Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:1 - ಕನ್ನಡ ಸತ್ಯವೇದವು J.V. (BSI)

1 ತರುವಾಯ ನೂತನಾಕಾಶಮಂಡಲವನ್ನೂ ನೂತನಭೂಮಂಡಲವನ್ನೂ ಕಂಡೆನು. ಮೊದಲಿದ್ದ ಆಕಾಶಮಂಡಲವೂ ಮೊದಲಿದ್ದ ಭೂಮಂಡಲವೂ ಇಲ್ಲದೆ ಹೋದವು; ಇನ್ನು ಸಮುದ್ರವೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ತರುವಾಯ ನೂತನ ಆಕಾಶವನ್ನೂ ನೂತನ ಭೂಮಿಯನ್ನೂ ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಗತಿಸಿ ಹೋದವು. ಇನ್ನು ಸಮುದ್ರವು ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ತರುವಾಯ ನೂತನ ಆಕಾಶಮಂಡಲವನ್ನೂ ನೂತನ ಭೂಮಂಡಲವನ್ನೂ ಕಂಡೆ. ಮೊದಲಿದ್ದ ಆಕಾಶಮಂಡಲವೂ ಮೊದಲಿದ್ದ ಭೂಮಂಡಲವೂ ಕಣ್ಮರೆಯಾಗಿ ಹೋದವು. ಸಮುದ್ರವು ಇನ್ನಿಲ್ಲವಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಂತರ ನೂತನ ಪರಲೋಕವನ್ನು ಮತ್ತು ನೂತನ ಭೂಮಿಯನ್ನು ನಾನು ನೋಡಿದೆನು. ಮೊದಲನೆ ಪರಲೋಕ ಮತ್ತು ಮೊದಲನೆ ಭೂಮಿ ಅದೃಶ್ಯವಾಗಿದ್ದವು. ಅಲ್ಲಿ ಸಮುದ್ರವಿರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ತರುವಾಯ, “ನೂತನ ಆಕಾಶವನ್ನೂ ನೂತನ ಭೂಮಿಯನ್ನೂ” ಕಂಡೆನು. ಮೊದಲಿನ ಆಕಾಶವೂ ಮೊದಲಿನ ಭೂಮಿಯೂ ಇಲ್ಲದಂತಾದವು. ಇನ್ನು ಸಮುದ್ರವು ಇರಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಮಾನಾ ಮಿಯಾ ನ್ಹವೊ ಸರ್ಗ್ ಅನಿ ನ್ಹವಿ ಜಿಮಿನ್ ಬಗಟ್ಲೊ, ಅದ್ದಿಚೊ ಸರ್ಗ್ ಅನಿ ಜಿಮಿನ್ ನಾಪತ್ತೊ ಹೊವ್ನ್ ಗೆಲೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:1
13 ತಿಳಿವುಗಳ ಹೋಲಿಕೆ  

ಆದರೆ ನಾವು ದೇವರ ವಾಗ್ದಾನವನ್ನು ನಂಬಿ ನೂತನಾಕಾಶಮಂಡಲವನ್ನೂ ನೂತನಭೂಮಂಡಲವನ್ನೂ ಎದುರು ನೋಡುತ್ತಾ ಇದ್ದೇವೆ; ಅವುಗಳಲ್ಲಿ ನೀತಿಯು ವಾಸವಾಗಿರುವದು.


ನಾನು ಸೃಷ್ಟಿಸುವ ನೂತನಾಕಾಶಮಂಡಲವೂ ನೂತನಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಇಗೋ, ಎಲ್ಲವನ್ನು ಹೊಸದುಮಾಡುತ್ತೇನೆ ಅಂದನು. ಮತ್ತು ಒಬ್ಬನು ನನಗೆ - ಇದನ್ನು ಬರೆ; ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ ಎಂದು ಹೇಳಿದನು.


ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವದು, ಸೂರ್ಯಚಂದ್ರ ನಕ್ಷತ್ರಗಳು ಉರಿದು ಲಯವಾಗಿ ಹೋಗುವವು, ಭೂವಿುಯೂ ಅದರಲ್ಲಿರುವ ಕೆಲಸಗಳೂ ಸುಟ್ಟುಹೋಗುವವು.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಇನ್ನು ಕಾಣಿಸದ ಹಾಗಾದವು.


ಆ ದಿನದಲ್ಲಿ ಯೆಹೋವನು ಕಠಿನವೂ ಮಹತ್ತೂ ಬಲವೂ ಆಗಿರುವ ತನ್ನ ಖಡ್ಗದಿಂದ ವೇಗವಾಗಿ ಓಡುವ ಸರ್ಪ, ಡೊಂಕಾಗಿ ಹರಿಯುವ ಸರ್ಪ, ಈ ಎರಡು ಹೆಬ್ಬಾವುಗಳನ್ನು ಹೊಡೆದು ಮಹಾ ನದಿಯಲ್ಲಿನ ಘಟಸರ್ಪವನ್ನೂ ಕೊಂದುಹಾಕುವನು.


ಒಂದಕ್ಕೊಂದು ವಿಲಕ್ಷಣವಾದ ನಾಲ್ಕು ದೊಡ್ಡ ಮೃಗಗಳು ಸಾಗರದೊಳಗಿಂದ ಬಂದವು.


ಸಮುದ್ರದಿಂದ ಮೃಗವು ಏರಿಬರುವದನ್ನು ಕಂಡೆನು. ಅದಕ್ಕೆ ಏಳು ತಲೆಗಳೂ ಹತ್ತು ಕೊಂಬುಗಳೂ ಕೊಂಬುಗಳ ಮೇಲೆ ಹತ್ತು ಮಕುಟಗಳೂ ತಲೆಗಳ ಮೇಲೆ ದೇವದೂಷಣನಾಮಗಳೂ ಇದ್ದವು. ನಾನು ಕಂಡ ಮೃಗವು ಚಿರತೆಯಂತಿತ್ತು;


ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ; ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ ಬುರುದೆಯನ್ನೂ ಕಾರುತ್ತಲಿರುತ್ತವೆ.


ಯೆಹೋವನು ವಿಮೋಚಿಸಿದವರು ಹಿಂದಿರುಗಿ ಶಾಶ್ವತ ಸಂತೋಷವೆಂಬ ಕಿರೀಟವನ್ನು ಧರಿಸಿಕೊಂಡು ಉತ್ಸಾಹಧ್ವನಿಯೊಡನೆ ಚೀಯೋನಿಗೆ ಸೇರುವರು; ಹರ್ಷಾನಂದಗಳನ್ನು ಅನುಭವಿಸುವರು, ಮೊರೆಯೂ ಕರಕರೆಯೂ ತೊಲಗಿಹೋಗುವವು.


ಆದರೂ ಅದಕ್ಕೊಂದು ನಿರೀಕ್ಷೆಯುಂಟು; ಏನಂದರೆ ಆ ಜಗತ್ತು ಕೂಡ ನಾಶದ ವಶದಿಂದ ಬಿಡುಗಡೆಯಾಗಿ ದೇವರ ಮಕ್ಕಳ ಮಹಿಮೆಯುಳ್ಳ ವಿಮೋಚನೆಯಲ್ಲಿ ಪಾಲುಹೊಂದುವದೇ.


ಆಕಾಶವು ಸುರುಳಿಯ ಹಾಗೆ ಸುತ್ತಲ್ಪಟ್ಟು ಹೋಗಿಬಿಟ್ಟಿತು; ಎಲ್ಲಾ ಬೆಟ್ಟಗಳೂ ದ್ವೀಪಗಳೂ ತಮ್ಮ ತಮ್ಮ ಸ್ಥಳಗಳಿಂದ ಚಲಿಸಿದವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು