5 ಅಲ್ಲಿ ರಾತ್ರಿಯೆಂಬುದೇ ಇರುವುದಿಲ್ಲ. ಜನರಿಗೆ ದೀಪದ ಬೆಳಕಾಗಲಿ ಸೂರ್ಯನ ಬೆಳಕಾಗಲಿ ಬೇಕಾಗುವುದಿಲ್ಲ. ಪ್ರಭುವಾದ ದೇವರೇ ಅವರಿಗೆ ಬೆಳಕನ್ನು ನೀಡುತ್ತಾನೆ. ಅವರು ಯುಗಯುಗಾಂತರಗಳಲ್ಲಿ ರಾಜರುಗಳಂತೆ ಆಳುತ್ತಾರೆ.
ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.
ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.
ಒಬ್ಬನು ಮಾಡಿದ ಅಪರಾಧದಿಂದ ಮರಣವು ಉಂಟಾಗಿ ಆ ಒಬ್ಬನ ದೆಸೆಯಿಂದಲೇ ಆಳುವದಾದರೆ ದೇವರು ಧಾರಾಳವಾಗಿ ಅನುಗ್ರಹಿಸುವ ಕೃಪಾದಾನವನ್ನೂ ನೀತಿಯೆಂಬ ವರವನ್ನೂ ಹೊಂದಿದವರು ಯೇಸು ಕ್ರಿಸ್ತನೆಂಬ ಈ ಒಬ್ಬ ಪುರುಷನ ಮೂಲಕ ಜೀವಭರಿತರಾಗಿ ಆಳುವದು ಮತ್ತೂ ನಿಶ್ಚಯವಲ್ಲವೇ.
ಏಳನೆಯ ದೇವದೂತನು ತುತೂರಿಯನ್ನೂದಿದನು. ಆಗ ಪರಲೋಕದಲ್ಲಿ ಮಹಾ ಶಬ್ದಗಳುಂಟಾಗಿ - ಲೋಕದ ರಾಜ್ಯಾಧಿಕಾರವು ನಮ್ಮ ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ಉಂಟಾಯಿತು; ಆತನು ಯುಗಯುಗಾಂತರಗಳಲ್ಲಿಯೂ ರಾಜ್ಯವನ್ನಾಳುವನು ಎಂದು ಹೇಳಿದವು.
ದೀಪದ ಬೆಳಕು ನಿನ್ನಲ್ಲಿ ಇನ್ನೆಂದಿಗೂ ಕಾಣಿಸುವದಿಲ್ಲ. ವಧೂವರರ ಸ್ವರವು ಇನ್ನೆಂದಿಗೂ ಕೇಳಿಸುವದಿಲ್ಲ. ನಿನ್ನ ವರ್ತಕರು ಭೂವಿುಯ ಪ್ರಭುಗಳಾಗಿದ್ದರಲ್ಲವೇ. ನಿನ್ನ ಮಾಟದಿಂದ ಎಲ್ಲಾ ಜನಾಂಗದವರು ಮರುಳಾದರು.
ಮತ್ತು ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇವಿುನೊಳಗೆ ಆಳುವನಷ್ಟೆ. ಆತನ [ಪರಿವಾರದ] ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವದು.
ಇದಲ್ಲದೆ ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ ಅವರ ಪೆಟ್ಟಿನ ಗಾಯವನ್ನು ಗುಣಮಾಡುವ ದಿವಸದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನಂತಿರುವದು, ಮತ್ತು ಸೂರ್ಯನ ಬೆಳಕು ಏಳರಷ್ಟು ಹೆಚ್ಚಿ ಏಳು ದಿನಗಳ ಬೆಳಕಿನಂತಾಗುವದು.
ಯೇಸು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವಾಗ ನನ್ನನ್ನು ಹಿಂಬಾಲಿಸಿರುವ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.
ಪ್ರಥಮ ಪುನರುತ್ಥಾನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರುಷ ಆಳುವರು.