ಪ್ರಕಟನೆ 5:6 - ಕನ್ನಡ ಸತ್ಯವೇದವು J.V. (BSI)6 ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿ ಕೊಯ್ಯಲ್ಪಟ್ಟದ್ದಾಗಿ ನಿಂತಿರುವದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು; ಅವು ಏನಂದರೆ ಭೂವಿುಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20196 ಸಿಂಹಾಸನವು, ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಹಿರಿಯರು ಇದ್ದ ಸ್ಥಳಕ್ಕೂ ಮಧ್ಯದಲ್ಲಿ ಒಂದು ಕುರಿಮರಿಯು ವಧಿಸಲ್ಪಟಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಏನೆಂದರೆ ಭೂಮಿಯ ಮೇಲೆಲ್ಲಾ ಕಳುಹಿಸಲ್ಪಟ್ಟಿರುವ ದೇವರ ಏಳು ಆತ್ಮಗಳೇ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)6 ಸಿಂಹಾಸನವೂ ನಾಲ್ಕು ಜೀವಿಗಳೂ ಇದ್ದ ಸ್ಥಳಕ್ಕೂ ಮತ್ತು ಸಭಾಪ್ರಮುಖರಿದ್ದ ಸ್ಥಳಕ್ಕೂ ನಡುವೆ ಒಂದು ಕುರಿಮರಿ ನಿಂತಿರುವುದನ್ನು ಕಂಡೆ. ಅದು ಈಗಾಗಲೇ ಬಲಿಗೋಸ್ಕರ ವಧೆಯಾಗಿದ್ದಂತೆ ಕಾಣುತ್ತಿತ್ತು. ಆ ಕುರಿಮರಿಗೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇಡೀ ಜಗತ್ತಿಗೆ ಕಳುಹಿಸಲಾದ ದೇವರ ಸಪ್ತ ಆತ್ಮಗಳೇ ಅವು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್6 ನಂತರ ಸಿಂಹಾಸನದ ಮತ್ತು ನಾಲ್ಕು ಜೀವಿಗಳ ಮಧ್ಯೆ ಒಂದು ಕುರಿಮರಿಯನ್ನು ನಾನು ನೋಡಿದೆನು. ಹಿರಿಯರು ಸಹ ಆ ಕುರಿಮರಿಯ ಸುತ್ತಲೂ ಇದ್ದರು. ಆ ಕುರಿಮರಿಯು ಕೊಲ್ಲಲ್ಪಟ್ಟಂತಿತ್ತು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಇವು ಈ ಲೋಕಕ್ಕೆಲ್ಲಾ ಕಳುಹಿಸಲ್ಪಟ್ಟ ದೇವರ ಏಳು ಆತ್ಮಗಳಾಗಿದ್ದವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ6 ಆಗ ನಾನು, ಸಿಂಹಾಸನದ ಮಧ್ಯದಲ್ಲಿಯೂ ನಾಲ್ಕು ಜೀವಿಗಳು ಮತ್ತು ಹಿರಿಯರ ಮಧ್ಯದಲ್ಲಿಯೂ ಒಂದು ಕುರಿಮರಿಯು ಬಲಿಗೋಸ್ಕರ ವಧೆಯಾಗಿದ್ದಂತೆ ನಿಂತಿರುವುದನ್ನು ಕಂಡೆನು. ಅದಕ್ಕೆ ಏಳು ಕೊಂಬುಗಳೂ ಏಳು ಕಣ್ಣುಗಳೂ ಇದ್ದವು. ಅವು ಭೂಮಿಯ ಮೇಲೆಲ್ಲಾ ಕಳುಹಿಸಲಾದ ದೇವರ ಏಳು ಆತ್ಮಗಳು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್6 ತನ್ನಾ ತ್ಯಾ ಸಿವಾಸನಾಚ್ಯಾ ಇದ್ರಾಕ್ ಎಕ್ ಬೊಕ್ಡು ಇಬೆ ಹೊತ್ತೆ ಮಾಕಾ ದಿಸ್ಲೆ. ತ್ಯಾ ಚಾರ್ ಸಾವ್ಜಾಂಚ್ಯಾ ಅನಿ ತ್ಯಾ ಇಸಾರ್-ಚಾರ್ ಜಾನ್ತ್ಯಾ ಲೊಕಾಂಚ್ಯಾ ಮದ್ದಿ ತೆ ಬೊಕ್ಡು ಇಬೆ ಹೊತ್ತೆ. ತೆ ಅದ್ದಿ ಜಿವಾನಿ ಮಾರುನ್ ಹೊಲ್ಲೆ ಹೊತ್ತೆ ಸರ್ಕೆ ದಿಸಿ. ತೆಕಾ ಸಾತ್ ಶಿಂಗಾ ಅನಿ ಸಾತ್ ಡೊಳೆ ಹೊತ್ತೆ. ತೆ ಹ್ಯಾ ಜಗಾತ್ ಸಗ್ಳ್ಯಾಕ್ಡೆ ಫಿರುನ್ ಯೆವ್ಕ್ ಧಾಡಲ್ಲೆ ದೆವಾಚೆ ಸಾತ್ ಆತ್ಮೆ. ಅಧ್ಯಾಯವನ್ನು ನೋಡಿ |