Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 4:6 - ಕನ್ನಡ ಸತ್ಯವೇದವು J.V. (BSI)

6 ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ತೋಚಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಮುಂದೆ ತುಂಬಾ ಕಣ್ಣುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಇದಲ್ಲದೆ, ಸಿಂಹಾಸನದ ಮುಂದೆ ಸ್ಫಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಂಡುಬಂದಿತು. ಸಿಂಹಾಸನದ ಸುತ್ತಲೂ ಅದರ ನಾಲ್ಕು ಪಾರ್ಶ್ವಗಳಲ್ಲಿ ನಾಲ್ಕು ಜೀವಿಗಳು ಇದ್ದವು. ಅವುಗಳಿಗೆ ಮುಂದೆಯೂ ಹಿಂದೆಯೂ ಅನೇಕ ಕಣ್ಣುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಇದಲ್ಲದೆ ಸಿಂಹಾಸನದ ಮುಂದೆ ಗಾಜಿನ ಸಮುದ್ರದಂತೆ ಕಾಣುವ ವಸ್ತುವೊಂದಿತ್ತು. ಅದು ಸ್ಫಟಿಕದಂತೆ ಸ್ಪಚ್ಛವಾಗಿತ್ತು. ಆ ಸಿಂಹಾಸನದ ಮುಂದೆ ಮತ್ತು ಅದರ ಪ್ರತಿಯೊಂದು ಮಗ್ಗುಲಿನಲ್ಲೂ ನಾಲ್ಕು ಜೀವಿಗಳಿದ್ದವು. ಈ ಜೀವಿಗಳ ಹಿಂಭಾಗದಲ್ಲೆಲ್ಲಾ ಮತ್ತು ಮುಂಭಾಗದಲ್ಲೆಲ್ಲಾ ಕಣ್ಣುಗಳು ತುಂಬಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಸಿಂಹಾಸನದ ಮುಂದೆ ಸ್ಪಟಿಕದಂಥ ಗಾಜಿನ ಸಮುದ್ರವೊಂದು ಇದ್ದಂತೆ ಕಾಣಿಸಿತು. ಸಿಂಹಾಸನದ ಮಧ್ಯದಲ್ಲಿ, ಅದರ ಸುತ್ತಲೂ ನಾಲ್ಕು ಜೀವಿಗಳಿದ್ದವು. ಅವುಗಳಿಗೆ ಹಿಂದೆಯೂ ಮುಂದೆಯೂ ತುಂಬಾ ಕಣ್ಣುಗಳಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಎವ್ಡೆಚ್ ನ್ಹಯ್ ಸಿವಾಸನಾಚ್ಯಾ ಇದ್ರಾಕ್ ಝಳ್‍ಝಳ್ತಲ್ಯಾ ಕಾಜೆಚೆ ಸಮುಂದರ್ ಅಸಲ್ಲ್ಯಾ ಸರ್ಕೆ ಹೊತ್ತೆ ತವ್ಡೆಚ್ ನ್ಹಯ್ ತೆಚ್ಯಾಫಿಡೆ ಸ್ಪಟಿಕ್ ಸಾರ್ಕೆ ಪವಿತ್ರ್ ಹೊತ್ತೆ. ಸಿವಾಸನಾಕ್ಡೆ ತೆಕಾ ಚಾರಿ ಬಾಜಿನಿ ಚಾರ್ ಸಾವ್ಜಾ ಹೊತ್ತಿ. ತೆಂಕಾ ಫಾಟಿಬಿ ಫಿಡೆಬಿ ಸಗ್ಳ್ಯಾಬರ್ ಡೊಳೆ ಹೊತ್ತೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 4:6
25 ತಿಳಿವುಗಳ ಹೋಲಿಕೆ  

ಬೆಂಕಿ ಬೆರೆತ ಗಾಜಿನ ಸಮುದ್ರವೋ ಎಂಬಂತೆ ಏನೋ ಒಂದು ನನಗೆ ಕಾಣಿಸಿತು. ಆಗ ಮೃಗದ ವಿಗ್ರಹಕ್ಕೆ ನಮಸ್ಕರಿಸದೆಯೂ ಅದರ ಹೆಸರಿನ ಅಂಕೆಯನ್ನು ಮುದ್ರೆಹಾಕಿಸಿಕೊಳ್ಳದೆಯೂ ಅದರ ಮೇಲೆ ಜಯ ಹೊಂದಿದವರು ದೇವರ ಸೇವಾರ್ಥವಾದ ವೀಣೆಗಳನ್ನು ಕೈಯಲ್ಲಿ ಹಿಡಿದುಕೊಂಡು ಗಾಜಿನ ಸಮುದ್ರದ ಬಳಿಯಲ್ಲಿ ನಿಂತು


ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿ ಕೊಯ್ಯಲ್ಪಟ್ಟದ್ದಾಗಿ ನಿಂತಿರುವದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಏನಂದರೆ ಭೂವಿುಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳು.


ಅವರು ಸಿಂಹಾಸನದ ಮುಂದೆಯೂ ಆ ನಾಲ್ಕು ಜೀವಿಗಳ ಮತ್ತು ಹಿರಿಯರ ಮುಂದೆಯೂ ಹೊಸ ಹಾಡನ್ನು ಹಾಡಿದರು. ಭೂಲೋಕದೊಳಗಿಂದ ಕೊಂಡುಕೊಳ್ಳಲ್ಪಟ್ಟ ಆ ಲಕ್ಷದ ನಾಲ್ವತ್ತು ನಾಲ್ಕು ಸಾವಿರ ಜನರೇ ಹೊರತು ಬೇರೆ ಯಾರೂ ಆ ಹಾಡನ್ನು ಕಲಿಯಲಾರರು.


ಆಗ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಆ ನಾಲ್ಕು ಜೀವಿಗಳೂ ಅಡ್ಡಬಿದ್ದು ಸಿಂಹಾಸನದ ಮೇಲೆ ಕೂತಿರುವ ದೇವರಿಗೆ ನಮಸ್ಕಾರ ಮಾಡಿ - ಆಮೆನ್; ಹಲ್ಲೆಲೂಯಾ, ಅಂದರು.


ಆಗ ನಾಲ್ಕು ಜೀವಿಗಳು ಆಮೆನ್ ಅಂದವು; ಮತ್ತು ಹಿರಿಯರು ಅಡ್ಡಬಿದ್ದು ನಮಸ್ಕಾರ ಮಾಡಿದರು.


ಒಂದೊಂದು ಕೆರೂಬಿಗೆ ನಾಲ್ಕು ನಾಲ್ಕು ಮುಖಗಳಿದ್ದವು; ಮೊದಲನೇದು ಕೆರೂಬಿಯದು, ಎರಡನೇದು ಮನುಷ್ಯನದು, ಮೂರನೇದು ಸಿಂಹನದು, ನಾಲ್ಕನೇದು ಗರುಡಪಕ್ಷಿಯದು.


ಕೆರೂಬಿಗಳ ಬೆನ್ನು, ಕೈ, ರೆಕ್ಕೆ ಅಂತು ಸರ್ವಾಂಗಗಳಲ್ಲಿಯೂ ಚಕ್ರಗಳಲ್ಲಿಯೂ ಕಣ್ಣುಗಳು ಸರ್ವತ್ರ ತುಂಬಿದ್ದವು; ನಾಲ್ಕು ಕೆರೂಬಿಗಳಲ್ಲಿ ಒಂದೊಂದಕ್ಕೂ ಒಂದೊಂದು ಚಕ್ರವಿತ್ತು.


ಅಷ್ಟರಲ್ಲಿ ದೇವದೂತರೆಲ್ಲರೂ ಸಿಂಹಾಸನವು ಹಿರಿಯರು ನಾಲ್ಕು ಜೀವಿಗಳು ಇವುಗಳ ಸುತ್ತಲು ನಿಂತುಕೊಂಡಿದ್ದರು. ಅವರು ಸಿಂಹಾಸನದ ಮುಂದೆ ಅಡ್ಡಬಿದ್ದು -


ಆಮೇಲೆ ಅವನು ಸ್ಫಟಿಕದಂತೆ ಪ್ರಕಾಶಮಾನವಾಗಿದ್ದ ಜೀವಜಲದ ನದಿಯನ್ನು ನನಗೆ ತೋರಿಸಿದನು. ಅದು ದೇವರ ಮತ್ತು ಯಜ್ಞದ ಕುರಿಯಾದಾತನ ಸಿಂಹಾಸನದಿಂದ ಹೊರಟು ಪಟ್ಟಣದ ಬೀದಿಯ ಮಧ್ಯದಲ್ಲಿ ಹರಿಯುತ್ತಿತ್ತು.


ನಾಲ್ಕು ಜೀವಿಗಳಲ್ಲಿ ಒಂದು ಈ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು.


ಹನ್ನೆರಡು ಹೆಬ್ಬಾಗಿಲುಗಳು ಹನ್ನೆರಡು ಮುತ್ತುಗಳಾಗಿದ್ದವು; ಒಂದೊಂದು ಬಾಗಿಲು ಒಂದೊಂದು ಮುತ್ತಿನಿಂದ ಮಾಡಲ್ಪಟ್ಟಿತ್ತು. ಪಟ್ಟಣದ ಬೀದಿಯು ಸ್ವಚ್ಫವಾದ ಗಾಜಿನಂತಿರುವ ಸೋಸಿದ ಬಂಗಾರವಾಗಿತ್ತು.


ಆ ಪ್ರಾಕಾರವು ಸೂರ್ಯಕಾಂತಶಿಲೆಯಿಂದ ಕಟ್ಟಲ್ಪಟ್ಟಿತ್ತು. ಪಟ್ಟಣವು ಶುದ್ಧ ಗಾಜಿನಂತಿರುವ ಸೋಸಿದ ಬಂಗಾರವೇ.


ಸಿಂಹಾಸನದ ಮಧ್ಯದಲ್ಲಿರುವ ಯಜ್ಞದ ಕುರಿಯಾದಾತನು ಅವರಿಗೆ ಕುರುಬನಂತಿದ್ದು ಜೀವಜಲದ ಒರತೆಗಳ ಬಳಿಗೆ ನಡಿಸುತ್ತಾನೆ. ದೇವರು ಅವರ ಕಣ್ಣೀರನ್ನೆಲ್ಲಾ ಒರಸಿಬಿಡುವನು ಎಂದು ಹೇಳಿದನು.


ಅನಂತರ ಅವನು ಸಮುದ್ರವೆನಿಸಿಕೊಳ್ಳುವ ಒಂದು ಎರಕದ ಪಾತ್ರೆಯನ್ನು ಮಾಡಿದನು. ಅದರ ಬಾಯಿ ಚಕ್ರಾಕಾರವಾಗಿಯೂ ಅಂಚಿನಿಂದ ಅಂಚಿಗೆ ಹತ್ತು ಮೊಳವಾಗಿಯೂ ಇತ್ತು. ಅದರ ಎತ್ತರ ಐದು ಮೊಳ, ಸುತ್ತಳತೆ ಮೂವತ್ತು ಮೊಳ.


ಹೊನ್ನಾಗಲಿ ಗಾಜಾಗಲಿ ಅದಕ್ಕೆ ಸಮವಾದೀತೇ? ಚಿನ್ನದ ಆಭರಣಗಳನ್ನು ಅದಕ್ಕೆ ಬದಲು ಕೊಡುವದು ಸಾಧ್ಯವೋ?


ದೇವದರ್ಶನದ ಗುಡಾರದ ಬಾಗಲಲ್ಲಿ ಸೇವೆ ಮಾಡುತ್ತಿದ್ದ ಸ್ತ್ರೀಯರು ಕೊಟ್ಟ ತಾಮ್ರದ ದರ್ಪಣಗಳಿಂದ ಗಂಗಾಳವನ್ನೂ ಅದರ ಪೀಠವನ್ನೂ ಮಾಡಿದನು.


ಇದಲ್ಲದೆ ಸಿಂಹಾಸನದ ಸುತ್ತಲು ಇಪ್ಪತ್ತುನಾಲ್ಕು ಸಿಂಹಾಸನಗಳಿದ್ದವು; ಆ ಸಿಂಹಾಸನಗಳ ಮೇಲೆ ಶುಭ್ರವಸ್ತ್ರ ಧರಿಸಿಕೊಂಡಿದ್ದ ಇಪ್ಪತ್ತುನಾಲ್ಕು ಮಂದಿ ಹಿರಿಯರು ಕೂತಿದ್ದರು; ಅವರ ತಲೆಗಳ ಮೇಲೆ ಚಿನ್ನದ ಕಿರೀಟಗಳಿದ್ದವು.


ತೆಗೆದುಕೊಂಡಾಗ ಆ ನಾಲ್ಕು ಜೀವಿಗಳೂ ಇಪ್ಪತ್ತುನಾಲ್ಕು ಮಂದಿ ಹಿರಿಯರೂ ಯಜ್ಞದ ಕುರಿಯಾದಾತನ ಪಾದಕ್ಕೆ ಬಿದ್ದರು. ಹಿರಿಯರ ಕೈಗಳಲ್ಲಿ ವೀಣೆಗಳೂ, ದೇವಜನರ ಪ್ರಾರ್ಥನೆಗಳೆಂಬ ಧೂಪದಿಂದ ತುಂಬಿದ್ದ ಚಿನ್ನದ ಧೂಪಾರತಿಗಳೂ ಇದ್ದವು.


ಇದಲ್ಲದೆ ಸಿಂಹಾಸನವು ಜೀವಿಗಳು ಹಿರಿಯರು ಇವರ ಸುತ್ತಲು ಬಹು ಮಂದಿ ದೇವದೂತರನ್ನು ಕಂಡೆನು; ಅವರ ಸಂಖ್ಯೆಯು ಕೋಟ್ಯಾನುಕೋಟಿಯಾಗಿಯೂ ಲಕ್ಷೋಪಲಕ್ಷವಾಗಿಯೂ ಇತ್ತು.


ಯಜ್ಞದ ಕುರಿಯಾದಾತನು ಆ ಏಳು ಮುದ್ರೆಗಳಲ್ಲಿ ಒಂದು ಮುದ್ರೆಯನ್ನು ಒಡೆಯುವಾಗ ನಾನು ನೋಡಿದೆನು. ಮತ್ತು ಆ ನಾಲ್ಕು ಜೀವಿಗಳಲ್ಲಿ ಒಂದು ಜೀವಿಯು - ಬಾ ಎಂದು ಗುಡುಗಿನಂತಿದ್ದ ಸ್ವರದಿಂದ ಹೇಳುವದನ್ನು ಕೇಳಿದನು.


ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಅದು - ರೂಪಾಯಿಗೆ ಒಂದು ಸೇರು ಗೋದಿ; ರೂಪಾಯಿಗೆ ಮೂರು ಸೇರು ಜವೆ ಗೋದಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಕೆಡಿಸಬೇಡ ಎಂದು ಹೇಳಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು