Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:16 - ಕನ್ನಡ ಸತ್ಯವೇದವು J.V. (BSI)

16 ಬೆಟ್ಟಗಳಿಗೂ ಬಂಡೆಗಳಿಗೂ - ನಮ್ಮ ಮೇಲೆ ಬೀಳಿರಿ, ಸಿಂಹಾಸನದ ಮೇಲೆ ಕೂತಿರುವಾತನ ಮುಖಕ್ಕೂ ಯಜ್ಞದ ಕುರಿಯಾದಾತನ ಕೋಪಕ್ಕೂ ನಮ್ಮನ್ನು ಮರೆಮಾಡಿರಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಬೆಟ್ಟಗಳಿಗೂ ಬಂಡೆಗಳಿಗೂ, “ನಮ್ಮ ಮೇಲೆ ಬೀಳಿರಿ!, ಸಿಂಹಾಸನದ ಮೇಲೆ ಕುಳಿತಿರುವಾತನ ಮುಖವನ್ನು ನೋಡದ ಹಾಗೆಯೂ ಕುರಿಮರಿಯ ಕೋಪಾಗ್ನಿಯು ತಟ್ಟದ ಹಾಗೆಯೂ ನಮ್ಮನ್ನು ಮರೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಅವರು ಆ ಬೆಟ್ಟಗಳನ್ನೂ ಬಂಡೆಗಳನ್ನೂ ಉದ್ದೇಶಿಸಿ, “ನಮ್ಮ ಮೇಲೆ ಬೀಳಿ; ಸಿಂಹಾಸನದಲ್ಲಿ ಆಸೀನರಾಗಿರುವವರ ಸಮ್ಮುಖದಿಂದಲೂ ಯಜ್ಞದ ಕುರಿಮರಿಯಾದಾತನ ಕೋಪಾಗ್ನಿಯಿಂದಲೂ ನಮ್ಮನ್ನು ಮರೆಮಾಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆ ಜನರು ಬೆಟ್ಟಗಳಿಗೆ ಮತ್ತು ಬಂಡೆಗಳಿಗೆ, “ನಮ್ಮ ಮೇಲೆ ಬೀಳಿರಿ. ಸಿಂಹಾಸನದ ಮೇಲೆ ಕುಳಿತಿರುವಾತನ ದೃಷ್ಟಿಯಿಂದ ನಮ್ಮನ್ನು ಮರೆಮಾಡಿ; ಕುರಿಮರಿಯಾದಾತನ ಕೋಪದಿಂದ ನಮ್ಮನ್ನು ಮರೆಮಾಡಿ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಬೆಟ್ಟಗುಡ್ಡಗಳಿಗೆ, “ನಮ್ಮ ಮೇಲೆ ಬಿದ್ದು ಸಿಂಹಾಸನದ ಮೇಲೆ ಕುಳಿತಿರುವವನ ಮುಖದಿಂದ ಮತ್ತು ಕುರಿಮರಿ ಆಗಿರುವವರ ಕೋಪಾಗ್ನಿಯಿಂದ ನಮ್ಮನ್ನು ಮರೆಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

16 ತೆನಿ ಮಡ್ಡಿಯಾಕ್ನಿ ಅನಿ ಗುಂಡ್ಯಾಕ್ನಿ ಬಲ್ವುನ್, ಅಮ್ಚ್ಯಾ ವೈನಿ ಯೆವ್ನ್ ಪಡಾ ಅನಿ ಸಿವಾಸನಾ ವರ್ತಿ ಬಸಲ್ಲ್ಯಾಚ್ಯಾ ನದ್ರೆತ್ನಾ ಅನಿ ಬೊಕ್ಡಾಚ್ಯಾ ರಾಗಾತ್ನಾ ಅಮ್ಕಾ ಧಾಪುನ್ ಸೊಡಾ!

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:16
21 ತಿಳಿವುಗಳ ಹೋಲಿಕೆ  

ಆ ಕಾಲದಲ್ಲಿ ಜನರು - ಬೆಟ್ಟಗಳೇ, ನಮ್ಮ ಮೇಲೆ ಬೀಳಿರಿ; ಗುಡ್ಡಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ ಅನ್ನುವರು.


ಇಸ್ರಾಯೇಲಿಗೆ ಪಾಪಾಸ್ಪದವಾದ ಆವೆನಿನ ಪೂಜಾಸ್ಥಾನಗಳು ನಾಶವಾಗುವವು; ಮುಳ್ಳುಗಿಡಗಳೂ ಕಳೆಗಳೂ ಅಲ್ಲಿನ ಯಜ್ಞವೇದಿಗಳ ಮೇಲೆ ಹುಟ್ಟುವವು; ಅಲ್ಲಿನ ಜನರು - ಬೆಟ್ಟಗಳೇ, ನಮ್ಮನ್ನು ಮುಚ್ಚಿಕೊಳ್ಳಿರಿ, ಗುಡ್ಡಗಳೇ, ನಮ್ಮ ಮೇಲೆ ಬೀಳಿರಿ ಎಂದು ಕೂಗಿಕೊಳ್ಳುವರು.


ಆಗ ಇಗೋ, ಪರಲೋಕದಲ್ಲಿ ಒಂದು ಸಿಂಹಾಸನವಿತ್ತು; ಸಿಂಹಾಸನದ ಮೇಲೆ ಒಬ್ಬನು ಕೂತಿದ್ದನು.


ಆಮೇಲೆ ಬೆಳ್ಳಗಿರುವ ಮಹಾ ಸಿಂಹಾಸನವನ್ನೂ ಅದರ ಮೇಲೆ ಕೂತಿದ್ದಾತನನ್ನೂ ಕಂಡೆನು. ಆತನೆದುರಿನಿಂದ ಭೂಮ್ಯಾಕಾಶಗಳು ಓಡಿಹೋಗಿ ಇನ್ನು ಕಾಣಿಸದ ಹಾಗಾದವು.


ನೀನೇ ಹೇಳಿದ್ದೀ; ಇದಲ್ಲದೆ ಇನ್ನು ಮೇಲೆ ಮನುಷ್ಯಕುಮಾರನು ಸರ್ವಶಕ್ತನ ಬಲಗಡೆಯಲ್ಲಿ ಆಸೀನನಾಗಿರುವದನ್ನೂ ಆಕಾಶದ ಮೇಘಗಳ ಮೇಲೆ ಕುಳಿತು ಬರುವದನ್ನೂ ಕಾಣುವಿರಿ ಎಂದು ನಿಮಗೆ ಹೇಳುತ್ತೇನೆ ಅಂದನು.


ನಾನು ಯಾವಾವ ಸ್ಥಳಗಳಿಗೆ ಈ ದುರ್ವಂಶದವರನ್ನು ಅಟ್ಟಿಬಿಟ್ಟಿದ್ದೇನೋ ಅಲ್ಲೆಲ್ಲಾ ಉಳಿದವರೆಲ್ಲರೂ ಜೀವಿಸುವದಕ್ಕಿಂತ ಮರಣವು ಲೇಸೆಂದು ಅದನ್ನು ಬಯಸುವರು. ಇದು ಯೆಹೋವನ ನುಡಿ.


ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಬರುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.


ಪರಲೋಕವನ್ನೂ ಅದರಲ್ಲಿರುವ ಸಮಸ್ತವನ್ನೂ ಭೂವಿುಯನ್ನೂ ಅದರಲ್ಲಿರುವ ಸಮಸ್ತವನ್ನೂ ಸಮುದ್ರವನ್ನೂ ಅದರಲ್ಲಿರುವ ಸಮಸ್ತವನ್ನೂ ಸೃಷ್ಟಿಸಿ


ಅವರು - ಒಡೆಯನೇ, ಪರಿಶುದ್ಧನೂ ಸತ್ಯವಂತನೂ ಆಗಿರುವಾತನೇ, ಭೂನಿವಾಸಿಗಳು ನಮ್ಮನ್ನು ಕೊಂದದ್ದಕ್ಕಾಗಿ ನೀನು ಎಷ್ಟು ಕಾಲದವರೆಗೂ ನ್ಯಾಯವಿಚಾರಿಸದೆಯೂ ಪ್ರತಿದಂಡನೆ ಮಾಡದೆಯೂ ಇರುವಿ? ಎಂದು ಮಹಾಶಬ್ದದಿಂದ ಕೂಗಿದರು.


ಯುಗಯುಗಾಂತರಗಳಲ್ಲಿಯೂ ಜೀವಿಸುವವನಾಗಿ ಸಿಂಹಾಸನದ ಮೇಲೆ ಕೂತಿರುವಾತನಿಗೆ ಆ ನಾಲ್ಕು ಜೀವಿಗಳು ಪ್ರಭಾವಮಾನ ಕೃತಜ್ಞತಾಸ್ತುತಿಗಳನ್ನು ಸಲ್ಲಿಸುವಾಗ್ಗೆ


ಸಿಂಹಾಸನದೊಳಗಿಂದ ವಿುಂಚುಗಳೂ ವಾಣಿಗಳೂ ಗುಡುಗುಗಳೂ ಹೊರಡುತ್ತವೆ. ಅದರ ಮುಂದೆ ದೇವರ ಏಳು ಆತ್ಮಗಳನ್ನು ಸೂಚಿಸುವ ಏಳು ದೀಪಗಳು ಉರಿಯುತ್ತಿದ್ದವು.


ಫಕ್ಕನೆ ಅವರು ಭಯಭ್ರಾಂತರಾಗುವರು; ಯಾಕಂದರೆ ದೇವರು ನೀತಿವಂತರ ಪಕ್ಷದಲ್ಲಿದ್ದಾನೆ.


ಗವಿಯೊಳಗೆ ನುಗ್ಗು, ಯೆಹೋವನ ಭಯಂಕರತನಕ್ಕೂ ಅತ್ಯುನ್ನತ ಮಹಿಮೆಗೂ ಹೆದರಿ ದೂಳಿನಲ್ಲಿ ಅವುತುಕೋ!


ಆಗ ಆತನು ಅವರ ಮನಸ್ಸು ಕಲ್ಲಾಗಿರುವದನ್ನು ಕಂಡು ದುಃಖಪಟ್ಟು ಕೋಪದಿಂದ ಸುತ್ತಲೂ ಅವರನ್ನು ನೋಡಿ ಆ ಮನುಷ್ಯನಿಗೆ - ನಿನ್ನ ಕೈಚಾಚು ಎಂದು ಹೇಳಿದನು. ಅವನು ಚಾಚಿದನು; ಕೈ ವಾಸಿಯಾಯಿತು.


ಸಿಂಹಾಸನದ ಮೇಲೆ ಕುಳಿತಿದ್ದಾತನ ಬಲಗೈಯಲ್ಲಿ ಒಂದು ಸುರುಳಿಯನ್ನು ಕಂಡೆನು; ಅದರ ಎರಡು ಪಕ್ಕೆಗಳಲ್ಲಿಯೂ ಬರೆದಿತ್ತು; ಅದು ಏಳು ಮುದ್ರೆಗಳಿಂದ ಮುದ್ರಿತವಾಗಿತ್ತು.


ಆ ಕಾಲದಲ್ಲಿ ಮನುಷ್ಯರು ಮರಣವನ್ನು ಬಯಸುವರು, ಆದರೆ ಅದು ಪ್ರಾಪ್ತವಾಗುವದಿಲ್ಲ; ಸಾಯಬೇಕೆಂದು ಕೋರುವರು, ಆದರೆ ಮೃತ್ಯುವು ಅವರ ಬಳಿಯಿಂದ ಓಡಿಹೋಗುವದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು