (BSI)

6 ಪ್ರಥಮ ಪುನರುತ್ಥಾನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರುಷ ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಮೊದಲನೇಯ ಪುನರುತ್ಥಾನದಲ್ಲಿ ಸೇರಿದವರು ಧನ್ಯರೂ ಮತ್ತು ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರ್ಷ ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ಪ್ರಥಮ ಪುನರುತ್ಥಾನದಲ್ಲಿ ಸೇರಿರುವ ದೇವಜನರು ಭಾಗ್ಯವಂತರು. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಅವರು ದೇವರಿಗೂ ಕ್ರಿಸ್ತೇಸುವಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಕ್ರಿಸ್ತೇಸುವಿನೊಡನೆ ಒಂದು ಸಾವಿರ ವರ್ಷಗಳ ಕಾಲ ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಪವಿತ್ರರೂ ಧನ್ಯರೂ ಆಗಿದ್ದಾರೆ. ಈ ಜನರ ಮೇಲೆ ಎರಡನೆ ಮರಣಕ್ಕೆ ಅಧಿಕಾರವಿಲ್ಲ. ಆ ಜನರು ದೇವರಿಗೆ ಮತ್ತು ಕ್ರಿಸ್ತನಿಗೆ ಯಾಜಕರಾಗಿರುತ್ತಾರೆ. ಅವರು ಆತನೊಂದಿಗೆ ಒಂದು ಸಾವಿರ ವರ್ಷ ಆಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಪ್ರಥಮ ಪುನರುತ್ಥಾನದಲ್ಲಿ ಸೇರಿರುವವರು ಧನ್ಯರೂ ಪರಿಶುದ್ಧರೂ ಆಗಿದ್ದಾರೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ. ಆದರೆ ಅವರು ದೇವರಿಗೂ ಯೇಸುಕ್ರಿಸ್ತರೊಂದಿಗೂ ಯಾಜಕರಾಗಿ ಸೇವೆಸಲ್ಲಿಸುವರು; ಮತ್ತು ಯೇಸುಕ್ರಿಸ್ತರೊಂದಿಗೆ ಸಾವಿರ ವರ್ಷಗಳ ಕಾಲ ಆಳುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಹ್ಯಾ ಪಯ್ಲೆಚ್ಯಾ ಮರಲ್ಲೆ ಝಿತ್ತೆ ಹೊವ್ನ್ ಉಟ್ತಲ್ಯಾತ್ ಮಿಳಲ್ಲಿ ಲೊಕಾ ಕವ್ಡಿ ಪವಿತ್ರ್ ಅನಿ ಸುಖಿ, ದೊನ್ವೆಚ್ಯಾ ಮರ್‍ನಾಕ್‍ ಹ್ಯೆಂಚೆ ವರ್ತಿ ಅದಿಕಾರ್ ನಾ; ತೆನಿ ದೆವಾಚಿ ಅನಿ ಕ್ರಿಸ್ತಾಚಿ ಯಾಜಕಾ ಹೊತ್ಯಾತ್ ಅನಿ ತೆನಿ ತ್ಯೆಚ್ಯಾ ವಾಂಗ್ಡಾ ಎಕ್ ಹಜಾರ್ ವರ್ಸಾ ರಾಜ್ ಚಾಲ್ವುತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 20:6
19 ತಿಳಿವುಗಳ ಹೋಲಿಕೆ  

ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದವನೂ ಆಗಿರುವಾತನಿಗೆ ಯುಗಯುಗಾಂತರಗಳಲ್ಲಿಯೂ ಘನ ಮಹತ್ವಗಳಿರಲಿ. ಆಮೆನ್.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.


ಆಮೇಲೆ ಮೃತ್ಯುವೂ ಪಾತಾಳವೂ ಬೆಂಕಿಯ ಕೆರೆಗೆ ದೊಬ್ಬಲ್ಪಟ್ಟವು; ಆ ಬೆಂಕಿಯ ಕೆರೆಯೇ ಎರಡನೆಯ ಮರಣವು.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿ; ಅವರು ಭೂವಿುಯ ಮೇಲೆ ಆಳುವರು ಎಂದು ಹೇಳಿದರು.


ನೀವಾದರೋ ನಿಮ್ಮನ್ನು ಕತ್ತಲೆಯೊಳಗಿಂದ ಕರೆದು ತನ್ನ ಆಶ್ಚರ್ಯಕರವಾದ ಬೆಳಕಿನಲ್ಲಿ ಸೇರಿಸಿದಾತನ ಗುಣಾತಿಶಯಗಳನ್ನು ಪ್ರಚಾರಮಾಡುವವರಾಗುವಂತೆ ದೇವರಾದುಕೊಂಡ ಜನಾಂಗವೂ ರಾಜವಂಶಸ್ಥರಾದ ಯಾಜಕರೂ ಮೀಸಲಾದ ಜನವೂ ದೇವರ ಸ್ವಕೀಯ ಪ್ರಜೆಯೂ ಆಗಿದ್ದೀರಿ.


ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು; ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ಮಕ್ಕಳಾಗಿದ್ದರೆ ಬಾಧ್ಯರಾಗಿದ್ದೇವೆ; ದೇವರಿಗೆ ಬಾಧ್ಯರು, ಕ್ರಿಸ್ತನೊಂದಿಗೆ ಬಾಧ್ಯರು. ಹೇಗಂದರೆ ಕ್ರಿಸ್ತನಿಗೆ ಸಂಭವಿಸಿದ ಬಾಧೆಗಳಲ್ಲಿ ನಾವು ಪಾಲುಗಾರರಾಗುವದಾದರೆ ಆತನ ಮಹಿಮೆಯಲ್ಲಿಯೂ ಪಾಲುಗಾರರಾಗುವೆವು.


ಕಾದುಕೊಂಡು ಸಾವಿರದ ಮುನ್ನೂರ ಮೂವತ್ತೈದು ದಿನಗಳ ಕೊನೆಯ ಮಟ್ಟಿಗೆ ತಾಳಿರುವವನು ಧನ್ಯನು.


ಇಗೋ, ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಯ ಮಾತುಗಳನ್ನು ಕೈಕೊಂಡು ನಡೆಯುವವನು ಧನ್ಯನು ಎಂದು ಹೇಳಿದನು.


ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.


ಆದದರಿಂದ ಸಹೋದರರೇ, ದೇವರ ಕನಿಕರವನ್ನು ನಿಮ್ಮ ನೆನಪಿಗೆ ತಂದು ನಿಮ್ಮನ್ನು ಬೇಡಿಕೊಳ್ಳುವದೇನಂದರೆ - ನೀವು ನಿಮ್ಮ ನಿಮ್ಮ ದೇಹಗಳನ್ನು ದೇವರಿಗೆ ಮೀಸಲಾಗಿಯೂ ಮೆಚ್ಚಿಗೆಯಾಗಿಯೂ ಇರುವ ಸಜೀವಯಜ್ಞವಾಗಿ ಅರ್ಪಿಸಿರಿ; ಇದೇ ನಿಮ್ಮ ವಿವೇಕಪೂರ್ವಕವಾದ ಆರಾಧನೆಯು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ಊಟಕ್ಕೆ ಕೂತವರಲ್ಲಿ ಒಬ್ಬನು ಈ ಮಾತುಗಳನ್ನು ಕೇಳಿ - ದೇವರ ರಾಜ್ಯದಲ್ಲಿ ಊಟ ಮಾಡುವವನೇ ಧನ್ಯನು ಎಂದು ಹೇಳಲು


ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; ಜನಾಂಗಗಳ ಆಸ್ತಿಯನ್ನನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.


ಮತ್ತು ಚೀಯೋನಿನಲ್ಲಿ ಉಳಿದವರು, ಯೆರೂಸಲೇವಿುನಲ್ಲಿ ನಿಂತವರು, ಅಂತು ಜೀವಬಾಧ್ಯರ ಪಟ್ಟಿಯಲ್ಲಿ ಹೆಸರುಬಿದ್ದ ಯೆರೂಸಲೇವಿುನವರೆಲ್ಲರೂ ದೇವರ ಜನರೆನಿಸಿಕೊಳ್ಳುವರು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗುವದಿಲ್ಲ; ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು; ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು