ಪ್ರಕಟನೆ 6:11 - ಕನ್ನಡ ಸತ್ಯವೇದವು J.V. (BSI)11 ಅವರಲ್ಲಿ ಒಬ್ಬೊಬ್ಬನಿಗೆ ಒಂದೊಂದು ಬಿಳಿ ನಿಲುವಂಗಿಯು ಕೊಡಲ್ಪಟ್ಟಿತು. ಇದಲ್ಲದೆ - ನಿಮ್ಮ ಹಾಗೆ ಕೊಲೆಯಾಗಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆದಾಸರ ಸಂಖ್ಯೆಯೂ ಪೂರ್ಣವಾಗುವ ತನಕ ಇನ್ನೂ ಸ್ವಲ್ಪ ಕಾಲ ವಿಶ್ರವಿುಸಿಕೊಂಡಿರಬೇಕೆಂದು ಅವರಿಗೆ ಉತ್ತರವಾಯಿತು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201911 ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಒಂದೊಂದು ಬಿಳೀ ನಿಲುವಂಗಿಯು ಕೊಡಲ್ಪಟ್ಟಿತು ಇನ್ನೂ ಸ್ವಲ್ಪ ಸಮಯ ವಿಶ್ರಮಿಸಿಕೊಂಡಿರಬೇಕು. ನಿಮ್ಮ ಹಾಗೆ ವಧಿಸಲ್ಪಡಬೇಕಾಗಿರುವ ನಿಮ್ಮ ಸಹೋದರರ ಮತ್ತು ನಿಮ್ಮ ಜೊತೆ ಸೇವಕರ ಸಂಖ್ಯೆ ಪೂರ್ಣವಾಗುವ ತನಕ ಕಾದಿರಬೇಕೆಂದು ಅವರಿಗೆ ಅಪ್ಪಣೆಯಾಯಿತು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)11 ಅವರಲ್ಲಿ ಪ್ರತಿಯೊಬ್ಬನಿಗೂ ಬಿಳಿಯ ನಿಲುವಂಗಿಯನ್ನು ಕೊಡಲಾಗಿತ್ತು. ಅಲ್ಲದೆ ಅವರಿಗೆ, “ಇನ್ನು ತುಸುಕಾಲ ಕಾದುಕೊಂಡಿರಿ, ನಿಮ್ಮ ಹಾಗೆಯೇ ಹತರಾಗಬೇಕಾಗಿರುವ ನಿಮ್ಮ ಸಹೋದರರ ಮತ್ತು ಜೊತೆಸೇವಕರ ಪಟ್ಟಿಯು ಭರ್ತಿಯಾಗುವ ತನಕ ವಿಶ್ರಮಿಸಿ,” ಎಂದು ತಿಳಿಸಲಾಯಿತು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್11 ಆ ಆತ್ಮಗಳಲ್ಲಿ ಪ್ರತಿಯೊಂದಕ್ಕೂ ಒಂದೊಂದು ಬಿಳಿ ನಿಲುವಂಗಿಯನ್ನು ಕೊಡಲಾಯಿತು. ಇನ್ನೂ ಸ್ವಲ್ಪಕಾಲ ಕಾಯುವಂತೆ ಅವುಗಳಿಗೆ ತಿಳಿಸಲಾಯಿತು. ಅವರ ಸಹೋದರರಲ್ಲಿ ಕೆಲವರು ಇನ್ನೂ ಕ್ರಿಸ್ತನ ಸೇವೆಯಲ್ಲಿದ್ದಾರೆ. ಅವರೂ ಕೊಲ್ಲಲ್ಪಡಬೇಕು. ಈ ಕೊಲೆಗಳೆಲ್ಲಾ ಮುಗಿಯುವ ತನಕ ಕಾಯಬೇಕೆಂದು ಆ ಆತ್ಮಗಳಿಗೆ ಹೇಳಲಾಯಿತು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ11 ಆಗ ಅವರಲ್ಲಿ ಪ್ರತಿಯೊಬ್ಬನಿಗೆ ಬಿಳೀ ನಿಲುವಂಗಿಯು ಕೊಡಲಾಗಿತ್ತು. ಇನ್ನು ಸ್ವಲ್ಪಕಾಲ ಅವರಂತೆಯೇ ವಧಿಸಲಾಗಬೇಕಾಗಿರುವ ಅವರ ಜೊತೆ ಸೇವಕರ ಮತ್ತು ಸಹೋದರರ ಸಂಖ್ಯೆ ಪೂರ್ಣಗೊಳ್ಳುವ ತನಕ ಕಾದಿರಬೇಕೆಂದು ಅವರಿಗೆ ಹೇಳಲಾಯಿತು. ಅಧ್ಯಾಯವನ್ನು ನೋಡಿದೆವಾಚಿ ಖರಿ ಖಬರ್11 ತೆಂಕಾ ಹರಿಎಕ್ಲ್ಯಾಕ್ನಿ ಎಕೆಕ್ ಫಾಂಡ್ರೊ ಝಗೊ ದಿಲ್ಲೊ ಹೊತ್ತೊ, ಅನಿ ತುಮ್ಚ್ಯಾ ಸಾರ್ಕೆ ಸಗ್ಳ್ಯಾ ಸೆವಕಾಕ್ನಿ ಅನಿ ವಿಶ್ವಾಸಾನ್ ಅಸಲ್ಲ್ಯಾ ಭಾವ್ ಭೆನಿಯಾಕ್ನಿ ಜಿವಾನಿ ಮಾರುನ್ ಸರಿ ಪತರ್ ತುಮಿ ಹಿತ್ತೆ ಆರಾಮ್ ಘೆವಾ ಮನುನ್ ತೆಂಕಾ ಸಾಂಗಟಲ್ಲೆ ಹೊತ್ತೆ. ಅಧ್ಯಾಯವನ್ನು ನೋಡಿ |