Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 5:2 - ಕನ್ನಡ ಸತ್ಯವೇದವು J.V. (BSI)

2 ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು - ಈ ಸುರುಳಿಯನ್ನು ಬಿಚ್ಚುವದಕ್ಕೂ ಇದರ ಮುದ್ರೆಗಳನ್ನು ಒಡೆಯುವದಕ್ಕೂ ಯಾವನು ಯೋಗ್ಯನು ಎಂದು ಮಹಾ ಶಬ್ದದಿಂದ ಸಾರುವದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು “ಈ ಸುರುಳಿಯನ್ನು ಬಿಚ್ಚುವುದಕ್ಕೂ ಇದರ ಮುದ್ರೆಗಳನ್ನು ಒಡೆಯುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಶಬ್ದದಿಂದ ಕೂಗುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 ಬಲಿಷ್ಠ ದೇವದೂತನೊಬ್ಬನು ಮಹಾಶಬ್ದದಿಂದ, “ಈ ಮುದ್ರೆಗಳನ್ನು ಒಡೆದು ಸುರುಳಿಯನ್ನು ಬಿಚ್ಚಲು ಯೋಗ್ಯನು ಯಾರು?” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಬಲಿಷ್ಠನಾದ ದೇವದೂತನು ಗಟ್ಟಿಯಾದ ಧ್ವನಿಯಲ್ಲಿ, “ಈ ಸುರುಳಿಯ ಮುದ್ರೆಗಳನ್ನು ತೆಗೆಯುವುದಕ್ಕೆ ಯೋಗ್ಯನಾದವನು ಯಾರು?” ಎಂದು ಪ್ರಕಟಿಸಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ಇದಲ್ಲದೆ ಬಲಿಷ್ಠನಾದ ಒಬ್ಬ ದೇವದೂತನು, “ಈ ಸುರುಳಿಯ ಮುದ್ರೆಗಳನ್ನು ಬರೆಯುವುದಕ್ಕೂ ಅದನ್ನು ಬಿಚ್ಚುವುದಕ್ಕೂ ಯಾವನು ಯೋಗ್ಯನು?” ಎಂದು ಮಹಾಧ್ವನಿಯಿಂದ ಕೂಗುವುದನ್ನು ಕಂಡೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

2 ಅನಿ ಎಕ್ ಮೊಟೊ ದೆವ್‍ದುತಾ ಮಾಕಾ ದಿಸ್ಲೊ, ತೆನಿ ಮೊಟ್ಯಾನ್, “ಹೆ ಸಾತ್ ಛಪ್ಪೆ ಫೊಡುನ್ ಹಿ ಸುಳ್ಳಿ ಉಗಡ್ತಲೊ ಬಳ್ ಅಸಲ್ಲೊ ಕೊನ್ ತೊ ಸಾಂಗ್?” ಮಟ್ಲ್ಯಾನ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 5:2
8 ತಿಳಿವುಗಳ ಹೋಲಿಕೆ  

ಅಳಬೇಡ; ಅಗೋ, ಯೂದಾ ಕುಲದಲ್ಲಿ ಜನಿಸಿದ ಸಿಂಹವೂ ದಾವೀದನ ಅಂಕುರದವನೂ ಆಗಿರುವಾತನು ಜಯಹೊಂದಿದನು; ಆತನು ಆ ಸುರುಳಿಯನ್ನೂ ಅದರ ಏಳು ಮುದ್ರೆಗಳನ್ನೂ ಬಿಚ್ಚುವನು ಎಂದು ಹೇಳಿದನು.


ತರುವಾಯ ಬಲಿಷ್ಠನಾದ ಮತ್ತೊಬ್ಬ ದೇವದೂತನು ಪರಲೋಕದಿಂದ ಇಳಿದುಬರುವದನ್ನು ಕಂಡೆನು. ಅವನು ಮೇಘವನ್ನು ಧರಿಸಿಕೊಂಡಿದ್ದನು; ಅವನ ತಲೆಯ ಮೇಲೆ ಮುಗಿಲುಬಿಲ್ಲು ಇತ್ತು; ಅವನ ಮುಖವು ಸೂರ್ಯನೋಪಾದಿಯಲ್ಲಿತ್ತು;


ದೇವದೂತರೇ, ಆತನ ಶಬ್ದಕ್ಕೆ ಕಿವಿಗೊಡುವವರೇ, ಆತನ ಆಜ್ಞೆಯನ್ನು ನೆರವೇರಿಸುವ ಪರಾಕ್ರಮಶಾಲಿಗಳೇ, ಯೆಹೋವನನ್ನು ಕೊಂಡಾಡಿರಿ.


ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರದೊಳಗೆ ಹಾಕಿ - ಮಹಾ ಪಟ್ಟಣವಾದ ಬಾಬೆಲು ಹೀಗೆಯೇ ದಡದಡನೆ ಕೆಡವಲ್ಪಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.


ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು; ಅದರ ಎರಡು ಪಕ್ಕೆಗಳಲ್ಲಿಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ಗುರಾಣಿಗಳ ಸಾಲುಗಳು ಅದರ ಹೆಚ್ಚಳಕ್ಕೆ ಆಸ್ಪದವಾಗಿವೆ. ಅವು ಬಿಗಿದು ಮುದ್ರಿಸಲ್ಪಟ್ಟಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು