Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 22:7 - ಕನ್ನಡ ಸತ್ಯವೇದವು J.V. (BSI)

7 ಇಗೋ, ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನೆಯ ಮಾತುಗಳನ್ನು ಕೈಕೊಂಡು ನಡೆಯುವವನು ಧನ್ಯನು ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಇಗೋ ನೋಡು! ನಾನು ಅತಿಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾ ವಾಕ್ಯಗಳನ್ನು ಕೈಕೊಂಡು ನಡೆಯುವವನು ಧನ್ಯನು” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಯೇಸುಸ್ವಾಮಿ ನುಡಿಯುವುದನ್ನು ಕೇಳು : ‘ಇಗೋ ನಾನು ಬೇಗನೆ ಬರುತ್ತೇನೆ. ಈ ಪುಸ್ತಕದಲ್ಲಿ ಬರೆದಿರುವ ಪ್ರವಾದನಾವಾಕ್ಯಗಳನ್ನು ಕೈಗೊಂಡು ನಡೆಯುವವನು ಧನ್ಯನು!” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ‘ಕೇಳಿರಿ, ನಾನು ಬೇಗನೆ ಬರುತ್ತೇನೆ! ಈ ಪುಸ್ತಕದಲ್ಲಿರುವ ಪ್ರವಾದನೆಯ ವಾಕ್ಯಗಳಿಗೆ ವಿಧೇಯತೆಯಿಂದಿರುವವನು ಧನ್ಯನಾಗುತ್ತಾನೆ’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಆಗ, “ಇಗೋ, ಬೇಗನೆ ಬರುತ್ತೇನೆ! ಈ ಗ್ರಂಥದ ಪ್ರವಾದನಾ ವಾಕ್ಯಗಳನ್ನು ಕೈಗೊಂಡು ನಡೆಯುವವರು ಧನ್ಯರು,” ಎಂದು ಕರ್ತ ಆಗಿರುವ ಯೇಸು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 “ಆಯ್ಕ್! ಮಿಯಾ ಲಗ್ಗುನಾಚ್ ಯೆವ್ಲಾ! ಹ್ಯಾ ಪುಸ್ತಕಾತ್ಲ್ಯಾ ಪ್ರವಾದ್ ಕರುನ್ ಸಾಂಗಲ್ಲ್ಯಾ ಗೊಸ್ಟಿಯಾಕ್ನಿ ಜೆ ಕೊನ್ ಖಾಲ್ತಿ ಹೊವ್ನ್ ಚಲ್ತ್ಯಾತ್ ತೆನಿ ಸುಖಿ!”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 22:7
12 ತಿಳಿವುಗಳ ಹೋಲಿಕೆ  

ಬೇಗನೆ ಬರುತ್ತೇನೆ; ನಿನಗಿರುವದನ್ನು ಹಿಡಿದುಕೊಂಡಿರು; ನಿನ್ನ ಜಯಮಾಲೆಯನ್ನು ಯಾರೂ ಅಪಹರಿಸಬಾರದು.


ಈ ಪ್ರವಾದನವಾಕ್ಯಗಳನ್ನು ಓದುವಂಥವನೂ ಕೇಳುವಂಥವರೂ ಈ ಪ್ರವಾದನೆಯಲ್ಲಿ ಬರೆದಿರುವ ಮಾತುಗಳನ್ನು ಕೈಕೊಂಡು ನಡೆಯುವಂಥವರೂ ಧನ್ಯರು. ಅವು ನೆರವೇರುವ ಸಮಯವು ಸಮೀಪವಾಗಿದೆ.


ಈ ವಿಷಯಗಳಲ್ಲಿ ಸಾಕ್ಷಿಹೇಳುವವನು - ನಿಜವಾಗಿ ಬೇಗ ಬರುತ್ತೇನೆ ಎಂದು ಹೇಳುತ್ತಾನೆ. ಹಾಗೆಯೇ ಆಗಲಿ; ಕರ್ತನಾದ ಯೇಸುವೇ, ಬಾ.


ಇಗೋ, ಬೇಗ ಬರುತ್ತೇನೆ; ನಾನು ಪ್ರತಿಯೊಬ್ಬನಿಗೆ ಅವನವನ ನಡತೆಯ ಪ್ರಕಾರ ಕೊಡತಕ್ಕ ಪ್ರತಿಫಲವು ನನ್ನ ಕೈಯಲ್ಲಿ ಅದೆ.


(ಇಗೋ, ಕಳ್ಳನು ಬರುವಂತೆ ಬರುತ್ತೇನೆ; ತಾನು ನಿರ್ವಾಣನಾಗಿ ತಿರುಗಾಡಿ ಅವಮಾನಕ್ಕೆ ಗುರಿಯಾದೇನೆಂದು ಎಚ್ಚರವಾಗಿದ್ದು ತನ್ನ ವಸ್ತ್ರಗಳನ್ನು ಕಾಪಾಡಿಕೊಳ್ಳುವವನು ಧನ್ಯನು.)


ಅದು - ನೀನು ನೋಡುವದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬೀ ಏಳು ಪಟ್ಟಣಗಳ ಸಭೆಗಳಿಗೆ ಕಳುಹಿಸಬೇಕೆಂದು ನುಡಿಯಿತು.


ಆದದರಿಂದ ದೇವರ ಕಡೆಗೆ ತಿರುಗಿಕೋ, ತಿರುಗಿಕೊಳ್ಳದಿದ್ದರೆ ನಾನು ಬೇಗನೆ ನಿನ್ನ ಬಳಿಗೆ ಬಂದು ನನ್ನ ಬಾಯಕತ್ತಿಯಿಂದ ಅವರ ಮೇಲೆ ಯುದ್ಧಮಾಡುವೆನು.


ಆದದರಿಂದ ನೀನು ಹೊಂದಿದ ಉಪದೇಶವನ್ನೂ ಅದನ್ನು ಕೇಳಿದ ರೀತಿಯನ್ನೂ ನೆನಪಿಗೆ ತಂದುಕೊಂಡು ಅದನ್ನು ಕಾಪಾಡಿಕೋ ಮತ್ತು ದೇವರ ಕಡೆಗೆ ತಿರುಗಿಕೋ. ನೀನು ಎಚ್ಚರವಾಗಿಲ್ಲದಿದ್ದರೆ ಕಳ್ಳನು ಬರುವಂತೆ ಬರುವೆನು; ನಾನು ಯಾವ ಗಳಿಗೆಯಲ್ಲಿ ನಿನ್ನ ಮೇಲೆ ಬರುವೆನೋ ಅದು ನಿನಗೆ ತಿಳಿಯುವದೇ ಇಲ್ಲ.


ಈ ಪುಸ್ತಕದ ಪ್ರವಾದನಾವಾಕ್ಯಗಳನ್ನು ಕೇಳುವ ಪ್ರತಿಯೊಬ್ಬನಿಗೆ ನಾನು ಹೇಳುವ ಸಾಕ್ಷಿ ಏನಂದರೆ - ಇವುಗಳಿಗೆ ಯಾವನಾದರೂ ಹೆಚ್ಚು ಮಾತುಗಳನ್ನು ತಂದುಹಾಕಿದರೆ ದೇವರು ಅವನ ಮೇಲೆ ಈ ಪುಸ್ತಕದಲ್ಲಿ ಬರೆದಿರುವ ಉಪದ್ರವಗಳನ್ನು ತಂದುಹಾಕುವನು.


ಯಾವನಾದರೂ ಈ ಪ್ರವಾದನಾ ಪುಸ್ತಕದಲ್ಲಿರುವ ಮಾತುಗಳಲ್ಲಿ ಒಂದನ್ನಾದರೂ ತೆಗೆದುಬಿಟ್ಟರೆ ಈ ಪುಸ್ತಕದಲ್ಲಿ ಬರೆದಿರುವ ಪರಿಶುದ್ಧ ಪಟ್ಟಣದಲ್ಲಿಯೂ ಜೀವವೃಕ್ಷದಲ್ಲಿಯೂ ಅವನಿಗಿರುವ ಪಾಲನ್ನು ದೇವರು ತೆಗೆದುಬಿಡುವನು.


ಕರ್ತನಾದ ಯೇಸುವಿನ ಕೃಪೆಯು ಎಲ್ಲರೊಂದಿಗೆ ಇರಲಿ. ಆಮೆನ್.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು