Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:12 - ಕನ್ನಡ ಸತ್ಯವೇದವು J.V. (BSI)

12 ಯಾವನು ಜಯ ಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು; ಅವನು ಇನ್ನು ಮುಂದೆ ಅದರೊಳಗಿಂದ ಹೋಗುವದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನೂ ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯಾವನು ಜಯಹೊಂದುತ್ತಾನೋ ಅವನನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ನಿಲ್ಲಿಸುವೆನು. ಅವನು ಎಂದಿಗೂ ಅಲ್ಲಿಂದ ಕದಲುವುದೇ ಇಲ್ಲ. ಇದಲ್ಲದೆ ನನ್ನ ದೇವರ ಹೆಸರನ್ನು, ನನ್ನ ದೇವರ ಬಳಿಯಿಂದ ಪರಲೋಕದೊಳಗಿಂದ ಇಳಿದುಬರುವ ಹೊಸ ಯೆರೂಸಲೇಮ್ ಪಟ್ಟಣವೆಂಬ ನನ್ನ ದೇವರ ಪಟ್ಟಣದ ಹೆಸರನ್ನೂ, ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಜಯ ಹೊಂದಿದವನನ್ನು ನನ್ನ ದೇವರ ಆಲಯದ ಸ್ತಂಭವಾಗಿ ನಿಲ್ಲಿಸುತ್ತೇನೆ. ಅವನು ಅಲ್ಲಿಯೇ ನಿರಂತರವಾಗಿ ಇರುತ್ತಾನೆ. ಅವನ ಮೇಲೆ ನನ್ನ ದೇವರ ನಾಮವನ್ನೂ ನನ್ನ ದೇವರ ನಗರವಾದ ನೂತನ ಜೆರುಸಲೇಮಿನ ನಾಮವನ್ನೂ ನನ್ನ ಹೊಸ ನಾಮವನ್ನೂ ಬರೆಯುತ್ತೇನೆ. ಈ ನೂತನ ಜೆರುಸಲೇಮ್ ನನ್ನ ದೇವರ ಸಾನ್ನಿಧ್ಯದಿಂದಲೂ ಸ್ವರ್ಗದಿಂದಲೂ ಇಳಿದುಬರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಜಯಗಳಿಸಿದ ವ್ಯಕ್ತಿಯನ್ನು ನನ್ನ ದೇವರ ಆಲಯದಲ್ಲಿ ಆಧಾರಸ್ತಂಭವನ್ನಾಗಿ ಮಾಡುವೆನು. ಅವನು ದೇವರ ಆಲಯವನ್ನು ಮತ್ತೆಂದಿಗೂ ಬಿಟ್ಟುಹೋಗುವ ಅಗತ್ಯವಿಲ್ಲ. ನನ್ನ ದೇವರ ಹೆಸರನ್ನೂ ನನ್ನ ದೇವರ ಪಟ್ಟಣದ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ. ಹೊಸ ಜೆರುಸಲೇಮೇ ಆ ಪಟ್ಟಣ. ಆ ಪಟ್ಟಣವು ನನ್ನ ದೇವರ ಬಳಿಯಿಂದ ಪರಲೋಕದಿಂದ ಇಳಿದುಬರುತ್ತದೆ. ನನ್ನ ಹೊಸ ಹೆಸರನ್ನೂ ಅವನ ಮೇಲೆ ಬರೆಯುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಯಾರು ಜಯ ಹೊಂದುತ್ತಾರೋ, ಅವರನ್ನು ನನ್ನ ದೇವರ ಆಲಯದಲ್ಲಿ ಸ್ತಂಭವಾಗಿ ಸ್ಥಾಪಿಸುವೆನು. ಅವರು ಎಂದಿಗೂ ಅದರೊಳಗಿಂದ ಹೊರಗೆ ಹೋಗುವುದಿಲ್ಲ. ನಾನು ನನ್ನ ದೇವರ ಹೆಸರನ್ನು ಪರಲೋಕದಲ್ಲಿರುವ ನನ್ನ ದೇವರಿಂದ ಇಳಿದು ಬರುವ ಹೊಸ ಯೆರೂಸಲೇಮಿನ ಹೆಸರನ್ನೂ ಹಾಗೂ ನನ್ನ ಹೊಸ ಹೆಸರನ್ನೂ ಅವರ ಮೇಲೆ ಬರೆಯುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಜೆ ಕೊನ್ ಜಿಕುನ್ ಜಯ್ ಹೊಲ್ಲೆ ಹಾತ್ ತೆಂಕಾ ಮಿಯಾ ದೆವಾಚ್ಯಾ ಮಾಗ್ನಿಚ್ಯಾ ಘರಾಚ್ಯೊ ಖಾಂಬೊ ಕರುನ್ ಥವ್ತಾ. ಅನಿಫಿಡೆ ತೆನಿ ಥೈತ್ನಾ ಫಾಟಿ ಜಾಯ್ನಾತ್, ಮಿಯಾ ತೆಂಚ್ಯಾ ವರ್ತಿ ಮಾಜ್ಯಾ ದೆವಾಚೆ ಅನಿ ದೆವಾಚ್ಯಾ ಶಾರಾಚಿ ನ್ಹವ್ಯಾ ಜೆರುಜಲೆಮಾಚೆ ನಾವ್ ಲಿವ್ತಾ. ತೆ ಶಾರ್ ಸರ್‍ಗಾ ವೈನಾ ಮಾಜ್ಯಾ ದೆವಾಕ್ನಾ ಖಾಲ್ತಿ ಉತ್ರುನ್ ಯೆತಾ. ಮಿಯಾ ತೆಂಚ್ಯಾ ವರ್ತಿ ಮಾಜೆ ನ್ಹವೆ ನಾವ್‍ಬಿ ಲಿವ್ತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:12
26 ತಿಳಿವುಗಳ ಹೋಲಿಕೆ  

ಆತನ ದಾಸರು ಆತನಿಗೆ ಯಾಜಕಸೇವೆ ಮಾಡುವರು; ಅವರಿಗೆ ಆತನ ಮುಖದರ್ಶನವಾಗುವದು; ಅವರ ಹಣೆಗಳ ಮೇಲೆ ಆತನ ಹೆಸರು ಇರುವದು.


ಇದಲ್ಲದೆ ಪರಿಶುದ್ಧ ಪಟ್ಟಣವಾದ ಹೊಸ ಯೆರೂಸಲೇಮು ಪರಲೋಕದಿಂದ ದೇವರ ಬಳಿಯಿಂದ ಇಳಿದುಬರುವದನ್ನು ಕಂಡೆನು; ಅದು ತನ್ನ ಗಂಡನಿಗೋಸ್ಕರ ಅಲಂಕೃತಳಾದ ಮದಲಗಿತ್ತಿಯಂತೆ ಶೃಂಗರಿಸಲ್ಪಟ್ಟಿತ್ತು.


ನಾನು ನೋಡಲಾಗಿ ಯಜ್ಞದ ಕುರಿಯಾದಾತನು ಚೀಯೋನ್ ಪರ್ವತದ ಮೇಲೆ ನಿಂತಿರುವದನ್ನು ಕಂಡೆನು. ಆತನ ಜೊತೆಯಲ್ಲಿ ಒಂದು ಲಕ್ಷ ನಾಲ್ವತ್ತು ನಾಲ್ಕು ಸಾವಿರ ಮಂದಿ ಇದ್ದರು; ಅವರವರ ಹಣೆಯ ಮೇಲೆ ಆತನ ಹೆಸರೂ ಆತನ ತಂದೆಯ ಹೆಸರೂ ಬರೆಯಲ್ಪಟ್ಟಿದ್ದವು.


ಸಭಾಸ್ತಂಭಗಳೆಂದು ಹೆಸರುಗೊಂಡಿರುವ ಯಾಕೋಬ ಕೇಫ ಯೋಹಾನರು ಕಂಡು ದೇವರು ನನಗೆ ದಯಪಾಲಿಸಿರುವ ವರವನ್ನು ತಿಳುಕೊಂಡು ಐಕ್ಯವನ್ನು ತೋರಿಸುವದಕ್ಕಾಗಿ ನನಗೂ ಬಾರ್ನಬನಿಗೂ ಬಲಗೈ ಕೊಟ್ಟು - ನೀವು ಅನ್ಯಜನರ ಬಳಿಗೆ ಹೋಗಿರಿ, ನಾವು ಸುನ್ನತಿಯವರ ಬಳಿಗೆ ಹೋಗುತ್ತೇವೆ ಅಂದರು.


ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ ಕಬ್ಬಿಣದ ಕಂಬವನ್ನಾಗಿಯೂ ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ಬಚ್ಚಿಟ್ಟಿರುವ ಮನ್ನವೆಂಬ ಆಹಾರವನ್ನು ಕೊಡುವೆನು; ಇದಲ್ಲದೆ ಅವನಿಗೆ ಬಿಳೀ ಕಲ್ಲನ್ನೂ ಆ ಕಲ್ಲಿನ ಮೇಲೆ ಕೆತ್ತಿದ ಹೊಸ ಹೆಸರನ್ನೂ ಕೊಡುವೆನು; ಆ ಹೆಸರನ್ನು ಹೊಂದಿದವನಿಗೇ ಹೊರತು ಅದು ಇನ್ನಾರಿಗೂ ತಿಳಿಯದು.


ಆದರೆ ನೀವು ಚೀಯೋನ್ ಪರ್ವತಕ್ಕೂ ಜೀವಸ್ವರೂಪನಾದ ದೇವರ ಪಟ್ಟಣವಾಗಿರುವ ಪರಲೋಕದ ಯೆರೂಸಲೇವಿುಗೂ ಉತ್ಸವಸಂಘದಲ್ಲಿ ಕೂಡಿರುವ ಕೋಟ್ಯಾನುಕೋಟಿ ದೇವದೂತರ ಬಳಿಗೂ


ನಾವು ಕಿವಿಯಿಂದ ಕೇಳಿದಂತೆಯೇ ಈಗ ಕಣ್ಣಾರೆ ಕಂಡೆವು; ನಮ್ಮ ದೇವರೂ ಸೇನಾಧೀಶನೂ ಆಗಿರುವ ಯೆಹೋವನ ಸಂಸ್ಥಾನದಲ್ಲಿ ಆತನ ಮಹತ್ತನ್ನು ನೋಡಿದ್ದೇವೆ.


ಪ್ರಿಯರಾದ ಮಕ್ಕಳೇ, ನೀವಂತೂ ದೇವರಿಂದ ಹುಟ್ಟಿದವರಾಗಿದ್ದೀರಿ; ಮತ್ತು ಲೋಕದಲ್ಲಿರುವವನಿಗಿಂತ ನಿಮ್ಮಲ್ಲಿರುವಾತನು ಹೆಚ್ಚಿನವನಾಗಿರುವದರಿಂದ ನೀವು ಆ ಸುಳ್ಳು ಪ್ರವಾದಿಗಳನ್ನು ಜಯಿಸಿದ್ದೀರಿ.


ತರುವಾಯ ಅವನು ಆ ಎರಡು ಕಂಬಗಳನ್ನೂ ದೇವಾಲಯದ ಮಂಟಪದ ಬಳಿಯಲ್ಲಿ ನಿಲ್ಲಿಸಿ ಬಲಗಡೆಯ ಕಂಬಕ್ಕೆ ಯಾಕೀನ್ ಎಂದೂ ಎಡಗಡೆಯ ಕಂಬಕ್ಕೆ ಬೋವಜ್ ಎಂದೂ ಹೆಸರಿಟ್ಟನು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ಪಟ್ಟಣದ ಸುತ್ತಳತೆಯು ಹದಿನೆಂಟು ಸಾವಿರ ಮೊಳ; ಅದನ್ನು ನಿರ್ಮಿಸಿದಂದಿನಿಂದ ಆ ಪಟ್ಟಣಕ್ಕೆ ಯೆಹೋವನ ನೆಲೆ ಎಂಬ ಹೆಸರಾಗುವದು.


ಕರ್ತನಾದ ಯೆಹೋವನು ನಿಮ್ಮನ್ನು ಕೊಂದುಹಾಕುವನು, ನಿಮ್ಮ ಹೆಸರು ನನ್ನ ಆಪ್ತಜನರು ಶಪಿಸುವ ಶಾಪದ ಮಾತಾಗಿಯೇ ಉಳಿಯುವದು; ನಾನು ನನ್ನ ಸೇವಕರಿಗೆ ಹೊಸ ಹೆಸರನ್ನು ಕೊಡುವೆನು.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ದೇವನಗರವೇ, ನಿನ್ನ ವಿಷಯವಾದ ಗೌರವೋಕ್ತಿಯೇನಂದರೆ - ಸೆಲಾ.


ಒಂದು ನದಿ ಅದೆ; ಅದರ ಕಾಲುವೆಗಳು ಪರಾತ್ಪರನ ಪರಿಶುದ್ಧ ನಿವಾಸಸ್ಥಾನವಾಗಿರುವ ದೇವನಗರವನ್ನು ಸಂತೋಷಪಡಿಸುತ್ತವೆ.


ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು; ಯೆಹೋವನ ಬಾಯಿ ನೇವಿುಸಿದ ಹೊಸ ಹೆಸರು ನಿನಗೆ ದೊರೆಯುವದು.


ದ್ವಾರಮಂಟಪದ ಉದ್ದ ಇಪ್ಪತ್ತು ಮೊಳ, ಅಗಲ ಹನ್ನೊಂದು ಮೊಳ ಇದ್ದವು; ಹತ್ತು ಮೆಟ್ಲುಗಳನ್ನು ಹತ್ತಿ ಅಲ್ಲಿಗೆ ಸೇರುತ್ತಿದ್ದರು; ಎರಡು ಕಡೆಯ ನಿಲವುಕಂಬಗಳ ಪಕ್ಕದಲ್ಲಿ ಒಂದೊಂದು ಉಪಸ್ತಂಭವು ಇತ್ತು.


ಯಾಕಂದರೆ ಇಹದಲ್ಲಿ ಶಾಶ್ವತವಾದ ಪಟ್ಟಣವು ನಮಗಿಲ್ಲ; ಇನ್ನು ಮುಂದೆ ಆಗುವ ಪಟ್ಟಣವನ್ನು ಹಾರೈಸುತ್ತಾ ಇದ್ದೇವೆ.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಜಯ ಹೊಂದುವವನಿಗೆ ಎರಡನೆಯ ಮರಣದಿಂದ ಕೇಡಾಗುವದೇ ಇಲ್ಲ.


ಜಯಶಾಲಿಗೆ ಹೀಗೆ ಶುಭ್ರವಸ್ತ್ರಗಳನ್ನು ಹೊದಿಸುವರು. ಜೀವಬಾಧ್ಯರ ಪಟ್ಟಿಯಿಂದ ಅವನ ಹೆಸರನ್ನು ನಾನು ಅಳಿಸಿಬಿಡದೆ ಅವನು ನನ್ನವನೆಂದು ನನ್ನ ತಂದೆಯ ಮುಂದೆಯೂ ಆತನ ದೂತರ ಮುಂದೆಯೂ ಒಪ್ಪುವೆನು.


ಆಗ ಆತನು - ಈ ತಲೆಯೂ ಮುದ್ರೆಯೂ ಯಾರದು ಎಂದು ಕೇಳಿದ್ದಕ್ಕೆ ಅವರು - ಕೈಸರನದು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು