Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:2 - ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ಪರಲೋಕದಿಂದ ದೇವರ ಬಳಿಯಿಂದ ಇಳಿದುಬರುವದನ್ನು ಕಂಡೆನು; ಅದು ತನ್ನ ಗಂಡನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮ್ ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾಗಿರುವ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಇದಲ್ಲದೆ, ಪವಿತ್ರ ನಗರವಾದ ನೂತನ ಜೆರುಸಲೇಮ್ ಸ್ವರ್ಗದಿಂದಲೂ ದೇವರ ಸನ್ನಿಧಿಯಿಂದಲೂ ಕೆಳಗಿಳಿದು ಬರುವುದನ್ನು ಕಂಡೆ. ಅದು ಮದುಮಗನನ್ನು ಎದುರುಗೊಳ್ಳುವುದಕ್ಕಾಗಿ ಅಲಂಕೃತಳಾದ ಮದುವಣಗಿತ್ತಿಯಂತೆ ಶೃಂಗಾರಮಯವಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪರಿಶುದ್ಧ ನಗರವು ಪರಲೋಕದಿಂದ ದೇವರ ಬಳಿಯಿಂದ ಇಳಿದು ಬರುತ್ತಿರುವುದನ್ನು ನಾನು ನೋಡಿದೆನು. ಈ ಪರಿಶುದ್ಧ ನಗರವೇ ನೂತನ ಜೆರುಸಲೇಮ್. ವಧುವು ತನ್ನ ಪತಿಗಾಗಿ ಶೃಂಗರಿಸಿಕೊಳ್ಳುವಂತೆ ಅದನ್ನು ಸಿದ್ಧಪಡಿಸಿದ್ದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಪರಲೋಕದಿಂದ ಪರಿಶುದ್ಧ ಪಟ್ಟಣವಾದ ನೂತನ ಯೆರೂಸಲೇಮು ದೇವರ ಬಳಿಯಿಂದ ಇಳಿದು ಬರುವುದನ್ನು ಕಂಡೆನು. ಅದು ತನ್ನ ಪತಿಗೋಸ್ಕರ ಸಿದ್ಧಳಾದ ವಧುವಿನಂತೆ ಶೃಂಗರಿಸಲಾಗಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನಿ ಪವಿತ್ರ್ ಶಾರ್ ನ್ಹವೆ ಜೆರುಜಲೆಮ್ ಎಕ್ ನ್ಹವ್ರಿ ನ್ಹವ್ರ್ಯಾಕ್ ಭೆಟುಕ್ ತಯಾರ್ ಹೊಲ್ಯಾ ಸರ್ಕೆ ಬರೆ ಕರುನ್ ನೆಸುನ್ ತಯಾರ್ ಹೊಲ್ಯಾ ಸರ್ಕೆ ತಯಾರ್ ಹೊವ್ನ್ ಸರ್‍ಗಾ ವೈನಾ ದೆವಾಕ್ನಾ ಖಾಲ್ತಿ ಉತ್ರುನ್ ಯೆತಲೆ ಮಿಯಾ ಬಗಟ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:2
28 ತಿಳಿವುಗಳ ಹೋಲಿಕೆ  

ಯಾಕಂದರೆ ಅವನು ಶಾಶ್ವತವಾದ ಅಸ್ತಿವಾರಗಳುಳ್ಳ ಪಟ್ಟಣವನ್ನು ಅಂದರೆ ದೇವರು ಸಂಕಲ್ಪಿಸಿ ನಿರ್ಮಿಸಿದ ಪಟ್ಟಣವನ್ನು ಎದುರುನೋಡುತ್ತಿದ್ದನು.


ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.


ದೇವರಾತ್ಮವಶನಾದ ನನ್ನನ್ನು ಎತ್ತರವಾದ ದೊಡ್ಡ ಬೆಟ್ಟಕ್ಕೆ ಎತ್ತಿಕೊಂಡು ಹೋಗಿ ಯೆರೂಸಲೇಮೆಂಬ ಪರಿಶುದ್ಧ ಪಟ್ಟಣವು ದೇವರ ತೇಜಸ್ಸುಳ್ಳದ್ದಾಗಿ ಪರಲೋಕದೊಳಗಿಂದ ದೇವರ ಕಡೆಯಿಂದ ಇಳಿದುಬರುವದನ್ನು ನನಗೆ ತೋರಿಸಿದನು. ಪಟ್ಟಣದ ಪ್ರಕಾಶವು ಅಮೂಲ್ಯರತ್ನದ ಪ್ರಕಾಶಕ್ಕೆ ಸಮಾನವಾಗಿತ್ತು, ಥಳಥಳಿಸುವ ವಜ್ರವೋ ಎಂಬಂತೆ ಕಾಣಿಸಿತು.


ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವದು; ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನಲ್ಲಾ.


ಯಾಕಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ; ಇನ್ನು ಮುಂದೆ ಆಗುವ ಪಟ್ಟಣವನ್ನು ಹಾರೈಸುತ್ತಾ ಇದ್ದೇವೆ.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇವಿುಗೂ ಉತ್ಸವಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ


ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.


ಯಾಕಂದರೆ ದೇವರಲ್ಲಿರುವಂಥ ಚಿಂತೆಯಿಂದಲೇ ನಾನು ನಿಮ್ಮ ವಿಷಯದಲ್ಲಿ ಚಿಂತಿಸುತ್ತೇನೆ. ನಿಮ್ಮನ್ನು ಕ್ರಿಸ್ತನೆಂಬ ಒಬ್ಬನೇ ಪುರುಷನಿಗೆ ಶುದ್ಧ ಕನ್ಯೆಯಂತೆ ಒಪ್ಪಿಸಬೇಕೆಂದು ನಿಮ್ಮನ್ನು ಆತನಿಗೆ ನಿಶ್ಚಯಮಾಡಿದೆನಲ್ಲಾ.


ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ! ಯೆರೂಸಲೇಮೇ, ಪರಿಶುದ್ಧ ಪಟ್ಟಣವೇ, ನಿನ್ನ ಚಂದದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡರು.


ನೀನು ಇನ್ನು ಮೇಲೆ ಗಂಡಬಿಟ್ಟವಳು ಎನಿಸಿಕೊಳ್ಳೆ, ನಿನ್ನ ಸೀಮೆಗೆ ಬಂಜೆ ಎಂಬ ಹೆಸರು ಇನ್ನಿರದು; ನೀನು ಎನ್ನುಲ್ಲಾಸಿನಿ ಎನಿಸಿಕೊಳ್ಳುವಿ, ನಿನ್ನ ಸೀಮೆಗೆ ವಿವಾಹಿತೆ ಎಂಬ ಹೆಸರಾಗುವದು; ಏಕಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವದು,


ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನಂದರೆ - ಸೆಲಾ.


ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಅದು ಅನ್ಯಜನರಿಗಾಗಿ ಬಿಟ್ಟದೆ; ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.


ನಿಮ್ಮ ಸಹೋದರನೂ ಯೇಸುವಿನ ನಿವಿುತ್ತ ಹಿಂಸೆಯಲ್ಲಿಯೂ ರಾಜ್ಯದಲ್ಲಿಯೂ ತಾಳ್ಮೆಯಲ್ಲಿಯೂ ನಿಮ್ಮೊಂದಿಗೆ ಪಾಲುಗಾರನೂ ಆಗಿರುವ ಯೋಹಾನನೆಂಬ ನಾನು ದೇವರ ವಾಕ್ಯಕ್ಕೋಸ್ಕರವೂ ಯೇಸುವಿನ ವಿಷಯವಾದ ಸಾಕ್ಷಿಗೋಸ್ಕರವೂ ಪತ್ಮೊಸ್ ದ್ವೀಪದಲ್ಲಿದ್ದೆನು.


ಆಸ್ಯಸೀಮೆಯಲ್ಲಿರುವ ಏಳು ಸಭೆಗಳಿಗೆ ಯೋಹಾನನು ಬರೆಯುವದೇನಂದರೆ - ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಾತನಿಂದ


ಯೇಸು ಕ್ರಿಸ್ತನ ಪ್ರಕಟನೆಯು. ಆತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತೋರಿಸುವದಕ್ಕಾಗಿ ದೇವರಿಂದ ಈ ಪ್ರಕಟನೆಯನ್ನು ಹೊಂದಿದನು; ಇದಲ್ಲದೆ ಆತನು ತನ್ನ ದೂತನನ್ನು ಕಳುಹಿಸಿ ಅವನ ಮೂಲಕ ಆ ಸಂಗತಿಗಳನ್ನು ತನ್ನ ದಾಸನಾದ ಯೋಹಾನನಿಗೆ ಸೂಚಿಸಿದನು.


ಮದಲಗಿತ್ತಿಯುಳ್ಳವನೇ ಮದಲಿಂಗನು; ಆದರೂ ಮದಲಿಂಗನ ಗೆಳೆಯನು ಅವನ ಹತ್ತರ ನಿಂತುಕೊಂಡು ಅವನ ಮಾತುಗಳನ್ನು ಕೇಳಿ ಮದಲಿಂಗನ ಧ್ವನಿಗೆ ಬಹು ಸಂತೋಷಪಡುತ್ತಾನಲ್ಲವೇ. ಇದರಂತೆ ನನಗಿರುವ ಸಂತೋಷ; ಅದು ನೆರವೇರಿತು.


ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನನ್ನ ಜನರ ದುರವಸ್ಥೆಯನ್ನು ತಪ್ಪಿಸುವಾಗ ಯೆಹೂದ ದೇಶದಲ್ಲಿಯೂ ಅವರ ಪಟ್ಟಣಗಳಲ್ಲಿಯೂ - ನ್ಯಾಯದ ನಿವಾಸವೇ, ಪರಿಶುದ್ಧ ಪರ್ವತವೇ, ಯೆಹೋವನು ನಿನ್ನನ್ನು ಆಶೀರ್ವದಿಸಲಿ ಎಂದು ಮತ್ತೆ ಮಾತಾಡುವರು.


ಅಯ್ಯೋ, ಸುವ್ರತೆಯಾಗಿದ್ದ ನಗರಿಯು ಸೂಳೆಯಾದಳಲ್ಲಾ! ನ್ಯಾಯದಿಂದ ತುಂಬಿ ಧರ್ಮಕ್ಕೆ ನೆಲೆಯಾಗಿದ್ದವಳು ಈಗ ಕೊಲೆಪಾತಕರಿಗೆ ನೆಲೆಯಾಗಿದ್ದಾಳೆ.


ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತಾಡುತ್ತಾ - ಬಾ, ಯಜ್ಞದ ಕುರಿಯಾದಾತನಿಗೆ ಹೆಂಡತಿಯಾಗತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿ


ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು