Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:17 - ಕನ್ನಡ ಸತ್ಯವೇದವು J.V. (BSI)

17 ಆತ್ಮನೂ ಮದಲಗಿತ್ತಿಯೂ - ಬಾ ಅನ್ನುತ್ತಾರೆ. ಕೇಳುವವನು - ಬಾ ಅನ್ನಲಿ. ಬಾಯಾರಿದವನು ಬರಲಿ. ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ತೆಗೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಆತ್ಮನು ಮತ್ತು ಮದಲಗಿತ್ತಿಯು, “ಬಾ” ಎನ್ನುತ್ತಾರೆ. ಕೇಳುವವನು, “ಬಾ” ಎನ್ನಲಿ. ಬಾಯಾರಿದವನು ಬರಲಿ, ಇಷ್ಟವುಳ್ಳವನು ಜೀವಜಲವನ್ನು ಕ್ರಯವಿಲ್ಲದೆ ಉಚಿತವಾಗಿ ತೆಗೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ದೇವರಾತ್ಮ ಹಾಗು ಮದುವಣಗಿತ್ತಿ, ‘ಬಾ’ ಎಂದು ಆಹ್ವಾನಿಸುತ್ತಾರೆ. ಇದನ್ನು ಕೇಳಿಸಿಕೊಳ್ಳುವ ಪ್ರತಿಯೊಬ್ಬನೂ ‘ಬಾ’ ಎಂದು ಹೇಳಲಿ. ಬಾಯಾರಿದವನು ಬರಲಿ; ಇಷ್ಟವುಳ್ಳವನು ಜೀವಜಲವನ್ನು ಉಚಿತವಾಗಿ ಪಡೆಯಲಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆತ್ಮನೂ ಮದುಮಗಳೂ, “ಬಾ!” ಎನ್ನುತ್ತಾರೆ. ಇದನ್ನು ಕೇಳುವ ಪ್ರತಿಯೊಬ್ಬ ವ್ಯಕ್ತಿಯೂ, “ಬಾ!” ಎಂದು ಹೇಳಬೇಕು. ಬಾಯಾರಿದವನು ನನ್ನ ಬಳಿಗೆ ಬರಲಿ; ಅವನಿಗೆ ಇಷ್ಟವಿದ್ದರೆ ಜೀವಜಲವನ್ನು ಉಚಿತವಾಗಿ ಪಡೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ದೇವರಾತ್ಮ ಹಾಗು ವಧುವೂ “ಬಾ” ಎನ್ನುತ್ತಾರೆ, ಕೇಳುವವರು, “ಬಾ” ಎನ್ನಲಿ. ಬಾಯಾರಿದವರು ಬರಲಿ, ಇಷ್ಟವುಳ್ಳವರು ಜೀವಜಲವನ್ನು ಉಚಿತವಾಗಿ ತೆಗೆದುಕೊಳ್ಳಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಪವಿತ್ರ್ ಆತ್ಮೊ ಅನಿ ನ್ಹವ್ರಿ, “ಯೆ!” ಮನಾ. ಹೆ ಸಗ್ಳೆ ಆಯ್ಕಲ್ಲೊ ಹರಿಎಕ್ಲೊ “ಯೆ!” ಮನುಂದಿ. ಜೆ ಕೊನ್ ಸೊಸೆನ್ ಹಾಸಿ; ಜೆ ಕೊನಾಕ್ ಜಿವ್ ದಿತಲೆ ಪಾನಿ ಪಾಜೆ ತೆನಿ ಯೆವಾ ಅನಿ ಫುಕೊಟ್ ಘೆವಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:17
29 ತಿಳಿವುಗಳ ಹೋಲಿಕೆ  

ನಾನು ಕೊಡುವ ನೀರನ್ನು ಕುಡಿದವನಿಗೆ ಎಂದಿಗೂ ನೀರಡಿಕೆಯಾಗುವದಿಲ್ಲ; ನಾನು ಅವನಿಗೆ ಕೊಡುವ ನೀರು ಅವನಲ್ಲಿ ಉಕ್ಕುವ ಒರತೆಯಾಗಿದ್ದು ನಿತ್ಯಜೀವವನ್ನು ಉಂಟುಮಾಡುವದು ಎಂದು ಹೇಳಿದನು.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಎಲ್ಲಾ ನೆರವೇರಿತು; ನಾನೇ ಆದಿಯೂ ಅಂತವೂ ಪ್ರಾರಂಭವೂ ಸಮಾಪ್ತಿಯೂ ಆಗಿದ್ದೇನೆ. ದಾಹವುಳ್ಳವನಿಗೆ ಜೀವಜಲದ ಬುಗ್ಗೆಯಲ್ಲಿ ಕ್ರಯವಿಲ್ಲದೆ ಕುಡಿಯುವದಕ್ಕೆ ಕೊಡುವೆನು.


ಆ ಜಾತ್ರೆಯ ಮಹಾದಿವಸವಾದ ಕಡೇ ದಿನದಲ್ಲಿ ಯೇಸು ನಿಂತುಕೊಂಡು - ಯಾವನಿಗಾದರೂ ನೀರಡಿಕೆಯಾಗಿದ್ದರೆ ಅವನು ನನ್ನ ಬಳಿಗೆ ಬಂದು ಕುಡಿಯಲಿ.


ಮತ್ತು ರಕ್ಷಣೆಯೆಂಬ ಬಾವಿಗಳಿಂದ ನೀರನ್ನು ಉಲ್ಲಾಸದೊಡನೆ ಸೇದುವಿರಿ.


ಅದಕ್ಕೆ ಯೇಸು - ದೇವರು ಕೊಡುವ ವರವೇನೆಂಬದೂ ಕುಡಿಯುವದಕ್ಕೆ ನೀರುಕೊಡು ಎಂದು ನಿನಗೆ ಹೇಳಿದವನು ಯಾರೆಂಬದೂ ನಿನಗೆ ತಿಳಿದಿದ್ದರೆ ನೀನು ಅವನನ್ನು ಬೇಡಿಕೊಳ್ಳುತ್ತಿದ್ದಿ, ಅವನು ನಿನಗೆ ಜೀವಕರವಾದ ನೀರನ್ನು ಕೊಡುತ್ತಿದ್ದನು ಅಂದನು.


ಯೆಹೋವನು ಸರ್ವೋತ್ತಮನೆಂದು ಅನುಭವದಿಂದ ತಿಳಿದುಕೊಳ್ಳಿರಿ; ಆತನನ್ನು ಆಶ್ರಯಿಸಿಕೊಂಡವರು ಎಷ್ಟೋ ಧನ್ಯರು.


ಯಾಕೋಬನ ಮನೆತನದವರೇ, ಬನ್ನಿರಿ, ಯೆಹೋವನ ಜ್ಞಾನಪ್ರಕಾಶದಲ್ಲಿ ನಡೆಯುವ!


ಆಮೇಲೆ ಅವನು ಸ್ಫಟಿಕದಂತೆ ಪ್ರಕಾಶಮಾನವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು.


ಕಡೇ ಏಳು ಉಪದ್ರವಗಳಿಂದ ತುಂಬಿದ ಏಳು ಪಾತ್ರೆಗಳನ್ನು ಹಿಡಿದಿದ್ದ ಏಳು ಮಂದಿ ದೇವದೂತರಲ್ಲಿ ಒಬ್ಬನು ಬಂದು ನನ್ನ ಸಂಗಡ ಮಾತಾಡುತ್ತಾ - ಬಾ, ಯಜ್ಞದ ಕುರಿಯಾದಾತನಿಗೆ ಹೆಂಡತಿಯಾಗತಕ್ಕ ಮದಲಗಿತ್ತಿಯನ್ನು ನಿನಗೆ ತೋರಿಸುವೆನು ಎಂದು ಹೇಳಿ


ಇದಲ್ಲದೆ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ಪರಲೋಕದಿಂದ ದೇವರ ಬಳಿಯಿಂದ ಇಳಿದುಬರುವದನ್ನು ಕಂಡೆನು; ಅದು ತನ್ನ ಗಂಡನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.


ಅವರು ನೀತಿವಂತರೆಂದು ನಿರ್ಣಯ ಹೊಂದುವದು ದೇವರ ಉಚಿತಾರ್ಥವಾದ ಕೃಪೆಯಿಂದಲೇ ಕ್ರಿಸ್ತಯೇಸುವಿನಿಂದಾದ ಪಾಪ ವಿಮೋಚನೆಯ ಮೂಲಕವಾಗಿ ಆಗುವದು.


ಹೊರಟುಬಂದ ಬಹು ಜನಾಂಗದವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ, ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆ ಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ಯೇಸುವೆಂಬ ನಾನು ನನ್ನ ಸಭೆಗಳ ಪ್ರಯೋಜನಾರ್ಥವಾಗಿ ಈ ಸಂಗತಿಗಳ ವಿಷಯದಲ್ಲಿ ನಿಮಗೆ ಸಾಕ್ಷಿಹೇಳುವದಕ್ಕೋಸ್ಕರ ನನ್ನ ದೂತನನ್ನು ಕಳುಹಿಸಿಕೊಟ್ಟೆನು. ನಾನು ದಾವೀದವಂಶವೆಂಬ ಬುಡದಿಂದ ಹುಟ್ಟಿದ ಚಿಗುರೂ ಅವನ ಸಂತತಿಯೂ ಉದಯಸೂಚಕವಾದ ಪ್ರಕಾಶವುಳ್ಳ ನಕ್ಷತ್ರವೂ ಆಗಿದ್ದೇನೆ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ - ಬನ್ನಿರಿ, ಯೆಹೋವನನ್ನು ಆಶ್ರಯಿಸಿ ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ ಎಂದು ಹೇಳುವರು.


ನಾವು ಪ್ರಾಪಂಚಿಕ ಆತ್ಮವನ್ನು ಹೊಂದದೆ ದೇವರು ನಮಗೆ ದಯಪಾಲಿಸಿರುವ ಕೃಪಾವರಗಳನ್ನು ತಿಳುಕೊಳ್ಳುವದಕ್ಕಾಗಿ ದೇವರಿಂದ ಬಂದ ಆತ್ಮವನ್ನೇ ಹೊಂದಿದೆವು.


ಹೊರಟುಬಂದ ಬಹು ದೇಶಗಳವರು - ಬನ್ನಿರಿ, ಯೆಹೋವನ ಪರ್ವತಕ್ಕೆ, ಯಾಕೋಬ್ಯರ ದೇವರ ಮಂದಿರಕ್ಕೆ ಹೋಗೋಣ! ಆತನು ತನ್ನ ಮಾರ್ಗಗಳ ವಿಷಯವಾಗಿ ನಮಗೆ ಬೋಧನೆಮಾಡುವನು, ನಾವು ಆತನ ದಾರಿಗಳಲ್ಲಿ ನಡೆಯುವೆವು ಎಂದು ಹೇಳುವರು. ಏಕಂದರೆ ಚೀಯೋನಿನಿಂದ ಧರ್ಮೋಪದೇಶವೂ ಯೆರೂಸಲೇವಿುನಿಂದ ಯೆಹೋವನ ವಾಕ್ಯವೂ ಹೊರಡುವವು.


ಅಲ್ಲಿ ಒಬ್ಬನಿದ್ದಾನೆ, ನಾನು ಇದುವರೆಗೆ ಮಾಡಿದ್ದನ್ನೆಲ್ಲಾ ನನಗೆ ಹೇಳಿದನು; ಬಂದು ಅವನನ್ನು ನೋಡಿರಿ; ಬರತಕ್ಕ ಕ್ರಿಸ್ತನು ಅವನೇ ಏನೋ? ಎಂದು ಹೇಳಲು


ಆಮೇಲೆ ಅವನು ನನ್ನನ್ನು ದೇವಸ್ಥಾನದ ಬಾಗಿಲಿಗೆ ಪುನಃ ಕರತಂದನು; ಆಹಾ, ದೇವಸ್ಥಾನದ ಹೊಸ್ತಲ ಕೆಳಗಿನಿಂದ ನೀರು ಹೊರಟು ಮೂಡಲಿಗೆ ಹರಿಯುತ್ತಿತ್ತು (ದೇವಸ್ಥಾನವು ಪೂರ್ವಾಭಿಮುಖವಷ್ಟೆ); ಆ ನೀರು ದೇವಸ್ಥಾನದ ಬಲಗಡೆ ಕೆಳಗಿನಿಂದ ಹೊರಟು ಯಜ್ಞವೇದಿಯ ದಕ್ಷಿಣದಲ್ಲಿ ಹರಿಯುತ್ತಿತ್ತು.


ಆ ಹೆಂಗಸು ಆತನಿಗೆ - ಅಯ್ಯಾ, ಸೇದುವದಕ್ಕೆ ನಿನ್ನಲ್ಲಿ ಏನೂ ಇಲ್ಲ, ಬಾವಿ ಆಳವಾಗಿದೆ; ಹೀಗಿರುವಾಗ ಆ ಜೀವಕರವಾದ ನೀರು ನಿನಗೆ ಎಲ್ಲಿಂದ ಬಂತು?


ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.


ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.


ಆ ಇಬ್ಬರು ಶಿಷ್ಯರು ಅದನ್ನು ಕೇಳಿ ಯೇಸುವಿನ ಹಿಂದೆ ಹೋದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು