Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:12 - ಕನ್ನಡ ಸತ್ಯವೇದವು J.V. (BSI)

12 ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಪ್ರಾಕಾರವಿತ್ತು; ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು; ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು; ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ಯರ ಹನ್ನೆರಡು ಕುಲಗಳ ಹೆಸರುಗಳು ಬರೆಯಲ್ಪಟ್ಟಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ನಗರದ ಸುತ್ತಲೂ ಎತ್ತರವಾದ ಕೋಟೆಯಿತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳಿಗೆ ಹನ್ನೆರಡು ಮಂದಿ ದೇವದೂತರುಗಳು ಕಾವಲಿದ್ದರು. ಆ ಬಾಗಿಲುಗಳ ಮೇಲೆ ಇಸ್ರಯೇಲಿನ ಹನ್ನೆರಡು ಕುಲಗಳ ಹೆಸರುಗಳನ್ನು ಬರೆದಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ನಗರಕ್ಕೆ ಹನ್ನೆರಡು ಬಾಗಿಲುಗಳುಳ್ಳ ಅತ್ಯಂತ ಎತ್ತರವಾದ ಗೋಡೆಯಿತ್ತು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ಮಂದಿ ದೇವದೂತರಿದ್ದರು. ಪ್ರತಿಯೊಂದು ಬಾಗಿಲಿನ ಮೇಲೂ ಇಸ್ರೇಲಿನ ಹನ್ನೆರಡು ಕುಲಗಳಲ್ಲಿ ಒಂದು ಕುಲದ ಹೆಸರನ್ನು ಬರೆಯಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆ ಪಟ್ಟಣಕ್ಕೆ ಎತ್ತರವಾದ ದೊಡ್ಡ ಗೋಡೆ ಇತ್ತು. ಅದಕ್ಕೆ ಹನ್ನೆರಡು ಹೆಬ್ಬಾಗಿಲುಗಳಿದ್ದವು. ಆ ಬಾಗಿಲುಗಳ ಬಳಿಯಲ್ಲಿ ಹನ್ನೆರಡು ದೇವದೂತರಿದ್ದರು. ಅವುಗಳ ಮೇಲೆ ಇಸ್ರಾಯೇಲ್ ಪುತ್ರರ ಹನ್ನೆರಡು ಕುಲಗಳ ಹೆಸರುಗಳು ಬರೆದಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ತ್ಯಾ ಶಾರಾಕ್ ಎಕ್ ಉಪ್ಪರ್ಲಿ ಮೊಟಿ ಭಿತ್ತ್ ಹೊತ್ತಿ ಅನಿ ಬಾರಾ ದಾರಾ ಹೊತ್ತಿ ಅನಿ ತ್ಯಾ ಹರಿಎಕ್ ದಾರಾನಿಕ್ನಿ ಎಕೆಕ್ ದೆವಾಚ್ಯಾ ದುತಾಕ್ನಿ ನೆಮಸಲ್ಲೆ ಹೊತ್ತೆ. ಬಾರಾ ದಾರಾ ವೈನಿ ಇಸ್ರಾಯೆಲಾಚ್ಯಾ ಲೊಕಾಂಚ್ಯಾ ಬಾರಾ ಘರಾನ್ಯಾಂಚಿ ನಾವಾ ಲಿವಲ್ಲಿ ಹೊತ್ತಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:12
21 ತಿಳಿವುಗಳ ಹೋಲಿಕೆ  

ಅದರ ಬಾಗಿಲುಗಳನ್ನು ಹಗಲಿನಲ್ಲಿ ಮುಚ್ಚುವದೇ ಇಲ್ಲ; ರಾತ್ರಿಯಂತೂ ಅಲ್ಲಿಲ್ಲ.


ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ, ನಿನ್ನ ಪೌಳಿಗೋಡೆಯನ್ನು ಮನೋಹರರತ್ನಗಳಿಂದ ನಿರ್ಮಿಸುವೆನು.


ನಿನ್ನ ಪೌಳಿಗೋಡೆಗಳೊಳಗೆ ಶುಭವುಂಟಾಗಲಿ; ನಿನ್ನ ಅರಮನೆಗಳಲ್ಲಿ ಸೌಭಾಗ್ಯವಿರಲಿ.


ನಿನ್ನ ದೇಶದಲ್ಲಿ ಬಲಾತ್ಕಾರದ ಸುದ್ದಿಯೇ ಕಿವಿಗೆ ಬೀಳದು, ನಿನ್ನ ಪ್ರಾಂತಗಳೊಳಗೆ ಭಂಗನಾಶನಗಳ ವಾರ್ತೆಯೇ ಕೇಳಬರುವದಿಲ್ಲ; ಆಗ ದೇವರಕ್ಷಣೆಯು ನನ್ನ ಪೌಳಿಗೋಡೆಗಳು, ದೇವಸ್ತೋತ್ರವು ನನ್ನ ಬಾಗಿಲುಗಳು ಎಂದು ಅಂದುಕೊಳ್ಳುವಿ.


ಚೀಯೋನ್ ಪಟ್ಟಣವನ್ನು ಕಟಾಕ್ಷಿಸಿ ಅದಕ್ಕೆ ಶುಭವನ್ನುಂಟುಮಾಡು; ಯೆರೂಸಲೇವಿುನ ಪೌಳಿಗೋಡೆಯನ್ನು ಕಟ್ಟಿಸು.


ಯೆರೂಸಲೇವಿುನ ಗೋಡೆಯನ್ನು ಪ್ರತಿಷ್ಠಿಸುವ ಸಮಯ ಬಂದಾಗ ಆಯಾ ಸ್ಥಳಗಳಲ್ಲಿದ್ದ ಲೇವಿಯರನ್ನು ಕೀರ್ತನಗಾಯನಗಳಿಂದಲೂ ತಾಳ ಸ್ವರಮಂಡಲ ಕಿನ್ನರಿ ಇವುಗಳಿಂದಲೂ ಪ್ರತಿಷ್ಠೆಯ ಉತ್ಸವವನ್ನು ಆಚರಿಸುವದಕ್ಕಾಗಿ ಯೆರೂಸಲೇವಿುಗೆ ಕರೆಯಿಸಿದರು.


ನಮ್ಮ ಹನ್ನೆರಡು ಕುಲದವರು ಹಗಲಿರುಳು ಆಸಕ್ತಿಯಿಂದ ದೇವರನ್ನು ಸೇವಿಸುತ್ತಾ ಆ ವಾಗ್ದಾನದ ಫಲವನ್ನು ಹೊಂದುವದಕ್ಕೆ ನಿರೀಕ್ಷಿಸುತ್ತಾ ಇದ್ದಾರೆ. ರಾಜಾ, ಆ ನಿರೀಕ್ಷೆಯ ವಿಷಯದಲ್ಲಿಯೇ ಯೆಹೂದ್ಯರು ನನ್ನ ಮೇಲೆ ದೋಷಾರೋಪಣೆಮಾಡುತ್ತಾರೆ.


ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ತಿರಿಗಿ ಕಟ್ಟಿ ಭದ್ರಪಡಿಸುವದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪಾರಸಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.


ಇವರೆಲ್ಲರು ರಕ್ಷಣೆಯನ್ನು ಬಾಧ್ಯವಾಗಿ ಹೊಂದಬೇಕಾಗಿರುವವರ ಸೇವೆಗೋಸ್ಕರ ಕಳುಹಿಸಲ್ಪಡುವ ಊಳಿಗದ ಆತ್ಮಗಳಲ್ಲವೋ?


ಹೀಗಿರುವಲ್ಲಿ ಸ್ವಲ್ಪ ಕಾಲದ ಮೇಲೆ ಆ ಭಿಕ್ಷಗಾರನು ಸತ್ತನು; ದೇವದೂತರು ಅವನನ್ನು ತೆಗೆದುಕೊಂಡುಹೋಗಿ ಅಬ್ರಹಾಮನ ಎದೆಗೆ ಒರಗಿಸಿದರು. ಆ ಐಶ್ವರ್ಯವಂತನು ಸಹ ಸತ್ತನು; ಅವನಿಗೆ ಉತ್ತರಕ್ರಿಯೆಗಳು ಆದವು.


ಅದರಂತೆ ಒಬ್ಬ ಪಾಪಿಯು ದೇವರ ಕಡೆಗೆ ತಿರುಗಿಕೊಳ್ಳುವ ವಿಷಯದಲ್ಲಿ ದೇವದೂತರ ಮುಂದೆ ಸಂತೋಷವಾಗುವದೆಂದು ನಿಮಗೆ ಹೇಳುತ್ತೇನೆ ಅಂದನು.


ಈ ಚಿಕ್ಕವರಲ್ಲಿ ಒಬ್ಬನನ್ನಾದರೂ ತಾತ್ಸಾರಮಾಡಬಾರದು ನೋಡಿರಿ; ಪರಲೋಕದಲ್ಲಿ ಅವರ ದೂತರು ಪರಲೋಕದಲ್ಲಿರುವ ನನ್ನ ತಂದೆಯ ಮುಖವನ್ನು ಯಾವಾಗಲೂ ನೋಡುತ್ತಲಿದ್ದಾರೆ ಎಂದು ನಿಮಗೆ ಹೇಳುತ್ತೇನೆ.


ಇಸ್ರಾಯೇಲ್ಯರ ಕುಲಗಳ ಸಂಖ್ಯಾಪ್ರಕಾರ ಹನ್ನೆರಡು ರತ್ನಗಳಿರಬೇಕು. ಮುದ್ರಾರತ್ನದಲ್ಲಿ ಕೆತ್ತುವ ರೀತಿಯಲ್ಲಿ ಒಂದೊಂದು ರತ್ನದಲ್ಲಿ ಒಂದೊಂದು ಕುಲದ ಹೆಸರನ್ನು ಕೆತ್ತಿಸಬೇಕು.


ಪೂರ್ವದಿಕ್ಕಿನಲ್ಲಿ ಮೂರು ಬಾಗಿಲುಗಳು, ಉತ್ತರದಿಕ್ಕಿನಲ್ಲಿ ಮೂರು ಬಾಗಿಲುಗಳು, ದಕ್ಷಿಣದಿಕ್ಕಿನಲ್ಲಿ ಮೂರು ಬಾಗಿಲುಗಳು, ಪಶ್ಚಿಮದಿಕ್ಕಿನಲ್ಲಿ ಮೂರು ಬಾಗಿಲುಗಳು ಇದ್ದವು.


ನನ್ನ ಸಂಗಡ ಮಾತಾಡುತ್ತಿದ್ದವನು ಆ ಪಟ್ಟಣವನ್ನೂ ಅದರ ಬಾಗಿಲುಗಳನ್ನೂ ಅದರ ಪ್ರಾಕಾರವನ್ನೂ ಅಳತೆ ಮಾಡುವದಕ್ಕಾಗಿ ತನ್ನ ಕೈಯಲ್ಲಿ ಚಿನ್ನದ ಅಳತೇಕೋಲನ್ನು ಹಿಡಿದಿದ್ದನು.


ತಮ್ಮ ನಿಲುವಂಗಿಗಳನ್ನು ತೊಳಕೊಂಡವರು ಧನ್ಯರು; ಅವರಿಗೆ ಜೀವವೃಕ್ಷದ ಹಕ್ಕು ಇರುವದು; ಅವರು ಬಾಗಿಲುಗಳಿಂದ ಆ ಪಟ್ಟಣದೊಳಕ್ಕೆ ಸೇರುವರು.


ಆರು ಮೆಟ್ಲುಗಳ ಎರಡು ಕಡೆಗಳಲ್ಲಿಯೂ ಒಟ್ಟು ಹನ್ನೆರಡು ಸಿಂಹಗಳು ನಿಂತಿದ್ದವು. ಇಂಥ ಸಿಂಹಾಸನವು ಬೇರೆ ಯಾವ ರಾಜ್ಯದಲ್ಲಿಯೂ ಇರಲಿಲ್ಲ. ಅರಸನಾದ ಸೊಲೊಮೋನನ ಎಲ್ಲಾ ಪಾನಪಾತ್ರೆಗಳು ಬಂಗಾರದವುಗಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು