Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 4:3 - ಕನ್ನಡ ಸತ್ಯವೇದವು J.V. (BSI)

3 ಕೂತಿದ್ದವನು ಕಣ್ಣಿಗೆ ಸೂರ್ಯಕಾಂತ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲು ಪಚ್ಚೆಯಂತೆ ತೋರುತ್ತಿದ್ದ ಮುಗಿಲುಬಿಲ್ಲು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಕುಳಿತಿದ್ದವನು ಕಣ್ಣಿಗೆ ಸೂರ್ಯಕಾಂತಿ ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಕಾಮನಬಿಲ್ಲು ಇತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಅವರ ಮುಖ ಸೂರ್ಯಕಾಂತ ಮತ್ತು ಪದ್ಮರಾಗ ಹರಳುಗಳಂತೆ ಹೊಳೆಯುತ್ತಿತ್ತು. ಸಿಂಹಾಸನದ ಸುತ್ತಲೂ ಮರಕತದಂತೆ ಹೊಳೆಯುವ ಮುಗಿಲುಬಿಲ್ಲೊಂದು ಹೊಳೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಸಿಂಹಾಸನದ ಮೇಲೆ ಕುಳಿತಿದ್ದಾತನು ಅಮೂಲ್ಯವಾದ ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದನು. ಸಿಂಹಾಸನದ ಸುತ್ತಲೂ ಪಚ್ಚೆಬಣ್ಣದ ಕಾಮನಬಿಲ್ಲಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಆಸೀನರಾದವರು ಸೂರ್ಯಕಾಂತ, ಪದ್ಮರಾಗ ಮಣಿಗಳಂತೆ ಕಾಣುತ್ತಿದ್ದರು. ಸಿಂಹಾಸನದ ಸುತ್ತಲೂ ಪಚ್ಚೆಯಂತೆ ತೋರುತ್ತಿದ್ದ ಮಳೆಬಿಲ್ಲು ಹೊಳೆಯುತ್ತಿತ್ತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

3 ತ್ಯಾ ಬಸಲ್ಲ್ಯಾಚೆ ತೊಂಡ್ ಸುರ್ಯಕಾಂತ್ ಅನಿ ಪದ್ಮರಾಗ್ ಮೊತಿಯಾಂಚ್ಯಾ ಸರ್ಕೊ ದಿಸುಲಾಗಲ್ಲೊ, ಸಿವಾಸನಾಚ್ಯಾ ಭೊತ್ಯಾನಿ ಪಚ್ಚೆ ಸರ್ಕೆ ದಿಸ್ತಲೆ ಎಕ್ ಕಾಮನ್‍ಬಿಲ್ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 4:3
13 ತಿಳಿವುಗಳ ಹೋಲಿಕೆ  

ಮಳೆಗಾಲದಲ್ಲಿ ಮೇಘಮಂಡಲದೊಳಗೆ ಬಿಲ್ಲು ಹೊಳೆಯುವಂತೆ ಆತನ ಸುತ್ತಣ ಪ್ರಕಾಶವು ಹೊಳೆಯುತ್ತಿತ್ತು. ಹೀಗೆ ಯೆಹೋವನ ಮಹಿಮಾದ್ಭುತ ದರ್ಶನವು ಆಯಿತು. ಇದು ಕಣ್ಣಿಗೆ ಬೀಳಲು ನಾನು ಅಡ್ಡಬಿದ್ದು ಮಾತಾಡುವಾತನ ವಾಣಿಯನ್ನು ಕೇಳಿದೆನು.


ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು; ಅವನ ತಲೆಯ ಮೇಲೆ ಮುಗಿಲುಬಿಲ್ಲು ಇತ್ತು; ಅವನ ಮುಖವು ಸೂರ್ಯನೋಪಾದಿಯಲ್ಲಿತ್ತು;


ದೇವರ ಉದ್ಯಾನವನವಾದ ಏದೆನಿನಲ್ಲಿ ನೀನಿದ್ದಿ; ಮಾಣಿಕ್ಯ ಪುಷ್ಯರಾಗ ಪಚ್ಚೆ ಪೀತರತ್ನ ಬೆರುಲ್ಲ ವೈಡೂರ್ಯ ನೀಲಕೆಂಪರಲು ಸ್ಫಟಿಕ ಈ ನವರತ್ನಗಳಿಂದ ಭೂಷಿತವಾಗಿದ್ದಿ; ನಿನ್ನಲ್ಲಿನ [ಈ ರತ್ನಗಳ] ಗೂಡುಗಳೂ ಮನೆಗಳೂ ಸುವರ್ಣ ರಚಿತವಾಗಿದ್ದವು; ನಿನ್ನ ಸೃಷ್ಟಿಯ ದಿನದಲ್ಲಿ ಸಿದ್ಧವಾದವು.


ಅವುಗಳ ತಲೆಗಳ ಮೇಲ್ಗಡೆಯ ನೆಲಗಟ್ಟಿನ ಮೇಲೆ ಇಂದ್ರ ನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು; ಅದರ ಮೇಲೆ ನರರೂಪದಂಥ ರೂಪವುಳ್ಳ ಒಬ್ಬಾತನು ಆಸೀನನಾಗಿದ್ದನು.


ಅವರಿಗೆ ಇಸ್ರಾಯೇಲ್ಯರ ದೇವರ ದರ್ಶನವಾಯಿತು. ಆಕಾಶಮಂಡಲದಂತೆ ಅತಿ ನಿರ್ಮಲವಾದ ಇಂದ್ರನೀಲಮಣಿಯ ನೆಲಗಟ್ಟು ಆತನ ಪಾದಪೀಠವಾಗಿತ್ತು.


ಎರಡನೆಯ ಸಾಲಿನಲ್ಲಿ ಕೆಂಪರಲು ನೀಲ ಪಚ್ಚೆಗಳೂ,


ಎರಡನೆಯ ಸಾಲಿನಲ್ಲಿ ಕೆಂಪರಲು ನೀಲ ಪಚ್ಚೆಗಳನ್ನೂ;


ಅರಸನಾದ ಉಜ್ಜೀಯನು ಕಾಲವಾದ ವರುಷದಲ್ಲಿ ಕರ್ತನು ಉನ್ನತೋನ್ನತ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.


ಇಗೋ, ನಾನು ನೋಡಲಾಗಿ ಕೆರೂಬಿಗಳ ತಲೆಗಳ ಮೇಲಣ ನೆಲಗಟ್ಟಿನ ಮೇಲ್ಗಡೆ ಇಂದ್ರನೀಲಮಣಿಯಂತೆ ಹೊಳೆಯುವ ಸಿಂಹಾಸನಾಕಾರವು ಕಾಣಿಸಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು