ಪ್ರಕಟನೆ 21:4 - ಕನ್ನಡ ಸತ್ಯವೇದವು J.V. (BSI)4 ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು. ಇನ್ನು ಮರಣವಿರುವದಿಲ್ಲ, ಇನ್ನು ದುಃಖವಾಗಲಿ ಗೋಳಾಟವಾಗಲಿ ಕಷ್ಟವಾಗಲಿ ಇರುವದಿಲ್ಲ; ಮೊದಲಿದ್ದದ್ದೆಲ್ಲಾ ಇಲ್ಲದೆ ಹೋಯಿತು ಎಂದು ಹೇಳಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವರ ಕಣ್ಣೀರನ್ನೆಲ್ಲಾ ಆತನೇ ಒರಸಿಬಿಡುವನು. ಇನ್ನು ಮರಣವಿರುವುದಿಲ್ಲ. ಇನ್ನು ದುಃಖವಾಗಲಿ, ಗೋಳಾಟವಾಗಲಿ, ಕಷ್ಟವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು” ಎಂದು ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಒರಸುವನಾತ ಅವರ ಕಂಬನಿಯನೆಲ್ಲಾ ಇರದಿನ್ನು ಸಾವುನೋವು ಅವರಿಗೆಲ್ಲಾ; ಇರವು ಶೋಕ ದುಃಖಗಳಾವುವು ಮರೆಯಾಗಿ ಹೋದವು ಹಿಂದಿನದೆಲ್ಲವು.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ದೇವರು ಅವರ ಕಣ್ಣೀರನ್ನೆಲ್ಲ ಒರಸಿ ಬಿಡುವನು. ಅಲ್ಲಿ ಇನ್ನು ಮರಣವಿರುವುದಿಲ್ಲ, ದುಃಖವಿರುವುದಿಲ್ಲ, ಗೋಳಾಟವಿರುವುದಿಲ್ಲ ಮತ್ತು ನೋವಿರುವುದಿಲ್ಲ. ಹಳೆಯ ಮಾರ್ಗಗಳೆಲ್ಲ ಹೋಗಿಬಿಟ್ಟವು” ಎಂದು ಹೇಳಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ‘ದೇವರು ಅವರ ಕಣ್ಣೀರನ್ನೆಲ್ಲಾ ಒರೆಸಿಬಿಡುವರು. ಇನ್ನು ಮರಣವಿರುವುದಿಲ್ಲ.’ ಇನ್ನು ದುಃಖವಾಗಲಿ, ಗೋಳಾಟವಾಗಲಿ, ನೋವಾಗಲಿ ಇರುವುದಿಲ್ಲ. ಮೊದಲಿದ್ದದ್ದೆಲ್ಲಾ ಇಲ್ಲದಂತಾಯಿತು!” ಎಂದು ಹೇಳಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್4 ತೊ ತೆಂಚ್ಯಾ ಡೊಳ್ಯಾನಿತ್ಲಿ ದುಕ್ಕಾ ಪುಸುನ್ ಕಾಡ್ತಾ. ಅನಿಫಿಡೆ ಮರಾನ್ ಹೊಂವ್ದಿತ್, ಕಸ್ಟ್ ಹೊಂವ್ದಿತ್ ರಡ್ತಲೆ ಹೊಂವ್ದಿತ್, ದುಕ್ತಲೆ ಹೊಂವ್ದಿತ್ ರ್‍ಹಾಯ್ನಾ, ಅದ್ದಿ ಹೊತ್ತೆ ಸಗ್ಳೆ ನಾಪತ್ತೊ ಹೊವ್ನ್ ಜಾತಾ”. ಅಧ್ಯಾಯವನ್ನು ನೋಡಿ |