ಪ್ರಕಟನೆ 3:1 - ಕನ್ನಡ ಸತ್ಯವೇದವು J.V. (BSI)1 ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ - ದೇವರ ಏಳು ಆತ್ಮಗಳೂ ಏಳು ನಕ್ಷತ್ರಗಳೂ ಉಳ್ಳಾತನು ಹೇಳುವದೇನಂದರೆ - ನಿನ್ನ ಕೃತ್ಯಗಳನ್ನು ಬಲ್ಲೆನು; ಜೀವಿಸುವವನು ಎಂದು ಹೆಸರು ನಿನಗಿದ್ದರೂ ಸತ್ತವನಾಗಿದ್ದೀ ಎಂಬದನ್ನು ಬಲ್ಲೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಬರೆ, ದೇವರ ಏಳು ಆತ್ಮಗಳನ್ನು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವವನು ಹೇಳುವುದೇನಂದರೆ, ನಿನ್ನ ಕೃತ್ಯಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ನೀನು ಸತ್ತವನಾಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಸಾರ್ದಿಸ್‍ನಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ: ದೇವರ ಸಪ್ತ ಆತ್ಮಗಳನ್ನೂ ಸಪ್ತ ನಕ್ಷತ್ರಗಳನ್ನೂ ಹೊಂದಿರುವಾತನು ನೀಡುವ ಸಂದೇಶವಿದು: ನಿನ್ನ ಕೃತ್ಯಗಳನ್ನು ನೀನು ಬಲ್ಲೆ. ಹೆಸರಿಗೆ ಮಾತ್ರ ನೀನು ಜೀವಂತನಾಗಿರುವೆ. ಆದರೆ ವಾಸ್ತವವಾಗಿ ನೀನು ಸತ್ತಂತೆಯೇ ಸರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಸಾರ್ದಿಸಿನಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಏಳು ಆತ್ಮಗಳು ಮತ್ತು ಏಳು ನಕ್ಷತ್ರಗಳನ್ನು ಹೊಂದಿರುವಾತನು ಹೇಳುವುದೇನೆಂದರೆ: ನೀನು ಮಾಡುತ್ತಿರುವುದು ನನಗೆ ತಿಳಿದಿದೆ. ನೀನು ಜೀವವುಳ್ಳವನೆಂದು ಜನರು ಹೇಳುತ್ತಾರೆ. ಆದರೆ ನೀನು ನಿಜವಾಗಿಯೂ ಸತ್ತು ಹೋಗಿರುವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ಸಾರ್ದಿಸಿನಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ದೇವರ ಏಳು ಆತ್ಮಗಳನ್ನೂ ಏಳು ನಕ್ಷತ್ರಗಳನ್ನೂ ಹಿಡಿದುಕೊಂಡಿರುವವರು ಹೇಳುವುದೇನೆಂದರೆ: ನಾನು ನಿನ್ನ ಕ್ರಿಯೆಗಳನ್ನು ನಾನು ಬಲ್ಲೆನು. ಜೀವಿಸುವವನು ಎಂಬ ಹೆಸರು ನಿನಗಿದ್ದರೂ ಸತ್ತವನಾಗಿದ್ದೀಯೆ. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್1 ಸಾರ್ದಿಸಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್. ದೆವಾಚೆ ಸಾತ್ ಆತ್ಮೆ ಅನಿ ಸಾತ್ ಚಿಕ್ಕಿಯಾ ಅಸಲ್ಲ್ಯಾಕ್ನಾ ಯೆಲ್ಲಿ ಬಾತ್ಮಿ ಹಿ. ತಿಯಾ ಕಾಯ್ ಕರುಲೆಯ್ ಮನುನ್ ಮಾಕಾ ಗೊತ್ತ್ ಹಾಯ್. ಝಿತ್ತೊ ರ್‍ಹಾತಲೊ ಮನುನ್ ತುಕಾ ಲೈ ಮಾನ್ ದಿತ್ಯಾತ್. ಖರೆ ತಿಯಾ ಮರುನ್ ಗೆಲ್ಲೊ ಹಾಸ್ ಮನುನ್‍ಬಿ ಮಾಕಾ ಗೊತ್ತ್ ಹಾಯ್. ಅಧ್ಯಾಯವನ್ನು ನೋಡಿ |
ಹದವಾದ ಇಬ್ಬಾಯಿಕತ್ತಿಯನ್ನು ಹಿಡಿದಾತನು ಹೇಳುವದೇನಂದರೆ - ನೀನು ವಾಸಮಾಡುವ ಸ್ಥಳವನ್ನು ಬಲ್ಲೆನು; ಅದು ಸೈತಾನನ ಸಿಂಹಾಸನವಿರುವ ಸ್ಥಳವಾಗಿದೆ. ನೀನು ನನ್ನ ಹೆಸರನ್ನು ಬಿಡದೇ ಹಿಡಿದುಕೊಂಡಿದ್ದೀ; ನೀನು ಇರುವ ಸೈತಾನನ ನಿವಾಸದಲ್ಲಿ ನನಗೆ ನಂಬಿಗಸ್ತನೂ ಸಾಕ್ಷಿಯೂ ಆದ ಅಂತಿಪನು ಕೊಲ್ಲಲ್ಪಟ್ಟ ದಿನಗಳಲ್ಲಿಯಾದರೂ ನನ್ನಲ್ಲಿಟ್ಟಿರುವ ನಂಬಿಕೆಯನ್ನು ನೀನು ಮರೆಮಾಡಲಿಲ್ಲ.