Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 21:3 - ಕನ್ನಡ ಸತ್ಯವೇದವು J.V. (BSI)

3 ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾ ಶಬ್ದವು ನನಗೆ ಕೇಳಿಸಿತು. ಅದು - ಇಗೋ, ದೇವರ ನಿವಾಸವು ಮನುಷ್ಯರಲ್ಲಿ ಅದೆ; ಆತನು ಅವರೊಡನೆ ವಾಸಮಾಡುವನು, ಅವರು ಆತನಿಗೆ ಪ್ರಜೆಗಳಾಗಿರುವರು; ದೇವರು ತಾನೇ ಅವರ ಸಂಗಡ ಇರುವನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮನುಷ್ಯರೊಂದಿಗೆ ಇದೆ. ಆತನು ಅವರೊಡನೆ ವಾಸಮಾಡುವನು. ಅವರು ಆತನಿಗೆ ಪ್ರಜೆಗಳಾಗಿರುವರು. ದೇವರು ತಾನೇ ಅವರ ಸಂಗಡ ಇರುವನು ಮತ್ತು ಅವರ ದೇವರಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಆಗ ಸಿಂಹಾಸನದ ಕಡೆಯಿಂದ ಬಂದ ಮಹಾಧ್ವನಿ ಇಂತೆಂದಿತು : ಇಗೋ ಮಾನವರ ಮಧ್ಯೆಯೇ ಇದೆ ದೇವಾಲಯ, ಆತನವರೊಡನೆ ವಾಸಿಸುವನು; ಅವರಾತನಿಗೆ ಪ್ರಜೆಗಳಾಗುವರು; ದೇವರೇ ಅವರುಗಳ ಜೊತೆಗಾರ; ಆತನಲ್ಲದೆ ಅವರಿಗಿಲ್ಲ ಬೇರಾವ ದೇವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸಿಂಹಾಸನದಿಂದ ಒಂದು ಗಟ್ಟಿಯಾದ ಧ್ವನಿಯನ್ನು ನಾನು ಕೇಳಿದೆನು. ಆ ಧ್ವನಿಯು, “ಈಗ ದೇವರ ಮನೆಯು ಜನರ ಸಂಗಡವಿದೆ. ಆತನು ಅವರೊಂದಿಗೆ ನೆಲೆಸುತ್ತಾನೆ. ಅವರು ಆತನವರಾಗಿರುತ್ತಾರೆ. ದೇವರು ತಾನೇ ಅವರೊಂದಿಗೆ ಇರುತ್ತಾನೆ ಮತ್ತು ಅವರ ದೇವರಾಗಿರುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಇದಲ್ಲದೆ ಸಿಂಹಾಸನದೊಳಗಿಂದ ಬಂದ ಮಹಾಧ್ವನಿಯು ನನಗೆ ಕೇಳಿಸಿತು. ಅದು, “ಇಗೋ ದೇವರ ನಿವಾಸವು ಮಾನವರೊಂದಿಗೆ ಇದೆ. ದೇವರು ಅವರೊಡನೆ ವಾಸಮಾಡುವರು. ಮಾನವರು ದೇವರಿಗೆ ಪ್ರಜೆಯಾಗಿರುವರು. ದೇವರು ತಾವೇ ಅವರ ಸಂಗಡ ಇರುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ಸಿವಾಸನಾ ವೈನಾ ಎಕ್ ಮೊಟೊ ಧನ್ ಬೊಲ್ತಲೆ ಮಿಯಾ ಆಯಿಕ್ಲೊ; “ಅತ್ತಾ ದೆವಾಚೆ ಘರ್ ಲೊಕಾಂಚ್ಯಾ ವಾಂಗ್ಡಾ ಹಾಯ್! ತೊ ತೆಂಚ್ಯಾ ವಾಂಗ್ಡಾ ರ್‍ಹಾತಾ, ಅನಿ ತೆನಿ ತೆಚಿ ಲೊಕಾ ಹೊತ್ಯಾತ್ ಖುದ್ ದೆವುಚ್ ತೆಂಚ್ಯಾ ವಾಂಗ್ಡಾ ರ್‍ಹಾತಾ, ಅನಿ ತೊ ತೆಂಚೊ ದೆವ್ ಹೊತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 21:3
29 ತಿಳಿವುಗಳ ಹೋಲಿಕೆ  

ಹೌದು, ನನ್ನ ವಾಸಸ್ಥಾನವು ಅವರ ಮಧ್ಯದಲ್ಲಿರುವದು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು.


ದೇವರ ಮಂದಿರಕ್ಕೂ ವಿಗ್ರಹಗಳಿಗೂ ಒಪ್ಪಿಗೆ ಏನು? ನಾವು ಜೀವಸ್ವರೂಪನಾದ ದೇವರ ಮಂದಿರವಾಗಿದ್ದೇವಲ್ಲಾ. ಇದರ ಸಂಬಂಧವಾಗಿ ದೇವರು ನಾನು ಅವರಲ್ಲಿ ವಾಸಿಸುತ್ತಾ ತಿರುಗಾಡುವೆನು, ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು ಎಂದು ಹೇಳಿದ್ದಾನೆ.


ಯೇಸು ಅವನಿಗೆ - ಯಾರಾದರೂ ನನ್ನನ್ನು ಪ್ರೀತಿಸುವವನಾದರೆ ನನ್ನ ಮಾತನ್ನು ಕೈಕೊಂಡು ನಡೆಯುವನು; ಅವನನ್ನು ನನ್ನ ತಂದೆಯು ಪ್ರೀತಿಸುವನು, ಮತ್ತು ನಾವಿಬ್ಬರೂ ಅವನ ಬಳಿಗೆ ಬಂದು ಅವನ ಬಳಿಯಲ್ಲಿ ಬಿಡಾರವನ್ನು ಮಾಡಿಕೊಳ್ಳುವೆವು.


ಅವರು ಯೆರೂಸಲೇವಿುನೊಳಗೇ ವಾಸವಾಗಿರುವರು; ಸತ್ಯಸಂಧತೆಯಿಂದಲೂ ಸದ್ಧರ್ಮದಿಂದಲೂ ಅವರು ನನಗೆ ಪ್ರಜೆಯಾಗಿರುವರು. ಹಾಗೆಯೇ ನಾನು ಅವರಿಗೆ ದೇವರಾಗಿರುವೆನು.


ಆ ದಿನಗಳು ಬಂದ ಮೇಲೆ ನಾನು ಇಸ್ರಾಯೇಲ್‍ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಆಜ್ಞೆಗಳನ್ನು ಅವರ ಮನಸ್ಸಿನಲ್ಲಿ ಇಡುವೆನು, ಅವರ ಹೃದಯದ ಮೇಲೆ ಅವುಗಳನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ಯೆಹೋವನು ಇಂತೆನ್ನುತ್ತಾನೆ - ಆ ದಿನಗಳು ಬಂದಮೇಲೆ ನಾನು ಇಸ್ರಾಯೇಲ್ ವಂಶದವರೊಂದಿಗೆ ಮಾಡಿಕೊಳ್ಳುವ ಒಡಂಬಡಿಕೆಯು ಹೀಗಿರುವದು - ನನ್ನ ಧರ್ಮೋಪದೇಶವನ್ನು ಅವರ ಅಂತರಂಗದಲ್ಲಿ ಇಡುವೆನು, ಅವರ ಹೃದಯದೊಳಗೆ ಅದನ್ನು ಬರೆಯುವೆನು; ನಾನು ಅವರಿಗೆ ದೇವರಾಗಿರುವೆನು, ಅವರು ನನಗೆ ಪ್ರಜೆಯಾಗಿರುವರು;


ಆದರೆ ಅವರು ಪರಲೋಕವೆಂಬ ಉತ್ತಮದೇಶವನ್ನು ಹಾರೈಸುವವರು. ಆದದರಿಂದ ದೇವರು ಅವರ ದೇವರೆನಿಸಿಕೊಳ್ಳುವದಕ್ಕೆ ನಾಚಿಕೊಳ್ಳದೆ ಅವರಿಗೋಸ್ಕರ ಪಟ್ಟಣವನ್ನು ಸಿದ್ಧಮಾಡಿದ್ದಾನೆ.


ಆ ಮೂರನೆಯ ಭಾಗದವರನ್ನು ನಾನು ಬೆಂಕಿಗೆ ಹಾಕಿ ಬೆಳ್ಳಿಯಂತೆ ಶೋಧಿಸುವೆನು, ಬಂಗಾರದ ಹಾಗೆ ಶುದ್ಧಿಮಾಡುವೆನು; ಅವರು ನನ್ನ ಹೆಸರೆತ್ತಿ ಪ್ರಾರ್ಥಿಸುವರು, ನಾನು ಆಲಿಸುವೆನು; ನಾನು - ಇವರು ನನ್ನ ಜನರು ಅಂದುಕೊಳ್ಳುವೆನು, ಅವರು - ನಮ್ಮ ದೇವರಾದ ಯೆಹೋವನೇ ಅನ್ನುವರು.


