Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 4:9 - ಕನ್ನಡ ಸತ್ಯವೇದವು J.V. (BSI)

9 ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕೂತಿರುವಾತನಿಗೆ ಆ ನಾಲ್ಕು ಜೀವಿಗಳು ಪ್ರಭಾವಮಾನ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವಾಗ್ಗೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಆ ಜೀವಿಗಳು ಮಹಿಮೆ ಗೌರವ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿರುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಯುಗಯುಗಾಂತರಕ್ಕೂ ಜೀವಿಸುವ ಹಾಗೂ ಸಿಂಹಾಸನಾರೂಢರಾಗಿರುವ ವ್ಯಕ್ತಿಗೆ ಆ ಜೀವಿಗಳು ಘನತೆ, ಗೌರವ ಮತ್ತು ಕೃತಜ್ಞತಾಸ್ತುತಿಗಳನ್ನು ಸಲ್ಲಿಸುತ್ತಿದ್ದವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಈ ಜೀವಿಗಳು, ಸಿಂಹಾಸನದ ಮೇಲೆ ಕುಳಿತಿರುವಾತನಿಗೆ ಪ್ರಭಾವ, ಗೌರವ ಮತ್ತು ಕೃತಜ್ಞತೆಗಳನ್ನು ಸಲ್ಲಿಸುತ್ತಿದ್ದವು. ಯುಗಯುಗಾಂತರಗಳಲ್ಲಿಯೂ ಜೀವಿಸುವವನು ಆತನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಯುಗಯುಗಾಂತರಗಳಲ್ಲಿಯೂ ಜೀವಿಸುವವರಾಗಿ, ಸಿಂಹಾಸನದ ಮೇಲೆ ಆಸೀನರಾದವರಿಗೆ ಆ ನಾಲ್ಕು ಜೀವಿಗಳು ಮಹಿಮೆ, ಮಾನ, ಕೃತಜ್ಞತಾ ಸ್ತುತಿಗಳನ್ನು ಸಲ್ಲಿಸುವಾಗ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

9 ತಿ ಚಾರ್ ಸಾವ್ಜಾ ತ್ಯಾ ಸಿವಾಸನಾ ವರ್ತಿ ಬಸಲ್ಲ್ಯಾಕ್, ಗೌರವಾಚ್ಯಾ, ಮಹಿಮೆಚ್ಯಾ, ಧನ್ಯವಾದ್ ದಿತಲ್ಯಾ ಗಿತಾ ಗಾವಿತ್. ತೊ ಸದಾ ಸರ್ವತಾಕ್ ತೊ ಝಿತ್ತೊ ರ್‍ಹಾತಾ ಮನುನ್ ತೆನಿ ಗಿತ್ ಮನ್ತಾನಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 4:9
20 ತಿಳಿವುಗಳ ಹೋಲಿಕೆ  

ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ ಭೂವಿುಯನ್ನೂ ಅದರಲ್ಲಿರುವ ಸಮಸ್ತವನ್ನೂ ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ


ನಾಲ್ಕು ಜೀವಿಗಳಲ್ಲಿ ಒಂದು ಈ ಏಳು ಮಂದಿ ದೇವದೂತರಿಗೆ ಯುಗಯುಗಾಂತರಗಳಲ್ಲಿಯೂ ಜೀವಿಸುವಾತನಾದ ದೇವರ ರೌದ್ರದಿಂದ ತುಂಬಿದ್ದ ಏಳು ಚಿನ್ನದ ಪಾತ್ರೆಗಳನ್ನು ಕೊಟ್ಟಿತು.


ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ತನ್ನ ಪರಿಶುದ್ಧ ಸಿಂಹಾಸನದಲ್ಲಿ ಕೂತಿದ್ದಾನೆ.


ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ಆ ಕಾಲವು ಕಳೆದ ಮೇಲೆ ನೆಬೂಕದ್ನೆಚ್ಚರನಾದ ನಾನು ಆಕಾಶದ ಕಡೆಗೆ ಕಣ್ಣೆತ್ತಲು ನನ್ನ ಬುದ್ಧಿಯು ಪುನಃ ನನ್ನ ಸ್ವಾಧೀನವಾಯಿತು. ಆಗ ನಾನು ಪರಾತ್ಪರನನ್ನು ಕೊಂಡಾಡಿ ಸದಾ ಜೀವಿಸುವಾತನಿಗೆ ಸ್ತುತಿಸ್ತೋತ್ರಗಳನ್ನು ಸಲ್ಲಿಸಿದೆನು; ಆತನ ಆಳಿಕೆಯು ಶಾಶ್ವತ, ಆತನ ರಾಜ್ಯವು ತಲತಲಾಂತರಕ್ಕೂ ನಿಲ್ಲುವದು;


ಆಕಾಶದ ಕಡೆಗೆ ಎತ್ತಿಕೊಂಡು - ಶಾಶ್ವತ ಜೀವಸ್ವರೂಪನಾಣೆ, ಒಂದುಕಾಲ ಎರಡುಕಾಲ ಅರ್ಧಕಾಲ ಕಳೆಯಬೇಕು; ದೇವರ ಜನರ ಬಲವನ್ನು ಸಂಪೂರ್ಣವಾಗಿ ಮುರಿದುಬಿಟ್ಟ ಮೇಲೆ ಈ ಕಾರ್ಯಗಳೆಲ್ಲಾ ಮುಕ್ತಾಯವಾಗುವವು ಎಂಬದಾಗಿ ನನ್ನ ಕಿವಿಗೆ ಬೀಳುವಂತೆ ಹೇಳಿದನು.


ಆಗ ನೀವು ನಿಮ್ಮ ಮುಂದಣ ಸಂತತಿಯವರಿಗೆ - ದೇವರು ಇಂಥವನು; ಆತನು ಯುಗಯುಗಾಂತರಗಳಲ್ಲಿಯೂ ನಮ್ಮ ದೇವರು, ನಿರಂತರವೂ ನಮ್ಮನ್ನು ನಡಿಸುವವನಾಗಿದ್ದಾನೆ ಎಂದು ತಿಳಿಸುವಿರಿ.


ಯೆಹೋವನೇ ಯುಗಯುಗಾಂತರಗಳಲ್ಲಿಯೂ ಆಳುವನು.


ಆದಕಾರಣ ಆತನು ತನ್ನ ಮೂಲಕ ದೇವರ ಬಳಿಗೆ ಬರುವವರನ್ನು ಸಂಪೂರ್ಣವಾಗಿ ರಕ್ಷಿಸುವದಕ್ಕೆ ಶಕ್ತನಾಗಿದ್ದಾನೆ; ಅವರಿಗೋಸ್ಕರ ವಿಜ್ಞಾಪನೆಮಾಡುವದಕ್ಕೆ ಯಾವಾಗಲೂ ಬದುಕುವವನಾಗಿದ್ದಾನೆ.


ಇದಲ್ಲದೆ ಲೇವಿಯರ ಕ್ರಮವನ್ನು ನೋಡಿದರೆ ಸಾಯತಕ್ಕ ಮನುಷ್ಯರು ದಶಮಭಾಗಗಳನ್ನು ತಕ್ಕೊಳ್ಳುತ್ತಾರೆ; ಆದರೆ ಮೆಲ್ಕಿಜೆದೇಕನ ಕ್ರಮವನ್ನು ನೋಡಿದರೆ ಜೀವಿಸುತ್ತಿದ್ದಾನೆಂದು ಸಾಕ್ಷಿಹೊಂದಿರುವವನು ತಕ್ಕೊಳ್ಳುತ್ತಾನೆ.


ನಾನು ಆಕಾಶದ ಕಡೆಗೆ ಕೈಯೆತ್ತಿ ನಾನು ಸದಾಕಾಲ ಜೀವಿಸುವವನೆಂಬದು ಎಷ್ಟು ನಿಶ್ಚಯವೋ ಅಷ್ಟು ಖಂಡಿತವಾಗಿ ಪ್ರಮಾಣಮಾಡುವೆನು; ಏನಂದರೆ -


ಅರಸನಾದ ಉಜ್ಜೀಯನು ಕಾಲವಾದ ವರುಷದಲ್ಲಿ ಕರ್ತನು ಉನ್ನತೋನ್ನತ ಸಿಂಹಾಸನಾರೂಢನಾಗಿರುವದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಮಂದಿರದಲ್ಲೆಲ್ಲಾ ಹರಡಿತ್ತು.


ಆಗ ಇಗೋ, ಪರಲೋಕದಲ್ಲಿ ಒಂದು ಸಿಂಹಾಸನವಿತ್ತು; ಸಿಂಹಾಸನದ ಮೇಲೆ ಒಬ್ಬನು ಕೂತಿದ್ದನು.


ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಆ ಜೀವಿಗಳಿಗೆ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರವಿುಸಿಕೊಳ್ಳದೆ - ದೇವರಾದ ಕರ್ತನು ಪರಿಶುದ್ಧನು ಪರಿಶುದ್ಧನು ಪರಿಶುದ್ಧನು; ಆತನು ಸರ್ವಶಕ್ತನು, ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು ಎಂದು ಹೇಳುತ್ತವೆ.


ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು; ಅದರ ಎರಡು ಪಕ್ಕೆಗಳಲ್ಲಿಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ಬೆಟ್ಟಗಳಿಗೂ ಬಂಡೆಗಳಿಗೂ - ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿರುವಾತನ ಮುಖಕ್ಕೂ ಯಜ್ಞದ ಕುರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;


ಈ ಕಾರಣದಿಂದ ಅವರು ದೇವರ ಸಿಂಹಾಸನದ ಮುಂದೆ ಇದ್ದುಕೊಂಡು ಆತನ ಆಲಯದಲ್ಲಿ ಹಗಲಿರುಳು ಆತನ ಸೇವೆಮಾಡುತ್ತಾ ಇದ್ದಾರೆ; ಸಿಂಹಾಸನದಲ್ಲಿ ಕೂತಿರುವಾತನು ಗುಡಾರದಂತೆ ಅವರನ್ನು ಆವರಿಸುವನು.


ಆಗ ಸಿಂಹಾಸನದ ಮೇಲೆ ಕೂತಿದ್ದವನು - ಇಗೋ, ಎಲ್ಲವನ್ನು ಹೊಸದುಮಾಡುತ್ತೇನೆ ಅಂದನು. ಮತ್ತು ಒಬ್ಬನು ನನಗೆ - ಇದನ್ನು ಬರೆ; ಈ ಮಾತುಗಳು ನಂಬತಕ್ಕವುಗಳೂ ಸತ್ಯವಾದವುಗಳೂ ಆಗಿವೆ ಎಂದು ಹೇಳಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು