ಪ್ರಕಟನೆ 20:9 - ಕನ್ನಡ ಸತ್ಯವೇದವು J.V. (BSI)9 ಅವರು ದೇಶದಲ್ಲೆಲ್ಲಾ ಹರಡಿಕೊಂಡು ದೇವಜನರ ದಂಡಿಗೂ ನಮ್ಮ ಪ್ರಿಯ ಪಟ್ಟಣಕ್ಕೂ ಮುತ್ತಿಗೆಹಾಕಿದರು. ಆಗ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಟ್ಟಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅವರು ಭೂಮಿಯಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ಆ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕುವರು. ಆದರೆ ಪರಲೋಕದಿಂದ ಬೆಂಕಿ ಇಳಿದು ಬಂದು ಅವರನ್ನು ದಹಿಸಿಬಿಡುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅವರು ದೇಶದಲ್ಲೆಲ್ಲಾ ಹರಡಿಕೊಂಡು ದೇವಜನರ ಪಾಳೆಯಕ್ಕೂ ದೇವರ ಪ್ರಿಯ ಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಸ್ವರ್ಗದಿಂದ ಬೆಂಕಿ ಇಳಿದುಬಂದು ಅವರನ್ನು ದಹಿಸಿಬಿಟ್ಟಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಸೈತಾನನ ಸೈನ್ಯವು ಭೂಮಿಯಲ್ಲೆಲ್ಲಾ ಶಿಸ್ತಿನಿಂದ ನಡೆದಾಡಿ ದೇವಜನರ ಶಿಬಿರದ ಸುತ್ತಲೂ ದೇವರ ಪ್ರಿಯ ನಗರದ ಸುತ್ತಲೂ ಒಟ್ಟುಗೂಡಿದರು. ಆದರೆ ಪರಲೋಕದಿಂದ ಇಳಿದು ಬಂದ ಬೆಂಕಿಯು ಸೈತಾನನ ಸೈನ್ಯವನ್ನು ನಾಶಗೊಳಿಸಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಅವರು ದೇಶದಲ್ಲೆಲ್ಲಾ ಹರಡಿಕೊಂಡು ಪರಿಶುದ್ಧರ ದಂಡಿಗೂ ಆ ಪ್ರಿಯಪಟ್ಟಣಕ್ಕೂ ಮುತ್ತಿಗೆ ಹಾಕಿದರು. ಆಗ ಪರಲೋಕದಿಂದ ಬೆಂಕಿ ಬಿದ್ದು ಅವರನ್ನು ದಹಿಸಿಬಿಟ್ಟಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್9 ತೆನಿ ಸಗ್ಳ್ಯಾ ಜಗಾತ್ ಪಗಳ್ತ್ಯಾತ್, ಅನಿ ದೆವಾಚಿ ಸೈನಿಕಾ ರ್‍ಹಾತಲ್ಯಾ ಜಾಗ್ಯಾಕ್ನಿ, ಅನಿ ತ್ಯೆಚ್ಯಾ ಪ್ರೆಮಾಚ್ಯಾ ಶಾರಾಚ್ಯಾ ಭೊತ್ಯಾನಿ ಘೆರ್ ಘಾಲುನ್ ಇಬೆ ರ್‍ಹಾತ್ಯಾತ್. ಖರೆ ಸರ್‍ಗಾ ವೈನಾ ಆಗ್ ಯೆತಾ ಅನಿ ತೆಂಕಾ ನಾಸ್ ಕರುನ್ ಟಾಕ್ತಾ. ಅಧ್ಯಾಯವನ್ನು ನೋಡಿ |