ಅವರು ನನಗೆ ಜನರಾಗಿರುವರು, ನಾನು ಅವರಿಗೆ ದೇವರಾಗಿರುವೆನು.


ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆಮಾಡುತ್ತಾ ಇದ್ದಾರೆ; ಸಿಂಹಾಸನದಲ್ಲಿ ಕೂತಿರುವಾತನು ಗುಡಾರದಂತೆ ಅವರನ್ನು ಆವರಿಸುವನು.


ಇದಲ್ಲದೆ - ನಾನು ನಿಮ್ಮನ್ನು ಸೇರಿಸಿಕೊಂಡು ನಿಮಗೆ ತಂದೆಯಾಗಿರುವೆನು; ನೀವು ನನಗೆ ಕುಮಾರ ಕುಮಾರಿಯರು ಆಗಿರುವಿರೆಂದು ಸರ್ವಶಕ್ತನಾದ ಕರ್ತನು ಹೇಳುತ್ತಾನೆ.


ಜಯಹೊಂದುವವನು ಇವುಗಳಿಗೆ ಬಾಧ್ಯನಾಗುವನು; ನಾನು ಅವನಿಗೆ ದೇವರಾಗಿರುವೆನು, ಅವನು ನನಗೆ ಮಗನಾಗಿರುವನು.


ಆ ವಾಕ್ಯವೆಂಬವನು ನರಾವತಾರ ಎತ್ತಿ ನಮ್ಮ ಮಧ್ಯದಲ್ಲಿ ವಾಸಮಾಡಿದನು. ನಾವು ಆತನ ಮಹಿಮೆಯನ್ನು ನೋಡಿದೆವು; ಆ ಮಹಿಮೆಯು ತಂದೆಯ ಬಳಿಯಿಂದ ಬಂದ ಒಬ್ಬನೇ ಮಗನಿಗೆ ಇರತಕ್ಕ ಮಹಿಮೆ. ಆತನು ಕೃಪೆಯಿಂದಲೂ ಸತ್ಯದಿಂದಲೂ ತುಂಬಿದವನಾಗಿದ್ದನು.


ಚೀಯೋನಿನ ನಿವಾಸಿಗಳೇ, ಕೂಗಿರಿ, ಉತ್ಸಾಹ ಧ್ವನಿಮಾಡಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯು ನಿಮ್ಮ ಮಧ್ಯದಲ್ಲಿ ಮಹತ್ತಾಗಿದ್ದಾನಷ್ಟೆ ಎಂಬದೇ.


ಅವನ ದೂತರೂ ಅವನೊಂದಿಗೆ ದೊಬ್ಬಲ್ಪಟ್ಟರು. ಆಗ ಪರಲೋಕದಲ್ಲಿ ಮಹಾ ಶಬ್ದವನ್ನು ಕೇಳಿದೆನು, ಅದು - ಈಗ ಜಯವೂ ಶಕ್ತಿಯೂ ರಾಜ್ಯವೂ ನಮ್ಮ ದೇವರಿಗೆ ಉಂಟಾಯಿತು; ಆತನು ಅಭಿಷೇಕಿಸಿದವನ ಅಧಿಕಾರವು ಈಗ ಸ್ಥಾಪಿತವಾಯಿತು; ಹಗಲಿರುಳು ನಮ್ಮ ಸಹೋದರರ ಮೇಲೆ ನಮ್ಮ ದೇವರ ಮುಂದೆ ದೂರು ಹೇಳಿದ ದೂರುಗಾರನು ದೊಬ್ಬಲ್ಪಟ್ಟಿದ್ದಾನೆ.


ನುಡಿಯುವಾತನು ನನಗೆ ಹೀಗೆ ಹೇಳಿದನು - ನರಪುತ್ರನೇ, ಇದು ನನ್ನ ಸಿಂಹಾಸನ ಸ್ಥಾನ, ನನ್ನ ಪಾದಸನ್ನಿಧಿ; ಇಲ್ಲಿ ನಾನು ಇಸ್ರಾಯೇಲ್ಯರ ಮಧ್ಯೆ ಸದಾ ವಾಸಿಸುವೆನು; ಇಸ್ರಾಯೇಲ್‍ವಂಶದವರಾಗಲಿ ಅವರ ಅರಸರಾಗಲಿ ತಮ್ಮ ದೇವದ್ರೋಹದಿಂದಲೂ ಗತಿಸಿದ ಅರಸರ ಶವಗಳಿಂದಲೂ


ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು!


ದೇವರು ನಿಜವಾಗಿ ಮನುಷ್ಯರೊಡನೆ ಭೂಲೋಕದಲ್ಲಿ ವಾಸಿಸುವನೋ? ಆಕಾಶವೂ ಉನ್ನತೋನ್ನತವಾದ ಆಕಾಶವೂ ನಿನ್ನ ವಾಸಕ್ಕೆ ಸಾಲವು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ಸಾಕಾದೀತು?


ಅನಂತರ ಪರಲೋಕದಿಂದ ನನಗೆ ಕೇಳಿಸಿದ್ದ ಶಬ್ದವು ತಿರಿಗಿ ನನ್ನೊಂದಿಗೆ ಮಾತಾಡಿ - ನೀನು ಹೋಗಿ ಸಮುದ್ರದ ಮೇಲೆಯೂ ಭೂವಿುಯ ಮೇಲೆಯೂ ನಿಂತುಕೊಂಡಿರುವ ದೂತನ ಕೈಯಲ್ಲಿರುವ ಆ ಬಿಚ್ಚಿದ ಸುರುಳಿಯನ್ನು ತೆಗೆದುಕೋ ಎಂದು ಹೇಳಿತು.


ಕೂಗಿದಾಗ ಏಳು ಗುಡುಗುಗಳು ಒಂದೊಂದಾಗಿ ಧ್ವನಿಕೊಟ್ಟವು. ಆ ಏಳು ಗುಡುಗುಗಳು ನುಡಿದಾಗ ನಾನು ಬರೆಯಬೇಕೆಂದಿದ್ದೆನು. ಆದರೆ - ಆ ಏಳು ಗುಡುಗುಗಳು ನುಡಿದದ್ದನ್ನು ನೀನು ಬರೆಯದೆ ಗುಪ್ತವಾಗಿಡು ಎಂದು ಹೇಳುವ ಆಕಾಶವಾಣಿಯನ್ನು ಕೇಳಿದೆನು.


ನಾನು ಅವರ ಮಧ್ಯದಲ್ಲಿ ವಾಸಿಸುವದಕ್ಕೆ ನನಗೆ ಒಂದು ದೇವಸ್ಥಾನವನ್ನು ಕಟ್ಟಿಸಬೇಕು.


ನಾನು ಇಸ್ರಾಯೇಲ್ಯರ ಮಧ್ಯದಲ್ಲಿ ವಾಸವಾಗಿದ್ದು ಅವರಿಗೆ ದೇವರಾಗಿರುವೆನು.


ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳ; ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ಯೆಹೋವನ ನೆಲೆ ಎಂಬ ಹೆಸರಾಗುವದು.


ನಮ್ಮ ತಂದೆಯಾದ ದೇವರೂ ನಮ್ಮ ಕರ್ತನಾದ ಯೇಸುವೂ ನಮಗೆ ನಿಮ್ಮ ಬಳಿಗೆ ಬರುವದಕ್ಕೆ ಮಾರ್ಗವನ್ನು ಸರಾಗಮಾಡಲಿ.


ಈತನು ಪವಿತ್ರಸ್ಥಾನದಲ್ಲಿ ಅಂದರೆ ಮನುಷ್ಯನು ಹಾಕದೆ ಕರ್ತನೇ ಹಾಕಿದ ನಿಜವಾದ ದೇವದರ್ಶನಗುಡಾರದಲ್ಲಿ ಯಾಜಕೋದ್ಯೋಗ ನಡಿಸುವವನಾಗಿದ್ದಾನೆ.


ಇನ್ನು ಶಾಪಗ್ರಸ್ತವಾದದ್ದು ಒಂದೂ ಇರುವದಿಲ್ಲ. ಆ ಪಟ್ಟಣದಲ್ಲಿ ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನವಿರುವದು.


ನಿತ್ಯವೂ ಹಾಗೆಯೇ ಇರುವದು; ಮೇಘವು ದೇವಸ್ಥಾನವನ್ನು ಮುಚ್ಚಿಕೊಂಡಿರುವದು; ರಾತ್ರಿವೇಳೆಯಲ್ಲಿ ಆ ಮೇಘವು ಬೆಂಕಿಯಂತೆ ಕಾಣಿಸುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು