Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:12 - ಕನ್ನಡ ಸತ್ಯವೇದವು J.V. (BSI)

12 ಇಗೋ, ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ನಡತೆಯ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನ ಕೈಯಲ್ಲಿ ಅದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 “ನೋಡು! ನಾನು ಬೇಗನೇ ಬರುತ್ತೇನೆ. ನಾನು ಪ್ರತಿಯೊಬ್ಬನಿಗೂ ಅವನವನ ನಡತೆಗೆ ತಕ್ಕಂತೆ ಕೊಡತಕ್ಕ ಪ್ರತಿಫಲವು ನನ್ನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 “ಯೇಸುಸ್ವಾಮಿ ನುಡಿಯುವುದನ್ನು ಕೇಳು: ‘ಇಗೋ, ನಾನು ಬೇಗನೆ ಬರುತ್ತೇನೆ. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೆ ತಕ್ಕಂತೆ ಕೊಡಲಾಗುವ ಪ್ರತಿಫಲವು ನನ್ನ ಕೈಯಲ್ಲೇ ಇದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 “ಕೇಳು! ನಾನು ಬೇಗನೆ ಬರುತ್ತೇನೆ! ನನ್ನೊಂದಿಗೆ ಪ್ರತಿಫಲವನ್ನು ತರುತ್ತೇನೆ. ಪ್ರತಿಯೊಬ್ಬ ವ್ಯಕ್ತಿಗೂ ಅವನು ಮಾಡಿದುದಕ್ಕೆ ತಕ್ಕ ಪ್ರತಿಫಲವನ್ನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಆಗ ಕರ್ತ ಯೇಸು, “ಇಗೋ, ನಾನು ಬೇಗ ಬರುತ್ತೇನೆ. ಪ್ರತಿಯೊಬ್ಬರಿಗೂ ಅವರವರ ಕೆಲಸಕ್ಕೆ ತಕ್ಕಂತೆ ಕೊಡುವ ಪ್ರತಿಫಲವು ನನ್ನಲ್ಲಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 “ಆಯ್ಕಾ!” ಜೆಜು ಮನ್ತಾ, “ಮಿಯಾ ಲಗ್ಗುನಾಚ್ ಯೆವ್ಲಾ! ಮಿಯಾ ಸಗ್ಳ್ಯಾಕ್ನಿ ತೆಂಚ್ಯಾ ತೆಂಚ್ಯಾ ಕಾಮಾಂಚ್ಯಾ ಪರ್ಕಾರ್ ತೆಂಕಾ ದಿತಲೆ ಭೊಮಾನ್ ಘೆವ್ನ್ ಯೆತಾ”.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:12
19 ತಿಳಿವುಗಳ ಹೋಲಿಕೆ  

ಮನುಷ್ಯಕುಮಾರನು ತನ್ನ ತಂದೆಯ ಪ್ರಭಾವದೊಡನೆ ತನ್ನ ದೂತರ ಸಮೇತವಾಗಿ ಬರುವನು; ಆವಾಗ ಆತನು ಒಬ್ಬೊಬ್ಬನಿಗೆ ಅವನವನ ನಡತೆಗೆ ತಕ್ಕ ಫಲವನ್ನು ಕೊಡುವನು.


ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನೊಂದಿಗಿದೆ, ಆತನು ಅನುಗ್ರಹಿಸುವ ಪ್ರತಿಫಲವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ ಎಂಬದಾಗಿ ಯೆಹೋವನು ಭೂವಿುಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ.


ಆಹಾ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು; ಇಗೋ, ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದಿದೆ.


ಒಬ್ಬನು ಆ ಅಸ್ತಿವಾರದ ಮೇಲೆ ಕಟ್ಟಿದ್ದು ಉಳಿದರೆ ಅವನಿಗೆ ಸಂಬಳ ಬರುವದು.


ನೆಡುವವನೂ ನೀರು ಹೊಯ್ಯುವವನೂ ಒಂದೇ ಆಗಿದ್ದಾರೆ. ಆದರೂ ಪ್ರತಿಯೊಬ್ಬನಿಗೆ ಅವನವನ ಕಷ್ಟಕ್ಕೆ ತಕ್ಕಹಾಗೆ ಕೂಲಿಯು ದೊರೆಯುವದು.


ಇಗೋ, ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಯ ಮಾತುಗಳನ್ನು ಕೈಕೊಂಡು ನಡೆಯುವವನು ಧನ್ಯನು ಎಂದು ಹೇಳಿದನು.


ಹೀಗಿರಲಾಗಿ ನಮ್ಮಲ್ಲಿ ಪ್ರತಿಯೊಬ್ಬನು ತನ್ನ ತನ್ನ ವಿಷಯವಾಗಿ ದೇವರ ಮುಂದೆ ಉತ್ತರಕೊಡಬೇಕು.


ಜನಾಂಗಗಳು ಕೋಪಿಸಿಕೊಂಡವು, ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯ ಬಂದದೆ; ನೀನು ನಿನ್ನ ದಾಸರಾದ ಪ್ರವಾದಿಗಳಿಗೂ ದೇವಜನರಿಗೂ ನಿನ್ನ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು ಲೋಕನಾಶಕರನ್ನು ನಾಶಮಾಡುವಿ ಎಂದು ಆತನನ್ನು ಆರಾಧಿಸಿದರು.


ಇದಲ್ಲದೆ ಸತ್ತವರಾದ ದೊಡ್ಡವರೂ ಚಿಕ್ಕವರೂ ಸಿಂಹಾಸನದ ಮುಂದೆ ನಿಂತಿರುವದನ್ನು ಕಂಡೆನು. ಆಗ ಪುಸ್ತಕಗಳು ತೆರೆಯಲ್ಪಟ್ಟವು; ಮತ್ತು ಜೀವಬಾಧ್ಯರ ಪಟ್ಟಿ ಎಂಬ ಇನ್ನೊಂದು ಪುಸ್ತಕವು ತೆರೆಯಲ್ಪಟ್ಟಿತು; ಆ ಪುಸ್ತಕಗಳಲ್ಲಿ ಬರೆದಿದ್ದ ಸಂಗತಿಗಳ ಆಧಾರದಿಂದ ಅವರವರ ಕೃತ್ಯಗಳ ಪ್ರಕಾರ ಸತ್ತವರಿಗೆ ನ್ಯಾಯತೀರ್ಪಾಯಿತು.


ಈ ವಿಷಯಗಳಲ್ಲಿ ಸಾಕ್ಷಿಹೇಳುವವನು - ನಿಜವಾಗಿ ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.


ಯೆಹೋವನ ಮಹಾದಿನವು ಹತ್ತಿರವಾಯಿತು, ಸಮೀಪಿಸಿತು, ಬಹು ತ್ವರೆಯಾಗಿ ಬರುತ್ತಿದೆ; ಆಹಾ, ಕಿವಿಗೊಡಿರಿ, ಯೆಹೋವನ ದಿನವೇ ಬಂದಿತು; ಇಗೋ, ಅಲ್ಲಿ ಒಬ್ಬ ಶೂರನು ಘೋರವಾಗಿ ಗೋಳಾಡುತ್ತಿದ್ದಾನೆ!


ಆತನು ಮನುಷ್ಯನಿಗೆ ಅವನ ಕೃತ್ಯದ ಫಲವನ್ನು ತೀರಿಸಿಬಿಡುವನು, ಪ್ರತಿಯೊಬ್ಬನು ತನ್ನ ನಡತೆಗೆ ತಕ್ಕಂತೆ ಅನುಭವಿಸ ಮಾಡುವನು.


ಅವರ ದುಷ್ಕೃತ್ಯಗಳಿಗೂ ಕೆಡುಕುಗಳಿಗೂ ಸರಿಯಾದ ಪ್ರತಿಫಲವನ್ನು ಅವರಿಗೆ ಕೊಡು; ಅವರು ಮತ್ತೊಬ್ಬರಿಗೆ ಮಾಡಿದಂತೆಯೇ ಅವರಿಗೆ ಮಾಡು.


ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು ಹೃದಯವನ್ನು ಪರೀಕ್ಷಿಸುವವನೂ ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ.


ಅವಳ ಮಕ್ಕಳನ್ನು ಕೊಂದೇ ಕೊಲ್ಲುವೆನು; ಆಗ ನಾನು ಮನುಷ್ಯರ ಅಂತರಿಂದ್ರಿಯವನ್ನೂ ಹೃದಯವನ್ನೂ ಪರೀಕ್ಷಿಸುವವನಾಗಿದ್ದೇನೆಂಬದು ಎಲ್ಲಾ ಸಭೆಗಳಿಗೆ ಗೊತ್ತಾಗುವದು. ನಿಮ್ಮಲ್ಲಿ ಪ್ರತಿಯೊಬ್ಬನಿಗೆ ಅವನವನ ಕೃತ್ಯಗಳಿಗೆ ತಕ್ಕ ಹಾಗೆ ಪ್ರತಿಫಲ ಕೊಡುವೆನು.


ಬೇಗನೆ ಬರುತ್ತೇನೆ; ನಿನಗಿರುವದನ್ನು ಹಿಡಿದುಕೊಂಡಿರು; ನಿನ್ನ ಜಯಮಾಲೆಯನ್ನು ಯಾರೂ ಅಪಹರಿಸಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು