Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:19 - ಕನ್ನಡ ಸತ್ಯವೇದವು J.V. (BSI)

19 ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 ಯಾವನಾದರೂ ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳಲ್ಲಿ ಏನನ್ನಾದರೂ ತೆಗೆದುಹಾಕಿದರೆ, ಈ ಪುಸ್ತಕದಲ್ಲಿ ವಿವರಿಸಿರುವ ಜೀವವೃಕ್ಷದಲ್ಲಿಯೂ ಪವಿತ್ರನಗರದಲ್ಲಿಯೂ ಅವನಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ಈ ಪ್ರವಾದನೆಯ ಪುಸ್ತಕದಿಂದ ಯಾರಾದರೂ ಏನನ್ನಾದರೂ ತೆಗೆದುಹಾಕಿದರೆ, ದೇವರು ಈ ಪುಸ್ತಕದಲ್ಲಿ ಬರೆದಿರುವ ಪವಿತ್ರಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ತೆಗೆದುಹಾಕುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ಯಾರಾದರೂ ಈ ಪ್ರವಾದನಾ ಗ್ರಂಥದಲ್ಲಿರುವ ಮಾತುಗಳನ್ನು ತೆಗೆದುಬಿಟ್ಟರೆ, ಈ ಗ್ರಂಥದಲ್ಲಿ ಬರೆದಿರುವ ಜೀವವೃಕ್ಷದಲ್ಲಿಯೂ ಪವಿತ್ರ ನಗರದಲ್ಲಿಯೂ ಅವರಿಗೆ ಸಿಗುವ ಪಾಲನ್ನು ದೇವರು ತೆಗೆದುಬಿಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

19 ಅನಿ ಕೊನ್‍ಬಿ ಹ್ಯಾ ಪುಸ್ತಕಾತ್ ಪ್ರವಾದ್ ಕರುನ್ ಸಾಂಗಲ್ಲ್ಯಾ ಗೊಸ್ಟಿಯಾನಿತ್ಲೆ ಕಾಯ್ಬಿ ಕಾಡ್ಲ್ಯಾನ್ ತರ್, ದೆವ್ ತೆಂಚೊ ಹ್ಯಾ ಪುಸ್ತಕಾತ್ ಸಾಂಗಲ್ಲ್ಯಾ ಪವಿತ್ರ್ ಶಾರಾಚೊ ಅನಿ ಜಿವ್ ದಿತಲ್ಯಾ ಝಾಡಾಚೆ ಫಳ್ ಖಾತಲೊ ಭಾಗ್ ಕಾಡುನ್ ಘೆತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:19
24 ತಿಳಿವುಗಳ ಹೋಲಿಕೆ  

ನಿಮ್ಮ ದೇವರಾದ ಯೆಹೋವನು ಕೊಟ್ಟ ಆಜ್ಞೆಗಳನ್ನೇ ನಾನು ನಿಮಗೆ ತಿಳಿಸುತ್ತಾ ಇದ್ದೇನೆ. ಈ ಮಾತುಗಳನ್ನು ನೀವು ಕೈಕೊಳ್ಳಬೇಕೇ ಹೊರತು ಅವುಗಳಿಗೆ ಏನೂ ಕೂಡಿಸಬಾರದು, ಅವುಗಳಿಂದ ಏನೂ ತೆಗೆದುಬಿಡಬಾರದು.


ಅಯ್ಯೋ ಧರ್ಮೋಪದೇಶಕರೇ, ಜ್ಞಾನಕ್ಕೆ ಸಾಧನವಾದ ಬೀಗದ ಕೈಯನ್ನು ತೆಗೆದುಬಿಟ್ಟಿರಿ. ನೀವೂ ಒಳಕ್ಕೆ ಹೋಗಲಿಲ್ಲ; ಒಳಕ್ಕೆ ಹೋಗುತ್ತಿರುವವರಿಗೂ ಅಡ್ಡಿಮಾಡಿದಿರಿ ಅಂದನು.


ಆ ನದಿಯ ಉಭಯ ಪಾರ್ಶ್ವಗಳಲ್ಲಿ ಜೀವವೃಕ್ಷವಿತ್ತು; ಅದು ತಿಂಗಳು ತಿಂಗಳಿಗೆ ಫಲವನ್ನು ಫಲಿಸುತ್ತಾ ಹನ್ನೆರಡು ತರದ ಫಲಗಳನ್ನು ಕೊಡುತ್ತದೆ. ಆ ಮರದ ಎಲೆಗಳು ಜನಾಂಗದವರನ್ನು ವಾಸಿಮಾಡುವದಕ್ಕೆ ಪ್ರಯೋಜನವಾಗಿವೆ.


ಇದಲ್ಲದೆ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ಪರಲೋಕದಿಂದ ದೇವರ ಬಳಿಯಿಂದ ಇಳಿದುಬರುವದನ್ನು ಕಂಡೆನು; ಅದು ತನ್ನ ಗಂಡನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.


ಈ ಪ್ರವಾದನವಾಕ್ಯಗಳನ್ನು ಓದುವಂಥವನೂ ಕೇಳುವಂಥವರೂ ಈ ಪ್ರವಾದನೆಯಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಅವು ನೆರವೇರುವ ಸಮಯವು ಸಮೀಪವಾಗಿದೆ.


ಜೀವಿತರ ಪಟ್ಟಿಯಿಂದ ಅವರ ಹೆಸರು ತೆಗೆಯಲ್ಪಡಲಿ; ಸದ್ಭಕ್ತರ ಹೆಸರಿನ ಸಂಗಡ ಅವರದು ಬರೆಯಲ್ಪಡದಿರಲಿ.


ಇಗೋ, ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ನಡತೆಯ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನ ಕೈಯಲ್ಲಿ ಅದೆ.


ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.


ಪರಲೋಕದಿಂದ ಒಂದು ಶಬ್ದವು ನನಗೆ ಕೇಳಿಸಿತು. ಅದು - ಇಂದಿನಿಂದ ಕರ್ತನ ಭಕ್ತರಾಗಿ ಸಾಯುವವರು ಧನ್ಯರು ಎಂಬದಾಗಿ ಬರೆ ಎಂದು ನನಗೆ ಹೇಳಿತು. ಅದಕ್ಕೆ ಆತ್ಮನು - ಹೌದು, ಅವರು ಧನ್ಯರೇ; ಅವರ ಕಷ್ಟ ತೀರಿತು, ಅವರಿಗೆ ವಿಶ್ರಾಂತಿಯಾಗುವದು; ಅವರ ಸುಕೃತ್ಯಗಳು ಅವರೊಡನೆ ಬರುವವು ಎಂದು ಹೇಳುತ್ತಾನೆ.


ಜಗದುತ್ಪತ್ತಿಗೆ ಮೊದಲೇ ಕೊಯ್ಯಲ್ಪಟ್ಟ ಕುರಿಯಾದಾತನ ಬಳಿಯಲ್ಲಿರುವ ಜೀವಬಾಧ್ಯರ ಪಟ್ಟಿಯಲ್ಲಿ ಯಾರಾರ ಹೆಸರುಗಳು ಬರೆದಿರುವದಿಲ್ಲವೋ ಆ ಭೂನಿವಾಸಿಗಳೆಲ್ಲರೂ ಅದಕ್ಕೆ ನಮಸ್ಕಾರ ಮಾಡುವರು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ಯಾವನು ಜಯಶಾಲಿಯಾಗಿದ್ದು ನನಗೆ ಮೆಚ್ಚಿಕೆಯಾದ ಕೃತ್ಯಗಳನ್ನು ಕಡೇವರೆಗೂ ನಡಿಸುತ್ತಾನೋ ಅವನಿಗೆ ನಾನು ನನ್ನ ತಂದೆಯಿಂದ ಹೊಂದಿದ ಅಧಿಕಾರದಂತೆ ಜನಾಂಗಗಳ ಮೇಲೆ ಅಧಿಕಾರವನ್ನು ಕೊಡುವೆನು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ಅದಕ್ಕೆ ಯೆಹೋವನು - ಯಾರಾರು ನನ್ನ ಮಾತನ್ನು ಮೀರಿ ಪಾಪಮಾಡಿದ್ದಾರೋ ಅವರ ಹೆಸರುಗಳನ್ನೇ ನನ್ನ ಬಳಿಯಲ್ಲಿರುವ ಪಟ್ಟಿಯಿಂದ ನಾನು ಅಳಿಸಿಬಿಡುವೆನು.


ನಾನು ನಿಮಗೆ ಆಜ್ಞಾಪಿಸುವದನ್ನೆಲ್ಲಾ ನೀವು ಅನುಸರಿಸಲೇಬೇಕು; ಅದಕ್ಕೆ ಏನೂ ಕೂಡಿಸಬಾರದು; ಅದರಿಂದ ಏನೂ ತೆಗೆದುಬಿಡಬಾರದು.


ಆತನ ಮಾತುಗಳಿಗೆ ಯಾವದನ್ನೂ ಸೇರಿಸಬೇಡ; ಆತನು ನಿನ್ನನ್ನು ಖಂಡಿಸುವಾಗ ನೀನು ಸುಳ್ಳುಗಾರನೆಂದು ತೋರಿಬಂದೀಯೆ.


ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಅದು ಅನ್ಯಜನರಿಗಾಗಿ ಬಿಟ್ಟದೆ; ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಇಗೋ, ಎಲ್ಲವನ್ನು ಹೊಸದುಮಾಡುತ್ತೇನೆ ಅಂದನು. ಮತ್ತು ಒಬ್ಬನು ನನಗೆ - ಇದನ್ನು ಬರೆ; ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ ಎಂದು ಹೇಳಿದನು.


ಇಗೋ, ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಯ ಮಾತುಗಳನ್ನು ಕೈಕೊಂಡು ನಡೆಯುವವನು ಧನ್ಯನು ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು