Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 5:10 - ಕನ್ನಡ ಸತ್ಯವೇದವು J.V. (BSI)

10 ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿ; ಅವರು ಭೂವಿುಯ ಮೇಲೆ ಆಳುವರು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ, ಯಾಜಕರನ್ನಾಗಿಯೂ ಮಾಡಿರುವೆ. ಅವರು ಭೂಮಿಯನ್ನು ಆಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಏರ್ಪಡಿಸಿದೆ ನೀ ಅವರನು ನಮ್ಮ ದೇವರಿಗೋಸ್ಕರ ರಾಜವಂಶವಾಗಿ, ಯಾಜಕವರ್ಗವಾಗಿ. ಆಳುವರವರು ಸಮಸ್ತ ಭುವಿಯ ಮೇಲೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಅವರನ್ನು ಒಂದು ರಾಜ್ಯವನ್ನಾಗಿ ಮಾಡಿದೆ; ನಮ್ಮ ದೇವರಿಗೋಸ್ಕರ ಯಾಜಕರನ್ನಾಗಿ ಮಾಡಿದೆ; ಅವರು ಲೋಕದಲ್ಲಿ ಆಳುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಅವರನ್ನು ನಮ್ಮ ದೇವರಿಗೋಸ್ಕರ ರಾಜ್ಯವನ್ನಾಗಿಯೂ ಯಾಜಕರನ್ನಾಗಿಯೂ ಮಾಡಿದಿರಿ, ಅವರು ಭೂಮಿಯ ಮೇಲೆ ಆಳುವರು!” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

10 ತಿಯಾ ತೆಂಕಾ ದೆವಾಚಿ ಸೆವಾ ಕರ್ತಲೊ ಎಕ್ ಯಾಜಕ್ ಅನಿ ರಾಜ್ ಕರುನ್ ಥವ್ಲೆ, ಅನಿ ತೆನಿ ಸಗ್ಳ್ಯಾ ಜಗಾ ವರ್ತಿ ಅಧಿಕಾರ್ ಚಾಲ್ವುತಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 5:10
9 ತಿಳಿವುಗಳ ಹೋಲಿಕೆ  

ತನ್ನ ತಂದೆಯಾದ ದೇವರಿಗೆ ಯಾಜಕರನ್ನಾಗಿಯೂ ಮಾಡಿದವನೂ ಆಗಿರುವಾತನಿಗೆ ಯುಗಯುಗಾಂತರಗಳಲ್ಲಿಯೂ ಘನ ಮಹತ್ವಗಳಿರಲಿ. ಆಮೆನ್.


ಆಗ ಅವನ ರಾಜ್ಯಪ್ರಭುತ್ವಗಳೂ ಸಮಸ್ತ ಭೂಮಂಡಲದಲ್ಲಿನ ರಾಜ್ಯಗಳ ಮಹಿಮೆಯೂ ಪರಾತ್ಪರನ ಭಕ್ತಜನರಿಗೆ ಕೊಡೋಣವಾಗುವವು; ಆತನ ರಾಜ್ಯವು ಶಾಶ್ವತರಾಜ್ಯ; ಸಕಲ ದೇಶಾಧಿಪತಿಗಳು ಆತನಿಗೆ ಅಧೀನರಾಗಿ ಸೇವೆಮಾಡುವರು ಎಂದು ಹೇಳಿದನು.


ಇನ್ನು ರಾತ್ರಿ ಇರುವದಿಲ್ಲ; ಅವರಿಗೆ ದೀಪದ ಬೆಳಕೂ ಸೂರ್ಯನ ಬೆಳಕೂ ಬೇಕಾಗುವದಿಲ್ಲ; ದೇವರಾದ ಕರ್ತನೇ ಅವರಿಗೆ ಬೆಳಕನ್ನು ಕೊಡುವನು; ಅವರು ಯುಗಯುಗಾಂತರಗಳಲ್ಲಿಯೂ ಆಳುವರು.


ಪ್ರಥಮ ಪುನರುತ್ಥಾನದಲ್ಲಿ ಸೇರಿರುವವನು ಧನ್ಯನೂ ಪರಿಶುದ್ಧನೂ ಆಗಿದ್ದಾನೆ. ಇಂಥವರ ಮೇಲೆ ಎರಡನೆಯ ಮರಣಕ್ಕೆ ಅಧಿಕಾರವಿಲ್ಲ; ಆದರೆ ಅವರು ದೇವರಿಗೂ ಕ್ರಿಸ್ತನಿಗೂ ಯಾಜಕರಾಗಿ ಕ್ರಿಸ್ತನೊಂದಿಗೆ ಆ ಸಾವಿರ ವರುಷ ಆಳುವರು.


ಆದರೆ ರಾಜ್ಯವು ಪರಾತ್ಪರನ ಭಕ್ತರಿಗೆ ಲಭಿಸುವದು, ಅವರೇ ಅದನ್ನು ತಲತಲಾಂತರಕ್ಕೂ ಶಾಶ್ವತವಾಗಿ ಅನುಭವಿಸುವರು ಎಂದು ಆ ವಿಷಯಗಳ ತಾತ್ಪರ್ಯವನ್ನು ವಿವರಿಸಿ ತಿಳಿಸಿದನು.


ನೀವು ನನಗೆ ಯಾಜಕ ರಾಜ್ಯವೂ ಪರಿಶುದ್ಧ ಜನವೂ ಆಗಿರುವಿರಿ. ಇವೇ ನೀನು ಇಸ್ರಾಯೇಲ್ಯರಿಗೆ ಹೇಳಬೇಕಾದ ಮಾತುಗಳು ಎಂದನು.


ನಾನು ಜಯಹೊಂದಿ ನನ್ನ ತಂದೆಯೊಡನೆ ಸಿಂಹಾಸನದಲ್ಲಿ ಕೂತುಕೊಂಡೆನು; ಹಾಗೆಯೇ ಜಯಹೊಂದುವವನನ್ನು ನನ್ನೊಡನೆ ಸಿಂಹಾಸನದಲ್ಲಿ ಕೂತುಕೊಳ್ಳುವಂತೆ ಮಾಡುವೆನು.


ತರುವಾಯ ಸಿಂಹಾಸನಗಳನ್ನು ಕಂಡೆನು. ಅವುಗಳ ಮೇಲೆ ಜನರು ಕೂತಿದ್ದರು; ನ್ಯಾಯತೀರಿಸುವ ಅಧಿಕಾರವು ಅವರಿಗೆ ಕೊಡಲ್ಪಟ್ಟಿತು. ಇದಲ್ಲದೆ ಯೇಸುವಿನ ವಿಷಯವಾದ ಸಾಕ್ಷಿಯ ನಿವಿುತ್ತವಾಗಿಯೂ ದೇವರ ವಾಕ್ಯದ ನಿವಿುತ್ತವಾಗಿಯೂ ತಲೆಹೊಯಿಸಿಕೊಂಡವರ ಆತ್ಮಗಳನ್ನೂ ಮೃಗಕ್ಕೂ ಅದರ ವಿಗ್ರಹಕ್ಕೂ ನಮಸ್ಕರಿಸದೆ ತಮ್ಮ ಹಣೆಯ ಮೇಲೆ ಮತ್ತು ಕೈಯ ಮೇಲೆ ಗುರುತುಹಾಕಿಸಿಕೊಳ್ಳದೆ ಇರುವವರನ್ನೂ ಕಂಡೆನು. ಅವರು ಜೀವಿತರಾಗಿ ಎದ್ದು ಸಾವಿರ ವರುಷ ಕ್ರಿಸ್ತನೊಂದಿಗೆ ಆಳಿದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು