Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:21 - ಕನ್ನಡ ಸತ್ಯವೇದವು J.V. (BSI)

21 ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆಯೇ ಜಯಶಾಲಿಯಾದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

21 ನಾನು ಜಯಗಳಿಸಿ ನನ್ನ ತಂದೆಯೊಡನೆ ಅವರ ಸಿಂಹಾಸನದಲ್ಲಿ ಕುಳಿತುಕೊಂಡಿದ್ದೇನೆ. ಅದೇ ಪ್ರಕಾರ ಜಯಹೊಂದಿದವನಿಗೆ ನನ್ನೊಡನೆ ಸಿಂಹಾಸನದಲ್ಲಿ ಕುಳಿತುಕೊಳ್ಳುವ ಹಕ್ಕನ್ನು ನಾನು ಕೊಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ನಾನು ಜಯಗಳಿಸಿ ನನ್ನ ತಂದೆಯೊಡನೆ ಆತನ ಸಿಂಹಾಸನದ ಮೇಲೆ ಕುಳಿತುಕೊಂಡೆನು. ಅಂತೆಯೇ ಜಯಗಳಿಸುವ ಪ್ರತಿಯೊಬ್ಬನೂ ನನ್ನ ಸಂಗಡ ನನ್ನ ಸಿಂಹಾಸನದ ಮೇಲೆ ಕುಳಿತುಕೊಳ್ಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 ನಾನು ಜಯಹೊಂದಿ, ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕುಳಿತುಕೊಂಡ ಹಾಗೆ, ಜಯಶಾಲಿಯಾದವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

21 ಜೆ ಕೊನ್ ಜಿಕುನ್ ಜಯ್ ಹೊವ್ನ್ ಯೆತಾ, ತೆಂಕಾ ಕಸೆ ಮಿಯಾ ಜಿಕುನ್ ಜಯ್ ಹೊವ್ನ್ ಯೆವ್ನ್ ಬಾಬಾಚ್ಯಾ ಸಿವಾಸನಾ ವರ್ತಿ ಬಸ್ಲಾ, ತಸೆಚ್ ಮಾಜ್ಯಾ ಬಾಜುಕ್ ಮಾಜ್ಯಾ ಸಿವಾಸನಾಚ್ಯಾ ವರ್ತಿ ಬಸ್ತಲೊ ಹಕ್ಕ್ ಮಿಯಾ ದಿತಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:21
24 ತಿಳಿವುಗಳ ಹೋಲಿಕೆ  

ಸಹಿಸಿಕೊಳ್ಳುವವರಾಗಿದ್ದರೆ ಆತನೊಡನೆ ಆಳುವೆವು; ನಾವು ಯೇಸುವಿನವರಲ್ಲವೆಂದು ಹೇಳಿದರೆ ಆತನು ನಮ್ಮನ್ನು ತನ್ನವರಲ್ಲವೆಂದು ಹೇಳುವನು.


ಯೇಸು ಅವರಿಗೆ - ನಿಮಗೆ ಸತ್ಯವಾಗಿ ಹೇಳುತ್ತೇನೆ, ಹೊಸ ಸೃಷ್ಟಿಯಲ್ಲಿ ಮನುಷ್ಯಕುಮಾರನು ತನ್ನ ಮಹಿಮೆಯ ಸಿಂಹಾಸನದ ಮೇಲೆ ಕೂತುಕೊಳ್ಳುವಾಗ ನನ್ನನ್ನು ಹಿಂಬಾಲಿಸಿರುವ ನೀವು ಸಹ ಹನ್ನೆರಡು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ನೀವು ನನ್ನಲ್ಲಿದ್ದು ಮನಶ್ಶಾಂತಿಯನ್ನು ಹೊಂದಿದವರಾಗಿರಬೇಕೆಂದು ಇದನ್ನೆಲ್ಲಾ ನಿಮಗೆ ಹೇಳಿದ್ದೇನೆ. ಲೋಕದಲ್ಲಿ ನಿಮಗೆ ಸಂಕಟ ಉಂಟು; ಧೈರ್ಯವಾಗಿರಿ, ನಾನು ಲೋಕವನ್ನು ಜಯಿಸಿದ್ದೇನೆ ಎಂದು ಹೇಳಿದನು.


ದೇವರಾತ್ಮನು ಸಭೆಗಳಿಗೆ ಹೇಳುವದನ್ನು ಕಿವಿಯುಳ್ಳವನು ಕೇಳಲಿ. ಯಾವನು ಜಯಹೊಂದುತ್ತಾನೋ ಅವನಿಗೆ ದೇವರ ಪರದೈಸಿನಲ್ಲಿರುವ ಜೀವದಾಯಕ ವೃಕ್ಷದ ಹಣ್ಣನ್ನು ತಿನ್ನುವದಕ್ಕೆ ಕೊಡುವೆನು.


ಆಗ ಯೇಸು ಹತ್ತರಕ್ಕೆ ಬಂದು - ಪರಲೋಕದಲ್ಲಿಯೂ ಭೂಲೋಕದಲ್ಲಿಯೂ ಎಲ್ಲಾ ಅಧಿಕಾರವು ನನಗೆ ಕೊಡಲ್ಪಟ್ಟಿದೆ.


ನನ್ನ ರಾಜ್ಯದಲ್ಲಿ ನೀವು ನನ್ನ ಮೇಜಿನ ಮೇಲೆ ಊಟಮಾಡುವಿರಿ, ಕುಡಿಯುವಿರಿ; ಮತ್ತು ಸಿಂಹಾಸನಗಳ ಮೇಲೆ ಕೂತುಕೊಂಡು ಇಸ್ರಾಯೇಲಿನ ಹನ್ನೆರಡು ಕುಲಗಳಿಗೆ ನ್ಯಾಯತೀರಿಸುವಿರಿ.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.


ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದವನೂ ಆಗಿರುವಾತನಿಗೆ ಯುಗಯುಗಾಂತರಗಳಲ್ಲಿಯೂ ಘನ ಮಹತ್ವಗಳಿರಲಿ. ಆಮೆನ್.


ಅವರು ಪ್ರಾಣದ ಮೇಲಣ ಪ್ರೀತಿಯನ್ನು ತೊರೆದು ಮರಣಕ್ಕೆ ಹಿಂತೆಗೆಯದೆ ಯಜ್ಞದ ಕುರಿಯಾದಾತನ ರಕ್ತದ ಬಲದಿಂದಲೂ ತಮ್ಮ ವಾಕ್ಯದ ಬಲದಿಂದಲೂ ಅವನನ್ನು ಜಯಿಸಿದರು.


ಅವರು ಯಜ್ಞದ ಕುರಿಯಾದಾತನ ಮೇಲೆ ಯುದ್ಧಮಾಡುವರು, ಆದರೆ ಆತನು ಕರ್ತರ ಕರ್ತನೂ ರಾಜಾಧಿರಾಜನೂ ಆಗಿರುವದರಿಂದ ಅವರನ್ನು ಜಯಿಸುವನು; ಮತ್ತು ದೇವರು ಕರೆದವರೂ ದೇವರಾದುಕೊಂಡವರೂ ನಂಬಿಗಸ್ತರೂ ಆಗಿರುವ ಆತನ ಕಡೆಯವರು ಆ ಜಯದಲ್ಲಿ ಪಾಲುಗಾರರಾಗುವರು.


ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.


ಆಗ ಇಗೋ, ಒಂದು ಬಿಳಿ ಕುದುರೆ ಕಾಣಿಸಿತು; ಅದರ ಮೇಲೆ ಕೂತಿದ್ದವನ ಕೈಯಲ್ಲಿ ಬಿಲ್ಲು ಇತ್ತು; ಅವನಿಗೆ ಜಯಮಾಲೆ ಕೊಡಲ್ಪಟ್ಟಿತು; ಅವನು ಜಯಿಸುತ್ತಿರುವವನಾಗಿ ಜಯಿಸುವದಕ್ಕೋಸ್ಕರ ಹೊರಟನು.


ಅವನ ಧಣಿಯು - ಭಲಾ, ನಂಬಿಗಸ್ತನಾದ ಒಳ್ಳೇ ಆಳು ನೀನು; ಸ್ವಲ್ಪ ಕೆಲಸದಲ್ಲಿ ನಂಬಿಗಸ್ತನಾಗಿದ್ದಿ, ದೊಡ್ಡ ಕೆಲಸದಲ್ಲಿ ನಿನ್ನನ್ನು ಇಡುತ್ತೇನೆ; ನಿನ್ನ ಧಣಿಯ ಸೌಭಾಗ್ಯದಲ್ಲಿ ಸೇರು ಅಂದನು.


ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿ; ಅವರು ಭೂವಿುಯ ಮೇಲೆ ಆಳುವರು ಎಂದು ಹೇಳಿದರು.


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರುಷ ಆಳುವರು.


ದೇವರು ಆತನಲ್ಲಿ ಮಹಿಮೆಪಟ್ಟಿರಲಾಗಿ ತನ್ನಲ್ಲಿ ದೇವರು ಆತನನ್ನೂ ಮಹಿಮೆಪಡಿಸುವನು, ಕೂಡಲೇ ಮಹಿಮೆಪಡಿಸುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು