Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:24 - ಕನ್ನಡ ಸತ್ಯವೇದವು J.V. (BSI)

24 ಅದರ ಬೆಳಕಿನಿಂದ ಸರ್ವಜನಾಂಗದವರು ಸಂಚಾರಮಾಡುವರು; ಭೂರಾಜರು ತಮ್ಮ ವೈಭವವನ್ನು ಅಲ್ಲಿಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಅದರ ಬೆಳಕಿನಿಂದ ಜನಾಂಗಗಳವರು ನಡೆದಾಡುವರು. ಭೂರಾಜರು ತಮ್ಮ ವೈಭವವನ್ನು ಅದರೊಳಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಅದರ ಬೆಳಕಿನಲ್ಲಿ ಸರ್ವಜನಾಂಗಗಳು ಸಂಚರಿಸುವರು. ಭೂರಾಜರು ತಮ್ಮ ಸಿರಿಸಂಪತ್ತನ್ನು ಅಲ್ಲಿಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಕುರಿಮರಿಯಾದಾತನು ನೀಡಿದ ಬೆಳಕಿನಿಂದ ಲೋಕದ ಜನರು ನಡೆಯುತ್ತಾರೆ. ಲೋಕದ ರಾಜರುಗಳು ತಮ್ಮ ಸಿರಿಸಂಪತ್ತನ್ನು ನಗರಕ್ಕೆ ತರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಅದರ ಬೆಳಕಿನಲ್ಲಿ ಎಲ್ಲಾ ಜನರು ನಡೆಯುವರು. ಭೂರಾಜರು ತಮ್ಮ ಮಹಿಮೆಯನ್ನು ಅಲ್ಲಿಗೆ ತರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

24 ಜಗಾತ್ಲಿ ಲೊಕಾ ತ್ಯೆಚ್ಯಾ ಉಜ್ವೊಡಾತ್ ಚಲ್ತ್ಯಾತ್ ಅನಿ ಜಿಮ್ನಿಚೆ ರಾಜಾ ಅಪ್ನಾಚ್ಯಾ ಸಾವ್ಕಾರ್‍ಕ್ಯಾ ತ್ಯೆಚ್ಯಾ ಭುತ್ತುರ್ ಘೆವ್ನ್ ಯೆತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:24
22 ತಿಳಿವುಗಳ ಹೋಲಿಕೆ  

ಆ ನದಿಯ ಉಭಯ ಪಾರ್ಶ್ವಗಳಲ್ಲಿ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಪ್ರಯೋಜನವಾಗಿವೆ.


ಜನಾಂಗಗಳ ವೈಭವವೂ ಘನವೂ ಅಲ್ಲಿಗೆ ಬರುವವು.


ಆ ಕಾಲದಲ್ಲಿ ಬಹು ಜನಾಂಗಗಳು ಯೆಹೋವನಾದ ನನ್ನನ್ನು ಆಶ್ರಯಿಸಿಕೊಂಡು ನನ್ನ ಜನವಾಗುವವು; ನಾನು ನಿನ್ನ ಮಧ್ಯದಲ್ಲಿ ವಾಸಿಸುವೆನು; ಆಗ ಸೇನಾಧೀಶ್ವರ ಯೆಹೋವನೇ ನನ್ನನ್ನು ನಿನ್ನ ಬಳಿಗೆ ಕಳುಹಿಸಿದ್ದಾನೆಂಬದು ನಿನಗೆ ಗೊತ್ತಾಗುವದು.


ಅವರ ಕೃತ್ಯಗಳಿಗೂ ಆಲೋಚನೆಗಳಿಗೂ [ತಕ್ಕದ್ದನ್ನು ಮಾಡುವೆನು]; ನಾನು ಇನ್ನು ಮುಂದೆ ಸಮಸ್ತಜನಾಂಗಗಳನ್ನೂ ಸಕಲಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.


ನೀನು ಜನಾಂಗಗಳ ಮೊಲೆಕೂಸಾಗುವಿ, ರಾಜರು ನಿನಗೆ ಮೊಲೆಯೂಡಿಸುವರು; ಆಗ ಯೆಹೋವನಾದ ನಾನೇ ನಿನ್ನ ರಕ್ಷಕನು, ನಿನ್ನ ವಿಮೋಚಕನು, ಯಾಕೋಬ್ಯರ ಶೂರನು ಎಂದು ನೀನು ತಿಳಿದುಕೊಳ್ಳುವಿ.


ಎಲೈ, [ಇಸ್ರಾಯೇಲೇ], [ಅವನಂತೆ ನೀನೂ] ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾವಿು ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವದು.


ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಮಕಿತರಾಗುವರು; ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು; ಏಕಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದ ವಿಷಯವನ್ನು ಗ್ರಹಿಸಿಕೊಳ್ಳುವರು.


ಭೂಮಂಡಲದವರೆಲ್ಲರು ಎಚ್ಚರಗೊಂಡು ಯೆಹೋವನ ಕಡೆಗೆ ತಿರುಗಿಕೊಳ್ಳುವರು; [ಯೆಹೋವನೇ,] ಎಲ್ಲಾ ಜನಾಂಗಗಳವರು ನಿನಗೆ ಅಡ್ಡಬೀಳುವರು.


ಯಾಕಂದರೆ ಯೆರೂಸಲೇವಿುನಲ್ಲಿರುವ ದೇವಜನರೊಳಗೆ ಬಡವರಿಗೋಸ್ಕರ ಸ್ವಲ್ಪ ಹಣದ ಸಹಾಯವನ್ನು ಮಾಡಬೇಕೆಂಬದಾಗಿ ಮಕೆದೋನ್ಯ ಅಖಾಯ ಸೀಮೆಗಳವರು ಇಷ್ಟಪಟ್ಟಿದ್ದಾರೆ.


ಯೆಹೋವನ ಜೀವದಾಣೆ ಎಂದು ಸತ್ಯನ್ಯಾಯ ಧರ್ಮಾನುಸಾರವಾಗಿ ನೀನು ಪ್ರಮಾಣಮಾಡಿದರೆ ಜನಾಂಗಗಳು ಆತನಿಂದ ತಮ್ಮನ್ನು ಆಶೀರ್ವದಿಸಿಕೊಂಡು ಆತನಲ್ಲಿ ಹೆಚ್ಚಳಪಡುವರು.


ಅಂತ್ಯಕಾಲದಲ್ಲಿ ಯೆಹೋವನ ಮಂದಿರದ ಬೆಟ್ಟವು ಗುಡ್ಡಬೆಟ್ಟಗಳಿಗಿಂತ ಉನ್ನತೋನ್ನತವಾಗಿ ಬೆಳೆದು ನೆಲೆಗೊಳ್ಳುವದು; ಆಗ ಸಕಲದೇಶಗಳವರು ಅದರ ಕಡೆಗೆ ಪ್ರವಾಹಗಳಂತೆ ಬರುವರು.


ನನ್ನ ಪವಿತ್ರಾಲಯವನ್ನು ಭೂಷಿಸುವದಕ್ಕಾಗಿ ತುರಾಯಿ, ತಪಸಿ, ತಿಲಕ ಈ ವೃಕ್ಷರೂಪವಾದ ಲೆಬನೋನಿನ ಮಹಿಮೆಯು ನಿನಗಾಗುವದು; ನನ್ನ ಪಾದಸನ್ನಿಧಿಯ ಮಂದಿರವನ್ನು ವೈಭವಪಡಿಸುವೆನು.


ಮಳೆಯೂ ಹಿಮವೂ ಆಕಾಶದಿಂದ ಬಿದ್ದು ಭೂವಿುಯನ್ನು ತೋಯಿಸಿ ಹಸಿರುಗೊಳಿಸಿ ಫಲಿಸುವಂತೆ ಮಾಡಿ ಬಿತ್ತುವವನಿಗೆ ಬೀಜವನ್ನು, ಉಣ್ಣುವವನಿಗೆ ಆಹಾರವನ್ನು ಒದಗಿಸಿದ ಹೊರತು ಹೇಗೆ ಆಕಾಶಕ್ಕೆ ಸುಮ್ಮನೆ ಹಿಂದಿರುಗುವದಿಲ್ಲವೋ


ಯಾಕೋಬನ ಮನೆತನದವರೇ, ಬನ್ನಿರಿ, ಯೆಹೋವನ ಜ್ಞಾನಪ್ರಕಾಶದಲ್ಲಿ ನಡೆಯುವ!


ಜನಾಂಗಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ದೇಶಕ್ಕೋಸ್ಕರವೂ ದೋಷಪರಿಹಾರಮಾಡುತ್ತಾನೆ.


ರಾಜರು ನಿನಗೆ ಸಾಕುತಂದೆಗಳು, ಅವರ ರಾಣಿಗಳು ನಿನಗೆ ಸಾಕುತಾಯಿಯರು ಆಗುವರು; ನಿನಗೆ ಸಾಷ್ಟಾಂಗವಾಗಿ ಅಡ್ಡಬಿದ್ದು ನಿನ್ನ ಪಾದಧೂಳಿಯನ್ನು ನೆಕ್ಕುವರು; ನಾನೇ ಯೆಹೋವನು. ನನ್ನನ್ನು ನಿರೀಕ್ಷಿಸಿಕೊಂಡವರು ಆಶಾಭಂಗಪಡರು ಎಂದು ನಿನಗೆ ಗೊತ್ತಾಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು