ಪ್ರಕಟನೆ 3:10 - ಕನ್ನಡ ಸತ್ಯವೇದವು J.V. (BSI)10 ನೀನು ನನ್ನ ಸಹನವಾಕ್ಯವನ್ನು ಕಾಪಾಡಿದ್ದರಿಂದ ಭೂನಿವಾಸಿಗಳನ್ನು ಪರೀಕ್ಷಿಸುವದಕ್ಕಾಗಿ ಲೋಕದ ಮೇಲೆಲ್ಲಾ ಬರುವದಕ್ಕಿರುವ ಶೋಧನೆಯ ಸಮಯದಲ್ಲಿ ನಿನ್ನನ್ನು ತಪ್ಪಿಸಿ ಕಾಪಾಡುವೆನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201910 ಸೈರಣೆಯಿಂದಿರಬೇಕೆಂಬ ನನ್ನ ಆಜ್ಞೆಯನ್ನು ನೀನು ಪಾಲಿಸಿದ್ದರಿಂದ, ಭೂಲೋಕದ ನಿವಾಸಿಗಳೆಲ್ಲರನ್ನು ಪರೀಕ್ಷಿಸುವುದಕ್ಕಾಗಿ ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)10 ಸೈರಣೆಯಿಂದಿರಬೇಕೆಂಬ ನನ್ನ ಉಪದೇಶವನ್ನು ನೀನು ಪಾಲಿಸಿದ್ದರಿಂದ ಭೂಲೋಕದ ನಿವಾಸಿಗಳೆಲ್ಲರನ್ನು ಪರಿಶೋಧಿಸಲೆಂದು ಇಡೀ ಜಗತ್ತಿನ ಮೇಲೆ ಬರಲಿರುವ ಕಡುಶೋಧನೆಯ ಕಾಲದಲ್ಲಿ ನಾನು ನಿನ್ನನ್ನು ಸುರಕ್ಷಿತವಾಗಿ ಕಾಪಾಡುತ್ತೇನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್10 ನೀನು ನನ್ನ ಆಜ್ಞೆಯನ್ನು ಸಹನೆಯಿಂದ ಮತ್ತು ತಾಳ್ಮೆಯಿಂದ ಅನುಸರಿಸಿದೆ. ಆದ್ದರಿಂದ ಈ ಲೋಕಕ್ಕೆಲ್ಲಾ ಉಂಟಾಗುವ ಕಡುಶೋಧನೆಯಿಂದ ನಾನು ನಿನ್ನನ್ನು ತಪ್ಪಿಸುತ್ತೇನೆ. ಭೂನಿವಾಸಿಗಳೆಲ್ಲರನ್ನು ಈ ಶೋಧನೆಯು ಪರಿಶೋಧಿಸುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ10 ನೀನು ನನ್ನ ವಾಕ್ಯವನ್ನು ಸಹನೆಯಿಂದ ಕಾಪಾಡಿಕೊಂಡಿದ್ದರಿಂದ, ಭೂನಿವಾಸಿಗಳನ್ನು ಪರೀಕ್ಷಿಸಲು ಇಡೀ ಲೋಕದಲ್ಲೆಲ್ಲಾ ಬರಲಿರುವ ಶೋಧನೆಯ ಸಮಯದಲ್ಲಿ ನಾನು ಸಹ ನಿನ್ನನ್ನು ಸುರಕ್ಷಿತವಾಗಿಡುವೆನು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್10 ಕಶ್ಯಾಕ್ ಮಟ್ಲ್ಯಾರ್ ಮಾಜೆ ಹುಕುಮ್ ಸಂಬಾಳುನ್ ಘೆವ್ನ್ ಥವ್ನ್ ಘೆಟ್ಲ್ಯಾಸಿ . ಹ್ಯಾ ಜಗಾತ್ಲ್ಯಾ ಸಗ್ಳ್ಯಾ ಲೊಕಾಂಚಿ ಪರಿಕ್ಷಾ ಕರುಕ್ ಮನುನ್ ಹ್ಯಾ ಜಗಾ ವರ್ತಿ ಯೆತಲ್ಯಾ ತರಾಸಾತ್ನಾಬಿ ಮಿಯಾ ತುಮ್ಕಾ ರಾಕುನ್ ಥವ್ತಾ. ಅಧ್ಯಾಯವನ್ನು ನೋಡಿ |