Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:12 - ಕನ್ನಡ ಸತ್ಯವೇದವು J.V. (BSI)

12 ಆತನು ಆರನೆಯ ಮುದ್ರೆ ಒಡೆಯುವದನ್ನು ಕಂಡೆನು. ಒಡೆದಾಗ ಮಹಾಭೂಕಂಪ ಉಂಟಾಯಿತು; ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಆತನು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾಭೂಕಂಪ ಉಂಟಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು ಮತ್ತು ಪೂರ್ಣಚಂದ್ರನು ರಕ್ತದಂತಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಆ ಯಜ್ಞದ ಕುರಿಮರಿ ಆರನೆಯ ಮುದ್ರೆಯನ್ನು ಒಡೆದಾಗ, ದೊಡ್ಡ ಭೂಕಂಪವಾಯಿತು. ಸೂರ್ಯನು ಕರಿಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಆ ಕುರಿಮರಿಯು ಆರನೆಯ ಮುದ್ರೆಯನ್ನು ತೆರೆಯುವುದನ್ನು ನಾನು ನೋಡುತ್ತಲೇ ಇದ್ದೆನು. ಆಗ ಮಹಾಭೂಕಂಪವಾಯಿತು. ಸೂರ್ಯನು ಕಪ್ಪು ಕಂಬಳಿಯಂತೆ ಕಪ್ಪಾದನು. ಪೂರ್ಣಚಂದ್ರನು ರಕ್ತದಂತೆ ಕೆಂಪಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಕುರಿಮರಿ ಆಗಿರುವವರು ಆರನೆಯ ಮುದ್ರೆಯನ್ನು ಒಡೆಯುವುದನ್ನು ಕಂಡೆನು. ಆಗ ಮಹಾ ಭೂಕಂಪವಾಯಿತು. ಸೂರ್ಯನು ಕರೀಕಂಬಳಿಯಂತೆ ಕಪ್ಪಾದನು. ಚಂದ್ರನು ರಕ್ತದಂತಾದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

12 ಮಾನಾ ಬೊಕ್ಡಾನ್ ಸಾವೆಚೊ ಛಪ್ಪೊ ಫೊಡುನ್ ಉಗಡ್ತಲೆ ಮಿಯಾ ಬಗಟ್ಲೊ. ತನ್ನಾ ಮೊಟೊ ಭುಕಂಪ್ ಹೊಲೊ, ಅನಿ ದಿಸ್ ಕಾಳ್ಯಾ ಕಂಬ್ಳ್ಯಾ ಸರ್ಕೊ ಹೊಲೊ, ಅನಿ ಚಂದ್ರಾಮ್ ಸಗ್ಳೊ ರಗ್ತಾ ಸರ್ಕೊ ತಾಂಬ್ಡೊ ಹೊಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:12
31 ತಿಳಿವುಗಳ ಹೋಲಿಕೆ  

ಆ ದಿನಗಳ ಸಂಕಟವು ತೀರಿದಕೂಡಲೆ ಸೂರ್ಯನು ಕತ್ತಲಾಗಿಹೋಗುವನು, ಚಂದ್ರನು ಬೆಳಕುಕೊಡದೆ ಇರುವನು, ನಕ್ಷತ್ರಗಳು ಆಕಾಶದಿಂದ ಉದುರುವವು, ಆಕಾಶದ ಶಕ್ತಿಗಳು ಕದಲುವವು.


ಅವುಗಳ ಆಗಮನದಿಂದ ಭೂವಿುಯು ಕಂಪಿಸುತ್ತದೆ, ಆಕಾಶಮಂಡಲವು ನಡುಗುತ್ತದೆ, ಸೂರ್ಯಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಯನ್ನು ಅಡಗಿಸಿಕೊಳ್ಳುತ್ತವೆ;


ಸೂರ್ಯಚಂದ್ರರು ಮಂಕಾಗುತ್ತಾರೆ, ನಕ್ಷತ್ರಗಳು ಕಾಂತಿಯನ್ನು ಅಡಗಿಸಿಕೊಳ್ಳುತ್ತವೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಆ ದಿನದಲ್ಲಿ ಸೂರ್ಯನನ್ನು ಮಧ್ಯಾಹ್ನಕ್ಕೆ ಮುಣುಗಿಸುವೆನು, ಭೂವಿುಯನ್ನು ಹಗಲಿನಲ್ಲೇ ಮೊಬ್ಬುಮಾಡುವೆನು.


ಆಗ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಉಂಟಾದವು; ಇದಲ್ಲದೆ ಮಹಾ ಭೂಕಂಪವಾಯಿತು; ಮನುಷ್ಯರು ಭೂವಿುಯ ಮೇಲೆ ಇದ್ದಂದಿನಿಂದ ಅಂಥ ದೊಡ್ಡ ಭೂಕಂಪವಾಗಲಿಲ್ಲ.


ಅದೇ ಗಳಿಗೆಯಲ್ಲಿ ಮಹಾಭೂಕಂಪವುಂಟಾಗಿ ಆ ಪಟ್ಟಣದ ಹತ್ತರಲ್ಲೊಂದಂಶವು ಬಿದ್ದುಹೋಯಿತು; ಆ ಭೂಕಂಪದಿಂದ ಏಳು ಸಾವಿರ ಮಂದಿ ಸತ್ತುಹೋದರು. ಉಳಿದವರು ಭಯಗ್ರಸ್ತರಾಗಿ ಪರಲೋಕ ದೇವರನ್ನು ಘನಪಡಿಸಿದರು.


ಆಕಾಶಕ್ಕೆ ಅಂಧಕಾರವನ್ನು ಹೊದಿಸಿ ಗೋಣಿತಟ್ಟಿನ ಮುಸುಕನ್ನು ಹಾಕುತ್ತೇನೆ.


ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ ಇವುಗಳ ಮೂಲಕ ಆ ನಗರಿಯನ್ನು ರಕ್ಷಿಸುವನು.


ತರುವಾಯ ಆ ದೇವದೂತನು ಧೂಪಾರತಿಯನ್ನು ತೆಗೆದುಕೊಂಡು ಯಜ್ಞವೇದಿಯ ಮೇಲಿದ್ದ ಕೆಂಡಗಳಿಂದ ತುಂಬಿಸಿ ಭೂವಿುಗೆ ಬಿಸಾಡಿದನು. ಆಗ ಗುಡುಗುಗಳೂ ವಾಣಿಗಳೂ ವಿುಂಚುಗಳೂ ಭೂಕಂಪವೂ ಉಂಟಾದವು.


ಮತ್ತು ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇವಿುನೊಳಗೆ ಆಳುವನಷ್ಟೆ. ಆತನ [ಪರಿವಾರದ] ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವದು.


ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಭೂಕಂಪಗಳು ಆಗುವವು;


ಮಧ್ಯಾಹ್ನವಾದಾಗ ದೇಶದ ಮೇಲೆಲ್ಲಾ ಕತ್ತಲೆ ಕವಿದು ಸಾಯಂಕಾಲ ಮೂರು ಗಂಟೆಯ ತನಕ ಇತ್ತು.


ಆಗ ಮಹಾ ಭೂಕಂಪವಾಯಿತು. ಕರ್ತನ ದೂತನು ಆಕಾಶದಿಂದ ಇಳಿದು ಬಂದು ಆ ಕಲ್ಲನ್ನು ಬಾಗಿಲಿನಿಂದ ಉರುಳಿಸಿ ಅದರ ಮೇಲೆ ಕೂತುಕೊಂಡನು.


ಶತಾಧಿಪತಿಯು ಮತ್ತು ಅವನ ಸಂಗಡ ಯೇಸುವನ್ನು ಕಾಯುತ್ತಿದ್ದವರು ಭೂಕಂಪವನ್ನೂ ನಡೆದ ಸಂಗತಿಗಳನ್ನೂ ನೋಡಿ ಬಹಳ ಹೆದರಿಕೊಂಡು - ನಿಜವಾಗಿ ಈತನು ದೇವಕುಮಾರನಾಗಿದ್ದನು ಅಂದರು.


ಮಧ್ಯಾಹ್ನ ಹನ್ನೆರಡು ಗಂಟೆಯಿಂದ ಮೂರು ಗಂಟೆಯವರೆಗೆ ಆ ದೇಶದ ಮೇಲೆಲ್ಲಾ ಕತ್ತಲೆ ಕವಿಯಿತು.


ನೀವು ನನ್ನ ಗುಡ್ಡಗಳ ನಡುವಣ ಆ ಡೊಂಗರದೊಳಕ್ಕೆ ಓಡಿಹೋಗುವಿರಿ; ಏಕಂದರೆ ಆ ಡೊಂಗರವು ಆಚೆಲಿಗೆ ಮುಟ್ಟಿರುವದು; ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಭೂಕಂಪದ ಕಡೆಯಿಂದ ನೀವು ಓಡಿಹೋದಂತೆಯೇ ಓಡಿಹೋಗುವಿರಿ; ಆಗ ನನ್ನ ದೇವರಾದ ಯೆಹೋವನು ಸಮಸ್ತ ದೇವದೂತಸಮೇತ ಬರುವನು.


ಯೆಹೂದದ ಅರಸನಾದ ಉಜ್ಜೀಯನ ಕಾಲದಲ್ಲಿ ಅಂದರೆ ಇಸ್ರಾಯೇಲಿನ ಅರಸನೂ ಯೋವಾಷನ ಮಗನೂ ಆದ ಯಾರೊಬ್ಬಾಮನ ಕಾಲದಲ್ಲಿ ಭೂಕಂಪಕ್ಕೆ ಎರಡು ವರ್ಷಗಳ ಮುಂಚೆ ತೆಕೋವದ ಕುರುಬರಲ್ಲಿ ಒಬ್ಬನಾದ ಆಮೋಸನಿಗೆ ಇಸ್ರಾಯೇಲಿನ ವಿಷಯವಾಗಿ ಕಂಡುಬಂದ ದೈವೋಕ್ತಿಗಳು.


ನಕ್ಷತ್ರಸೈನ್ಯವೆಲ್ಲಾ ಕ್ಷಯಿಸುವದು, ಆಕಾಶ ಮಂಡಲವು ಸುರಳಿಯಂತೆ ಸುತ್ತಿಕೊಳ್ಳುವದು; ದ್ರಾಕ್ಷೆಯ ಎಲೆ ಒಣಗಿ ಗಿಡದಿಂದ ಬೀಳುವಂತೆಯೂ ಅಂಜೂರ ಮರದಿಂದ ತರಗು ಉದುರುವ ಹಾಗೂ ತಾರಾಮಂಡಲವೆಲ್ಲಾ ಬಾಡಿ ಬೀಳುವದು.


ಹೇಗಂದರೆ - ಅಯ್ಯೋ ಖೊರಾಜಿನೇ, ಅಯ್ಯೋ ಬೇತ್ಸಾಯಿದವೇ, ನಿಮ್ಮಲ್ಲಿ ನಡೆದ ಮಹತ್ಕಾರ್ಯಗಳು ತೂರ್ ಮತ್ತು ಸೀದೋನ್ ಪಟ್ಟಣಗಳಲ್ಲಿ ನಡೆದಿದ್ದರೆ ಅಲ್ಲಿಯವರು ಆಗಲೇ ಗೋಣೀತಟ್ಟು ಹೊದ್ದುಕೊಂಡು ಬೂದಿಯಲ್ಲಿ [ಕೂತುಕೊಂಡು] ದೇವರ ಕಡೆಗೆ ತಿರುಗಿಕೊಳ್ಳುತ್ತಿದ್ದರು.


ನಾಲ್ಕನೆಯ ದೇವದೂತನು ತುತೂರಿಯನ್ನೂದಿದಾಗ ಸೂರ್ಯ ಚಂದ್ರ ನಕ್ಷತ್ರಗಳೊಳಗೆ ಮೂರರಲ್ಲಿ ಒಂದು ಭಾಗವು ಬಡಿಯಲ್ಪಟ್ಟು ಕತ್ತಲಾಯಿತು. ಆದದರಿಂದ ಹಗಲಿನೊಳಗೆ ಮೂರರಲ್ಲಿ ಒಂದು ಭಾಗವು ಪ್ರಕಾಶವಿಲ್ಲದೆ ಇತ್ತು. ರಾತ್ರಿಯು ಹಾಗೆಯೇ ಆಯಿತು.


ನಾಲ್ಕನೆಯವನು ತನ್ನ ಪಾತ್ರೆಯಲ್ಲಿದ್ದದ್ದನ್ನು ಸೂರ್ಯನ ಮೇಲೆ ಹೊಯ್ದನು; ಆಗ ಸೂರ್ಯನಿಗೆ ಕಡುಬಿಸಿಲಿನಿಂದ ಮನುಷ್ಯರನ್ನು ಕಂದಿಸುವ ಶಕ್ತಿಯು ಕೊಡಲ್ಪಟ್ಟಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು