Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:17 - ಕನ್ನಡ ಸತ್ಯವೇದವು J.V. (BSI)

17 ಅವರ ಕೋಪವು ಕಾಣಿಸುವ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಏಕೆಂದರೆ ಅವರ ಕೋಪಾಗ್ನಿಯು ಕಾಣಿಸುವ ಮಹಾ ದಿನವು ಬಂದಿದೆ, ಅದರ ಮುಂದೆ ನಿಲ್ಲುವುದಕ್ಕೆ ಯಾರಿಂದಾದೀತು?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಏಕೆಂದರೆ, ಅವರ ಕೋಪಾಗ್ನಿಯ ಘೋರ ದಿನವು ಬಂದಿದೆ. ಅದರ ಮುಂದೆ ನಿಲ್ಲುವುದಕ್ಕೆ ಯಾರು ತಾನೇ ಶಕ್ತರು?” ಎಂದು ಹಲುಬಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆತನ ಕೋಪವು ಪ್ರಕಟವಾಗುವ ಮಹಾದಿನವು ಬಂದುಬಿಟ್ಟಿದೆ. ಆ ಕೋಪದ ಎದುರಿನಲ್ಲಿ ನಿಲ್ಲಲು ಯಾರಿಗೂ ಸಾಧ್ಯವಿಲ್ಲ” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಏಕೆಂದರೆ, ಅವರ ಕೋಪಾಗ್ನಿಯ ಮಹಾದಿನವು ಬಂದಿದೆ, ಅದರ ಮುಂದೆ ಯಾರು ನಿಂತಾರು?” ಎಂದು ಹೇಳಿದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

17 ಕಶ್ಯಾಕ್ ಮಟ್ಲ್ಯಾರ್ ತೆಂಚ್ಯಾ ರಾಗಾಚೊ ಮೊಟೊ ದಿಸ್ ಯೆಲಾ, ತ್ಯೆಚ್ಯಾ ಇದ್ರಾಕ್ ಇಬೆರ್‍ಹಾವ್ಕ್ ಕೊನಾಚ್ಯಾನ್ ಹೊತಾ? ಮನ್ತ್ಯಾತ್.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:17
20 ತಿಳಿವುಗಳ ಹೋಲಿಕೆ  

ಆತನು ಬರುವ ದಿನವನ್ನು ಯಾರು ತಾಳಾರು? ಆತನು ಕಾಣಿಸಿಕೊಳ್ಳುವಾಗ ಯಾರು ನಿಂತಾರು? ಆತನು ಅಕ್ಕಸಾಲಿಗನ ಬೆಂಕಿಗೂ ಅಗಸನ ಚೌಳಿಗೂ ಸಮಾನನಾಗಿದ್ದಾನೆ;


ಯೆಹೋವನು ತನ್ನ ಸೈನ್ಯದ ಮುಂದೆ ದನಿಗೈಯುತ್ತಾನೆ; ಆತನ ದಂಡು ಬಹು ದೊಡ್ಡದು; ತನ್ನ ಮಾತನ್ನು ನೆರವೇರಿಸಿಕೊಳ್ಳುವಾತನು ಬಲಿಷ್ಟನಾಗಿದ್ದಾನೆ; ಯೆಹೋವನ ದಿನವು ಮಹತ್ತರವೂ ಅತಿ ಭಯಂಕರವೂ ಆಗಿದೆ; ಅದನ್ನು ತಾಳಿಕೊಳ್ಳುವವರು ಯಾರು?


ನೀನು ಮಹಾಭಯಂಕರನು; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?


ಇವು ಮಹತ್ಕಾರ್ಯಗಳನ್ನು ಮಾಡುವ ದೆವ್ವಗಳು; ಭೂಲೋಕದಲ್ಲೆಲ್ಲಿಯೂ ಇರುವ ರಾಜರ ಬಳಿಗೆ ಹೋಗಿ ಸರ್ವಶಕ್ತನಾದ ದೇವರ ಮಹಾದಿನದಲ್ಲಾಗುವ ಯುದ್ಧಕ್ಕೆ ಅವರನ್ನು ಕೂಡಿಸುವವು.


ಸೂರ್ಯನು ಕತ್ತಲಾಗುವನು, ಚಂದ್ರನು ರಕ್ತವಾಗುವನು.


ಅಯ್ಯೋ, ಆ ದಿನವು ಘೋರವಾದದ್ದು, ಅದಕ್ಕೆ ಎಣೆಯಿಲ್ಲ; ಅದು ಯಾಕೋಬ್ಯರಿಗೆ ಇಕ್ಕಟ್ಟಿನ ದಿನ; ಆದರೂ ಅದರಿಂದ ಪಾರಾಗುವರು.


ನೀನು ನಿನ್ನ ಮೊಂಡತನವನ್ನೂ ಪಶ್ಚಾತ್ತಾಪವಿಲ್ಲದ ಮನಸ್ಸನ್ನೂ ಅನುಸರಿಸುವದರಿಂದ ನಿನಗೋಸ್ಕರ ದೇವರ ಕೋಪವನ್ನು ಕೂಡಿಟ್ಟುಕೊಳ್ಳುತ್ತಾ ಇದ್ದೀ. ದೇವರ ಕೋಪವೂ ನ್ಯಾಯವಾದ ತೀರ್ಪು ಪ್ರಕಟವಾಗುವ ದಿವಸ ಬರುತ್ತದಷ್ಟೆ.


ಜನಾಂಗಗಳು ಕೋಪಿಸಿಕೊಂಡವು, ನಿನ್ನ ಕೋಪವೂ ಪ್ರಕಟವಾಯಿತು. ಸತ್ತವರು ತೀರ್ಪುಹೊಂದುವ ಸಮಯ ಬಂದದೆ; ನೀನು ನಿನ್ನ ದಾಸರಾದ ಪ್ರವಾದಿಗಳಿಗೂ ದೇವಜನರಿಗೂ ನಿನ್ನ ನಾಮಕ್ಕೆ ಭಯಪಡುವ ದೊಡ್ಡವರಿಗೂ ಚಿಕ್ಕವರಿಗೂ ಪ್ರತಿಫಲವನ್ನು ಕೊಟ್ಟು ಲೋಕನಾಶಕರನ್ನು ನಾಶಮಾಡುವಿ ಎಂದು ಆತನನ್ನು ಆರಾಧಿಸಿದರು.


ತಮ್ಮ ದೊರೆತನವನ್ನು ಕಾಪಾಡದೆ ತಮಗೆ ತಕ್ಕ ವಾಸಸ್ಥಾನವನ್ನು ಬಿಟ್ಟ ದೇವದೂತರಿಗೆ ದೇವರು ನಿತ್ಯವಾದ ಬೇಡಿಗಳನ್ನು ಹಾಕಿ ಮಹಾ ದಿನದಲ್ಲಿ ಆಗುವ ದಂಡನೆಯ ತೀರ್ಪಿಗಾಗಿ ಅವರನ್ನು ಕತ್ತಲೆಯೊಳಗೆ ಇಟ್ಟಿದ್ದಾನೆ.


ಆದರೆ ಬರುವದಕ್ಕಿರುವ ಇವೆಲ್ಲವುಗಳೊಳಗಿಂದ ತಪ್ಪಿಸಿಕೊಳ್ಳುವದಕ್ಕೂ ಮನುಷ್ಯಕುಮಾರನ ಮುಂದೆ ನಿಂತುಕೊಳ್ಳುವದಕ್ಕೂ ನೀವು ಪೂರ್ಣ ಶಕ್ತರಾಗುವಂತೆ ಎಲ್ಲಾ ಕಾಲದಲ್ಲಿಯೂ ದೇವರಿಗೆ ವಿಜ್ಞಾಪನೆ ಮಾಡಿಕೊಳ್ಳುತ್ತಾ ಎಚ್ಚರವಾಗಿರ್ರಿ ಅಂದನು.


ಅಗಮ್ಯದೇವರಾದ ಯೆಹೋವನ ಮುಂದೆ ಯಾರು ನಿಂತಾರು? ಇನ್ನು ಮೇಲೆ ಈತನು ಹೋಗತಕ್ಕ ಸ್ಥಳವಾವದು ಎಂದು ಮಾತಾಡಿಕೊಂಡು


ಆತನ ಮಗನಿಗೆ ಮುದ್ದಿಡಿರಿ; ಇಲ್ಲವಾದರೆ ಆತನ ಕೋಪವು ಬೇಗನೆ ಪ್ರಜ್ವಲಿಸಲು ನೀವು ದಾರಿಯಲ್ಲೇ ನಾಶವಾದೀರಿ. ಆತನ ಮರೆಹೊಕ್ಕವರೆಲ್ಲರು ಧನ್ಯರು.


ನಿನ್ನ ಬಲಗಡೆಯಲ್ಲಿರುವ ಕರ್ತನು ತನ್ನ ಕೋಪದ ದಿನದಲ್ಲಿ ರಾಜರನ್ನು ಖಂಡಿಸುವನು.


ಏಕಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರುಷವು ಒದಗಿತ್ತು.


ಯೆಹೋವನ ದಿನವು ಸಮೀಪಿಸಿತು; ಅಯ್ಯೋ, ದಿನವೇ! ಅದು ಸರ್ವಶಕ್ತನಿಂದ ನಾಶನದಿನವಾಗಿಯೇ ಬರುವದು.


ಚೀಯೋನಿನಲ್ಲಿ ಕೊಂಬೂದಿರಿ, ನನ್ನ ಪರಿಶುದ್ಧಪರ್ವತದಲ್ಲಿ ದನಿಗೈಯಿರಿ; ಸಮಸ್ತ ದೇಶನಿವಾಸಿಗಳು ನಡುಗಲಿ; ಯೆಹೋವನ ದಿನವು ಬರುತ್ತಲಿದೆ, ಸಮೀಪಿಸಿತು;


ಆತನ ಸಿಟ್ಟಿಗೆ ಯಾರು ತಡೆದಾರು? ಆತನ ರೋಷಾಗ್ನಿಗೆ ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ, ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು