Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 4:1 - ಕನ್ನಡ ಸತ್ಯವೇದವು J.V. (BSI)

1 ಇವುಗಳಾದ ಮೇಲೆ ನಾನು ನೋಡಿದಾಗ ಪರಲೋಕದಲ್ಲಿ ತೆರೆದಿದ್ದ ಬಾಗಿಲು ಕಾಣಿಸಿತು; ಮತ್ತು ನನ್ನ ಸಂಗಡ ತುತೂರಿಯು ಮಾತಾಡುತ್ತದೋ ಎಂಬಂತೆ ನಾನು ಮೊದಲು ಕೇಳಿದ್ದ ವಾಣಿಯು ಕೇಳಿಸಿತು. ಇಲ್ಲಿಗೆ ಏರಿ ಬಾ, ಮುಂದೆ ಆಗಬೇಕಾದವುಗಳನ್ನು ನಿನಗೆ ತೋರಿಸುವೆನು ಎಂದು ಹೇಳಿತು. ಕೂಡಲೆ ದೇವರಾತ್ಮವಶನಾದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆನಂತರ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿರುವ ಒಂದು ಬಾಗಿಲು ಕಾಣಿಸಿತು. ಮೊದಲು ನನ್ನೊಡನೆ ಮಾತನಾಡಿದ ವಾಣಿಯು ತುತ್ತೂರಿಯಂತೆ ಮಾತನಾಡುತ್ತದೋ ಎಂಬಂತೆ ನನಗೆ ಕೇಳಿಸಿತು. ಅದು, “ಇಲ್ಲಿಗೆ ಏರಿ ಬಾ, ಮುಂದೆ ಸಂಭವಿಸಬೇಕಾದವುಗಳನ್ನು ನಿನಗೆ ತೋರಿಸಿ ಕೊಡುವೆನು” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

1 ಇದಾದ ಬಳಿಕ ಮತ್ತೊಂದು ದಿವ್ಯದರ್ಶನವನ್ನು ಕಂಡೆ. ಸ್ವರ್ಗದ ಬಾಗಿಲು ತೆರೆದಿತ್ತು. ಮೊದಲು ನನ್ನೊಡನೆ ಮಾತನಾಡಿದ ತುತೂರಿಯಂಥ ನಾದವು ನನಗೆ ಕೇಳಿಸಿತು. ಅದು, “ಮೇಲೆ ಬಾ, ಮುಂದೆ ಸಂಭವಿಸಲಿರುವ ಘಟನೆಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ನಂತರ ನಾನು ನೋಡಿದಾಗ ನನ್ನ ಎದುರಿನಲ್ಲಿ ಪರಲೋಕದ ಬಾಗಿಲು ತೆರೆದಿರುವುದನ್ನು ಕಂಡೆನು. ನನ್ನ ಜೊತೆಯಲ್ಲಿ ಮೊದಲು ಮಾತನಾಡಿದ್ದ ಧ್ವನಿಯೇ ಮತ್ತೆ ನನ್ನೊಂದಿಗೆ ಮಾತಾಡಿತು. ಆ ಧ್ವನಿಯು ತುತೂರಿಯ ಧ್ವನಿಯಂತಿತ್ತು. ಆ ಧ್ವನಿಯು, “ಇಲ್ಲಿಗೆ ಹತ್ತಿ ಬಾ. ಮುಂದೆ ಸಂಭವಿಸುವುದನ್ನು ನಾನು ನಿನಗೆ ತೋರಿಸುತ್ತೇನೆ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಇವುಗಳಾದ ಮೇಲೆ ನಾನು ನೋಡಿದಾಗ, ಪರಲೋಕದಲ್ಲಿ ತೆರೆದಿದ್ದ ಒಂದು ದ್ವಾರವು ಕಾಣಿಸಿತು. ನನ್ನೊಂದಿಗೆ ತುತೂರಿಯ ಧ್ವನಿಯಂತೆ ಮಾತನಾಡಿದ, ನಾನು ಮೊದಲು ಕೇಳಿದ ಧ್ವನಿಯಿಂದ, “ಬಾ, ಮುಂದೆ ಸಂಭವಿಸಲಿಕ್ಕೆ ಇರುವವುಗಳನ್ನು ನಿನಗೆ ತೋರಿಸುವೆನು,” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

1 ಅತ್ತಾ ಅನಿ ಎಕ್ ದರ್ಶನ್ ಮಾಕಾ ಹೊಲೆ, ಸರ್ಗಾರ್ ಎಕ್ ದಾರ್ ಉಗಡಲ್ಲೆ ಮಿಯಾ ಬಗಟ್ಲೊ. ಅನಿ ಅದ್ದಿ ಆಯ್ಕಲ್ಲ್ಯಾ ಪಂವ್ಯಾಚ್ಯಾ ಅವಾಜಾ ಸಾರ್ಕೆ ಆಯ್ಕೊ ಯೆಲ್ಲೊ ಧನ್ ಮಾಕಾ ಆಯ್ಕೊ ಯೆಲೊ. ತ್ಯಾ ಧನಾನ್,“ತಿಯಾ ವರ್ತಿ ಚೆಡುನ್ ಯೆ, ಹೆಚ್ಯಾ ಮಾನಾ ಕಾಯ್ -ಕಾಯ್ ಹೊವ್ಕ್ ಪಾಜೆ ಮನುನ್ ಮಿಯಾ ತುಕಾ ದಾಕ್ವುನ್ ದಿತಾ”. ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 4:1
21 ತಿಳಿವುಗಳ ಹೋಲಿಕೆ  

ಆಮೇಲೆ ಅವರಿಗೆ - ಇಲ್ಲಿ ಮೇಲಕ್ಕೆ ಬನ್ನಿರಿ ಎಂದು ಆಕಾಶದ ಮಹಾವಾಣಿಯು ಹೇಳಿತು. ಅದನ್ನು ಅವರು ಕೇಳಿ ಮೇಘ ವಿಮಾನದಲ್ಲಿ ಪರಲೋಕಕ್ಕೆ ಏರಿಹೋದರು; ಅವರ ಶತ್ರುಗಳು ಅವರನ್ನು ನೋಡುತ್ತಾ ಇದ್ದರು.


ಯೆಹೋವನು ಮೋಶೆಗೆ - ನೀನು ಬೆಟ್ಟವನ್ನು ಹತ್ತಿ ಬಂದು ನನ್ನ ಹತ್ತಿರದಲ್ಲೇ ಇರು; ನೀನು ಆ ಧರ್ಮಶಾಸ್ತ್ರವನ್ನೂ ಆಜ್ಞೆಗಳನ್ನೂ ಜನರಿಗೆ ಬೋಧಿಸುವಂತೆ ನಾನು ಅವುಗಳನ್ನು ಬರೆದಿರುವ ಶಿಲಾಶಾಸನಗಳನ್ನು ನಿನಗೆ ಕೊಡುತ್ತೇನೆ ಎಂದು ಹೇಳಲಾಗಿ


ಆದದರಿಂದ ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ.


ನಾನು ಕರ್ತನ ದಿನದಲ್ಲಿ ದೇವರಾತ್ಮವಶನಾಗಿ ನನ್ನ ಹಿಂದುಗಡೆ ತುತೂರಿಯ ಶಬ್ದದಂತಿರುವ ಮಹಾ ಶಬ್ದವನ್ನು ಕೇಳಿದೆನು.


ಮಾಡಿಸಿಕೊಂಡ ಕೂಡಲೆ ಆತನು ನೀರಿನೊಳಗಿಂದ ಮೇಲಕ್ಕೆ ಬರಲು ಆಕಾಶವೊಡೆದು ದೇವರಾತ್ಮವು ಪಾರಿವಾಳದ ಹಾಗೆ ತನ್ನ ಮೇಲೆ ಇಳಿಯುವದನ್ನು ಕಂಡನು.


ಆಮೇಲೆ ಅವನು ನನಗೆ - ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ; ಪ್ರವಾದಿಗಳ ಆತ್ಮಗಳನ್ನು ಪ್ರೇರೇಪಿಸುವ ದೇವರಾದ ಕರ್ತನು ಬೇಗನೆ ಸಂಭವಿಸಬೇಕಾಗಿರುವ ಸಂಗತಿಗಳನ್ನು ತನ್ನ ದಾಸರಿಗೆ ತಿಳಿಯಪಡಿಸುವದಕ್ಕಾಗಿ ತನ್ನ ದೂತನನ್ನು ಕಳುಹಿಸಿಕೊಟ್ಟನು.


ಏಳನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ವಾಯುಮಂಡಲದ ಮೇಲೆ ಹೊಯ್ಯಲು ದೇವಾಲಯದಲ್ಲಿರುವ ಸಿಂಹಾಸನದ ಕಡೆಯಿಂದ ಮಹಾ ಶಬ್ದವು ಉಂಟಾಗಿ - ಆಯಿತು ಎಂದು ಹೇಳಿತು.


ಅಗೋ, ಆಕಾಶವು ತೆರೆದಿರುವದನ್ನೂ ಮನುಷ್ಯಕುಮಾರನು ದೇವರ ಬಲಗಡೆಯಲ್ಲಿ ನಿಂತಿರುವದನ್ನೂ ನೋಡುತ್ತೇನೆ ಎಂದು ಹೇಳಿದನು.


ಸತ್ಯದ ಆತ್ಮನು ಬಂದಾಗ ಆತನು ನಿಮ್ಮನ್ನು ನಡಿಸಿಕೊಂಡು ಹೋಗಿ ಸಕಲ ವಿಷಯದಲ್ಲಿಯೂ ಸತ್ಯಕ್ಕೆ ಸೇರಿಸುವನು. ಆತನು ತನ್ನಷ್ಟಕ್ಕೆ ತಾನೇ ಮಾತಾಡದೆ ಕೇಳಿದ ಮಾತುಗಳನ್ನೇ ಆಡುವನು; ಮತ್ತು ಮುಂದಾಗುವ ಸಂಗತಿಗಳನ್ನು ನಿಮಗೆ ತಿಳಿಸುವನು.


ಜನರೆಲ್ಲಾ ದೀಕ್ಷಾಸ್ನಾನ ಮಾಡಿಸಿಕೊಂಡಾಗ ಯೇಸು ಸಹ ಸ್ನಾನ ಮಾಡಿಸಿಕೊಂಡು ಪ್ರಾರ್ಥನೆ ಮಾಡುತ್ತಿರುವಲ್ಲಿ ಆಕಾಶವು ತೆರೆಯಿತು;


ಯೆಹೋವನು ಅವನಿಗೆ - ನೀನು ಇಳಿದು ಹೋಗಿ ಆರೋನನನ್ನು ಕರೆದುಕೊಂಡು ಮೇಲಕ್ಕೆ ಬಾ; ಆದರೆ ಯಾಜಕರೂ ಜನರೂ ಆ ಮೇರೆಯನ್ನು ದಾಟಿ ಯೆಹೋವನ ಹತ್ತಿರ ಬರಕೂಡದು; ದಾಟಿದರೆ ಯೆಹೋವನು ಅವರನ್ನು ಫಕ್ಕನೆ ಸಂಹಾರ ಮಾಡಾನು ಎಂದು ಹೇಳಿದನು.


ಅವನು ಧ್ಯಾನ ಪರವಶನಾಗಿ ಆಕಾಶವು ತೆರೆದಿರುವದನ್ನೂ ನಾಲ್ಕು ಮೂಲೆಗಳನ್ನು ಹಿಡಿದಿದ್ದ ದೊಡ್ಡ ಜೋಳಿಗೆಯಂತಿರುವ ಏನೋ ಒಂದು ವಸ್ತುವು ಭೂವಿುಯ ಮೇಲೆ ಇಳಿಯುವದನ್ನೂ ಕಂಡನು.


ಯೇಸು ಸ್ನಾನಮಾಡಿಸಿಕೊಂಡ ಕೂಡಲೆ ನೀರಿನಿಂದ ಮೇಲಕ್ಕೆ ಬರಲು ಇಗೋ, ಆತನಿಗೆ ಆಕಾಶವು ತೆರೆಯಿತು; ಮತ್ತು ದೇವರ ಆತ್ಮ ಪಾರಿವಾಳದ ಹಾಗೆ ಇಳಿದು ತನ್ನ ಮೇಲೆ ಬರುವದನ್ನು ಕಂಡನು.


ಐಗುಪ್ತದೇಶಕ್ಕೆ ಬಂದ ಇಸ್ರಾಯೇಲನ ಮಕ್ಕಳ ಹೆಸರುಗಳು -


ಕೆಬಾರ್ ನದಿಯ ಹತ್ತಿರ ಸೆರೆಯಾಗಿ ವಾಸಿಸುತ್ತಿದ್ದ ಯೆಹೂದ್ಯರ ಮಧ್ಯದಲ್ಲಿ ನಾನು ಸೇರಿಕೊಂಡಿರುವಾಗ ಮೂವತ್ತನೆಯ ವರುಷದ ನಾಲ್ಕನೆಯ ತಿಂಗಳಿನ ಐದನೆಯ ದಿನದಲ್ಲಿ ಆಕಾಶವು ಒಡೆದು ನನಗೆ ದೇವದರ್ಶನಗಳು ಉಂಟಾದವು.


ನನ್ನ ಸಂಗಡ ಮಾತಾಡುತ್ತಿದ್ದ ಶಬ್ದವು ಯಾರದೆಂದು ನೋಡುವದಕ್ಕೆ ಹಿಂದಕ್ಕೆ ತಿರುಗಿದೆನು.


ಆಗ ಪರಲೋಕದಲ್ಲಿರುವ ದೇವಾಲಯವು ತೆರೆಯಿತು; ಆತನ ಆಲಯದಲ್ಲಿ ಆತನ ಒಡಂಬಡಿಕೆಯ ಮಂಜೂಷವು ಕಾಣಿಸಿತು; ಇದಲ್ಲದೆ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಭೂಕಂಪವೂ ದೊಡ್ಡ ಆನೆಕಲ್ಲಿನ ಮಳೆಯೂ ಉಂಟಾದವು.


ಪರಲೋಕವು ತೆರೆದಿರುವದನ್ನು ನಾನು ಕಂಡೆನು. ಆಗ ಇಗೋ, ಬಿಳೀ ಕುದುರೆಯು ನನಗೆ ಕಾಣಿಸಿತು; ಅದರ ಮೇಲೆ ಕೂತಿದ್ದವನಿಗೆ ನಂಬಿಗಸ್ತನೂ ಸತ್ಯವಂತನೂ ಎಂದು ಹೆಸರು. ಆತನು ನೀತಿಯಿಂದ ನ್ಯಾಯವಿಚಾರಿಸುತ್ತಾನೆ, ನೀತಿಯಿಂದ ಯುದ್ಧಮಾಡುತ್ತಾನೆ;


ನೀನು ಪ್ರಭುವನ್ನು ದರ್ಶನಮಾಡುತ್ತಿರಲು ಅವನ ಸಮಕ್ಷಮ ಕೆಳಗಣಸ್ಥಾನಕ್ಕೆ ನೂಕಿಸಿಕೊಳ್ಳುವದಕ್ಕಿಂತಲೂ ಇನ್ನೂ ಮೇಲಕ್ಕೆ ಬಾ ಎಂದು ಕರೆಯಿಸಿಕೊಳ್ಳುವದು ಲೇಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು