Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಪ್ರಕಟನೆ 6:6 - ಕನ್ನಡ ಸತ್ಯವೇದವು J.V. (BSI)

6 ಆಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಅದು - ರೂಪಾಯಿಗೆ ಒಂದು ಸೇರು ಗೋದಿ; ರೂಪಾಯಿಗೆ ಮೂರು ಸೇರು ಜವೆ ಗೋದಿ; ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಕೆಡಿಸಬೇಡ ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆ ಮೇಲೆ ನಾಲ್ಕು ಜೀವಿಗಳ ಮಧ್ಯದಿಂದ ಒಬ್ಬನ ಧ್ವನಿಯು ಹೊರಟ ಹಾಗೆ ಕೇಳಿದೆನು. ಒಂದು “ದೀನಾರಿಗೆ ಒಂದು ಸೇರು ಗೋದಿ ಮತ್ತು ಒಂದು ದೀನಾರಿಗೆ ಮೂರು ಸೇರು ಜವೆಗೋದಿ, ಆದರೆ ಎಣ್ಣೆಯನ್ನು ಮತ್ತು ದ್ರಾಕ್ಷಾರಸವನ್ನು ಕೆಡಿಸಬೇಡ” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ನಾಲ್ಕು ಜೀವಿಗಳ ಮಧ್ಯದಿಂದ ಹೊರಟಿತೋ ಎಂಬಂತೆ ಒಂದು ಧ್ವನಿ ನನಗೆ ಕೇಳಿಸಿತು. ಅದು, “ದಿನದ ಕೂಲಿಗೆ ಒಂದು ಕಿಲೋಗ್ರಾಂ ಗೋದಿ; ದಿನದ ಕೂಲಿಗೆ ಮೂರು ಕಿಲೋಗ್ರಾಂ ಜವೆಗೋದಿ; ಆದರೆ ಎಣ್ಣೆಯನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಕೆಡಿಸಬೇಡ,” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆಗ ಒಬ್ಬನ ಸ್ವರವೋ ಎಂಬಂತೆ ಒಂದು ಧ್ವನಿಯನ್ನು ಕೇಳಿದೆನು. ಆ ನಾಲ್ಕು ಜೀವಿಗಳಿದ್ದ ಸ್ಥಳದಿಂದ ಈ ಧ್ವನಿಯು ಹೊರ ಹೊಮ್ಮಿತು. ಆ ಧ್ವನಿಯು, “ಒಂದು ದಿನದ ಕೆಲಸಕ್ಕೆ ಒಂದು ಕಿಲೋಗ್ರಾಂ ಗೋಧಿ. ಒಂದು ದಿನದ ಕೆಲಸಕ್ಕೆ ಮೂರು ಕಿಲೋಗ್ರಾಂ ಬಾರ್ಲಿ. ಆದರೆ ಎಣ್ಣೆಯನ್ನೂ ದ್ರಾಕ್ಷಾರಸವನ್ನೂ ಕೆಡಿಸಬೇಡಿ!” ಎಂದು ಹೇಳಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಆಗ ನಾನು ನಾಲ್ಕು ಜೀವಿಗಳ ಮಧ್ಯದಿಂದ ಬಂದಂತೆ ಒಂದು ಧ್ವನಿಯನ್ನು ಕೇಳಿದೆನು. ಅದು, “ದಿನದ ಕೂಲಿಗೆ ಒಂದು ಕಿಲೋಗ್ರಾಂ ಗೋಧಿ, ಮೂರು ಕಿಲೋಗ್ರಾಂ ಜವೆಗೋಧಿ, ಆದರೆ ಎಣ್ಣೆಯನ್ನಾಗಲಿ, ದ್ರಾಕ್ಷಾರಸವನ್ನಾಗಲಿ ಕೆಡಿಸಬೇಡ,” ಎಂದಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ದೆವಾಚಿ ಖರಿ ಖಬರ್

6 ಚಾರ್ ಸಾವ್ಜಾನಿತ್ನಾ ಎಕ್ ಧನ್ ಯೆತಲೊ ಮಿಯಾ ಆಯಿಕ್ಲೊ. ತೊ ಧನ್, “ಎಕ್ ದಿಸಾಚಿ ಮಜುರಿ ಎಕ್ ಶೆರ್ ಘವ್, ಅನಿ ಎಕ್ ದಿಸಾಚಿ ಮಜುರಿ ತಿನ್ ಶೆರ್ ಬಾರ್‍ಲಿ. ಖರೆ ತೆಲ್ ಅನಿ ವಾಯ್ನ್ ಹಾಳ್ ಕರುನಕಾಶಿ!” ಮನುಲಾಗಲ್ಲೊ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಪ್ರಕಟನೆ 6:6
6 ತಿಳಿವುಗಳ ಹೋಲಿಕೆ  

ಭೂವಿುಯ ಮೇಲಿರುವ ಹುಲ್ಲನ್ನಾಗಲಿ ಯಾವ ಪಲ್ಯವನ್ನಾಗಲಿ ಮರವನ್ನಾಗಲಿ ಕೆಡಿಸದೆ ಹಣೆಯ ಮೇಲೆ ದೇವರ ಮುದ್ರೆಯಿಲ್ಲದವರಾದ ಮನುಷ್ಯರನ್ನು ಮಾತ್ರ ಕೆಡಿಸಬಹುದೆಂದು ಅವುಗಳಿಗೆ ಅಪ್ಪಣೆಯಾಯಿತು.


ಇದಲ್ಲದೆ ಸಿಂಹಾಸನದ ಮುಂದೆ ಸ್ಫಟಿಕಕ್ಕೆ ಸಮಾನವಾದ ಗಾಜಿನ ಸಮುದ್ರವಿದ್ದ ಹಾಗೆ ತೋಚಿತು. ಸಿಂಹಾಸನದ ಮಧ್ಯದಲ್ಲಿ ಅದರ ನಾಲ್ಕು ಕಡೆಗಳಲ್ಲಿ ನಾಲ್ಕು ಜೀವಿಗಳಿದ್ದವು; ಅವುಗಳಿಗೆ ಹಿಂದೆ ಮುಂದೆ ತುಂಬಾ ಕಣ್ಣುಗಳಿದ್ದವು.


ನಾವು ನಮ್ಮ ದೇವರ ದಾಸರಿಗೆ ಹಣೆಯ ಮೇಲೆ ಮುದ್ರೆ ಒತ್ತುವತನಕ ಭೂವಿುಯನ್ನಾಗಲಿ ಸಮುದ್ರವನ್ನಾಗಲಿ ಮರಗಳನ್ನಾಗಲಿ ಕೆಡಿಸಬೇಡಿರಿ ಎಂದು ಮಹಾ ಶಬ್ದದಿಂದ ಕೂಗಿ ಹೇಳಿದನು.


ಮನುಷ್ಯರ ಕೋಪವೂ ನಿನ್ನ ಘನಕ್ಕೇ ಸಾಧಕವಾಗುವದು; ಕೋಪಶೇಷವನ್ನು ನಡುಕಟ್ಟಿನಂತೆ ಬಿಗಿದುಕೊಳ್ಳುವಿ.


ಜನಕ್ಕೆ ವಿರೋಧವಾಗಿ ಜನವೂ ರಾಜ್ಯಕ್ಕೆ ವಿರೋಧವಾಗಿ ರಾಜ್ಯವೂ ಏಳುವವು; ಮತ್ತು ಅಲ್ಲಲ್ಲಿ ಬರಗಳು ಬರುವವು, ಭೂಕಂಪಗಳು ಆಗುವವು;


ಆ ನಾಲ್ಕು ಜೀವಿಗಳೊಳಗೆ ಒಂದೊಂದಕ್ಕೆ ಆರಾರು ರೆಕ್ಕೆಗಳಿದ್ದವು; ಆ ಜೀವಿಗಳಿಗೆ ಸುತ್ತಲೂ ಒಳಗೂ ತುಂಬಾ ಕಣ್ಣುಗಳಿದ್ದವು. ಆ ಜೀವಿಗಳು ಹಗಲಿರುಳು ವಿಶ್ರವಿುಸಿಕೊಳ್ಳದೆ - ದೇವರಾದ ಕರ್ತನು ಪರಿಶುದ್ಧನು ಪರಿಶುದ್ಧನು ಪರಿಶುದ್ಧನು; ಆತನು ಸರ್ವಶಕ್ತನು, ವರ್ತಮಾನ ಭೂತ ಭವಿಷ್ಯತ್ಕಾಲಗಳಲ್ಲಿರುವಂಥವನು ಎಂದು ಹೇಳುತ್ತವೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು