Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 3:7 - ಕನ್ನಡ ಸತ್ಯವೇದವು J.V. (BSI)

7 ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ - ಪರಿಶುದ್ಧನೂ ಸತ್ಯವಂತನೂ ದಾವೀದನ ಬೀಗದ ಕೈಯುಳ್ಳವನೂ ಯಾರೂ ಮುಚ್ಚಕೂಡದಂತೆ ತೆರೆಯುವವನೂ ಯಾರೂ ತೆರೆಯದಂತೆ ಮುಚ್ಚುವವನೂ ಆಗಿರುವಾತನು ಹೇಳುವದೇನಂದರೆ -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 “ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಬರೆ, ಪರಿಶುದ್ಧನೂ, ಸತ್ಯವಂತನೂ, ದಾವೀದನ ಬೀಗದಕೈಯುಳ್ಳವನೂ, ಯಾರಿಂದಲೂ ಮುಚ್ಚಲಾಗದಂತೆ ತೆರೆಯುವವನೂ, ಯಾರಿಂದಲೂ ತೆರೆಯಲಾಗದಂತೆ ಮುಚ್ಚುವವನೂ ಆಗಿರುವಾತನು ಹೇಳುವುದೇನಂದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 “ಫಿಲದೆಲ್ಫಿಯದಲ್ಲಿರುವ ಶ್ರೀಸಭೆಯ ದೂತನಿಗೆ ಹೀಗೆ ಬರೆ : ಸತ್ಯವಂತನೂ ಪರಿಶುದ್ಧನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಮನೆತನದ ಬೀಗದ ಕೈ ನನ್ನಲ್ಲಿ ಇದೆ. ನಾನು ಬಾಗಿಲನ್ನು ತೆರೆದರೆ ಬೇರೆ ಯಾರೂ ಅದನ್ನು ಮುಚ್ಚಲಾಗದು. ನಾನು ಬಾಗಿಲನ್ನು ಮುಚ್ಚಿದರೆ ಬೇರೆ ಯಾರೂ ಅದನ್ನು ತೆರೆಯಲಾಗದು. ಈಗ ನಾನು ನಿನಗೆ ಹೇಳುವುದೇನೆಂದರೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 “ಫಿಲದೆಲ್ಫಿಯದಲ್ಲಿರುವ ಸಭೆಯ ದೂತನಿಗೆ ಇದನ್ನು ಬರೆ: “ಪವಿತ್ರನೂ ಸತ್ಯವಂತನೂ ಆಗಿರುವಾತನು ನೀಡುವ ಸಂದೇಶವಿದು: ದಾವೀದನ ಬೀಗದ ಕೈ ನನ್ನಲ್ಲಿದೆ. ನಾನು ತೆರೆದದ್ದನ್ನು ಯಾರೂ ಮುಚ್ಚಲಾರರು; ಮುಚ್ಚಿದ್ದನ್ನು ಯಾರೂ ತೆರೆಯಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 “ಫಿಲದೆಲ್ಫಿಯದಲ್ಲಿರುವ ಸಭೆಯ ಸಂದೇಶಕನಿಗೆ ಬರೆ: ಪರಿಶುದ್ಧರೂ ಸತ್ಯವಂತರೂ ದಾವೀದನ ಬೀಗದ ಕೈಯುಳ್ಳವರೂ ಯಾರೂ ಮುಚ್ಚದಂತೆ ತೆರೆಯುವವರೂ ಯಾರೂ ತೆರೆಯದಂತೆ ಮುಚ್ಚುವವರೂ ಆಗಿರುವವರು ಹೇಳುವುದೇನೆಂದರೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

7 ಫಿಲಾದಾಲ್ಫಿಯಾಚ್ಯಾ ದೆವಾಚ್ಯಾ ಲೊಕಾಂಚ್ಯಾ ತಾಂಡ್ಯಾಚ್ಯಾ ದೆವ್‍ದುತಾಕ್ ಲಿವ್. ಜೊ ಕೊನ್ ಪವಿತ್ರ್ ಅನಿ ಖರೊ ಹಾಯ್ ತೆಚೆಕ್ನಾ ಯೆಲ್ಲಿ ಬಾತ್ಮಿ ಹಿ. ದಾವಿದಾಕ್ ಸಮಂದ್‍ಪಡಲ್ಲ್ಯಾ ಸಗ್ಳ್ಯಾನಿ ಚಾವಿ ತೆಚೆಕ್ಡೆ ಹಾಯ್, ಅನಿ ತೆನಿ ದಾರ್ ಉಗಡ್ಲ್ಯಾನ್ ತರ್ ಕೊನಾಕ್‍ಬಿ ತೆ ಧಾಪುಕ್ ಹೊಯ್ನಾ, ಅನಿ ತೆನಿ ತೆ ಧಾಪ್ಲ್ಯಾನ್ ತರ್ ಕೊನಾಕ್‍ಬಿ ತೆ ಉಗ್ಡುಕ್ ಹೊಯ್ನಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 3:7
38 ತಿಳಿವುಗಳ ಹೋಲಿಕೆ  

ಅವನು ದಾವೀದನ ಮನೆಯ ಬೀಗದ ಕೈಯನ್ನು ತನ್ನ ಹೆಗಲ ಮೇಲೆ ವಹಿಸಿಕೊಳ್ಳುವಂತೆ ಮಾಡುವೆನು; ಅವನು ತೆರೆದರೆ ಯಾರೂ ಮುಚ್ಚರು, ಮುಚ್ಚಿದರೆ ಯಾರೂ ತೆರೆಯರು.


ಪರಲೋಕರಾಜ್ಯದ ಬೀಗದ ಕೈಗಳನ್ನು ನಿನಗೆ ಕೊಡುವೆನು; ಭೂಲೋಕದಲ್ಲಿ ನೀನು ಯಾವದನ್ನು ಕಟ್ಟುತ್ತೀಯೋ, ಅದು ಪರಲೋಕದಲ್ಲಿಯೂ ಕಟ್ಟಿರುವದು; ಮತ್ತು ಭೂಲೋಕದಲ್ಲಿ ನೀನು ಯಾವದನ್ನು ಬಿಚ್ಚುತ್ತೀಯೋ ಅದು ಪರಲೋಕದಲ್ಲಿಯೂ ಬಿಚ್ಚಿರುವದು ಅಂದನು.


ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ಇಗೋ, ಯಾರೂ ಕಟ್ಟದಹಾಗೆ ಕೆಡವಿಬಿಡುವನು, ಯಾರೂ ಬಿಡಿಸದಂತೆ ಸೆರೆಹಾಕುವನು.


ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.


ಯೇಸು ಅವನಿಗೆ - ನಾನೇ ಮಾರ್ಗವೂ ಸತ್ಯವೂ ಜೀವವೂ ಆಗಿದ್ದೇನೆ; ನನ್ನ ಮೂಲಕವಾಗಿ ಹೊರತು ಯಾರೂ ತಂದೆಯ ಬಳಿಗೆ ಬರುವದಿಲ್ಲ.


ಆತನು ಮಹಾಪುರುಷನಾಗಿ ಪರಾತ್ಪರನ ಕುಮಾರನೆನಿಸಿಕೊಳ್ಳುವನು; ಇದಲ್ಲದೆ ದೇವರಾಗಿರುವ ಕರ್ತನು ಆತನ ಮೂಲಪಿತನಾದ ದಾವೀದನ ಸಿಂಹಾಸನವನ್ನು ಆತನಿಗೆ ಕೊಡುವನು.


ಆ ದೆವ್ವವು - ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು; ನೀನು ದೇವರು ಪ್ರತಿಷ್ಠಿಸಿದವನೇ ಎಂದು ಕೂಗಿ ಹೇಳಿತು.


ಕ್ರಿವಿುಪ್ರಾಯವಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ; ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾವಿುಯು ನಿನಗೆ ವಿಮೋಚಕನು ಎಂದು ಯೆಹೋವನು ಅನ್ನುತ್ತಾನೆ.


ದೇವರ ಮಗನು ಬಂದು ನಾವು ಸತ್ಯವಾಗಿರುವಾತನನ್ನು ಅರಿತುಕೊಳ್ಳುವ ಹಾಗೆ ನಮಗೆ ವಿವೇಕವನ್ನು ಕೊಟ್ಟಿದ್ದಾನೆಂಬದು ನಮಗೆ ಗೊತ್ತದೆ. ಮತ್ತು ನಾವು ದೇವರ ಮಗನಾದ ಯೇಸು ಕ್ರಿಸ್ತನಲ್ಲಿ ಇರುವವರಾಗಿ ಸತ್ಯವಾಗಿರುವಾತನಲ್ಲಿದ್ದೇವೆ. ಆತನು ಸತ್ಯದೇವರೂ ನಿತ್ಯಜೀವವೂ ಆಗಿದ್ದಾನೆ.


ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು; ಅದರ ಮೇಲೆ ಕೂತಿದ್ದವನಿಗೆ ನಂಬಿಗಸ್ತನೂ ಸತ್ಯವಂತನೂ ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ;


ಲವೊದಿಕೀಯದಲ್ಲಿರುವ ಸಭೆಯ ದೂತನಿಗೆ ಬರೆ - ಆಮೆನ್ ಎಂಬಾತನು ಅಂದರೆ ನಂಬತಕ್ಕ ಸತ್ಯಸಾಕ್ಷಿಯೂ ದೇವರ ಸೃಷ್ಟಿಗೆ ಮೂಲನೂ ಆಗಿರುವಾತನು ಹೇಳುವದೇನಂದರೆ -


ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು.


ಅವರು ಹೊಸ ಹಾಡನ್ನು ಹಾಡುತ್ತಾ - ನೀನು ಸುರುಳಿಯನ್ನು ತೆಗೆದುಕೊಂಡು ಅದರ ಮುದ್ರೆಗಳನ್ನು ಒಡೆಯುವದಕ್ಕೆ ಯೋಗ್ಯನೇ; ನೀನು ಯಜ್ಞಾರ್ಪಿತನಾಗಿ ನಿನ್ನ ರಕ್ತದಿಂದ ಸಕಲ ಕುಲ ಭಾಷೆ ಪ್ರಜೆ ಜನಾಂಗಗಳವರಿಂದ ಮನುಷ್ಯರನ್ನು ದೇವರಿಗಾಗಿ ಕೊಂಡುಕೊಂಡಿ;


ಅದು - ನೀನು ನೋಡುವದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬೀ ಏಳು ಪಟ್ಟಣಗಳ ಸಭೆಗಳಿಗೆ ಕಳುಹಿಸಬೇಕೆಂದು ನುಡಿಯಿತು.


ನೀವು ಪರಿಶುದ್ಧನೂ ನೀತಿವಂತನೂ ಆಗಿರುವ ಪುರುಷನನ್ನು ಬೇಡವೆಂದು ಹೇಳಿ ಕೊಲೆಗಾರನಾದ ಮನುಷ್ಯನನ್ನು ಬಿಡಿಸಿಕೊಡಬೇಕೆಂದು ಬೇಡಿಕೊಂಡು ಜೀವನಾಯಕನನ್ನು ಕೊಲ್ಲಿಸಿದಿರಿ.


ಭೂಮ್ಯಾಕಾಶಗಳು ಅಳಿದುಹೋಗುವವು, ಆದರೆ ನನ್ನ ಮಾತುಗಳು ಅಳಿದು ಹೋಗುವದೇ ಇಲ್ಲ.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ಆ ದೆವ್ವವು - ಹಾ! ನಜರೇತಿನ ಯೇಸುವೇ, ನಮ್ಮ ಗೊಡವೆ ನಿನಗೇಕೆ? ನಮ್ಮನ್ನು ನಾಶಮಾಡುವದಕ್ಕೆ ಬಂದೆಯಾ? ನಿನ್ನನ್ನು ಬಲ್ಲೆನು. ನೀನು ದೇವರು ಪ್ರತಿಷ್ಠಿಸಿದವನೇ ಎಂದು ಅಬ್ಬರಿಸಿ ಹೇಳಿತು.


ಎಲೈ, [ಇಸ್ರಾಯೇಲೇ], [ಅವನಂತೆ ನೀನೂ] ನಿನಗೆ ಗೊತ್ತಿಲ್ಲದ ಜನಾಂಗವನ್ನು ನಿನ್ನ ಅಧೀನಕ್ಕೆ ಕರೆಯುವಿ, ಇಸ್ರಾಯೇಲಿನ ಸದಮಲಸ್ವಾವಿು ಎನಿಸಿಕೊಳ್ಳುವ ನಿನ್ನ ದೇವರಾದ ಯೆಹೋವನು ನಿನಗೆ ವೈಭವ ಕೊಟ್ಟಿರುವದನ್ನು ನೋಡಿ ನಿನ್ನನ್ನು ತಿಳಿಯದ ಜನಾಂಗವು ನಿನ್ನ ಆಶ್ರಯಕ್ಕೆ ಓಡಿಬರುವದು.


ದೇವರ ದಾಸನಾದ ಮೋಶೆಯ ಹಾಡನ್ನೂ ಯಜ್ಞದ ಕುರಿಯಾದಾತನ ಹಾಡನ್ನೂ ಹಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ಕೃತ್ಯಗಳು ಮಹತ್ತಾದವುಗಳೂ ಆಶ್ಚರ್ಯಕರವಾದವುಗಳೂ ಆಗಿವೆ; ಸರ್ವಜನಾಂಗಗಳ ಅರಸನೇ, ನಿನ್ನ ಮಾರ್ಗಗಳು ನ್ಯಾಯವೂ ಸತ್ಯವೂ ಆಗಿವೆ;


ಮನಃಪೂರ್ವಕವಾಗಿ ತಿರಸ್ಕರಿಸಲ್ಪಟ್ಟವನೂ ಅನ್ಯಜನಾಂಗಕ್ಕೆ ಅಸಹ್ಯನೂ ಜನದೊಡೆಯರ ಸೇವಕನೂ ಆದವನಿಗೆ ಇಸ್ರಾಯೇಲಿನ ವಿಮೋಚಕನೂ ಸದಮಲಸ್ವಾವಿುಯೂ ಆದ ಯೆಹೋವನು ಹೀಗೆ ಹೇಳುತ್ತಾನೆ - ಯೆಹೋವನ ಪ್ರಾಮಾಣಿಕತೆಯನ್ನೂ ಇಸ್ರಾಯೇಲಿನ ಸದಮಲಸ್ವಾವಿುಯು ನಿನ್ನನ್ನು ಪರಿಗ್ರಹಿಸಿರುವದನ್ನೂ ಅರಸರು ನೋಡಿ ಎದ್ದು ನಿಲ್ಲುವರು, ಅಧಿಪತಿಗಳು ಅಡ್ಡಬೀಳುವರು.


ನಿನ್ನ ವಿಮೋಚಕನೂ ಇಸ್ರಾಯೇಲ್ಯರ ಸದಮಲಸ್ವಾವಿುಯೂ ಆದ ಯೆಹೋವನು ಹೀಗನ್ನುತ್ತಾನೆ - ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಯಿಸುವವನಾಗಿದ್ದೇನೆ.


ನಮ್ಮ ವಿಮೋಚಕನಿಗೆ ಸೇನಾಧೀಶ್ವರನಾದ ಯೆಹೋವನೆಂಬ ನಾಮಧೇಯ, ಆತನೇ ಇಸ್ರಾಯೇಲ್ಯರ ಸದಮಲಸ್ವಾವಿು!


ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲ ಸ್ವಾವಿುಯೇ ಸೃಷ್ಟಿಸಿದ್ದಾನೆ ಎಂದು ಎಲ್ಲರೂ ಕಂಡು ತಿಳಿದು ಮನಮುಟ್ಟಿ ಗ್ರಹಿಸಿಕೊಳ್ಳುವರು.


ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವದು; ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವದು; ನೀನಂತು ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾವಿುಯಲ್ಲಿ ಹೆಚ್ಚಳಪಡುವಿ.


ಆಗ ಒಬ್ಬನು ಮತ್ತೊಬ್ಬನಿಗೆ - ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು; ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ ಎಂದು ಕೂಗಿ ಹೇಳಿದನು.


ಯೆಹೋವನ ಮಾರ್ಗಗಳೆಲ್ಲಾ ನೀತಿಯುಳ್ಳವುಗಳು; ಆತನು ಎಲ್ಲಾ ಕಾರ್ಯಗಳಲ್ಲಿ ಕೃಪೆತೋರಿಸುವವನು.


ನಮಗೆ ಗುರಾಣಿಯಂತಿರುವ ನಮ್ಮ ಅರಸನು ಯೆಹೋವನವನೇ; ಅವನು ಇಸ್ರಾಯೇಲ್ಯರ ಸದಮಲಸ್ವಾವಿುಯ ಸ್ವಕೀಯನು.


ಆತನು ಹಾದುಹೋದರೂ ಸೆರೆಯಲ್ಲಿಟ್ಟರೂ ನ್ಯಾಯವಿಚಾರಣೆಗೆ ಕರೆದರೂ ಆತನನ್ನು ತಳ್ಳಿಬಿಡುವವರು ಯಾರು?


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಇಗೋ, ಎಲ್ಲವನ್ನು ಹೊಸದುಮಾಡುತ್ತೇನೆ ಅಂದನು. ಮತ್ತು ಒಬ್ಬನು ನನಗೆ - ಇದನ್ನು ಬರೆ; ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ ಎಂದು ಹೇಳಿದನು.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿ ಎರಡನೆಯ ಸಾರಿ -


ಆಮೇಲೆ ಯಜ್ಞವೇದಿಯು ಮಾತಾಡುತ್ತಾ - ದೇವರಾದ ಕರ್ತನೇ, ಸರ್ವಶಕ್ತನೇ, ನಿನ್ನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ ನಿಜ ಎಂದು ಹೇಳುವದನ್ನು ಕೇಳಿದೆನು.


ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಆ ಜೀವಿಗಳಿಗೆ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರವಿುಸಿಕೊಳ್ಳದೆ - ದೇವರಾದ ಕರ್ತನು ಪರಿಶುದ್ಧನು ಪರಿಶುದ್ಧನು ಪರಿಶುದ್ಧನು; ಆತನು ಸರ್ವಶಕ್ತನು, ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು ಎಂದು ಹೇಳುತ್ತವೆ.


ಎಫೆಸದಲ್ಲಿರುವ ಸಭೆಯ ದೂತನಿಗೆ ಬರೆ - ಏಳು ನಕ್ಷತ್ರಗಳನ್ನು ಬಲಗೈಯಲ್ಲಿ ಹಿಡಿದುಕೊಂಡು ಏಳು ಚಿನ್ನದ ದೀಪಸ್ತಂಭಗಳ ಮಧ್ಯದಲ್ಲಿ ತಿರುಗಾಡುವಾತನು ಹೇಳುವದೇನಂದರೆ -


[ನೀವು ಹಿಡಿದಿರುವ] ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; ಇಸ್ರಾಯೇಲ್ಯರ ಸದಮಲಸ್ವಾವಿುಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ ಎಂದು ಹೇಳುತ್ತಾರೆ.


ಯಾಕಂದರೆ ನೀನು ನನ್ನ ಜೀವಾತ್ಮವನ್ನು ಪಾತಾಳದಲ್ಲಿ ಬಿಡುವದಿಲ್ಲ; ನಿನ್ನ ಪ್ರಿಯನಿಗೆ ಅಧೋಲೋಕವನ್ನು ನೋಡಗೊಡಿಸುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು