ಪ್ರಕಟನೆ 3:19 - ಕನ್ನಡ ಸತ್ಯವೇದವು J.V. (BSI)19 ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದದರಿಂದ ನೀನು ಆಸಕ್ತನಾಗಿರು; ದೇವರ ಕಡೆಗೆ ತಿರುಗಿಕೋ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 ನಾನು ಯಾರಾರನ್ನು ಪ್ರೀತಿಸುತ್ತೇನೋ ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಜಾಗರೂಕನಾಗಿರು. ಮಾನಸಾಂತರ ಹೊಂದಿ ದೇವರ ಕಡೆಗೆ ತಿರಿಗಿಕೋ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 ನನ್ನ ಪ್ರೀತಿಪಾತ್ರರನ್ನು ನಾನು ಖಂಡಿಸುತ್ತೇನೆ ಮತ್ತು ದಂಡಿಸುತ್ತೇನೆ. ಆದುದರಿಂದ ಉತ್ಸಾಹದಿಂದಿರು, ದೇವರಿಗೆ ಅಭಿಮುಖನಾಗಿರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ನಾನು ಪ್ರೀತಿಸುವ ಜನರನ್ನೇ ನಾನು ತಿದ್ದುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀವು ಆಸಕ್ತಿಯಿಂದಿರಿ! ದೇವರ ಕಡೆಗೆ ತಿರುಗಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 ನಾನು ಯಾರನ್ನು ಪ್ರೀತಿಸುತ್ತೇನೋ, ಅವರನ್ನು ಗದರಿಸುತ್ತೇನೆ ಮತ್ತು ಶಿಕ್ಷಿಸುತ್ತೇನೆ. ಆದ್ದರಿಂದ ನೀನು ಆಸಕ್ತನಾಗಿರು, ಪಶ್ಚಾತ್ತಾಪಪಡು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್19 ಮಿಯಾ ಪ್ರೆಮ್ ಕರ್ತಲ್ಯಾಕ್ನಿ ಮಿಯಾ ಜೊರ್ ಕರ್ತಾ ಅನಿ ಶಿಕ್ಷಾ ದಿತಾ. ತಿಯಾ ಉಮ್ಮೆದಿಚೊ ಹೊವ್ಚೊ, ಅನಿ ತುಜೆ ಪಾಪಾಚೆ ಜಿವನ್ ಸೊಡುನ್ ಬರೊ ಹೊವ್ಚೊ. ಅಧ್ಯಾಯವನ್ನು ನೋಡಿ |
ನೀವು ದೇವರ ಚಿತ್ತಾನುಸಾರವಾಗಿ ಪಟ್ಟ ದುಃಖವು ನಿಮಗೆ ಎಂಥ ತಹತಹವನ್ನು ಉಂಟುಮಾಡಿತು ನೋಡಿರಿ. ನೀವು ನಿರ್ದೋಷಿಗಳೆಂದು ಸ್ಥಾಪಿಸುವದಕ್ಕೆ ಎಷ್ಟೋ ಪ್ರಯಾಸಪಟ್ಟಿರಿ, ಎಷ್ಟೋ ಮನೋವ್ಯಥೆಯನ್ನು ಅನುಭವಿಸಿದಿರಿ; ಎಂಥ ಭಯವನ್ನು ಎಂಥ ಹಂಬಲವನ್ನು ತೋರಿಸಿದಿರಿ; ಮಾನಹಾನಿಗಾಗಿ ಎಷ್ಟೋ ರೋಷಪಟ್ಟು ಶಿಕ್ಷೆಮಾಡಿದಿರಿ. ನೀವು ಆ ಕಾರ್ಯಕ್ಕೆ ಸೇರಿದವರಲ್ಲವೆಂಬದನ್ನು ಎಲ್ಲಾ ವಿಧದಲ್ಲಿಯೂ ತೋರಿಸಿದಿರಿ.